Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೂ ಮುನ್ನವೇ ಹೊಸ ಹೋಂಡಾ ಸಿವಿಕ್ ಕಾರಿಗೆ ಮಾರುಕಟ್ಟೆಯಲ್ಲಿ ಉತ್ತಮ ರೆಸ್ಪಾನ್ಸ್
ಹೋಂಡಾ ಕಾರ್ಸ್ ಸಂಸ್ಥೆಯು ತಮ್ಮ 10ನೆಯ ತಲೆಮಾರಿನ ಹೋಂಡಾ ಸಿವಿಕ್ ಸೆಡಾನ್ ಕಾರನ್ನು ಮಾರ್ಚ್ 7 ರಂದು ಬಿಡುಗದಡೆಗೊಳಿಸಲಿದ್ದು, ಬಿಡುಗಡೆಗೂ ಮುನ್ನವೇ ಮಾರುಕಟ್ಟೆಯಲ್ಲಿ ಕಾರಿನ ಬಗ್ಗೆ ಉತ್ತಮವಾದ ಪ್ರತಿಕ್ರಿಯೆ ದೊರೆಯುತ್ತಿದೆ. ಈ ನಿಟ್ಟಿನಲ್ಲಿ ಸಂಸ್ಥೆಯು ತಡ ಮಾಡದೆಯೆ ಹೆಚ್ಚಿನ ಕಾರಿನ ಉತ್ಪಾದನೆಯ ಕಾರ್ಯದಲ್ಲಿದ್ದಾರೆ.

ಹೌದು ಬಿಡುಗಡೆಗಾಗಿ ಇನ್ನು ಕೆಲವೇ ದಿನಗಳು ಇದ್ದರೂ ಸಹ ಗ್ರಾಹಕರು ಈಗಾಗಲೆ ಈ ಕಾರಿನ ಖರೀದಿಗಾಗಿ ಮುಗಿ ಬೀಳುತ್ತಿರುವ ಕಾರಣ ಗ್ರೇಟರ್ ನೋಯ್ಡಾ ಕಾರಿನ ಪ್ರೊಡಕ್ಷನ್ ಅನ್ನು ಮತ್ತಶ್ಟು ಹೆಚ್ಚಿಸಿ, ಬುಕ್ಕಿಂಗ್ ಪಡೆದ ಗ್ರಾಹಕರಿಗೆ ಶೀಘ್ರವೇ ಕಾರನ್ನು ನೀಡಲಿದ್ದಾರೆ. ಇನ್ನು ನೀವು ಕೂಡಾ ಈ ಕಾರನ್ನು ಖರೀದಿಸುವ ಆಲೋಚನೆ ಇದ್ದರೆ ಇಂದೆ ನಿಮ್ಮ ಹತ್ತಿರದ ಹೋಂಡಾ ಡೀಲರ್‍ನ ಬಳಿ ರೂ. 31,000 ನೀಡಿ ಬುಕ್ಕಿಂಗ್ ಮಾಡಿಕೊಳ್ಳಿ.

2018ರ ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಮೇಳದಲ್ಲಿ ಪ್ರದರ್ಶನಗೊಳ್ಳುವ ಮೂಲಕ ಸೆಡಾನ್ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದ ಹೊಸ ತಲೆಮಾರಿನ ಸಿವಿಕ್ ಕಾರುಗಳು ಸ್ಕೋಡಾ ಒಕ್ಟಿವಿಯಾ ಆರ್‌ಎಸ್, ಹ್ಯುಂಡೈ ಎಲಾಂಟ್ರಾ ಮತ್ತು ಟೊಯೊಟಾ ಕರೊಲ್ಲಾ ಕಾರುಗಳಿಗೆ ತ್ರೀವ ಪೈಪೋಟಿ ನೀಡುವ ಸುಳಿವು ನೀಡಿದ್ದು, ಸೆಡಾನ್ ಕಾರುಗಳಲ್ಲೇ ಬೆಸ್ಟ್ ಫೀಚರ್ಸ್ ಹೊತ್ತುಬರುವುದು ಬಹುತೇಕ ಖಚಿತವಾಗಿದೆ.

10ನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಹೊಸ ಸಿವಿಕ್ ಕಾರುಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ವಿದೇಶಿ ಮಾರುಕಟ್ಟೆಯಲ್ಲಿ ಸದ್ಯಕ್ಕೆ ಲಭ್ಯವಿರುವ ಸಿವಿಕ್ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಸಿವಿಕ್ ಆವೃತ್ತಿಯು ಭಾರತದಲ್ಲಿ ಬಿಡುಗಡೆಯಾಗುತ್ತಿದೆ.

