ಹ್ಯುಂಡೈ ವೆನ್ಯೂ ಹೊಸ ಟೀಸರ್- ಹೊಸ ಕಾರು ಬಿಡುಗಡೆಗೆ ದಿನಗಣನೆ..!

ಹ್ಯುಂಡೈ ಸಂಸ್ಥೆಯು ತನ್ನ ಬಹುನೀರಿಕ್ಷಿತ ವೆನ್ಯೂ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಮುಂದಿನ ತಿಂಗಳು ಮೇ 17ರಂದು ಭಾರತದಲ್ಲಿ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಅದಕ್ಕೂ ಮುನ್ನ ಹೊಸ ಕಾರಿನ ಟೀಸರ್ ಒಂದನ್ನು ಬಿಡುಗಡೆಗೊಳಿಸಿದೆ.

ಹ್ಯುಂಡೈ ವೆನ್ಯೂ ಹೊಸ ಟೀಸರ್- ಹೊಸ ಕಾರು ಬಿಡುಗಡೆಗೆ ದಿನಗಣನೆ..!

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿರುವ ವೆನ್ಯೂ ಕಾರು ಹಲವು ಲಗ್ಷುರಿ ವೈಶಿಷ್ಟ್ಯತೆಗಳನ್ನು ಹೊತ್ತು ಮಾರುಕಟ್ಟೆ ಪ್ರವೇಶಿಸುವುದು ಈಗಾಗಲೇ ಬಹುತೇಕ ಖಚಿತವಾಗಿದೆ. ಹೀಗಾಗಿ ಬಿಡುಗಡೆಗೂ ಮೊದಲೇ ವೆನ್ಯೂ ಖರೀದಿಗಾಗಿ ಭಾರೀ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗುತ್ತಿದ್ದು, ಇದೀಗ ಬಿಡುಗಡೆ ಮಾಡಲಾಗಿರುವ ಹೊಸ ಕಾರಿನ ಟೀಸರ್‌ವೊಂದು ಕಾರು ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

ಕ್ರೆಟಾ ಕಾರಿನಂತೆಯೇ ಹೊಸ ವಿನ್ಯಾಸ ಹೊಂದಿರುವ ಹೊಸ ವೆನ್ಯೂ ಕಾರು ಆಕರ್ಷಕ ಹೊರವಿನ್ಯಾಸ ಹೊಂದಿದ್ದು, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪ್ರಬಲ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ ಎನ್ನುವುದು ಹೊಸ ಟೀಸರ್‌ನಲ್ಲಿ ಸ್ಪಷ್ಟವಾಗಿದೆ.

ಹ್ಯುಂಡೈ ವೆನ್ಯೂ ಹೊಸ ಟೀಸರ್- ಹೊಸ ಕಾರು ಬಿಡುಗಡೆಗೆ ದಿನಗಣನೆ..!

ಹಾಗೆಯೇ ಹೊಸ ವೆನ್ಯೂ ಕಾರು ಉತ್ಪಾದನೆಗಾಗಿ ಈಗಾಗಲೇ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಗೊಳಿಸಿರುವ ಹ್ಯುಂಡೈ ಸಂಸ್ಥೆಯು ಹೊಸ ಕಾರಿನಲ್ಲಿ ಐಷಾರಾಮಿ ಕಾರುಗಳಲ್ಲಿ ಮಾತ್ರವೇ ಲಭ್ಯವಿರುವ ಬ್ಲ್ಯೂ ಲಿಂಕ್ ಪ್ಯಾಕೆಜ್ ಸೌಲಭ್ಯವನ್ನು ಘೋಷಣೆ ಮಾಡಿರುವುದು ಕಾರು ಮಾರಾಟ ಹೊಸ ಮೈಲಿಗಲ್ಲಿ ಸಾಧಿಸುವ ಮೊದಲ ಸುಳಿವು ನೀಡಿದೆ.

ಹ್ಯುಂಡೈ ವೆನ್ಯೂ ಹೊಸ ಟೀಸರ್- ಹೊಸ ಕಾರು ಬಿಡುಗಡೆಗೆ ದಿನಗಣನೆ..!

ಜಾಗತಿಕ ಮಟ್ಟದಲ್ಲಿ ಕಾರುಗಳ ಕಳ್ಳತನ ತಡೆಯಲು ವಿನೂತನ ತಂತ್ರಜ್ಞಾನಗಳನ್ನು ಪರಿಚಯಿಸಲಾಗಿತ್ತಿದ್ದು, ಇದರಲ್ಲಿ ಬ್ಯೂ ಲಿಂಕ್ ಕೂಡಾ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಇದೇ ಸೌಲಭ್ಯವು ಹ್ಯುಂಡೈ ವೆನ್ಯೂ ಕಾರಿನಲ್ಲೂ ನೀಡಲಾಗುತ್ತಿದ್ದು, ಕಾರಿನ ಸುರಕ್ಷತೆಗೆ ಹೆಚ್ಚಿನ ಭದ್ರತೆ ಸಿಗಲಿದೆ. ಹಾಗೆಯೇ ಜಿಯೋ ಫೆನ್ಸ್ ಸೌಲಭ್ಯವು ನಿಮ್ಮ ಕಾರಿಗೆ ಮತ್ತಷ್ಟು ಭದ್ರತೆ ನೀಡಲಿದ್ದು, ನೀವು ಒಂದು ನೀರ್ದಿಷ್ಟ ಪ್ರದೇಶವನ್ನು ಬ್ಯೂ ಲಿಂಕ್ ಮೂಲಕ ಗುರುತು ಮಾಡಿಟ್ಟಲ್ಲಿ ಆ ಪ್ರದೇಶವನ್ನು ದಾಟಿ ನಿಮ್ಮ ಕಾರು ಹೊರಹೊದಲ್ಲಿ ನಿಮ್ಮನ್ನು ತಕ್ಷಣವೇ ಎಚ್ಚರಿಸುವಂತಹ ತಂತ್ರಜ್ಞಾನ ಇದಾಗಿದೆ.

