ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೋಂಡಾ ಸಿಟಿ ನೆಕ್ಸ್ಟ್ ಜನರೇಷನ್ ಆವೃತ್ತಿಯು ಇದೇ ತಿಂಗಳಾಂತ್ಯಕ್ಕೆ ಥೈಲ್ಯಾಂಡ್‌ನಲ್ಲಿ ಬಿಡುಗಡೆಯಾಗಲಿದ್ದು, ಭಾರತದಲ್ಲಿ ತದನಂತರವಷ್ಟೇ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ. ಹೀಗಾಗಿ ಹೊಸ ಕಾರು ಖರೀದಿಗೆ ಈಗಾಗಲೇ ಕೆಲವು ಆಯ್ದ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಸ್ವಿಕರಿಸಲಾಗುತ್ತಿದ್ದು, ಹೊಸ ಕಾರು ಬಿಎಸ್-6 ನಿಯಮದಂತೆ ಅಭಿವೃದ್ದಿಗೊಂಡಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರಿನ 5ನೇ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆಯನ್ನು ಅರಿಯಲು ಈಗಾಗಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಇದರಿಂದ ಬಿಡುಗಡೆಯ ಸನಿಹದಲ್ಲಿರುವ ಹೊಸ ಸಿಟಿ ಕಾರುನ್ನು ಹೋಂಡಾ ಸಂಸ್ಥೆಯು ಫೆಬ್ರುವರಿಯಲ್ಲಿ ನಡೆಯಲಿರುವ 2020 ದೆಹಲಿ ಆಟೋ ಎಕ್ಸ್‌ಪೋ ಪ್ರದರ್ಶನಗೊಳಿಸಿ ಬಿಡುಗಡೆ ಮಾಡಲಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಇನ್ನು ಹೋಂಡಾ ಸಂಸ್ಥೆಯು ಇದೇ ಮೊದಲ ಬಾರಿಗೆ ಸಿಟಿ ಸೆಡಾನ್‌ನಲ್ಲಿ ಹೈಬ್ರಿಡ್ ಮಾದರಿಯನ್ನು ಕೂಡಾ ಬಿಡುಗಡೆಗೊಳಿಸುತ್ತಿದ್ದು, ಹೋಂಡಾ ನಿರ್ಮಾಣದ ಕಾರುಗಳಲ್ಲಿ ಅಕಾರ್ಡ್ ಸೆಡಾನ್ ನಂತರ ಹೈಬ್ರಿಡ್ ತಂತ್ರಜ್ಞಾನ ಹೊಂದಿದ 2ನೇ ಕಾರು ಮಾದರಿ ಇದಾಗಿರಲಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಕಳೆದ ಮಾರ್ಚ್‌ನಲ್ಲಿ ಸಿವಿಕ್ ಬಿಡುಗಡೆಯ ನಂತರ ಸಿಟಿ ಸೆಡಾನ್ ಕಾರಿನ ಮೇಲೆ ಹೆಚ್ಚಿನ ಗಮನಹರಿಸಿರುವ ಹೋಂಡಾ ಸಂಸ್ಥೆಯು 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೊಸ ತಲೆಮಾರಿನ ಸಿಟಿ ಕಾರನ್ನು ಪ್ರದರ್ಶನ ಮಾಡಿದ ನಂತರವಷ್ಟೇ ಬಿಡುಗಡೆ ಮಾಡಲಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿಟಿ ಕಾರಿಗಿಂತ ಹೊಸ ಆವೃತ್ತಿಯು ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಳ್ಳಲಿದ್ದು, 2014ರಲ್ಲಿ 4ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಬಿಡುಗಡೆ ಮಾಡಿದ ಬಳಿಕ ಯಾವುದೇ ಬದಲಾವಣೆ ತರದ ಹೋಂಡಾ ಸಂಸ್ಥೆಯು ಇದೇ ಮೊದಲ ಬಾರಿಗೆ ಹೈಬ್ರಿಡ್ ತಂತ್ರಜ್ಞಾನ ಪರಿಚಯಿಸುತ್ತಿದೆ. 5ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಪ್ರಸ್ತುತ ಮಾದರಿಗಿಂತಲೂ ತುಸು ದೊಡ್ಡ ಗಾತ್ರವನ್ನು ಹೊಂದಿದ್ದು, ಬೂಟ್ ಸ್ಪೆಸ್ ಜೊತೆಗೆ ಹಿಂಬದಿಯ ಸವಾರರಿಗೆ ವಿಸ್ತರಿತ ಲೆಗ್ ರೂಂ ಮತ್ತು ಹೆಡ್ ರೂಂ ನೀಡಿರುವುದು ಆರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗಲಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಸದ್ಯ ಥೈಲ್ಯಾಂಡ್‌ನಲ್ಲಿ ಹೊಸ ತಲೆಮಾರಿನ ಕಾರಿನ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಹೋಂಡಾ ಸಂಸ್ಥೆಯು ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಹೊಸ ಕಾರಿನ ಎಂಜಿನ್ ಅನ್ನು ಅಲ್ಲಿಯೇ ಅಭಿವೃದ್ಧಿಪಡಿಸಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಥೈಲ್ಯಾಂಡ್‌ನಲ್ಲಿರುವ ಹೋಂಡಾ ಕಾರು ಉತ್ಪಾದನಾ ಘಟಕವು ಏಷ್ಯಾದ ಅತಿದೊಡ್ಡ ಕಾರು ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆ ಹೊಂದಿದ್ದು, ಇಲ್ಲಿಂದಲೇ ಹೊಸ ಸಿಟಿ ಸೆಡಾನ್ ಕಾರು ಅಂತಿಮ ರೂಪ ಪಡೆದುಕೊಂಡು ಭಾರತಕ್ಕೆ ಪ್ರವೇಶಿಸಲಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಹೊಸ ಸಿಟಿ ಸೆಡಾನ್ ಕಾರಿನಲ್ಲಿ ಈ ಬಾರಿ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಮಾರುತಿ ಸುಜುಕಿ ಸಿಯಾಜ್ ಮತ್ತು ಹ್ಯುಂಡೈ ವೆರ್ನಾ ಕಾರಿಗೆ ಮಾತ್ರವಲ್ಲದೇ ಟೊಯೊಟಾ ಕರೊಲ್ಲಾ ಆಟ್ಲಿಸ್ ಕಾರಿಗೂ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಎಂಜಿನ್ ಸಾಮರ್ಥ್ಯ

