ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿಯು ನಿರಂತರವಾಗಿ ತಮ್ಮ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುತ್ತಲೇ ಇದೆ. ಸಂಸ್ಥೆಯು ಸಿಯಾಜ್ ಫೇಸ್‍ಲಿಫ್ಟ್ ಕಾರನ್ನು ಬಿಡುಗಡೆ ಮಾಡಿದ ನಂತರ ಹೊಸ ತಲೆಮಾರಿನ ಎರ್ಟಿಗಾ ಮತ್ತು ಶೀಘ್ರವೇ ಮುಂದಿನ ತಲೆಮಾರಿನ ವ್ಯಾಗನಾರ್ ಕಾರನ್ನು ಬಿಡುಗಡೆಗೊಳಿಸಲಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ಈ ನಿಟ್ಟಿನಲ್ಲಿ ಮಾರುತಿ ಸುಜುಕಿ ಸಂಸ್ಥೆಯು ತಮ್ಮ ಜನಪ್ರಿಯ ಬಲೆನೊ ಕಾರಿನ ಫೇಸ್‍ಲಿಫ್ಟ್ ಮಾದರಿಯನ್ನು ಸಹ ಬಿಡುಗಡೆಗೊಳಿಸುತ್ತಿದ್ದು, ಗ್ರಾಹಕರ ನಿರಿಕ್ಷೆಯ ಅನುಸಾರ ಸಂಸ್ಥೆಯು ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ಕೂಡಾ ಪ್ರಾರಂಭಿಸಿದೆ. ಆಸಕ್ತ ಗ್ರಾಹಕರು ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ನಿಮ್ಮ ಸಮೀಪದಲ್ಲಿರುವ ಡೀಲರ್‍ ಬಳಿ ರೂ. 11,000 ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ಮಾರುತಿ ಸುಜುಕಿ ಸಂಸ್ಥೆಯು ಶೀಘ್ರವೇ ತಮ್ಮ ಬಲೆನೊ ಫೇಸ್‍ಲಿಫ್ಟ್ ಮದರಿಯನ್ನು ಬಿಡುಗಡೆಗೊಳಿಸಲಿದ್ದು, ಫೆಬ್ರವರಿ 1 ರಿಂದ ಬುಕ್ಕಿಂಗ್ ಮಾಡಿಕೊಂಡ ಗ್ರಾಹಾಕರಿಗೆ ಹೊಸ ಕಾರನ್ನು ಡೆಲಿವರಿ ಮಾಡಲಿದೆಯಂತೆ. ಅಷ್ಟೆ ಅಲ್ಲದೇ ಈ ಕಾರು ಟೊಯೊಟಾ ಸಂಸ್ಥೆಯ ಬ್ಯಾಡ್ಜಿಂಗ್‍ನೊಂದಿಗೆ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಕೂಡಾ ಮಾಹಿತಿ ಲಭ್ಯವಾಗಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ಮಾರುತಿ ಸುಜುಕಿ ಸಂಸ್ಥೆಯು ಬಲೆನೊ ಮಾದರಿಗಳನ್ನು ಮತ್ತಷ್ಟು ಉನ್ನತ ದರ್ಜೆಯಲ್ಲಿ ಪರಿಚಯಿಸಲು ಯೋಜನೆ ರೂಪಿಸಲಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಫೇಸ್‌ಲಿಫ್ಟ್ ಬಲೆನೊ ಮಾದರಿಯನ್ನು ಸಂಸ್ಥೆಯ ಹಾರ್ಟ್‍‍‍ಟೆಕ್ಟ್ ಪ್ಲಾಟ್‍ಫಾರ್ಮ್‍ನ ಅಡಿಯಲ್ಲಿ ಸಿದ್ದಗೊಳಿಸಲಾಗುತ್ತಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

2019ರ ಹೊಸ ಬಲೆನೊ ಫೇಸ್‍ಲಿಫ್ಟ್ ಕಾರು ಪ್ರಸ್ತುತ ಮಾದರಿಯ ಕಾರಿನಂತೆಯೆ ವಿನ್ಯಾಸವನ್ನು ಪಡೆದುಕೊಳ್ಳಲಿದ್ದು, ಹೊಸ ಬಂಪರ್‍‍ನಲ್ಲಿ ರೆಕ್ಟಾಂಗ್ಯುಲರ್ ಏರ್ ಡ್ಯಾಮ್, ಹೊಸ ಫಾಗ್ ಲ್ಯಾಂಪ್ ಅನ್ನು ವಿನೂತನವಾಗಿ ಪಡೆದುಕೊಳ್ಳಲಿದೆ. ಮತ್ತು ಕಾರಿನ ಒಳಭಾಗವನ್ನು ಸಹ ಪ್ರೀಮಿಯಂ ಸೌಲಭ್ಯವನ್ನು ಒದಗಿಸುವ ಹಾಗೆ ವಿನ್ಯಾಸ ಮಾಡಲಗಿರುತ್ತದೆ ಎಂದು ಊಹಿಸಲಾಗಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ಇನ್ನೊಂದು ಪ್ರಮಖ ವಿಚಾರ ಅಂದ್ರೆ, ಬರಲಿರುವ ಬಲೆನೊ ಮಾದರಿಗಳು ಪೆಟ್ರೋಲ್ ಎಂಜಿನ್ ಅಷ್ಟೇ ಅಲ್ಲದೇ ಹೊಸ ಡೀಸೆಲ್ ಎಂಜಿನ್ ಮಾದರಿಗಳು ಸಹ ಖರೀದಿಗೆ ಲಭ್ಯವಾಗಲಿದ್ದು, 2019ರ ಮೊದಲ ತ್ರೈಮಾಸಿಕ ಅವಧಿಗೆ ಫೇಸ್‌ಲಿಫ್ಟ್ ಆವೃತ್ತಿಗಳು ಮಾರುಕಟ್ಟೆಗೆ ಲಗ್ಗೆಯಿಡಲಿವೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ಹೀಗಾಗಿ ಫೇಸ್‌ಲಿಫ್ಟ್ ಬಲೆನೊ ಕಾರುಗಳು ಸಾಮಾನ್ಯ ಬಲೆನೊ ಕಾರುಗಳಿಂತ ತಾಂತ್ರಿಕವಾಗಿ ಮತ್ತಷ್ಟು ಬಲಿಷ್ಠವಾಗಿರಲಿದ್ದು, ಹೊಸ ನಿಯಮಾವಳಿಗೆ ಅನುಸಾರವಾಗಿ ಬಿಎಸ್ 6 ವೈಶಿಷ್ಟ್ಯತೆಗಳೊಂದಿಗೆ ಹೊಸ ಕಾರಿನ ಎಂಜಿನ್ ಅಭಿವೃದ್ಧಿ ಮಾಡಲಾಗುತ್ತಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ಎಂಜಿನ್ ಸಾಮರ್ಥ್ಯ

ಸದ್ಯ ಲಭ್ಯವಿರುವ 1.2-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಮಾದರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ಹಳೆಯ 1.3-ಲೀಟರ್‌ ಡೀಸೆಲ್ ಎಂಜಿನ್‌ಗೆ ಬದಲಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಅಳವಡಿಕೆಯನ್ನು ಹೊಂದಿರಲಿವೆ ಎನ್ನಲಾಗಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ಹೀಗಾಗಿ 83ಬಿಎಚ್‌ಪಿ ಮತ್ತು 115ಎನ್ಎಂ ಟಾರ್ಕ್ ಉತ್ಪಾದಿಸುತ್ತಿದ್ದ 1.3-ಲೀಟರ್ ಡೀಸೆಲ್ ಎಂಜಿನ್‌ಗಳು ಮತ್ತಷ್ಟು ಪವರ್‌ಫುಲ್ ಕಾರು ಮಾದರಿಗಳಾಗಲಿದ್ದು, ಇದು ಹ್ಯಾಚ್‌ಬ್ಯಾಕ್ ಆವೃತ್ತಿಗಳಲ್ಲಿ ಅತಿಹೆಚ್ಚು ಬಿಎಚ್‌ಪಿ ಉತ್ಪಾದಿಸುವ ಮಾದರಿಯಾಗಲಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಫೇಸ್‍ಲಿಫ್ಟ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಶುರು..!

ಡ್ರೈವ್‍ಸ್ಪಾರ್ಕ್ ಅಭಿಪ್ರಾಯ

ತನ್ನ ವಿವಿಧ ಕಾರು ಮಾದರಿಗಳ ಮೂಲಕ ಶೇ.50ಕ್ಕಿಂತಲೂ ಹೆಚ್ಚು ಮಾರಾಟ ಪಾಲು ಹೊಂದಿರುವ ಮಾರುತಿ ಸುಜುಕಿ ಸಂಸ್ಥೆಯು ಕಾಲಕ್ಕೆ ಅನುಗುಣವಾಗಿ ಹೊಸ ಹೊಸ ಮಾದರಿಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಇದೀಗ ಬಲೆನೊ ಮಾದರಿಯನ್ನು ಹೊಸ ಎಂಜಿನ್‌ನೊಂದಿಗೆ ಬಿಡುಗಡೆ ಮಾಡುತ್ತಿದ್ದು, 1.5-ಲೀಟರ್ ಡೀಸೆಲ್ ಆವೃತ್ತಿಯು ಹ್ಯಾಚ್‌ಬ್ಯಾಕ್ ಆವೃತ್ತಿಗಳಲ್ಲೇ ಉತ್ತಮ ಮೈಲೇಜ್ ನೀಡುವ ಕಾರು ಮಾದರಿಯಾಗುವ ನೀರಿಕ್ಷೆಯಿದೆ.

More from DriveSpark

Article Published On: Tuesday, January 22, 2019, 13:01 [IST]
English summary
New Maruti Baleno Facelift — Launch Date, Bookings And Delivery Details Revealed. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+