ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಕಿಯಾ ಮೋಟಾರ್ಸ್ ಸಂಸ್ಥೆಯು ತನ್ನ ಮೊದಲ ಕಾರು ಮಾದರಿಯಾದ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೊಳಿಸಿ ದಾಖಲೆ ಪ್ರಮಾಣದ ಮಾರಾಟವನ್ನು ತನ್ನದಾಗಿಸಿಕೊಂಡಿದ್ದು, ಸೆಲ್ಟೊಸ್ ಯಶಸ್ವಿ ಬಿಡುಗಡೆಯ ನಂತರ ಮತ್ತೈದು ಹೊಸ ಬ್ರಾಂಡ್ ಕಾರುಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಕಿಯಾ ಮೋಟಾರ್ಸ್ ಸಂಸ್ಥೆಯು ಭಾರೀ ನೀರಿಕ್ಷೆಯೊಂದಿಗೆ ಭಾರತೀಯ ಆಟೋ ಉದ್ಯಮಕ್ಕೆ ಕಾಲಿಟ್ಟಿದ್ದು, ದೇಶದ ಟಾಪ್ 3 ಕಾರು ಉತ್ಪಾದನಾ ಸಂಸ್ಥೆಗಳಿಗೆ ತೀವ್ರ ಪೈಪೋಟಿ ನೀಡುವ ತವಕದಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ನಮೂನೆಯ ಕೈಗೆಟುಕುವ ಬೆಲೆಯ ಕಾರುಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದ್ದು, ಸೆಲ್ಟೊಸ್ ಬಿಡುಗಡೆಯ ನಂತರ ಕಾರ್ನಿವಾಲ್ ಸೇರಿದಂತೆ ವಿವಿಧ ನಮೂನೆಯ ಐದು ಹೊಸ ಕಾರುಗಳನ್ನು ರಸ್ತೆಗಿಳಿಸಲು ಸಿದ್ದತೆ ನಡೆಸುತ್ತಿದೆ.

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಸಹೋದರ ಸಂಸ್ಥೆ ಹ್ಯುಂಡೈಗಿಂತಲೂ ಅತ್ಯುತ್ತಮ ಕಾರು ಉತ್ಪನ್ನಗಳನ್ನು ಹೊಂದಿರುವ ಕಿಯಾ ಸಂಸ್ಥೆಯು ಭಾರತದಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಗ್ರಾಹಕರ ಬೇಡಿಕೆಯೆಂತೆ ಅಗ್ಗದ ಬೆಲೆಯಲ್ಲಿ ಉತ್ತಮ ಮಾದರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯ ಯೋಜನೆಯಲ್ಲಿದೆ.

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಮಾಹಿತಿಗಳ ಪ್ರಕಾರ ಮುಂದಿನ ಫೆಬ್ರುವರಿ ವೇಳೆಗೆ ಕಾರ್ನಿವಾಲ್ 7 ಸೀಟರ್ ಎಂಪಿವಿ ಬಿಡುಗಡೆ ಮಾಡಲಿರುವ ಕಿಯಾ ಸಂಸ್ಥೆಯು ತದನಂತರ ಸೆರೆಂಟೊ ಸೆಡಾನ್ ಮತ್ತು ಸೊಲ್ ಎಲೆಕ್ಟ್ರಿಕ್, ನಿರೊ ಎಲೆಕ್ಟ್ರಿಕ್ ಮತ್ತು ಐಷಾರಾಮಿ ಎಸ್‌ಯುವಿ ಮಾದರಿಯಾದ ಟೆಲ್ಲುರೈಡ್ ಕಾರನ್ನು ಬಿಡುಗಡೆ ಮಾಡಲಿದೆ.

