ರೋಡ್ ಟೆಸ್ಟ್ ನಡೆಸಿದ ಮಹೀಂದ್ರಾ ಬಿಎಸ್-6 ಎಕ್ಸ್‌ಯುವಿ300 ಪೆಟ್ರೋಲ್ ವರ್ಷನ್
2020ರ ಏಪ್ರಿಲ್ 1ರಿಂದ ಬಿಎಸ್-6 ನಿಮಯವು ಜಾರಿಗೆ ಬರುತ್ತಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ವಾಹನ ಮಾದರಿಗಳನ್ನು ಹೊಸ ನಿಯಮದಂತೆ ಉನ್ನತೀಕರಿಸಲಾಗುತ್ತಿದೆ. ಮಹೀಂದ್ರಾ ಇದೇ ನಿಟ್ಟಿನಲ್ಲಿ ತನ್ನ ಜನಪ್ರಿಯ ಕಾರುಗಳನ್ನು ಹೊಸ ನಿಯಮ ಅನುಸಾರ ಅಭಿವೃದ್ದಿಗೊಳಿಸಿ ಬಿಡುಗಡೆಯ ಉದ್ದೇಶಕ್ಕಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ.

ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳ ಬಿಡುಗಡೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದ್ದು, ಡೆಡ್‌ಲೈನ್‌ಗೂ ಮುನ್ನವೇ ಮಹೀಂದ್ರಾ ಕೂಡಾ ತನ್ನ ಹೊಸ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸಲಿದೆ. ಇದರಲ್ಲಿ ಎಕ್ಸ್‌ಯುವಿ300 ಸೇರಿದಂತೆ ಥಾರ್, ಎಕ್ಸ್‌ಯುವಿ500, ಸ್ಕಾರ್ಪಿಯೋ, ಬೊಲೆರೊ ಪ್ರಮುಖವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೊಸ ಆವೃತ್ತಿಗಳು ಸಾಕಷ್ಟು ವಿಭಿನ್ನತೆ ಹೊಂದಿರಲಿವೆ.

ಮಹೀಂದ್ರಾ ಸಂಸ್ಥೆಯು ಮೊದಲ ಹಂತವಾಗಿ ಮಹೀಂದ್ರಾ ಎಕ್ಸ್‌ಯುವಿ300 ಪೆಟ್ರೋಲ್ ಮಾದರಿಯನ್ನು ಬಿಎಸ್-6 ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಲಿದ್ದು, ನವೆಂಬರ್ ಆರಂಭದಲ್ಲಿ ಮಹೀಂದ್ರಾ ಮೊದಲ ಬಿಎಸ್-6 ಕಾರು ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ.

ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಸ ವಾಹನಗಳ ಎಂಜಿನ್ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದೆ.

ಭಾರತದಲ್ಲಿ ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ಇದರಲ್ಲಿ ಮಹೀಂದ್ರಾ ಟಿಯುವಿ300 ಪ್ಲಸ್, ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ನೆಕ್ಸ್ಟ್ ಜನರೇಷನ್ ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಲಾಗಿದೆ.

ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.
MOST READ: ಹ್ಯುಂಡೈನಿಂದ ಹಬ್ಬದ ಕೊಡುಗೆ: ಹೊಸ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್..!

ಹಾಗೆಯೇ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.
MOST READ: ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.
MOST READ: ಕಾರ್ ರೇಸ್ ವೇಳೆ ದುರಂತ- ಅರ್ಜುನ್ ಪ್ರಶಸ್ತಿ ವಿಜೇತ ಗೌರವ್ ಗಿಲ್ ವಿರುದ್ಧ ಕೇಸ್..!

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳ ಬೆಲೆಯು ರೂ.20 ಸಾವಿರ ರೂ.40 ಸಾವಿರ ಮತ್ತು ಡೀಸೆಲ್ ಕಾರುಗಳ ಬೆಲೆಯು ರೂ. 90 ಸಾವಿರ ಸಾವಿರದಿಂದ ರೂ.2.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.
Source: Zigwheels


Click it and Unblock the Notifications