ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಹ್ಯುಂಡೈ ಇಂಡಿಯಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಮುಂದಿನ ತಿಂಗಳು ಮೇ 17ಕ್ಕೆ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಅದಕ್ಕೂ ಮುನ್ನ ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿರುವ ವೆನ್ಯೂ ಕಾರು ಹಲವು ಲಗ್ಷುರಿ ವೈಶಿಷ್ಟ್ಯತೆಗಳನ್ನು ಹೊತ್ತು ಮಾರುಕಟ್ಟೆ ಪ್ರವೇಶಿಸುವುದು ಈಗಾಗಲೇ ಬಹುತೇಕ ಖಚಿತವಾಗಿದೆ. ಹೀಗಾಗಿ ಬಿಡುಗಡೆಗೂ ಮೊದಲೇ ವೆನ್ಯೂ ಖರೀದಿಗಾಗಿ ಭಾರೀ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗುತ್ತಿದ್ದು, ಕೆಲವು ಹ್ಯುಂಡೈ ಕಾರು ಡೀಲರ್ಸ್‌ಗಳು ಸಂಸ್ಥೆಯ ಅಧಿಕೃತ ಘೋಷಣೆ ಮುನ್ನವೇ ಗ್ರಾಹಕರಿಂದ ರೂ.50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಸ್ವಿಕರಿಸುತ್ತಿದ್ದಾರೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಇನ್ನು ಇದೇ ತಿಂಗಳು 17ರಂದು ಅಮೆರಿಕದಲ್ಲಿ ನಡೆಯಲಿರುವ ನ್ಯೂಯಾರ್ಕ್ ಆಟೋಮೇಳದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರು ಮುಂದಿನ ತಿಂಗಳು ಮೇ 17ರಂದು ಬಿಡುಗಡೆಯಾಗಲಿದ್ದು, ನ್ಯೂಯಾರ್ಕ್ ಟೈಮ್ಸ್ ಸ್ಕ್ವೆರ್‌ನಲ್ಲಿ ಹಾಕಲಾಗಿಲುವ ಹೊಸ ಕಾರಿನ ಜಾಹೀರಾತು ಬೋರ್ಡ್ ಒಂದರಲ್ಲಿ ಬಹಿರಂಗವಾದ ಡಿಸೈನ್‌ಗಳು ಈಗಾಗಲೇ ಕಾರು ಪ್ರಿಯರ ಆಕರ್ಷಣೆ ಕಾರಣವಾಗಿವೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಕ್ರೆಟಾ ಕಾರಿನಂತೆಯೇ ಹೊಸ ವಿನ್ಯಾಸ ಹೊಂದಿರುವ ಹೊಸ ವೆನ್ಯೂ ಕಾರು ಆಕರ್ಷಕ ಹೊರವಿನ್ಯಾಸ ಹೊಂದಿದ್ದು, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪ್ರಬಲ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ ಎನ್ನುವುದು ಕಾರಿನ ವಿನ್ಯಾಸಗಳಲ್ಲೇ ಬಹಿರಂಗವಾಗಿದೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಹಾಗೆಯೇ ಹೊಸ ವೆನ್ಯೂ ಕಾರು ಉತ್ಪಾದನೆಗಾಗಿ ಈಗಾಗಲೇ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸಿರುವ ಹ್ಯುಂಡೈ, ಹೊಸ ಕಾರಿನಲ್ಲಿ ಐಷಾರಾಮಿ ಕಾರುಗಳಲ್ಲಿ ಮಾತ್ರವೇ ಲಭ್ಯವಿರುವ ಬ್ಲ್ಯೂ ಲಿಂಕ್ ಪ್ಯಾಕೆಜ್ ಸೌಲಭ್ಯವನ್ನು ಘೋಷಣೆ ಮಾಡಿರುವುದು ಕಾರು ಮಾರಾಟ ಹೊಸ ಮೈಲಿಗಲ್ಲಿ ಸಾಧಿಸುವ ಮೊದಲ ಸುಳಿವು ನೀಡಿದೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಜಾಗತಿಕ ಮಟ್ಟದಲ್ಲಿ ಕಾರುಗಳ ಕಳ್ಳತನ ತಡೆಯಲು ವಿನೂತನ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿತ್ತಿದ್ದು, ಇದರಲ್ಲಿ ಬ್ಯೂ ಲಿಂಕ್ ಕೂಡಾ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಇದೇ ಸೌಲಭ್ಯವು ಹ್ಯುಂಡೈ ವೆನ್ಯೂ ಕಾರಿನಲ್ಲೂ ನೀಡಲಾಗುತ್ತಿದ್ದು, ಕಾರಿನ ಸುರಕ್ಷತೆಗೆ ಹೆಚ್ಚಿನ ಭದ್ರತೆ ಸಿಗಲಿದೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಮತ್ತೊಂದು ಪ್ರಮುಖ ವಿಚಾರ ಅಂದ್ರೆ ವೆನ್ಯೂ ಕಾರಿನ ನೀಡಲಾಗಿರುವ ಜಿಯೋ ಫೆನ್ಸ್ ಸೌಲಭ್ಯವು ನಿಮ್ಮ ಕಾರಿಗೆ ಎಷ್ಟು ಭದ್ರತೆ ನೀಡಲಿದೆ. ಅಂದ್ರೆ, ನೀವು ಒಂದು ನೀರ್ದಿಷ್ಟ ಪ್ರದೇಶವನ್ನು ಬ್ಯೂ ಲಿಂಕ್ ಮೂಲಕ ಗುರುತು ಮಾಡಿಟ್ಟಲ್ಲಿ ಆ ಪ್ರದೇಶವನ್ನು ದಾಟಿ ನಿಮ್ಮ ಕಾರು ಹೊರಹೊದಲ್ಲಿ ನಿಮ್ಮನ್ನ ತಕ್ಷಣವೇ ಎಚ್ಚರಿಸುವಂತಹ ತಂತ್ರಜ್ಞಾನ ಇದಾಗಿದೆ.

