ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಅಧಿಪತ್ಯ ಸಾಧಿಸಿರುವ ಮಹೀಂದ್ರಾ ಸಂಸ್ಥೆಯು ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳ ಮೂಲಕ ಭಾರೀ ಜನಪ್ರಿಯತೆ ಗಳಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ವಿನ್ಯಾಸ ಮತ್ತು ಬಲಿಷ್ಠ ಎಂಜಿನ್ ಪ್ರೇರಿತ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಬಿಡುಗಡೆ ಮಾಡುತ್ತಿದೆ. ಇದಕ್ಕಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಸಂಸ್ಥೆಯು ಸದ್ಯ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಉನ್ನತಿಕರಿಸುತ್ತಿದ್ದು, ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳಿಂತಲೂ ನ್ಯೂ ಜನರೇಷನ್ ಆವೃತ್ತಿಗಳು ಸಾಕಷ್ಟು ಸುಧಾರಿತ ಗುಣಮಟ್ಟದ ಬಿಡಿಭಾಗಗಳು, ಎಂಜಿನ್ ಸೌಲಭ್ಯ ಮತ್ತು ಪರ್ಫಾಮೆನ್ಸ್‌ನಲ್ಲಿ ಗ್ರಾಹಕರ ಆಕರ್ಷಣೆ ಕಾರಣವಾಗಲಿವೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಸ ವಾಹನಗಳ ಎಂಜಿನ್‌ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಹೊಸ ನಿಯಮದಂತೆ ಮಹೀಂದ್ರಾ ಸೇರಿ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಇದರಲ್ಲಿ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರುಗಳು ಮುಂದಿನ ನಾಲ್ಕು ತಿಂಗಳಲ್ಲಿ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಎಂಜಿನ್ ಮಾತ್ರವಲ್ಲದೇ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳಲ್ಲಿ ಇನ್ಮುಂದೆ ಎಲ್ಲಾ ಮಾದರಿಗಳಲ್ಲೂ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಹಾಗೆಯೇ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

MOST READ: ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

MOST READ: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ದುಬಾರಿ ಕಾರು ಗಿಫ್ಟ್ ಕೊಟ್ಟ ನಟ ನಾಗಾರ್ಜುನ

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ರೂ. 1.50 ಲಕ್ಷದಿಂದ ರೂ.2.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

Source: Timvix/YouTube

Article Published On: Thursday, September 19, 2019, 15:45 [IST]
English summary
New generation of the Mahindra XUV500 has been spotted on test for the first time in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+