ಬಿಡುಗಡೆಗೊಂಡ ಹೊಸ ಹೋಂಡಾ ಸಿವಿಕ್ ಕಾರಿಗೆ ಮಾರುಕಟ್ಟೆಯಲ್ಲಿ ಉತ್ತಮ ರೆಸ್ಪಾನ್ಸ್...

ಹೋಂಡಾ ಸಂಸ್ಥೆಯು ತಮ್ಮ ಮೊದಲನೆಯ ತಲೆಮಾರಿನ ಸಿವಿಕ್ ಕಾರನ್ನು 1972ರಲ್ಲಿ ಬಿಡುಗಡೆಗೊಳಿಸಿದ್ದು, ಇಡೀಗ ಭಾರಾತದಲ್ಲಿ 10ನೆಯ ತಲೆಮಾರಿನ ಸಿವಿಕ್ ಸಿಡಾನ್ ಕಾರನ್ನು ಬಿಡುಗಡೆಗೊಳಿಸಿದೆ. ಸಂಸ್ಥೆಯು ಬಿಡುಗಡೆಗಿಂತಲೂ ಮುಂಚೆಯೆ ಈ ಕಾರಿನ ಖರೀದಿಗಾಗಿ ಬುಕ್ಕಿಂ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಇದೀಗ ಕೇವಲ 20 ದಿನದಲ್ಲಿ ಅಚ್ಚರಿಗೊಳಿಸಿವ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಂಡಿದೆ.

ಬೆಲೆ ಜಾಸ್ತಿಯಾದರೂ ಹೆಚ್ಚು ಸದ್ದು ಮಾಡುತ್ತಿದೆ ಹೊಸ ಹೋಂಡಾ ಸಿವಿಕ್ ಕಾರು...

ಹೌದು, ಸುಮಾರು 20 ದಿನಗಳ ಹಿಂದಷ್ಟೆ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದು, ಇದೀಗ 1100ಕ್ಕು ಅಧಿಕವಾದ ಗ್ರಾಹಕರು ಇದನ್ನು ಬುಕ್ಕಿಂಗ್ ಮಾಡಿಕೊಂಡಿದ್ದಾರೆ. ಹೋಂಡಾ ಸಿವಿಕ್ ಕಾರುಗಳು 3 ಪೆಟ್ರೋಲ್ ವೆರಿಯಂಟ್ ಹಾಗು ಎರಡು ಡೀಸೆಲ್ ವೇರಿಯಂಟ್‍‍ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ.17.69 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಹತ್ತಿರದಲ್ಲಿರುವ ಹೋಂಡಾ ಡೀಲರ್‍‍ನ ಬಳಿ 31,000 ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

2018ರ ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಮೇಳದಲ್ಲಿ ಪ್ರದರ್ಶನಗೊಳ್ಳುವ ಮೂಲಕ ಸೆಡಾನ್ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದ ಹೊಸ ತಲೆಮಾರಿನ ಸಿವಿಕ್ ಕಾರುಗಳು ಸ್ಕೋಡಾ ಒಕ್ಟಿವಿಯಾ ಆರ್‌ಎಸ್, ಹ್ಯುಂಡೈ ಎಲಾಂಟ್ರಾ ಮತ್ತು ಟೊಯೊಟಾ ಕರೊಲ್ಲಾ ಕಾರುಗಳಿಗೆ ತ್ರೀವ ಪೈಪೋಟಿ ನೀಡಲು ಸಕಲ ಸಿದ್ಧತೆ ಮಾಡಿಕೊಂಡು ಸಂಸ್ಥೆಯು ಬಿಡುಗಡೆಗೊಳಿಸಿದೆ.

ಬೆಲೆ ಜಾಸ್ತಿಯಾದರೂ ಹೆಚ್ಚು ಸದ್ದು ಮಾಡುತ್ತಿದೆ ಹೊಸ ಹೋಂಡಾ ಸಿವಿಕ್ ಕಾರು...

