ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಕೇಂದ್ರ ಸರ್ಕಾರವು ಇತ್ತೀಚಿಗೆ ಜಾರಿಗೆ ತಂದ ಹೊಸ ಮೋಟಾರು ವಾಹನ ಕಾಯ್ದೆಯಿಂದಾಗಿ ಇಂಧನ ಮಾರಾಟ ಕುಸಿಯುತ್ತಿದೆ ಎಂದು ವರದಿಗಳು ತಿಳಿಸಿವೆ. ಭಾರತವು ಸ್ಥಳೀಯವಾಗಿ ಯಾವುದೇ ವಾಹನಗಳನ್ನು ಉತ್ಪಾದಿಸಿದರೂ, ಇಂಧನ ಪೂರೈಕೆಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ.

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಭಾರತವು, ಕಚ್ಚಾ ತೈಲವನ್ನು ಇರಾನ್ ಹಾಗೂ ಅರಬ್ ದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಪ್ರತಿ ಬಾರಿ ಇಂಧನವನ್ನು ಆಮದು ಮಾಡಿಕೊಳ್ಳುವಾಗ ಭಾರೀ ಬೆಲೆಯನ್ನು ನೀಡಿ ಖರೀದಿಸಲಾಗುತ್ತಿದೆ. ಈ ಹಣಕಾಸಿನ ಹೊರೆಯನ್ನು ತಪ್ಪಿಸಲು ಕೇಂದ್ರ ಸರ್ಕಾರವು ಇಂಧನ ಬಳಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಪ್ರಯತ್ನಗಳನ್ನು ಮಾಡುತ್ತಿದೆ.

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಇದೇ ವೇಳೆ, ಭಾರತದಲ್ಲಿ ಲಭ್ಯವಿರುವ ಹೈಡ್ರೋಕಾರ್ಬನ್ ಹಾಗೂ ಮೀಥೆನ್ ಅನಿಲವನ್ನು ಹೊರತೆಗೆಯಲು ಪ್ರಯತ್ನಿಸುತ್ತಿದೆ. ಈ ಅನಿಲಗಳು ತಮಿಳುನಾಡಿನ ತಂಜೂರು, ನಾಗೈ, ಪುದುಕ್ಕೊಟ್ಟೈ ಹಾಗೂ ಕಾವೇರಿ ಡೆಲ್ಟಾ ಮುಂತಾದ ಪ್ರದೇಶಗಳಲ್ಲಿ ಹೇರಳವಾಗಿ ದೊರೆಯುತ್ತವೆ.

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಕೆಲವು ಪ್ರದೇಶಗಳಲ್ಲಿ ಈಗಾಗಲೇ ಹೈಡ್ರೋಕಾರ್ಬನ್ ಹೊರತೆಗೆಯುವ ಕೆಲಸವು ಆರಂಭವಾಗಿದೆ. ಕೆಲ ಪ್ರದೇಶಗಳಲ್ಲಿ ಪ್ರತಿಭಟನೆಯಿಂದಾಗಿ ಅನಿಲವನ್ನು ಹೊರತೆಗೆಯುವ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಇಂಧನ ವಿಷಯದಲ್ಲಿ ಭಾರತವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ.

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಭಾರತದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆಯು ಹೆಚ್ಚುತ್ತಿದೆ. ಜೊತೆಗೆ ಡೀಸೆಲ್ ಹಾಗೂ ಪೆಟ್ರೋಲ್ ವಾಹನಗಳಿಂದ ಹೊರಹೊಮ್ಮುವ ವಿಷಕಾರಿ ಹೊಗೆ ಪರಿಸರಕ್ಕೆ ಹಾನಿಕಾರಕವಾಗಿದೆ. ಆದ್ದರಿಂದ, ಈ ಎಲ್ಲ ಸಮಸ್ಯೆಯನ್ನು ಹೋಗಲಾಡಿಸಲು, ಇಂಧನ ವಾಹನಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ಈ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ.

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ವಾಹನ ಸವಾರರಿಂದ ಉಂಟಾಗುವ ಸಂಚಾರ ಉಲ್ಲಂಘನೆಯ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಹೊಸ ಕಾಯ್ದೆಯು ಇತ್ತೀಚೆಗೆ ಜಾರಿಗೆ ಬಂದಿದೆ. ಈ ಕಾಯ್ದೆಯ ಪ್ರಕಾರ, ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತಿದೆ.

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದಲ್ಲಿ ದಂಡವನ್ನು ವಿಧಿಸಲಾಗುತ್ತಿದೆ. ಈ ಕಾರಣಕ್ಕಾಗಿ ಈ ಹೊಸ ಕಾಯ್ದೆಯು ಸಾರ್ವಜನಿಕರಲ್ಲಿ ಹೆಚ್ಚಿನ ಗೊಂದಲವನ್ನುಂಟು ಮಾಡಿದೆ. ದೇಶಾದ್ಯಂತ ಭಾರೀ ಪ್ರಮಾಣದ ದಂಡವನ್ನು ವಿಧಿಸುತ್ತಿರುವ ಹಲವು ಪ್ರಕರಣಗಳು ದಾಖಲಾಗುತ್ತಿವೆ. ಇದು ಜನರಲ್ಲಿ ತೀವ್ರ ಭಯ ಹಾಗೂ ಗೊಂದಲಕ್ಕೆ ಕಾರಣವಾಗಿದೆ.

MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಆದ್ದರಿಂದ, ಅನೇಕ ವಾಹನ ಚಾಲಕರು ತಮ್ಮ ವಾಹನಗಳನ್ನು ಚಲಾಯಿಸುವುದನ್ನು ಬಿಟ್ಟು ಸಾರ್ವಜನಿಕ ಸಾರಿಗೆಗಳಲ್ಲಿ ಸಂಚರಿಸುತ್ತಿರುವ ಬಗ್ಗೆ ವರದಿಗಳಾಗಿವೆ. ಆಟೋ ಎಕನಾಮಿಕ್ ಟೈಮ್ಸ್ ವರದಿಗಳ ಪ್ರಕಾರ, ಒರಿಸ್ಸಾದಲ್ಲಿ ಹೊಸ ಕಾನೂನು ಜಾರಿಗೆ ಬಂದ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟವು ಗಣನೀಯವಾಗಿ ಕುಸಿದಿದೆ.

MOST READ: ಜೆ‍‍ಸಿ‍‍ಬಿ ಯಂತ್ರವು ಹಳದಿ ಬಣ್ಣದಲ್ಲೇ ಏಕಿರುತ್ತೆ?

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಇದಕ್ಕೆ ಮುಖ್ಯ ಕಾರಣ ಹೊಸ ಮೋಟಾರ್ ವಾಹನ ಕಾಯ್ದೆ. ಏಕೆಂದರೆ, ಸಣ್ಣಪುಟ್ಟ ಸಂಚಾರಿ ನಿಯಮಗಳ ಉಲ್ಲಂಘನೆಗಾಗಿಯೂ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ, ಜನರು ತಮ್ಮ ವಾಹನಗಳಿಗಿಂತ ಹೆಚ್ಚಾಗಿ ಸಾರ್ವಜನಿಕ ವಾಹನಗಳನ್ನು ಬಳಸಲು ಆರಂಭಿಸಿದ್ದಾರೆ.

MOST READ: ಹೊಸ ನಿಯಮದಿಂದ ಟ್ರಾಕ್ಟರ್ ಡ್ರೈವರ್‍‍‍ಗೂ ಬಿತ್ತು ಭಾರೀ ದಂಡ..!

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಸಾರ್ವಜನಿಕರ ಈ ನಿರ್ಧಾರದಿಂದಾಗಿ, ಒಡಿಶಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಮಾರಾಟ ತೀವ್ರ ಕುಸಿತ ಕಂಡಿದೆ. ಹೀಗಾಗಿ, ಪೆಟ್ರೋಲ್ ಮಾರಾಟವು ದಿನಕ್ಕೆ 4,08,000 ಲೀಟರ್ ಹಾಗೂ ಡೀಸೆಲ್ ಮಾರಾಟವು ದಿನಕ್ಕೆ 12,45,000 ಲೀಟರ್‍‍ನಷ್ಟು ಕುಸಿದಿದೆ.

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಈಗಾಗಲೇ ಮಾರಾಟದಲ್ಲಿ ಕುಸಿತವನ್ನು ಎದುರಿಸುತ್ತಿರುವ ಆಟೋಮೊಬೈಲ್ ಉದ್ಯಮಕ್ಕೆ, ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟದಲ್ಲಿನ ಕುಸಿತವು ದೊಡ್ಡ ಹೊಡೆತ ನೀಡಿದೆ. ಒಡಿಶಾ ಸರ್ಕಾರವು ಸುಮಾರು ರೂ.5 ಕೋಟಿಯಷ್ಟು ನಷ್ಟವನ್ನು ಅನುಭವಿಸಿದೆ.

ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್

ಪೆಟ್ರೋಲ್ ಮಾರಾಟದ ಕುಸಿತದಿಂದ ರೂ. 58 ಲಕ್ಷದಿಂದ ರೂ.81 ಲಕ್ಷ ಹಾಗೂ ಡೀಸೆಲ್ ಮಾರಾಟದ ಕುಸಿತದಿಂದ ರೂ.1.78ಕೋಟಿ ರೂಪಾಯಿಗಳ ನಷ್ಟವನ್ನು ಉಂಟಾಗಿರುವುದಾಗಿ ಸರ್ಕಾರದ ಇಂಧನ ಮಾರಾಟಗಾರರ ಸಂಘವು ತಿಳಿಸಿದೆ.

Most Read Articles

Kannada
English summary
New motor vehicle act decreases petrol and diesel sale - Read in kannada
Story first published: Tuesday, September 10, 2019, 16:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X