ಸದ್ದಿಲ್ಲದೆ ತಮ್ಮ ಸ್ಯಾಂಟ್ರೋ ಕಾರಿನ ಬೆಲೆಯನ್ನು ಹೆಚ್ಚಿಸಿದ ಹ್ಯುಂಡೈ
ಹ್ಯುಂಡೈ ಸಂಸ್ಥೆಯು ಕಳೆದ ಅಕ್ಟೋಬರ್ ತಿಂಗಳಿನಲ್ಲಿ ತಮ್ಮ ಜನಪ್ರಿಯ ಸ್ಯಾಂಟ್ರೋ ಕಾರನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಗೊಂಡ ಸಮಯದಲ್ಲಿ ರೂ. 3.89 ಲಕ್ಷದ ಪ್ರಾರಂಭಿಕೆ ಬೆಲೆಯನ್ನು ಪಡೆದುಕೊಂಡ ಸ್ಯಾಂಟ್ರೋ ಕಾರು ಇದೀಗ ಬೆಲೆಯಲ್ಲಿ ಏರಿಕೆಯನ್ನು ಕಂಡಿದೆ.

ಹೌದು, 2018 ಅಕೋಬರ್‍ನಲ್ಲಿ ಬಿಡುಗಡೆಯಾದ ಹ್ಯುಂಡೈ ಸ್ಯಾಂಟ್ರೋ ಎಂಟ್ರಿ ಲೆವೆಲ್ ಹ್ಯಾಚ್‍ಬ್ಯಾಕ್ ಕಾರು ಈ ಮೊದಲು ಎಕ್ಸ್ ಶೋರುಂ ಪ್ರಕಾರ ರೂ. 3.89 ಲಕ್ಷದ ಬೆಲೆಯನ್ನು ಪಡೆದುಕೊಂಡಿತ್ತು. ಆದರೆ ಇದೀಗಆಟೋ ಕಾರ್ ಇಂಡಿಯಾ ವರದಿಗಳ ಪ್ರಕಾರ ಹೊಸ ಹ್ಯುಂಡೈ ಕಾರು ರೂ. 4.15 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಬೆಲೆ ಏರಿಕೆಯ ಕಾರಣವನ್ನು ಸಂಸ್ಥೆಯು ಇನ್ನು ಬಹಿರಂಗ ಪಡಿಸಲಿಲ್ಲ.

ಕಳೆದ ವರ್ಷದ ಸ್ಯಾಂಟ್ರೋ ಕಾರನ್ನು ಡಿಲೈಟ್, ಎರಾ, ಮ್ಯಾಗ್ನಾ, ಸ್ಪೋಟ್ಜ್, ಆಸ್ಟ್ರಾ ಎನ್ನುವ ಐದು ಆವೃತ್ತಿಗಳಲ್ಲಿ ಬಿಡುಗಡೆ ಮಾಡಿತ್ತು. ಆದ್ರೆ ಇದರಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ವಿಫಲವಾಗಿರುವ ಎರಾ ಆವೃತ್ತಿಯನ್ನು ಈ ಬಾರಿ ಸ್ಥಗಿತಗೊಳಿಸಿರುವ ಹ್ಯುಂಡೈ ಸಂಸ್ಥೆಯು ಡಿಲೈಟ್ ಮತ್ತು ಮ್ಯಾಗ್ನಾ ಕಾರುಗಳಲ್ಲಿ ಕೆಲವು ತಾಂತ್ರಿಕ ಸೌಲಭ್ಯಗಳನ್ನು ಉನ್ನತಿಕರಿಸಿದೆ.

ಹಳೆಯ ಮಾದರಿಯ ಸ್ಯಾಂಟ್ರೋ ಕಾರಿಗೂ ಮತ್ತು ಹೊಸ ಸ್ಯಾಂಟ್ರೋ ಕಾರಿಗೂ ಸಾಕಷ್ಟು ಭಿನ್ನತೆಯಿದ್ದು, ಹೊಸ ಕಾರಿನ ಹೊರ ಮತ್ತು ಒಳ ಭಾಗದ ಡಿಸೈನ್‌ನಲ್ಲಿ ಮಹತ್ವದ ಬದಲಾವಣೆ ಕಂಡಿರುವ ಹೊಸ ಸ್ಯಾಂಟ್ರೋ ಕಾರು ಹೊಚ್ಚ ಹೊಸ ಡಿಸೈನ್ ಪ್ರೇರಿತ ಕಾಸ್‌ಕ್ಯಾಡಿಂಗ್ ಬ್ಲ್ಯಾಕ್ ಗ್ರಿಲ್, ಸ್ವೆಪ್ಟ್‌ಬ್ಯಾಕ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಬ್ಲ್ಯಾಕ್ ಪ್ಲ್ಯಾಸ್ಟಿಕ್ ಕ್ಲ್ಯಾಡಿಂಗ್, ಸ್ಪೋರ್ಟಿ ಬಂಪರ್ ಪಡೆದುಕೊಂಡಿದೆ.

ಆರಂಭಿಕ ಮಾದರಿಯಾದ ಡಿಲೈಟ್ ಆವೃತ್ತಿಯು ಈ ಬಾರಿ ಎಸಿ ಸೌಲಭ್ಯವನ್ನು ಪಡೆದುಕೊಂಡಿರುವುದಲ್ಲದೇ ಬಾಡಿ ಕಲರ್ ಫ್ರಂಟ್ ಬಂಪರ್, ಡ್ಯುಯಲ್ ಟೋನ್ ರಿಯರ್ ಬಂಪರ್ ಮತ್ತು ಮುಂಭಾಗದಲ್ಲಿ ಪವರ್ ವಿಂಡೋ ಸೌಲಭ್ಯವನ್ನು ಪಡೆದಿದೆ.