ಎಂಜಿನ್ ಸಾಮರ್ಥ್ಯ

2019ರ ಹೊಸ ಹೋಂಡಾ ಸಿವಿಕ್ ಕಾರು ಈ ಬಾರಿ ಎರಡು ಎಂಜಿನ್ ಮಾದರಿಗಳಲ್ಲಿ ಬಿಡುಗಡೆಗೊಂಡಿದೆ. ಪೆಟ್ರೋಲ್ ಮಾದರಿಯ ಹೋಂಡಾ ಸಿವಿಕ್ ಕಾರು 1.8 ಲೀಟರ್ 4 ಸಿಲೆಂಡರ್ ಎಂಜಿನ್ ಸಹಾಯದಿಂದ 139ಬಿಹೆಚ್‍ಪಿ ಮತ್ತು 174ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಗುಣವನ್ನು ಪಡೆದುಕೊಂಡಿದೆ. ಪೆಟ್ರೋಲ್ ಎಂಜಿನ್ ಅನ್ನು ಸಿವಿಟಿ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಇನ್ನು ಡೀಸೆಲ್ ಮಾದರಿಯ ಹೋಂಡಾ ಸಿವಿಕ್ ಕಾರುಗಳು 1.6 ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಸಹಾಯದಿಂದ 118ಬಿಹೆಚ್‍ಪಿ ಮತ್ತು 300ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಗುಣವನ್ನು ಹೊಂದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

MOST READ: ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ಗರಂ - ಆರ್‍‍ಟಿಒ ಹೇಳಿದ್ದೇನು.?

ಬೆಲೆ ಜಾಸ್ತಿಯಾದರೂ ಹೆಚ್ಚು ಸದ್ದು ಮಾಡುತ್ತಿದೆ ಹೊಸ ಹೋಂಡಾ ಸಿವಿಕ್ ಕಾರು...

ಮೈಲೇಜ್

ಹೀಗಾಗಿ ಸುಧಾರಿತ ತಂತ್ರಜ್ಞಾನಗಳ ಅಳವಡಿಕೆಯಲ್ಲಿ ಒಂದು ಹೆಜ್ಜೆ ಮುನ್ನಡೆ ಸಾಧಿಸಿರುವ ಹೋಂಡಾ ಸಂಸ್ಥೆಯು ಹೊಸ ಸಿವಿಕ್ ಕಾರುಗಳ ಇಂಧನ ಕಾರ್ಯಕ್ಷಮತೆಯನ್ನು ಹೆಚ್ಚಿಸಿದ್ದು, 47 ಲೀಟರ್ ಇಂಧನ ಟ್ಯಾಂಕ್ ಸೌಲಭ್ಯದೊಂದಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ 16.5 ಕಿ.ಮಿ ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ 26.8 ಕಿಮಿ ಮೈಲೇಜ್ ನೀಡುವುದಾಗಿ ಹೇಳಿಕೊಂಡಿದೆ.

ಇನ್ನು ಹೊಸ ಕಾರುಗಳಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಬಿಡಿ, ಲಾರ್ಜ್ ಕ್ರೋಮ್ ಗ್ರಿಲ್, 17-ಇಂಚಿನ ಅಲಾಯ್ ಚಕ್ರಗಳು ಮತ್ತು 8 ಏರ್ ಬ್ಯಾಗ್ ವ್ಯವಸ್ಥೆ ಇರುವುದು ಸೆಡಾನ್ ಪ್ರಿಯರ ಆಯ್ಕೆಗೆ ಮತ್ತೊಂದು ಪ್ಲಸ್ ಪಾಯಿಂಟ್ ಆಗಲಿದೆ.

MOST READ: ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಬೆಲೆ ಜಾಸ್ತಿಯಾದರೂ ಹೆಚ್ಚು ಸದ್ದು ಮಾಡುತ್ತಿದೆ ಹೊಸ ಹೋಂಡಾ ಸಿವಿಕ್ ಕಾರು...

ಹಾಗೆಯೇ ಹೊಸ ಕಾರು 4,656-ಎಂಎಂ ಉದ್ದ, 1,799-ಎಂಎಂ ಅಗಲ, 1,433-ಎಂಎಂ ಎತ್ತರ, 2,700-ಎಂಎಂ ವೀಲ್ಹ್ ಬೆಸ್ ಮತ್ತು 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ಲ್ಯಾಟಿನಂ ವೈಟ್ ಪರ್ಲ್, ರೆಡಿಯೆಂಟ್ ರೆಡ್, ಮಾರ್ಡನ್ ಸ್ಟೀಲ್, ಲೌನರ್ ಸಿಲ್ವರ್ ಮತ್ತು ಗೋಲ್ಡನ್ ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

Source: NDTV Auto

Article Published On: Friday, March 8, 2019, 17:29 [IST]
English summary
2019 Honda Civic Bags Over 1100 Bookings In Just 20 Days. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+