ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು...

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿಯು ತಮ್ಮ ವ್ಯಾಗನ್ ಆರ್ ಕಾರಿನ ಎಲೆಕ್ಟ್ರಿಕ್ ಆವೃತಿಯ್ಯನ್ನು ಪರಿಚಯಿಸಲಿದ್ದು, ಈಗಾಗಲೆ ಸ್ಪಾಟ್ ಟೆಸ್ಟಿಂಗ್ ಕೂಡಾ ನಡೆಸುತ್ತಿದೆ. ಆದರೆ ದಕ್ಷಿಣ ಕೊರಿಯ ಮೂಲದ ವಾಹನ ತಯಾರಕ ಸಂಸ್ಥೆಯಾದ ಹ್ಯುಂಡೈ ಕೂಡಾ ತಮ್ಮ ಕೊನಾ ಎಲೆಕ್ಟ್ರಿಕ್ ಕಾರನ್ನು ಪರಿಚಯಿಸಲಿದ್ದು, ಈ ಕಾರುಗಳನ್ನು ಭಾರತದಲ್ಲಿಯೆ ತಯಾರು ಮಾಡಲಾಗುತ್ತಿದೆಯಂತೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಹ್ಯುಂಡೈ ಸಂಸ್ಥೆಯು ಸದ್ಯ ಭಾರತದಲ್ಲಿ ಎಂಟ್ರಿ ಲೆವಲ್ ಸ್ಯಾಂಟ್ರೋ ಜೊತೆಗೆ ಪ್ರಮುಖ 8 ಕಾರು ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ನಾಲ್ಕು ಕಾರು ಮಾದರಿಗಳು ಸದ್ಯ ಟಾಪ್ 10 ಕಾರು ಮಾರಾಟ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿವೆ. ಇದೇ ಕಾರಣಕ್ಕೆ ತನ್ನ ಭವಿಷ್ಯದ ಕಾರು ಮಾದರಿಗಳನ್ನು ಪರಿಚಯಿಸುವ ಬಗ್ಗೆ ಮಹತ್ವದ ಸುಳಿವು ನೀಡಿರುವ ಹ್ಯುಂಡೈ, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ಮೇಲೆ ದೊಡ್ಡಮಟ್ಟದ ಹೂಡಿಕೆ ಮಾಡುತ್ತಿದೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಭಾರತದಲ್ಲಿ ಸದ್ಯ ತಮಿಳುನಾಡಿನ ಚೆನ್ನೈ ಬಳಿ ಒಂದೇ ಒಂದು ಕಾರು ಉತ್ಪಾದನಾ ಘಟಕವನ್ನು ಹೊಂದಿರುವ ಹ್ಯುಂಡೈ ಸಂಸ್ಥೆಯು ವಿವಿಧ ಸಂಸ್ಥೆಗಳ ಜೊತೆಗೂಡಿ ಬೀಡಿಭಾಗಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಕಾರು ಮಾರಾಟ ಮಾಡುತ್ತಿದೆ. ಇದೀಗ ಇದೇ ಘಟಕವನ್ನು ವಿಸ್ತರಿಸಲು ನಿರ್ಧರಿಸಿರುವ ಹ್ಯುಂಡೈ, ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೂ ಸಹಕಾರಿಯಾಗುವಂತೆ ಹೊಸ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸುತ್ತಿದೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಹ್ಯುಂಡೈ ಸಂಸ್ಥೆಯು ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕಾಗಿ ಹೊಸ ಘಟಕಗಳಿಗೆ ಚಾಲನೆ ನೀಡಿದ್ದು, ಭಾರತದಲ್ಲಿ ಅಭಿವೃದ್ಧಿಗೊಳಿಸಲು ನಿರ್ಧರಿಸುವ ಹೊಸ ಘಟಕದ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಬರೋಬ್ಬರಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಇನ್ನು ಹ್ಯುಂಡೈ ಸಂಸ್ಥೆಯು ಭಾರತದಲ್ಲಿ ಬಿಡುಗಡೆ ಮಾಡಲಿರುವ ಹೊಸ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಈಗಾಗಲೇ ಮಾಹಿತಿ ಬಿಚ್ಚಿಟ್ಟಿದ್ದು, ಮೊದಲ ಹಂತವಾಗಿ ಕೊನಾ ಇವಿ ಕಾರು ಭಾರತೀಯ ರಸ್ತೆಗಳಲ್ಲಿ ಭಾರೀ ಜನಪ್ರಿಯತೆ ಸಾಧಿಸುವ ನಿರೀಕ್ಷೆಯಲ್ಲಿದೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಇದಕ್ಕೆ ಪೂರಕ ಎನ್ನುವಂತೆ ಹ್ಯುಂಡೈ ಸಂಸ್ಥೆಯು ಕಳೆದ ಹಿಂದಷ್ಟೇ ಕೊನಾ ಎಲೆಕ್ಟ್ರಿಕ್ ಕಾರುಗಳನ್ನು ರಾಜಧಾನಿ ದೆಹಲಿಯಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದ್ದು, ಮುಂದಿನ ಕೆಲವೇ ತಿಂಗಳ ಅಂತರದಲ್ಲಿ ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗುವುದು ಖಚಿತವಾಗಿದೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಎರಡು ವಿಭಿನ್ನ ಪವರ್ ಟ್ರೈನ್ ಗಳಿಂದ ಸಿದ್ದವಾಗಿರುವ ಕೋನಾ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ 299 ಕಿ.ಮೀ ಮತ್ತು 469 ಕಿ.ಮೀ.ವರೆಗೆ ಮೈಲೇಜ್ ಸಾಮರ್ಥ್ಯವನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರು ಆವೃತ್ತಿಗಳಲ್ಲೇ ಅತಿ ಹೆಚ್ಚು ಬೇಡಿಕೆ ಪಡೆಯುವ ಎಲ್ಲಾ ಗುಣಲಕ್ಷಣಗಳು ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿವೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಮಾಹಿತಿಗಳ ಪ್ರಕಾರ ಹ್ಯುಂಡೈ ಸಂಸ್ಥೆಯು ಕಾರಿನ ಎಲೆಕ್ಟ್ರಿಕ್ ಪವರ್ ಟ್ರೈನ್ ನಿರ್ಮಿಸಲು ಎಲ್‌ಜಿ ಕೆಮಿಕಲ್ಸ್ ಜೊತೆ ಕೈಜೋಡಿಸಿದ್ದು, ಇದೇ ಬ್ಯಾಟರಿಯನ್ನು ಚೆವಿ ಬೋಲ್ಟ್ ಹ್ಯಾಚ್ ಬ್ಯಾಕ್ ಕಾರಿನಲ್ಲೂ ಕೂಡಾ ಇರಿಸಲಾಗಿರಲಿದೆ ಎನ್ನಲಾಗಿದೆ. ಅಲ್ಲದೆ ಕೊನಾ ಇವಿ 39.2 ಕಿಲೋವ್ಯಾಟ್ಸ್ ಮತ್ತು 64 ಕಿಲೋವ್ಯಾಟ್ಸ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ.