ಹಾಗೆಯೇ ಮ್ಯಾಗ್ನಾ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಯಲ್ಲಿ ಫ್ರಂಟ್ ಡೋರ್ ಸ್ಪೀಕರ್ಸ್ ವೈಶಿಷ್ಟ್ಯತೆಯ ಹೊಸ ಮ್ಯೂಸಿಕ್ ಸಿಸ್ಟಂ ಜೋಡಣೆ ಮಾಡಲಾಗಿದ್ದು, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೌಲಭ್ಯವನ್ನು ಜೋಡಣೆ ಮಾಡಲಾಗಿದೆ. ಇದರಲ್ಲಿ ಸ್ಪೋರ್ಟ್ಜ್ ಪ್ಲಸ್ ಮಾದರಿ ಕೂಡಾ ಸಹ ಪ್ರಯಾಣಿಕರ ವಿಭಾಗದ ಏರ್‌ಬ್ಯಾಗ್, ರಿಯಲ್ ವ್ಯೂ ಕ್ಯಾಮೆರಾ ಮತ್ತು ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯ ಪಡೆದಿದೆ.

ಇನ್ನು ಪ್ರೀಮಿಯಂ ಇಂಟಿರಿಯರ್ ವೈಶಿಷ್ಟ್ಯತೆಗಳನ್ನು ಹೊತ್ತು ಬಂದಿರುವ ಹೊಸ ಸ್ಯಾಂಟ್ರೋ ಕಾರಿನ ಒಳಭಾಗದ ವಿನ್ಯಾಸಗಳು ಎಂಟ್ರಿ ಲೆವಲ್ ಕಾರುಗಳಲ್ಲೇ ವಿಶೇಷವಾಗಿದ್ದು, ವೀಲ್ಹ್ ಆರ್ಚ್ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಕಾರಿನ ಕ್ಯಾಬಿನ್ ಸ್ಥಳಾವಕಾಶ ಕೂಡಾ ಹೆಚ್ಚಿದೆ.

ಹೈ ಎಂಡ್ ಮಾದರಿಗಳಲ್ಲಿ ಪ್ರೀಮಿಯಂ ವೈಶಿಷ್ಟ್ಯತೆಗಳಾದ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ, ಆ್ಯಪಲ್ ಕಾರ್ ಪ್ಲೇ, ಮಿರರ್ ಲಿಂಕ್, ಎಲೆಕ್ಟ್ರಿಕ್ ಅಡ್ಜೆಸ್ಟ್‌ಮೆಂಟ್ ರಿಯರ್ ವ್ಯೂವ್ ಮಿರರ್, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ರಿಯರ್ ವೈಪರ್ ಮತ್ತು ರಿಯರ್ ಡಿಫಾಗರ್ ಸೌಲಭ್ಯವಿದೆ.

ಎಂಜಿನ್ ಸಾಮರ್ಥ್ಯ
ನ್ಯೂ ಜನರೇಷನ್ ಹ್ಯುಂಡೈ ಸ್ಯಾಂಟ್ರೊ ಕಾರು 1.1-ಲೀಟರ್ (1,100 ಸಿಸಿ) ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಆಯ್ಕೆಯೊಂದಿಗೆ 68-ಬಿಎಚ್‌ಪಿ ಮತ್ತು 99-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು.

ಇದಲ್ಲದೇ ಹೊಸ ಸ್ಯಾಂಟ್ರೋ ಕಾರಿನ ಮ್ಯಾಗ್ನಾ ಮತ್ತು ಸ್ಪೋರ್ಟ್ಜ್ ವೆರಿಯೆಂಟ್‌ಗಳಲ್ಲಿ ಸಿಎನ್‌ಜಿ ಇಂಧನ ಆಯ್ಕೆ ಲಭ್ಯವಿದ್ದು, ಪೆಟ್ರೋಲ್ ಕಾರು ಪ್ರತಿ ಲೀಟರ್‌ಗೆ 20.3 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಸಿಎನ್‌ಜಿ ಮಾದರಿಯು ಪ್ರತಿ ಕೆಜಿ ಸಿಎನ್‌ಜಿಗೆ 30.5 ಕಿ.ಮಿ ನಷ್ಟು ಗರಿಷ್ಠ ಮೈಲೇಜ್ ನೀಡುತ್ತೆ.

ಈ ಮೂಲಕ ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಸಂಸ್ಥೆಗೆ ತ್ರೀವ ಪೈಪೋಟಿ ನೀಡುತ್ತಿರುವ ಹ್ಯುಂಡೈ ಸಂಸ್ಥೆಯು ಸ್ಯಾಂಟ್ರೋ ಕಾರನ್ನು ಉನ್ನತೀಕರಿಸುವ ಮೂಲಕ ಮಾರುತಿ ಆಲ್ಟೊ 800, ಸೆಲೆರಿಯೊ ಮತ್ತು ಟಾಟಾ ಮೋಟಾರ್ಸ್ ನಿರ್ಮಾಣದ ಟಿಯಾಗೊ, ರೆನಾಲ್ಟ್ ಕ್ವಿಡ್ ಕಾರುಗಳಿಗೆ ಮತ್ತಷ್ಟು ಟಕ್ಕರ್ ನೀಡಲಿದೆ.


Click it and Unblock the Notifications