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಸದ್ಯ ಬಿಡುಗಡೆಯಾಗಿರುವ ಸೆಲ್ಟೊಸ್ ಕಾರು ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಬ್ರೆಝಾ, ಟಾಟಾ ಹ್ಯಾರಿಯರ್ ಕಾರುಗಳಿಗೆ ಪೈಪೋಟಿ ನೀಡುತ್ತಿದ್ದರೆ ಕಾರ್ನಿವಾಲ್ ಕಾರು ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಮಾರುತಿ ಎರ್ಟಿಗಾ ಕಾರುಗಳಿಗೆ ಪೈಪೋಟಿ ನೀಡಲಿದೆ. ಹಾಗೆಯೇ ಎಲೆಕ್ಟ್ರಿಕ್ ಕಾರು ಮಾದರಿಗಳಾದ ಸೊಲ್ ಕಾರು ಅತಿ ಕಡಿಮೆ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದರೆ ನಿರೊ ಕಾರು ಐಷಾರಾಮಿ ಎಲೆಕ್ಟ್ರಿಕ್ ಆವೃತ್ತಿಯಾಗಲಿದ್ದು, ಟೆಲ್ಲುರೈಡ್ ಕಾರು ಐಷಾರಾಮಿ ಎಸ್‌ಯುವಿ ವೈಶಿಷ್ಯತೆಗಳೊಂದಿಗೆ ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದೆ.

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂ.10 ಲಕ್ಷದಿಂದ ರೂ.50 ಲಕ್ಷ ಬೆಲೆಯಲ್ಲಿ ವಿವಿಧ ಕಾರು ಮಾದರಿಗಳನ್ನು ಮಾರಾಟಮಾಡುವ ಕಿಯಾ ಸಂಸ್ಥೆಯು ಭಾರತದಲ್ಲೂ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಸೆಲ್ಟೊಸ್ ಯಶಸ್ವಿಯ ಖುಷಿಯಲ್ಲಿರುವ ಕಿಯಾ ಸಂಸ್ಥೆಯು ಸದ್ಯ ಕಾರ್ನಿವಾಲ್ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಕಿಯಾ ಕಾರ್ನಿವಾಲ್ ಕಾರು ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಇನೋವಾ ಕ್ರಿಸ್ಟಾಗೆ ಪ್ರತಿ ಸ್ಪರ್ಧಿಯಾಗಿ ಆನ್‌ರೋಡ್ ಬೆಲೆಗಳಿಗೆ ಅನುಗುಣವಾಗಿ ರೂ. 18 ಲಕ್ಷ ಆರಂಭಿಕವಾಗಿ ಮತ್ತು ರೂ. 25 ಲಕ್ಷ ಟಾಪ್ ಎಂಡ್ ಬೆಲೆಯನ್ನು ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು 5, 115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಪಡೆದುಕೊಂಡಿರಲಿದೆ. ಅಂದರೇ ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಭರ್ಜರಿ ಆಫರ್