ಹೊಸ ತಲೆಮಾರಿನ ಹೋಂಡಾ ಕಾರು ಈ ಬಾರಿ ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯು ಪರ್ಫಾಮೆನ್ಸ್ ಪ್ರಿಯರನ್ನು ಮತ್ತಷ್ಟು ಸೆಳೆಯಲಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಜೊತೆಗೆ 2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮ ಜಾರಿಗೆ ಹಿನ್ನೆಲೆಯಲ್ಲಿ ಹೊಸ ವಾಹನ ಎಂಜಿನ್‌ನಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತಿದ್ದು, ಶೇ.25 ರಷ್ಟು ಹೊಗೆ ಉಗುಳುವ ಪ್ರಮಾಣ ಕಡಿಮೆಯಾದಲ್ಲಿ, ಶೇ.10ರಿಂದ 15ರಷ್ಟು ಮೈಲೇಜ್ ಪ್ರಮಾಣ ಹೆಚ್ಚಳವಾಗಲಿದೆ.

ಸಿಟಿ ಫೇಸ್‌ಲಿಫ್ಟ್ ಕಾರು ಬಿಡುಗಡೆಗೆ ದಿನಗಣನೆ- ಆಯ್ದ ಹೋಂಡಾ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಶುರು

ಹಾಗೆಯೇ ಹೊಸ ಎಂಜಿನ್ ಹೊತ್ತುಬರುತ್ತಿರುವ ಬಿಎಸ್-6 ವಾಹನ ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಬೆಲೆಗಳಿಗೆ ಅನುಗುಣವಾಗಿ ರೂ.80 ಸಾವಿರದಿಂದ ರೂ.2 ಲಕ್ಷದ ತನಕ ಈಗಿರುವ ಬೆಲೆಗಳಿಂತಲೂ ಹೆಚ್ಚು ಬೆಲೆ ಪಡೆದುಕೊಳ್ಳಲಿವೆ. ಇವುಗಳಲ್ಲಿ ಭಾರೀ ಬದಲಾವಣೆ ಪಡೆದುಕೊಳ್ಳುತ್ತಿರುವ ಹೋಂಡಾ ಸಿಟಿ ಸಹ ಈಗಿರುವ ವಿನ್ಯಾಸಕ್ಕಿಂತಲೂ ಹೆಚ್ಚಿನ ವೈಶಿಷ್ಟ್ಯತೆ ಹೊಂದಲಿದ್ದು, ಬೆಲೆಯೂ ಕೂಡಾ ತುಸು ದುಬಾರಿ ಎನ್ನಿಸಲಿದೆ.

Source: Autocarindia

Article Published On: Wednesday, November 6, 2019, 11:31 [IST]
English summary
According to report, Honda car dealers have commenced bookings for the BS6 Honda City petrol model in India unofficially.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+