ಮಾಹಿತಿಗಳ ಪ್ರಕಾರ, ಹೊಸ ಸಿವಿಕ್ ಕಾರುಗಳು 1.8-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.6- ಡೀಸೆಲ್ ಎಂಜಿನ್ ಹೊಂದಿರಲಿದ್ದು, ಪೆಟ್ರೋಲ್ ವರ್ಷನ್‌ಗಳು 141-ಬಿಎಚ್‌ಪಿ, 174-ಎನ್ಎಂ ಟಾರ್ಕ್ ಉತ್ಪಾದಿಸಿದ್ದಲ್ಲಿ ಡೀಸೆಲ್ ವರ್ಷನ್‌ಗಳು 120-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಜೊತೆಗೆ 10ನೇ ಜನರೇಷನ್ ವೈಶಿಷ್ಟ್ಯತೆ ಹೊಂದಿರುವ ಸಿವಿಕ್ ಕಾರು ಪೆಟ್ರೋಲ್ ವರ್ಷನ್‌ಗಳಲ್ಲಿ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು ಡೀಸೆಲ್ ಕಾರುಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಳವಡಿಕೆ ಇರಲಿದ್ದು, ಎಲ್ಇಡಿ ಟೈಲ್ ಲೈಟ್ಸ್, ಡ್ಯುಯಲ್ ಟೋನ್ ಇಂಟಿರಿಯರ್, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಹ ಇರಲಿದೆ.

ಹೀಗಾಗಿ ಸುಧಾರಿತ ತಂತ್ರಜ್ಞಾನಗಳ ಅಳವಡಿಕೆಯಲ್ಲಿ ಒಂದು ಹೆಜ್ಜೆ ಮುನ್ನಡೆ ಸಾಧಿಸಿರುವ ಹೋಂಡಾ ಸಂಸ್ಥೆಯು ಹೊಸ ಸಿವಿಕ್ ಕಾರುಗಳ ಇಂಧನ ಕಾರ್ಯಕ್ಷಮತೆಯನ್ನು ಹೆಚ್ಚಿಸಿದ್ದು, 47 ಲೀಟರ್ ಇಂಧನ ಟ್ಯಾಂಕ್ ಸೌಲಭ್ಯದೊಂದಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ 16.5 ಕಿ.ಮಿ ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ 26.8 ಕಿಮಿ ಮೈಲೇಜ್ ನೀಡುವುದಾಗಿ ಹೇಳಿಕೊಂಡಿದೆ.

ಇನ್ನು ಹೊಸ ಕಾರುಗಳಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಬಿಡಿ, ಲಾರ್ಜ್ ಕ್ರೋಮ್ ಗ್ರಿಲ್, 17-ಇಂಚಿನ ಅಲಾಯ್ ಚಕ್ರಗಳು ಮತ್ತು 8 ಏರ್ ಬ್ಯಾಗ್ ವ್ಯವಸ್ಥೆ ಇರುವುದು ಸೆಡಾನ್ ಪ್ರಿಯರ ಆಯ್ಕೆಗೆ ಮತ್ತೊಂದು ಪ್ಲಸ್ ಪಾಯಿಂಟ್ ಆಗಲಿದೆ.
ಹಾಗೆಯೇ ಹೊಸ ಕಾರು 4,656-ಎಂಎಂ ಉದ್ದ, 1,799-ಎಂಎಂ ಅಗಲ, 1,433-ಎಂಎಂ ಎತ್ತರ, 2,700-ಎಂಎಂ ವೀಲ್ಹ್ ಬೆಸ್ ಮತ್ತು 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ಲ್ಯಾಟಿನಂ ವೈಟ್ ಪರ್ಲ್, ರೆಡಿಯೆಂಟ್ ರೆಡ್, ಮಾರ್ಡನ್ ಸ್ಟೀಲ್, ಲೌನರ್ ಸಿಲ್ವರ್ ಮತ್ತು ಗೋಲ್ಡನ್ ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಹೀಗಾಗಿ ಹೊಸ ಕಾರಿನ ಬೆಲೆಯು ದೆಹೆಲಿ ಎಕ್ಸ್ ಶೋರಂ ಪ್ರಕಾರ ರೂ. 15 ಲಕ್ಷದಿಂದ ರೂ. 22 ಲಕ್ಷ ತನಕ ಇರಬಹುದೆಂದು ಅಂದಾಜಿಸಲಾಗಿದ್ದು, ಮಾರ್ಚ್ 7ರಂದು ಬಿಡುಗಡೆಯಾಗುವ ಹೊಸ ಕಾರು ಎಷ್ಟರ ಮಟ್ಟಿಗೆ ಬೇಡಿಕೆ ಪಡೆಯಲಿದೆ ಎನ್ನುವುದನ್ನು ಕಾಯ್ದು ನೋಡಬೇಕಿದೆ.