ಹೊಚ್ಚ ಹೊಸ ಹೋಂಡಾ ಸಿವಿಕ್ ಕಾರಿನ ಮೈಲೇಜ್ ರೇಂಜ್ ಎಷ್ಟು ಗೊತ್ತಾ?

2013ರಲ್ಲಿ ಮಾರಾಟದಿಂದ ಸ್ಥಗಿತಗೊಂಡು ಬರೋಬ್ಬರಿ 6 ವರ್ಷಗಳ ನಂತರ ಭಾರತೀಯ ಮಾರುಕಟ್ಟೆಗೆ ಮರಳಿ ಬರುತ್ತಿರುವ ಹೋಂಡಾ ಸಿವಿಕ್ ಸೆಡಾನ್ ಮಾದರಿಗಳು ಮುಂದಿನ ತಿಂಗಳು ಮಾರ್ಚ್ ಆರಂಭದಲ್ಲಿ ಬಿಡುಗಡೆಯಾಗುತ್ತಿದ್ದು, ಈ ಮಧ್ಯೆ ಹೊಸ ಕಾರಿನ ಇಂಧನ ಕಾರ್ಯಕ್ಷಮತೆ ಕುರಿತಂತೆ ಕೆಲವು ಇಂಟ್ರಸ್ಟಿಂಗ್ ವಿಚಾರಗಳು ಸೆಡಾನ್ ಪ್ರಿಯರ ಆಕರ್ಷಣೆಗೆ ಕಾರಣವಾಗಿವೆ.

ಹೊಚ್ಚ ಹೊಸ ಹೋಂಡಾ ಸಿವಿಕ್ ಕಾರಿನ ಮೈಲೇಜ್ ರೇಂಜ್ ಎಷ್ಟು ಗೊತ್ತಾ?

2018ರ ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಮೇಳದಲ್ಲಿ ಪ್ರದರ್ಶನಗೊಳ್ಳುವ ಮೂಲಕ ಸೆಡಾನ್ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿದ್ದ ಹೊಸ ತಲೆಮಾರಿನ ಸಿವಿಕ್ ಕಾರುಗಳು ಸ್ಕೋಡಾ ಒಕ್ಟಿವಿಯಾ ಆರ್‌ಎಸ್, ಹ್ಯುಂಡೈ ಎಲಾಂಟ್ರಾ ಮತ್ತು ಟೊಯೊಟಾ ಕರೊಲ್ಲಾ ಕಾರುಗಳಿಗೆ ತ್ರೀವ ಪೈಪೋಟಿ ನೀಡುವ ಸುಳಿವು ನೀಡಿದ್ದು, ಸೆಡಾನ್ ಕಾರುಗಳಲ್ಲೇ ಬೆಸ್ಟ್ ಫೀಚರ್ಸ್ ಹೊತ್ತುಬರುವುದು ಬಹುತೇಕ ಖಚಿತವಾಗಿದೆ.

10ನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಹೊಸ ಸಿವಿಕ್ ಕಾರುಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ವಿದೇಶಿ ಮಾರುಕಟ್ಟೆಯಲ್ಲಿ ಸದ್ಯಕ್ಕೆ ಲಭ್ಯವಿರುವ ಸಿವಿಕ್ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಸಿವಿಕ್ ಆವೃತ್ತಿಯು ಭಾರತದಲ್ಲಿ ಬಿಡುಗಡೆಯಾಗುತ್ತಿದೆ.

ಹೊಚ್ಚ ಹೊಸ ಹೋಂಡಾ ಸಿವಿಕ್ ಕಾರಿನ ಮೈಲೇಜ್ ರೇಂಜ್ ಎಷ್ಟು ಗೊತ್ತಾ?

ಮಾಹಿತಿಗಳ ಪ್ರಕಾರ, ಹೊಸ ಸಿವಿಕ್ ಕಾರುಗಳು 1.8-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.6- ಡೀಸೆಲ್ ಎಂಜಿನ್ ಹೊಂದಿರಲಿದ್ದು, ಪೆಟ್ರೋಲ್ ವರ್ಷನ್‌ಗಳು 141-ಬಿಎಚ್‌ಪಿ, 174-ಎನ್ಎಂ ಟಾರ್ಕ್ ಉತ್ಪಾದಿಸಿದ್ದಲ್ಲಿ ಡೀಸೆಲ್ ವರ್ಷನ್‌ಗಳು 120-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಜೊತೆಗೆ 10ನೇ ಜನರೇಷನ್ ವೈಶಿಷ್ಟ್ಯತೆ ಹೊಂದಿರುವ ಸಿವಿಕ್ ಕಾರು ಪೆಟ್ರೋಲ್ ವರ್ಷನ್‌ಗಳಲ್ಲಿ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು ಡೀಸೆಲ್ ಕಾರುಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಳವಡಿಕೆ ಇರಲಿದ್ದು, ಎಲ್ಇಡಿ ಟೈಲ್ ಲೈಟ್ಸ್, ಡ್ಯುಯಲ್ ಟೋನ್ ಇಂಟಿರಿಯರ್, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಹ ಇರಲಿದೆ.

