ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಹೋಂಡಾ ಕಂಪನಿಯು ಭಾರತದಲ್ಲಿ ತನ್ನ ಸಿಟಿ ಸೆಡಾನ್ ಅನ್ನು ಸ್ಪಾಟ್ ಟೆಸ್ಟ್ ಮಾಡಿದೆ. ಹೋಂಡಾ ಸಿಟಿ ಸ್ಪಾಟ್ ಟೆಸ್ಟ್ ನಲ್ಲಿ ಹಲವಾರು ಪ್ರಮುಖ ಮಾಹಿತಿಗಳು ಬಹಿರಂಗವಾಗಿದೆ. ಹೋಂಡಾ ಸಿಟಿ ಮಾದರಿಯು ಹೋಂಡಾ ಕಂಪನಿಯ ಸರಣಿಯ ಕಾರುಗಳಲ್ಲಿ ಹಲವು ವರ್ಷಗಳಿಂದ ಹೆಚ್ಚು ಮಾರಾಟವಾಗುವ ಕಾರ್ ಆಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಹೋಂಡಾ ಸಿಟಿ ಕಾರು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಟೀಂ ಬಿ‍ಹೆಚ್‍‍ಪಿ ಬಹಿರಂಗಪಡಿಸಿದೆ. ಹೋಂಡಾ ಸಿಟಿ ಕಾರು ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸಿಯಾಜ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಸಿಟಿ, ವರ್ನಾ ಮತ್ತು ಸಿಯಾಜ್ ಒಂದೇ ರೀತಿಯಲ್ಲಿ ಮಾರಾಟವಾಗುತ್ತಿವೆ. ಹೋಂಡಾ ಕಂಪನಿಯು ಶೀಘ್ರದಲ್ಲೇ 2020ರ ಸಿಟಿ ಸೆಡಾನ್ ಅನ್ನು ಬಿಡುಗಡೆಗೊಳಿಸಲಿದೆ. ಈಗಾಗಲೇ ಹೊಸ ಹೋಂಡಾ ಸಿಟಿ ಕಾರ್ ಅನ್ನು ಥೈಲ್ಯಾಂಡ್‍‍ನಲ್ಲಿ ಬಿಡುಗಡೆಗೊಳಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಥೈಲ್ಯಾಂಡ್‍‍ನಲ್ಲಿ ಬಿಡುಗಡೆಗೊಳಿಸಿದ ಕಾರಿನ ಬೆಲೆಯು ರೂ.13.7 ಲಕ್ಷಗಳಾಗಿದೆ. ಹೊಸ ಸಿಟಿ ಕಾರು ಹಿಂದಿನ ತಲೆಮಾರಿನ ಕಾರ್ ಗಿಂತ ದೊಡ್ಡದಾಗಿದೆ. ಈ ಸೆಗ್‍‍ಮೆಂಟ್‍‍ನಲ್ಲಿ 2020ರ ಸಿಟಿ 4553 ಎಂಎಂ ಉದ್ದವನ್ನು ಹೊಂದಿರುವ ಅತಿ ಉದ್ದದ ಕಾರ್ ಆಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಪ್ರಸುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವ ಕಾರಗಳಾದ ಸಿಟಿ 4440 ಎಂಎಂ, ವರ್ನಾ 4440 ಎಂಎಂ ಮತ್ತು ಸಿಯಾಜ್ 4490 ಎಂಎಂ ಉದ್ದವನ್ನು ಹೊಂದಿವೆ. ಹೊಸ ಹೋಂಡಾ ಸಿಟಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೋಂಡಾ ಸಿವಿಕ್ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಹೊಸ ಹೋಂಡಾ ಸಿಟಿ ಶಾರ್ಪರ್ ಹೆಡ್‍‍ಲ್ಯಾಂಪ್‍‍ಗಳನ್ನು ಹೊಂದಿರಲಿದೆ. ಇನ್ನೂ ಈ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯು‍‍ನಿ‍ಟ್‍‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍‍ಲೈನ್ ಮತ್ತು ದೊಡ್ಡ ಒ‍ಆರ್‍‍ವಿಎಂ‍ಗಳಿವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಇನ್ನೂ 2020ರ ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್‍ಮೆಂಟ್ ಮತ್ತು ಉತ್ತಮವಾದ ಬೂಟ್ ಲಿ‍ಡ್‍‍‍ಗಳಿವೆ. ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍‍‍ರೆಸ್ಟ್, ಡಿಜಿ‍ಟಲ್ ಇನ್ಸ್ ಟ್ರೂ‍‍ಮೆಂಟ್ ಕನ್ಸೋಲ್, ಹೊಸ ಟಚ್‍‍ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್‍‍ನಲ್ಲಿ ಕಂಡುಬರುವ ಕನೆಕ್ಟಿವಿಟಿ ತಂತ್ರಜ್ಞಾನಗಳನ್ನು ಅಳವಡಿಸುವ ಸಾಧ್ಯತೆಗಳಿವೆ. ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರ್ ಅನ್ನು ಬಿಡುಗಡೆಗೊಳಿಸಲಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಥೈಲ್ಯಾಂಡ್‌ನಲ್ಲಿರುವ ಹೋಂಡಾ ಕಾರು ಉತ್ಪಾದನಾ ಘಟಕವು ಏಷ್ಯಾದ ಅತಿದೊಡ್ಡ ಕಾರು ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆ ಹೊಂದಿದ್ದು, ಇಲ್ಲಿಂದಲೇ ಹೊಸ ಸಿಟಿ ಸೆಡಾನ್ ಕಾರಿಗೆ ಅಂತಿಮ ರೂಪ ನೀಡಿ ಭಾರತಕ್ಕೆ ತರಲಾಗುತ್ತದೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

2020ರ ಹೋಂಡಾ ಸಿಟಿ ಕಾರು 1 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಆದರೆ ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯಲ್ಲಿ ಹೈಬ್ರಿಡ್ ಎಂಜಿನ್ ಅಳವಡಿಸುವ ಬಗ್ಗೆ ಮಾಹಿತಿ ಇಲ್ಲ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ 1.5 ಲೀಟರ್ ಐ-ವಿಟಿಇಸಿ ಬಿಎಸ್ 6 ಪೆಟ್ರೋಲ್ ಎಂಜಿನ್ ಜೊತೆಗೆ 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಎಂಜಿನ್‍‍ಗಳೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು ಸಿವಿ‍ಟಿ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ಹೊಂದಿರುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಹೋಂಡಾ ಸಿಟಿ

2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಹೊಸ ವಾಹನದ ಎಂಜಿನ್‌ನಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಹೊಸ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಈ ಕಾರಿನ ಎಂಜಿನ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

Most Read Articles

Kannada
Read more on ಹೋಂಡಾ honda
English summary
2020 Honda City spied in India wearing LED headlights - Read in Kannada
Story first published: Saturday, December 7, 2019, 12:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X