ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಹೋಂಡಾ ಜನಪ್ರಿಯ ಸಿಟಿ ಕಾರಿನ ನೆಕ್ಸ್ಟ್ ಜನರೇಷನ್ ಆವೃತ್ತಿಯು ಭಾರೀ ಬದಲಾವಣೆ ಪಡೆದುಕೊಂಡಿದ್ದು, 2020ರ ಫೆಬ್ರುವರಿ ಅಂತ್ಯಕ್ಕೆ ಬಿಡುಗಡೆಯಾಗುವ ಸುಳಿವು ನೀಡಿದೆ.

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರಿನ 5ನೇ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಮುಂದಿನ ತಿಂಗಳು ಥೈಲ್ಯಾಂಡ್‌ನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ತದನಂತರವಷ್ಟೇ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ. ಹೋಂಡಾ ಸಂಸ್ಥೆಯು ಇದೇ ಮೊದಲ ಬಾರಿಗೆ ಸಿಟಿ ಸೆಡಾನ್‌ನಲ್ಲಿ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಮಾದರಿಯನ್ನು ಕೂಡಾ ಬಿಡುಗಡೆಗೊಳಿಸುತ್ತಿದ್ದು, ರೋಡ್ ಟೆಸ್ಟಿಂಗ್ ವೇಳೆ ಹೊಸ ಕಾರಿನ ಬಹುತೇಕ ಹೊರ ವಿನ್ಯಾಸಗಳ ಮಾಹಿತಿ ಲಭ್ಯವಾಗಿದೆ.

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಹೈಬ್ರಿಡ್ ಎಂಜಿನ್‌ನಿಂದಾಗಿ ಹೊಸ ಕಾರಿನ ಮೈಲೇಜ್ ಪ್ರಮಾಣವು ಸಾಮಾನ್ಯ ಪೆಟ್ರೋಲ್ ಕಾರಿಗಿಂತಲೂ ಶೇ.33 ರಷ್ಟು ಮೈಲೇಜ್ ಹೆಚ್ಚಳವಾಗಿದ್ದು, ಇದು ಮಧ್ಯಮ ಕ್ರಮಾಂಕದ ಸೆಡಾನ್ ಕಾರು ಖರೀದಿದಾರರ ನೆಚ್ಚಿನ ಆಯ್ಕೆಯಾಗುವುದರಲ್ಲಿ ಎರಡು ಮಾತಿಲ್ಲ.

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಕಳೆದ ಮಾರ್ಚ್‌ನಲ್ಲಿ ಸಿವಿಕ್ ಬಿಡುಗಡೆಯ ನಂತರ ಸಿಟಿ ಸೆಡಾನ್ ಕಾರಿನ ಮೇಲೆ ಹೆಚ್ಚಿನ ಗಮನಹರಿಸಿರುವ ಹೋಂಡಾ ಸಂಸ್ಥೆಯು 2020ರ ಫೆಬ್ರುವರಿ 7ರಿಂದ 14ರ ತನಕ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೊಸ ಕಾರನ್ನು ಪ್ರದರ್ಶನ ಮಾಡಿದ ನಂತರವಷ್ಟೇ ಬಿಡುಗಡೆ ಮಾಡಲಿದೆ.

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿಟಿ ಕಾರಿಗಿಂತಲೂ ಹೊಸ ತಲೆಮಾರಿನ ಆವೃತ್ತಿಯು ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, 2014ರಲ್ಲಿ 4ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಬಿಡುಗಡೆ ಮಾಡಿದ ಬಳಿಕ ಯಾವುದೇ ಬದಲಾವಣೆ ತರದ ಹೋಂಡಾ ಸಂಸ್ಥೆಯು ಇದೇ ಮೊದಲ ಬಾರಿಗೆ ಹೈಬ್ರಿಡ್ ಎಂಜಿನ್ ಸೇರಿದಂತೆ ಹಲವು ಹೊಸ ಫೀಚರ್ಸ್‌ಗಳನ್ನು ಪರಿಚಯಿಸುತ್ತಿದೆ. 5ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಪ್ರಸ್ತುತ ಮಾದರಿಗಿಂತಲೂ ತುಸು ದೊಡ್ಡ ಗಾತ್ರವನ್ನು ಹೊಂದಿದ್ದು, ಬೂಟ್ ಸ್ಪೆಸ್ ಜೊತೆಗೆ ಹಿಂಬದಿಯ ಸವಾರರಿಗೆ ವಿಸ್ತರಿತ ಲೆಗ್ ರೂಂ ಮತ್ತು ಹೆಡ್ ರೂಂ ನೀಡಿರುವುದು ಮತ್ತಷ್ಟು ಆರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗಲಿದೆ.