ಹೊಚ್ಚ ಹೊಸ ಹೋಂಡಾ ಸಿವಿಕ್ ಕಾರಿನ ಮೈಲೇಜ್ ರೇಂಜ್ ಎಷ್ಟು ಗೊತ್ತಾ?

ಹೀಗಾಗಿ ಸುಧಾರಿತ ತಂತ್ರಜ್ಞಾನಗಳ ಅಳವಡಿಕೆಯಲ್ಲಿ ಒಂದು ಹೆಜ್ಜೆ ಮುನ್ನಡೆ ಸಾಧಿಸಿರುವ ಹೋಂಡಾ ಸಂಸ್ಥೆಯು ಹೊಸ ಸಿವಿಕ್ ಕಾರುಗಳ ಇಂಧನ ಕಾರ್ಯಕ್ಷಮತೆಯನ್ನು ಹೆಚ್ಚಿಸಿದ್ದು, 47 ಲೀಟರ್ ಇಂಧನ ಟ್ಯಾಂಕ್ ಸೌಲಭ್ಯದೊಂದಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ 16.5 ಕಿ.ಮಿ ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ 26.8 ಕಿಮಿ ಮೈಲೇಜ್ ನೀಡುವುದಾಗಿ ಹೇಳಿಕೊಂಡಿದೆ.

ಇನ್ನು ಹೊಸ ಕಾರುಗಳಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಬಿಡಿ, ಲಾರ್ಜ್ ಕ್ರೋಮ್ ಗ್ರಿಲ್, 17-ಇಂಚಿನ ಅಲಾಯ್ ಚಕ್ರಗಳು ಮತ್ತು 8 ಏರ್ ಬ್ಯಾಗ್ ವ್ಯವಸ್ಥೆ ಇರುವುದು ಸೆಡಾನ್ ಪ್ರಿಯರ ಆಯ್ಕೆಗೆ ಮತ್ತೊಂದು ಪ್ಲಸ್ ಪಾಯಿಂಟ್ ಆಗಲಿದೆ.

ಹೊಚ್ಚ ಹೊಸ ಹೋಂಡಾ ಸಿವಿಕ್ ಕಾರಿನ ಮೈಲೇಜ್ ರೇಂಜ್ ಎಷ್ಟು ಗೊತ್ತಾ?

ಹಾಗೆಯೇ ಹೊಸ ಕಾರು 4,656-ಎಂಎಂ ಉದ್ದ, 1,799-ಎಂಎಂ ಅಗಲ, 1,433-ಎಂಎಂ ಎತ್ತರ, 2,700-ಎಂಎಂ ವೀಲ್ಹ್ ಬೆಸ್ ಮತ್ತು 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ಲ್ಯಾಟಿನಂ ವೈಟ್ ಪರ್ಲ್, ರೆಡಿಯೆಂಟ್ ರೆಡ್, ಮಾರ್ಡನ್ ಸ್ಟೀಲ್, ಲೌನರ್ ಸಿಲ್ವರ್ ಮತ್ತು ಗೋಲ್ಡನ್ ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಹೀಗಾಗಿ ಹೊಸ ಕಾರಿನ ಬೆಲೆಯು ದೆಹೆಲಿ ಎಕ್ಸ್ ಶೋರಂ ಪ್ರಕಾರ ರೂ. 20 ಲಕ್ಷದಿಂದ ರೂ. 24 ಲಕ್ಷ ತನಕ ಇರಬಹುದೆಂದು ಅಂದಾಜಿಸಲಾಗಿದ್ದು, ಮಾರ್ಚ್ ಆರಂಭದಲ್ಲಿ ಬಿಡುಗಡೆಯಾಗುವ ಹೊಸ ಕಾರು ಎಷ್ಟರ ಮಟ್ಟಿಗೆ ಬೇಡಿಕೆ ಪಡೆಯಲಿದೆ ಎನ್ನುವುದನ್ನು ಕಾಯ್ದು ನೋಡಬೇಕಿದೆ.

Most Read Articles

Kannada
Read more on ಹೋಂಡಾ honda
English summary
New Honda Civic 2019 — Here Are The Top Things To Know About The Sporty Honda Sedan. Read in Kannada.
Story first published: Wednesday, February 13, 2019, 13:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X