MOST READ: ಮತದಾನ ಮಾಡುವ ಬೈಕ್ ಸವಾರರಿಗೆ ಹೀರೋ ಕಡೆಯಿಂದ ಸ್ಪೆಷಲ್ ಆಫರ್

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಜೊತೆಗೆ ರಿಯರ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಮೂಲಕ ಕಳ್ಳತನವಾದ ಕಾರನ್ನು ಕೆಲವೇ ನಿಮಿಷಗಳಲ್ಲಿ ಪತ್ತೆ ಮಾಡಬಹುದಾಗಿದೆ. ಹಾಗೆಯೇ ರಿಮೋಟ್ ಮೂಲಕವೇ ಎಂಜಿನ್ ಸ್ಟಾರ್ಟ್/ಸ್ಟಾಪ್, ಲಾಕ್/ಅನ್‌ಲಾಕ್, ಹಾರ್ನ್ ಮತ್ತು ಲೈಟ್ ಕಂಟ್ರೋಲ್, ಫೈಂಡ್ ಮೈ ಕಾರ್ ಲೋಕೇಷನ್, ಶೇರ್ ಮೈ ಕಾರ್ ಮತ್ತು ರಿಯರ್ ಟೈಮ್ ಮೂಲಕ ಟ್ರಾಫಿಕ್ ಇನ್‌ಫಾರ್ಮೆಷನ್ ಪಡೆದುಕೊಳ್ಳಬಹುದಾದ ಸೌಲಭ್ಯ ಈ ಕಾರಿನಲ್ಲಿದೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ವೆನ್ಯೂ ಕಾರುಗಳು ಒಟ್ಟು ಮೂರು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಪೆಟ್ರೋಲ್ ಎಂಜಿನ್‌ನಲ್ಲಿ 1.0 ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮತ್ತು 1.4 ಲೀಟರ್ ಎಂಜಿನ್ ಹೊಂದಿರಲಿದೆ. ಹಾಗೆಯೇ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಇನ್ನು ಹೊಸ ಕಾರಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್, ಸನ್‌ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

ಬ್ರೆಝಾ ಮತ್ತು ಎಕ್ಸ್‌ಯುವಿ300 ಪ್ರತಿಸ್ಪರ್ಧಿ ಹ್ಯುಂಡೈ ವೆನ್ಯೂ ಖರೀದಿಗಾಗಿ ಬುಕ್ಕಿಂಗ್ ಆರಂಭ..!

ಕಾರಿನ ಬೆಲೆಗಳು(ಅಂದಾಜು) ಹೊಸ ವೆನ್ಯೂ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.40 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
New Hyundai Venue Dealer-Level Bookings Open. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X