MOST READ: ಒಂದು ಲೀಟರ್‍‍ಗೆ ಸುಮಾರು 48.2 ಕಿಲೋಮೀಟರ್ ಮೈಲೇಜ್ ನೀಡುತ್ತಂತೆ ಈ ಸ್ವಿಫ್ಟ್ ಕಾರು..!

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಹುಂಡೈ ಸಂಸ್ಥೆಯು ತನ್ನ ಮೊದಲ ಇವಿ ಕಾರನ್ನು 2019ರ ಮೊದಲಾರ್ಧದಲ್ಲೇ ಪರಿಚಯಿಸುವ ಇರಾದೆಯಲ್ಲಿದ್ದು, ಜೊತೆಗೆ ಲೋನಿಕ್ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಮಾದರಿಯನ್ನು 2018ರ ಆಟೋ ಎಕ್ಸ್ ಪೋನಲ್ಲಿ ಪ್ರದರ್ಶಿಸಲಾಗಿತ್ತು. ಹೀಗಾಗಿ ಹೈಬ್ರಿಡ್ ಕಾರನ್ನು ಭಾರತದಲ್ಲಿ ಪರಿಚಯಿಸುವ ಯಾವುದೇ ಸುಳಿವು ಇಲ್ಲಾವಾದರೂ ಎಲೆಕ್ಟ್ರಿಕ್ ಕಾರನ್ನು ಮಾತ್ರ ಭಾರತದಲ್ಲಿ ಪರಿಚಯಿಸುವುದು ಖಚಿತವಾಗಿದೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಬ್ಯಾಟರಿ ವೈಶಿಷ್ಟ್ಯತೆ

ಕೋನಾ ಕಾರುಗಳಲ್ಲಿ ಎರಡು ಮಾದರಿಯ ಬ್ಯಾಟರಿ ಚಾಲಿತ ವಿಭಾಗಗಳಿದ್ದು, ಗ್ರಾಹಕರು ಬೇಡಿಕೆಗೆ ಅನುಗುಣವಾಗಿ 39. 2 ಕೆವಿ ಮತ್ತು 64 ಕೆವಿ ಬ್ಯಾಟರಿಯನ್ನು ಆಯ್ಕೆ ಮಾಡಬಹುದು. 39.2 ಕೆವಿ ಪ್ರೇರಿತ ಕೋನಾ ಕಾರುಗಳಿಗಿಂತಲೂ 64 ಕೆ.ವಿ ಪ್ರೇರಿತ ಕೋನಾ ಕಾರುಗಳು ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿವೆ.

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಕೊನಾ ಕಾರುಗಳ ಬೆಲೆ(ಅಂದಾಜು)

ಅತ್ಯುತ್ತಮ ಬ್ಯಾಟರಿ ಬಳಕೆಯ ಜೊತೆ ಅಧಿಕ ಮೈಲೇಜ್ ರೇಂಜ್ ಹೊಂದಿರುವ ಕೊನಾ ಕಾರುಗಳ ಬೆಲೆಯು ರೂ.13 ಲಕ್ಷದಿಂದ ರೂ.18 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

MOST READ: ಶೀಘ್ರವೇ ಬ್ಯಾನ್ ಆಗಲಿವೆ ಈ ಆರು ಜನಪ್ರಿಯ ಕಾರುಗಳು..!

ದೇಶಿಯವಾಗಿ ತಯಾರಾಗಲಿವೆ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರುಗಳು...

ಹೀಗಾಗಿ ಹ್ಯುಂಡೈ ಸಂಸ್ಥೆಯು ಬಿಡುಗಡೆ ಮಾಡುತ್ತಿರುವ ಕೋನಾ ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಹೊಸ ಕಾರುಗಳನ್ನು ಸದ್ಯಕ್ಕೆ ಸಿಕೆಡಿ ಮೂಲಕ ಆಮದು ಮಾಡಿಕೊಂಡು ಬಳಿಕ ಚೆನ್ನೈ ಬಳಿ ಸಿದ್ದವಾಗುವ ಹೊಸ ಘಟಕದಲ್ಲೇ ಪೂರ್ಣ ಪ್ರಮಾಣದಲ್ಲಿ ನಿರ್ಮಾಣಕ್ಕೆ ಚಾಲನೆ ನೀಡಲಿದೆ.

Source: NDTV Auto

More from DriveSpark

Article Published On: Sunday, January 27, 2019, 9:30 [IST]
English summary
New Hyundai Kona Electric Cars Will Be Locally Produced In India. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+