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಎಂಜಿನ್ ಸಾಮಾರ್ಥ್ಯ

ಟೂರಿಸ್ಟ್ ಮತ್ತು ವ್ಯಯಕ್ತಿಯ ಬಳಕೆ ಕಾರುಗಳಲ್ಲಿ ಅತಿಹೆಚ್ಚು ಜನಪ್ರಿಯತೆ ಹೊಂದಿರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಗ್ರಾಹಕರ ಬೇಡಿಕೆಯಂತೆ 2.4-ಲೀಟರ್, 2.7-ಲೀಟರ್ ಮತ್ತು 2.8-ಲೀಟರ್ ಡಿಸೇಲ್ ಮತ್ತು ಪೆಟ್ರೋಲ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿವೆ. ಇವುಗಳಲ್ಲಿ 2.4-ಲೀಟರ್ ಡಿಸೇಲ್ ಎಂಜಿನ್ ಮಾದರಿಯು ಟೂರಿಸ್ಟ್ ವಿಭಾಗದ ಬಳಕೆಯಲ್ಲಿ ಅತಿಹೆಚ್ಚು ಮಾರಾಟವಾಗುವ ದುಬಾರಿ ಕಾರು ಮಾದರಿಯಾಗಿದೆ.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಕಿಯಾ ಕಾರ್ನಿವಾಲ್ ಕೂಡಾ ಇನೋವಾ ಕ್ರಿಸ್ಟಾ ಮಾದರಿಯಲ್ಲೇ ಸದ್ಯ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 2.2-ಲೀಟರ್ ಟರ್ಬೋ ಡೀಸೆಲ್ ಜೊತೆ 3.3-ಲೀಟರ್ ವಿ6 ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯು ಬೆಲೆ ತಗ್ಗಿಸುವುದಕ್ಕಾಗಿ 2.5-ಲೀಟರ್ ಡೀಸೆಲ್ ಎಂಜಿನ್ ಮತ್ತು 2.6-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ತಾಂತ್ರಿಕವಾಗಿ ಇನೋವಾ ಕ್ರಿಸ್ಟಾ ಕೂಡಾ ಉತ್ತಮ ಎಂಪಿವಿ ಮಾದರಿಯನ್ನು ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ಆದ್ರೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಒದಗಿಸುವಲ್ಲಿ ಹಿಂದೆ ಬಿದ್ದಿರುವ ಟೊಯೊಟಾ ಸಂಸ್ಥೆಯು ಸದ್ಯ ಬೆಲೆಯಲ್ಲಿ ಇನ್ನಷ್ಟು ಹೊಸ ಫೀಚರ್ಸ್‌ಗಳನ್ನು ನೀಡಬಹುದಾಗಿದೆ.

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಇದೇ ನಿಟ್ಟಿನಲ್ಲಿ ಉತ್ತಮ ಫೀಚರ್ಸ್ ಹೊಂದಿರುವ ಕಾರ್ನಿವಾಲ್ ಕಾರು ಇನೋವಾ ಕ್ರಿಸ್ಟಾಗಿಂತಲೂ ಉತ್ತಮ ಪ್ರೀಮಿಯಂ ಸೌಲಭ್ಯ ಹೊಂದಿದ್ದು, 10.1-ಇಂಚಿನ ಇನ್ಪೋಟೈನ್ ಸಿಸ್ಟಂ, ಕಿಯಾ ಯುವಿಒ ಕನೆಕ್ಟ್, ಕಾರ್ ಕನೆಕ್ಟಿವಿಟಿ ಸೂಟ್, ಲಾರ್ಜ್ ಟಚ್‌ಸ್ಕೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎರಡು ಸನ್‌ರೂಫ್, ಪವರ್ ಅಡ್ಜೆಸ್ಟ್‌ಬಲ್ ಡ್ರೈವರ್ ಸೀಟ್, ತ್ರಿ ಕ್ಲೈಮೆಟ್ ಜೋನ್ ಕಂಟ್ರೋಲ್ ಸೌಲಭ್ಯದೊಂದಿಗೆ ಸುರಕ್ಷತೆಗಾಗಿ 6 ಏರ್‌ಬ್ಯಾಗ್,ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಹೊಂದಿರಲಿದೆ.

ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಹೀಗಾಗಿ ಇನೋವಾ ಕ್ರಿಸ್ಟಾ ಆವೃತ್ತಿಗೆ ಪ್ರತಿಹಂತದಲ್ಲೂ ಪೈಪೋಟಿ ನೀಡಬಹುದಾದ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರುವ ಕಿಯಾ ಕಾರ್ನಿವಾಲ್ ಕಾರು ಮಾದರಿಯು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಹೊಸ ಕಾರ್ನಿವಾಲ್ ಮಾದರಿಯು ಬಿಡುಗಡೆಯಾಗಲಿದೆ.

More from DriveSpark

Article Published On: Saturday, September 21, 2019, 15:54 [IST]
English summary
Kia Motors Considering Five New Cars For The Indian Market: Including Two Electric Vehicles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+