ಹ್ಯುಂಡೈ ವೆನ್ಯೂ ಹೊಸ ಟೀಸರ್- ಹೊಸ ಕಾರು ಬಿಡುಗಡೆಗೆ ದಿನಗಣನೆ..!

ಜೊತೆಗೆ ರಿಯರ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಮೂಲಕ ಕಳ್ಳತನವಾದ ಕಾರನ್ನು ಕೆಲವೇ ನಿಮಿಷಗಳಲ್ಲಿ ಪತ್ತೆ ಮಾಡಬಹುದಾಗಿದೆ. ಹಾಗೆಯೇ ರಿಮೋಟ್ ಮೂಲಕವೇ ಎಂಜಿನ್ ಸ್ಟಾರ್ಟ್/ಸ್ಟಾಪ್, ಲಾಕ್/ಅನ್‌ಲಾಕ್, ಹಾರ್ನ್ ಮತ್ತು ಲೈಟ್ ಕಂಟ್ರೋಲ್, ಫೈಂಡ್ ಮೈ ಕಾರ್ ಲೋಕೇಷನ್, ಶೇರ್ ಮೈ ಕಾರ್ ಮತ್ತು ರಿಯರ್ ಟೈಮ್ ಮೂಲಕ ಟ್ರಾಫಿಕ್ ಇನ್‌ಫಾರ್ಮೆಷನ್ ಪಡೆದುಕೊಳ್ಳಬಹುದಾದ ಸೌಲಭ್ಯ ಈ ಕಾರಿನಲ್ಲಿದೆ.

ಹ್ಯುಂಡೈ ವೆನ್ಯೂ ಹೊಸ ಟೀಸರ್- ಹೊಸ ಕಾರು ಬಿಡುಗಡೆಗೆ ದಿನಗಣನೆ..!

ವೆನ್ಯೂ ಕಾರುಗಳು ಒಟ್ಟು ಮೂರು ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುತ್ತಿದ್ದು, ಪೆಟ್ರೋಲ್ ಎಂಜಿನ್‌ನಲ್ಲಿ 1.0 ಲೀಟರ್ ತ್ರಿ ಸಿಲಿಂಡರ್ ಎಂಜಿನ್ ಮತ್ತು 1.4 ಲೀಟರ್ ಎಂಜಿನ್ ಹೊಂದಿರಲಿದೆ. ಹಾಗೆಯೇ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ.

MOST READ: ಟಾಪ್ ಸ್ಪೀಡ್ ಶೋಕಿ- ಯುಟ್ಯೂಬ್‌ನಲ್ಲಿ ಲೈವ್ ಮಾಡಿ ಜೈಲು ಸೇರಿದ ಫೋರ್ಡ್ ಮಸ್ಟಾಂಗ್ ಮಾಲೀಕ..!

ಹ್ಯುಂಡೈ ವೆನ್ಯೂ ಹೊಸ ಟೀಸರ್- ಹೊಸ ಕಾರು ಬಿಡುಗಡೆಗೆ ದಿನಗಣನೆ..!

ಇನ್ನು ಹೊಸ ಕಾರಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್, 6 ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, 4 ಏರ್‌ಬ್ಯಾಗ್, ಸನ್‌ರೂಫ್, ಡ್ಯುಯಲ್ ಟೋನ್ ಬಾಡಿ ಕಲರ್, ಡ್ಯುಯಲ್ ಟೋನ್ ಇಂಟಿರಿಯರ್, ರಿಯರ್ ವ್ಯೂ ಕ್ಯಾಮೆರಾ, ಪಾರ್ಕಿಂಗ್ ಸೆನ್ಸಾರ್, ಸ್ಮಾರ್ಟ್ ಕೆನೆಕ್ಟಿವಿಟಿ ಮತ್ತು ಲಾರ್ಜ್ ಟಚ್‌ಸ್ಕ್ರೀನ್ ಡಿಸ್‌ಪ್ಲೇಯೊಂದಿಗೆ ಹಲವು ಮಾದರಿಯ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

ಹ್ಯುಂಡೈ ವೆನ್ಯೂ ಹೊಸ ಟೀಸರ್- ಹೊಸ ಕಾರು ಬಿಡುಗಡೆಗೆ ದಿನಗಣನೆ..!

ಕಾರಿನ ಬೆಲೆಗಳು(ಅಂದಾಜು)

ಹೊಸ ವೆನ್ಯೂ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.40 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ.11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Article Published On: Wednesday, April 17, 2019, 18:54 [IST]
English summary
New Hyundai Venue Teased Ahead Of Official Unveil. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+