ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ಸ್ಕೋಡಾ ಆಟೋ 2020ರ ಸ್ಕೋಡಾ ರ‍್ಯಾಪಿಡ್ ಕಾರ್ ಅನ್ನು ರಷ್ಯಾದಲ್ಲಿ ಬಿಡುಗಡೆಗೊಳಿಸಿದೆ. ರಷ್ಯಾದಲ್ಲಿ ಮುಂದಿನ ವರ್ಷದಿಂದ ಈ ಕಾರು ಮಾರಾಟವಾಗಲಿದೆ. ಕೆಲವು ಬದಲಾವಣೆಗಳೊಂದಿಗೆ ಸ್ಕೋಡಾ ರ‍್ಯಾಪಿಡ್ ದೇಶಿಯ ಮಾರುಕಟ್ಟೆಯಲ್ಲಿ 2021ರಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ರಷ್ಯಾದಲ್ಲಿ ಬಿಡುಗಡೆಯಾಗಲಿರುವ ಸ್ಕೋಡಾ ರ‍್ಯಾಪಿಡ್ ಕಾರಿನ ಬೆಲೆಯು 8,29.000 ರೂಬ್‍‍ಗಳಾಗಿದೆ. ಭಾರತದ ರೂಪಾಯಿ ಮೌಲ್ಯದಲ್ಲಿ ರೂ.9.3 ಲಕ್ಷಗಳಾಗಿದೆ. ಹೊಸ 2020ರ ಸ್ಕೋಡಾ ರ‍್ಯಾಪಿಡ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಕಾರಿನ ಮುಂಭಾಗವು ಸ್ಲೀಕ್ ಶಾರ್ಪಡ್ ಹೆಡ್‍‍‍ಲೈಟ್‍‍ಗಳನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ಹಿಂಭಾಗದಲ್ಲಿ ಎಲ್ ಆಕಾರದ ಟೇಲ್‍‍ಲೈಟ್‍‍ಗಳನ್ನು ಹೊಂದಿದೆ. ಸ್ಕೋಡಾ ಬ್ರ್ಯಾಂಡಿಗ್ ಬುಟ್‍ ಲಿ‍‍ಡ್‍‍ಗಳನ್ನು ಹೊಂದಿದೆ. ಮರುವಿನ್ಯಾಸಗೊಳಿಸಲಾದ ಮುಂಭಾಗದ ಬಂಪರ್ ಹೊಸದಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಸ್ಪೋಕ್ ಅಲಾಯ್ ವ್ಹೀಲ್‍‍ಗಳ ಜೊತೆಗೆ ಫಾಗ್ ಲ್ಯಾಂಪ್‍ಗಳನ್ನು ಹೊಂದಿರಲಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ಕಾರಿನ ಇಂಟಿರಿಯರ್‍‍ನಲ್ಲಿ ಹಿಂದಿನ ಆವೃತ್ತಿಗಿಂತ ಹೆಚ್ಚು ಬದಲಾವಣೆಗಳನ್ನು ಮಾಡಲಾಗಿದ್ದು, ಹೆಚ್ಚಿನ ಪ್ರೀಮಿಯಂ ಫೀಚರ್ಸ್‍‍ಗಳನ್ನು ಅಳವಡಿಸಲಾಗಿದೆ. ಇಂಟಿರಿಯರ್‍ ಇನ್ಪೋಟೇನ್‍ಮೆಂಟ್ ಯುನಿ‍‍ಟ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ಕ್ಯಾಬಿನ್‍‍ನಲ್ಲಿ ಅಬ್ಯಾಂಟ್ ಲೈಟ್ ಹೆಚ್ಚು ಪ್ರೀಮಿಯಂ ಲುಕ್ ಅನ್ನು ನೀಡಿದೆ. ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಫುಲ್ ಡಿಜಿಟಲ್ ಯುನಿಟ್ ಅನ್ನು ಹೊಂದಿದೆ. 2020ರ ಸ್ಕೋಡಾ ರ‍್ಯಾಪಿಡ್ ರಷ್ಯಾದ ಮಾರುಕಟ್ಟೆಯಲ್ಲಿ ಹಲವಾರು ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ಇವುಗಳಲ್ಲಿ 1.6 ಲೀಟರ್ ಎಂಪಿ‍ಐ 125 ಎಂಜಿನ್ ಬಿ‍‍ಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇನ್ನೂ 1.4 ಲೀಟರ್ ಟಿ‍ಎಸ್‍ಐ ಟರ್ಬೊಚಾರ್ಜ್ಡ್ ಎಂಜಿನ್‍ ಅನ್ನು ಅಳವಡಿಸಲಾಗಿದೆ. ಬೇಸ್ ಆವೃತ್ತಿಯೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ಟಾಪ್ ಆವೃತ್ತಿಯಲ್ಲಿ 7 ಸ್ಪೀಡ್ ಡಿಎಸ್‍‍ಜಿಯನ್ನು ಅಳವಡಿಸಲಾಗಿದೆ. ಹೊಸ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರೇರ್ ಪಾರ್ಕಿಂಗ್ ಸೆನ್ಸಾರ್, ಆ್ಯಂಟಿ-ಗ್ಲೆರ್ ವ್ಯೂ‍‍ಮಿರರ್ ಗಳನ್ನು ಅಳವಡಿಸಲಾಗಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ಭಾರತದಲ್ಲಿ ಬಿಡುಗಡೆಯಾಗಲಿರುವ 2020ರ ಸ್ಕೋಡಾ ರಾಪಿಡ್ ಸಿಂಗಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ. ಹೊಸ ಸ್ಕೋಡಾ ರಾಪಿಡ್ 1.0 ಟಿಎಸ್ಐ ಟರ್ಬೋಚಾಜ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ಈ ಎಂಜಿನ್ 115 ಬಿ‍‍ಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಸ್ಕೋಡಾ ಎಂಕ್ಯೂಬಿ ಎಒ ಐಎನ್ ಪ್ಲಾಟ್‍‍ಫಾರಂ ಮೇಲೆ ತಯಾರಾಗಿದೆ. 2020ರ ಹೊಸ ಸ್ಕೋಡಾ ಕಾರು ಭಾರತದಲ್ಲಿ 2021ರಲ್ಲಿ ಬಿಡುಗಡೆಯಾಗಲಿದೆ

MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ರ‍್ಯಾಪಿಡ್

ರಷ್ಯಾದಲ್ಲಿ ಬಿಡುಗಡೆಯಾಗಿರುವ ರ‍್ಯಾಪಿಡ್ ಕಾರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸುವಾಗ ನವೀಕರಿಸಲಾಗುವುದು, ಆದರೆ ಹೆಚ್ಚಿನ ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿಲ್ಲ. ರ‍್ಯಾಪಿಡ್ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವರ್ನಾ, ಟೊಯೊಟಾ ಯಾರಿಸ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Thursday, December 12, 2019, 12:25 [IST]
English summary
2020 Skoda Rapid Unveiled, India Launch Expected In 2021 - Read in Kannada
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+