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಸದ್ಯ ಥೈಲ್ಯಾಂಡ್‌ನಲ್ಲಿ ಹೊಸ ತಲೆಮಾರಿನ ಕಾರಿನ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಹೋಂಡಾ ಸಂಸ್ಥೆಯು ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಹೊಸ ಕಾರಿನ ಎಂಜಿನ್ ಅನ್ನು ಅಲ್ಲಿಯೇ ಅಭಿವೃದ್ಧಿಪಡಿಸಿದೆ.

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಥೈಲ್ಯಾಂಡ್‌ನಲ್ಲಿರುವ ಹೋಂಡಾ ಕಾರು ಉತ್ಪಾದನಾ ಘಟಕವು ಏಷ್ಯಾದ ಅತಿದೊಡ್ಡ ಕಾರು ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆ ಹೊಂದಿದ್ದು, ಇಲ್ಲಿಂದಲೇ ಹೊಸ ಸಿಟಿ ಸೆಡಾನ್ ಕಾರು ಅಂತಿಮ ರೂಪ ಪಡೆದುಕೊಂಡು ಭಾರತಕ್ಕೆ ಪ್ರವೇಶಿಸಲಿದೆ.

MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಹೊಸ ಸಿಟಿ ಸೆಡಾನ್ ಕಾರಿನಲ್ಲಿ ಈ ಬಾರಿ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಮಾರುತಿ ಸುಜುಕಿ ಸಿಯಾಜ್ ಮತ್ತು ಹ್ಯುಂಡೈ ವೆರ್ನಾ ಕಾರಿಗೆ ಮಾತ್ರವಲ್ಲದೇ ಟೊಯೊಟಾ ಕರೊಲ್ಲಾ ಆಟ್ಲಿಸ್ ಕಾರಿಗೂ ಇದು ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿ‍ಎಲ್ ಕಳೆದುಕೊಂಡ ಡ್ರೈವರ್..!

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಎಂಜಿನ್ ಸಾಮರ್ಥ್ಯ

ಹೊಸ ತಲೆಮಾರಿನ ಹೋಂಡಾ ಕಾರು ಈ ಬಾರಿ ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯು ಪರ್ಫಾಮೆನ್ಸ್ ಪ್ರಿಯರನ್ನು ಮತ್ತಷ್ಟು ಸೆಳೆಯಲಿದೆ.

MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಜೊತೆಗೆ 2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮ ಜಾರಿಗೆ ಹಿನ್ನೆಲೆಯಲ್ಲಿ ಹೊಸ ವಾಹನ ಎಂಜಿನ್‌ನಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತಿದ್ದು, ಈ ಹಿಂದಿಗಿಂತಲೂ ಶೇ.25 ರಷ್ಟು ಹೊಗೆ ಉಗುಳುವ ಪ್ರಮಾಣ ಕಡಿಮೆಯಾದಲ್ಲಿ, ಮೈಲೇಜ್ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.

ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನೆಕ್ಸ್ಟ್ ಜನರೇಷನ್ ಹೋಂಡಾ ಸಿಟಿ

ಹಾಗೆಯೇ ಹೊಸ ಎಂಜಿನ್ ಹೊತ್ತುಬರುತ್ತಿರುವ ಬಿಎಸ್-6 ವಾಹನ ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೆಲೆಗಳಿಂತಲೂ ಪೆಟ್ರೋಲ್ ಮಾದರಿಯು ರೂ.15 ಸಾವಿರದಿಂದ 20 ಸಾವಿರ ಮತ್ತು ಡೀಸೆಲ್ ಎಂಜಿನ್ ಮಾದರಿಯು ರೂ.80 ಸಾವಿರದಿಂದ ರೂ.2 ಲಕ್ಷದ ತನಕ ದುಬಾರಿಯಾಗಲಿವೆ.

Source: Electricvehicleweb

Article Published On: Sunday, November 24, 2019, 9:15 [IST]
English summary
2020 Honda City To Be Larger, To Feature Upgraded Interiors And More. Read in Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+