ಮಹೀಂದ್ರಾ ಡೀಲರ್‍ಗಳ ಬಳಿ ಇದೀಗ ಎಎಂಟಿ ವರ್ಷನ್ ಎಕ್ಸ್‌ಯುವಿ300 ಟೆಸ್ಟ್ ಡ್ರೈವ್ ಲಭ್ಯ
ಮಹೀಂದ್ರಾ ಎಕ್ಸ್‌ಯುವಿ300 ತನ್ನ ಸೆಗ್ಮೆಂಟ್‍ನಲ್ಲಿ ಬಿಡುಗಡೆಗೊಂಡಾಗಿನಿಂದಲೂ ಎರಡನೆಯ ಸ್ಥಾನದದಿದ್ದು, ಹ್ಯುಂಡೈ ವೆನ್ಯೂ ಬಿಡುಗಡೆಯಾದ ನಂತರ ಮೂರನೆಯ ಸ್ಥಾನಕ್ಕೆ ಜಾರಿದೆ. ಸಧ್ಯಕ್ಕೆ ಮಾರುಕಟ್ಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ300 ಕಾರು ಕೇವಲ ಮ್ಯಾನುವಲ್ ಗೇರ್‍ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, ಕಾರಿನ ಮಾರಾಟವನ್ನು ಹೆಚ್ಚಿಸಲು ಇನ್ನು ಕೆಲವೇ ದಿನಗಳಲ್ಲಿ ಈ ಕಾರಿನ ಆಟೋಮ್ಯಾಟಿಕ್ ಆವೃತ್ತಿಯನ್ನು ಮಹೀಂದ್ರಾ ಬಿಡುಗಡೆ ಮಾಡಲಿದೆ.

ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಎಕ್ಸ್‌ಯುವಿ300 ಎರುರಾಳಿಗಳಾದ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, ಇನ್ನುಳಿದ ಹ್ಯುಂಡೈ ವೆನ್ಯೂ ಡಿಸಿಟಿ ಗೇರ್‍ಬಾಕ್ಸ್ ಹಾಗು ಫೋರ್ಡ್ ಇಕೊಸ್ಪೋರ್ಟ್ ಕನ್ವೆಂಶನಲ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಒಳಗೊಂಡಿದೆ. ಈಗಿನ ಟ್ರಾಫಿಕ್ ಭರಿತ ರಸ್ತೆಯಲ್ಲಿ ಸುಲಭ ಡ್ರೈವಿಂಗ್‍ಗಾಗಿ ಗ್ರಾಹಕರು ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಇರುವ ಕಾರುಗಳನ್ನು ಖರೀದಿ ಮಾಡುತ್ತಿದ್ದಾರೆ.
ವರದಿಗಳ ಪ್ರಕಾರ ಮಾರುಕಟ್ಟೆಯಲ್ಲಿರುವ ಕೆಲ ಮಹೀಂದ್ರಾ ಡೀಲರ್‍ಗಳು ಎಕ್ಸ್‌ಯುವಿ300 ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆವೃತಿಯ ಕಾರಿನ ಟೆಸ್ಟ್ ಡ್ರೈವ್ ಸೌಲಭ್ಯವನ್ನು ಪ್ರಾರಂಭಿಸಲಾಗಿದ್ದು, ಈ ಕುರಿತಾದ ವಿಡಿಯೋವನ್ನು ಆಟೋಟ್ರೆಂಡ್ ಎಂಬ ಯೂಟ್ಯೂಬ್ ಚಾನಲ್‍ನವರು ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ..

ಇನ್ನು ಮಾರುಕಟ್ಟೆಯಲ್ಲಿ ಸದ್ಯಕ್ಕೆ ಎಕ್ಸ್‌ಯುವಿ300 ಕಾರುಗಳು ಒಟ್ಟು ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿ ವೆರಿಯೆಂಟ್‌ಗಳನ್ನು ಸಹ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಸಬಹುದಾಗಿದೆ. ಆದರೆ ಇದರಲ್ಲಿ ಯಾವುದೇ ಮಾದರಿಯಲ್ಲೂ ಆಟೋಮ್ಯಾಟಿಕ್ ವರ್ಷನ್ ನೀಡಲಾಗಿಲ್ಲ.

ಹೀಗಾಗಿ ಕಾರಿನಲ್ಲಿ ನೀಡಲಾಗಿರುವ ಫೀಚರ್ಸ್‌ಗೆ ಅನುಗುಣವಾಗಿ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.7.90 ಲಕ್ಷಕ್ಕೆ ಮತ್ತು ಹೈಎಂಡ್ ಮಾದರಿಯು ರೂ. 10.80 ಲಕ್ಷ ಬೆಲೆ ಪಡೆದುಕೊಂಡಿವೆ. ಇದರಲ್ಲಿ ಇದೀಗ ಬಿಡುಗಡೆಯಾಗುತ್ತಿರುವ ಎಎಂಟಿ ವರ್ಷನ್ ತುಸು ದುಬಾರಿ ಎನ್ನಿಸಲಿದ್ದು, ವ್ಯಯಕ್ತಿಕ ಕಾರು ಬಳಕೆದಾರರಿಗೆ ಹೆಚ್ಚು ಅನುಕೂಲಕರವಾಗಲಿದೆ.

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ವಿಶೇಷ ಎನ್ನಿಸುವ ಎಕ್ಸ್‌ಯುವಿ300 ಮಾದರಿಯು ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿರಲಿದೆ. ಜೊತೆಗೆ ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.
MOST READ: ರಾಜ್ಯದೆಲ್ಲೆಡೆ 650 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್‍ಗಳನ್ನು ಇನ್ಸ್ಟಾಲ್ ಮಾಡಲಿದೆ ಬೆಸ್ಕಾಂ

ಹಾಗೆಯೇ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.
MOST READ: ಒಂದೇ ದಿನದಲ್ಲಿ ಸಿಸಿಟಿವಿ ಕಣ್ಣಿಗೆ ಬಿದ್ದ 90,000 ಟ್ರಾಫಿಕ್ ಅಪರಾಧಿಗಳು

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್
ಹೊಸ ಎಕ್ಸ್‌ಯುವಿ300 ಡಿಸೇಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿದೆ.

ಇದರಲ್ಲಿ ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿವೆ.
MOST READ: ಆಟೋ ಉದ್ಯಮದಲ್ಲಿ ಹೊಸ ಅವಿಷ್ಕಾರ- ಕಾರಿನ ಹೊರಭಾಗದಲ್ಲೂ ಏರ್‌ಬ್ಯಾಗ್ ಸೌಲಭ್ಯ..!

ಹೀಗಾಗಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಆಟೋಮ್ಯಾಟಿಕ್ ವರ್ಷನ್ ಕೂಡಾ ಈ ಮೇಲಿನ ಬಹುತೇಕ ತಾಂತ್ರಿಕ ಅಂಶಗಳನ್ನೇ ಹೊಂದಿರಲಿದ್ದು, ಆಟೋ ಮ್ಯಾಟಿಕ್ ವರ್ಷನ್ ಇಷ್ಟಪಡುವ ಗ್ರಾಹಕರ ಖರೀದಿಗೆ ಸಹಕಾರಿಯಾಗಲಿದೆ ಎನ್ನುವುದು ಮಹೀಂದ್ರಾ ಲೆಕ್ಕಾಚಾರ.


Click it and Unblock the Notifications








