TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
ಸ್ಪಾಟ್ ಟೆಸ್ಟಿಂಗ್‌ನಲ್ಲಿ ಮಿಂಚಿದ ರೆನಾಲ್ಟ್ ಹೊಸ 7 ಸೀಟರ್ ಎಂಪಿವಿ ಕಾರು.!
ರೆನಾಲ್ಟ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ತನ್ನ ಹೊಚ್ಚ ಹೊಸ ಮಿನಿ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಆರ್‍ಬಿಸಿ ಕೋಡ್ ಆಧಾರದ ಮೇಲೆ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ದೇಶದ ವಿವಿಧಡ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.
ಮಧ್ಯಮ ಗಾತ್ರದ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸಿ ಯಶಸ್ವಿಯಾಗಿರುವ ರೆನಾಲ್ಟ್ ಸಂಸ್ಥೆಯು ಲೊಡ್ಜಿ ಎಂಪಿವಿ ಕಾರುಗಳ ಮಾರಾಟದಲ್ಲಿ ತುಸು ಹಿನ್ನೆಡೆ ಅನುಭವಿಸಿದೆ ಅಂದ್ರೆ ತಪ್ಪಾಗುವುದಿಲ್ಲ. ಇದೇ ಕಾರಣಕ್ಕಾಗಿ ಕಾರು ಮಾರಾಟದಲ್ಲಿ ಭಾರೀ ಬದಲಾವಣೆಗೆ ನಿರ್ಧರಿಸಿರುವ ರೆನಾಲ್ಟ್ ಈ ಬಾರಿ ಹೊಸ ಯೋಜನೆಗೆ ಕೈಹಾಕಿದೆ.
ಹೊಸ ಕಾರು ಉತ್ಪನ್ನದೊಂದಿಗೆ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿರುವ ರೆನಾಲ್ಟ್ ಸಂಸ್ಥೆಯು ವಿನೂತನ ಶೈಲಿಯ 7 ಸೀಟರ್ ಮಾದರಿಯ ಮಿನಿ ಎಂಪಿವಿ ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.
ರೆನಾಲ್ಟ್ ಇಂಡಿಯಾ ಸಂಸ್ಥೆಯು ಭಾರತದಲ್ಲಿ ತನ್ನ ಹೊಸ ಎಂಪಿವಿ ಕಾರುನ್ನು ಸದ್ಯಕ್ಕೆ ಆರ್‌ಬಿಸಿ ಎನ್ನುವ ಕೋಡ್ ಆಧಾರ ಮೇಲೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಕೆಲವು ಮಹತ್ವದ ಮಾಹಿತಿಗಳು ಲಭ್ಯವಾಗಿವೆ.
ರೆನಾಲ್ಟ್ ಹೊಸ ಮಿನಿ ಎಂಪಿವಿ ಕಾರು ಕ್ವಿಡ್ ಕಾರಿನ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ಸಿದ್ದಗೊಂಡಿದ್ದು, ಕ್ವಿಡ್ ಕಾರಿಗಿಂತಲೂ ತುಸು ದೊಡ್ಡದಾಗಿದೆ. ಆದ್ರೆ ಲೊಡ್ಜಿ ಕಾರಿಗಿಂತಲೂ ಗಾತ್ರದಲ್ಲಿ ಚಿಕ್ಕದಾಗಿದ್ದರೂ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುವ ನೀರಿಕ್ಷೆಯಲ್ಲಿದೆ.
ಈಗಾಗಲೇ ತಮಿಳುನಾಡಿನ ಪ್ರಮುಖ ಕಡೆಗಳಲ್ಲಿ ರೆನಾಲ್ಟ್ ಹೊಸ ಎಂಪಿವಿ ಕಾರು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ರೆನಾಲ್ಟ್ ಸಂಸ್ಥೆಯ ಸಿಎಂಎಫ್ ಎ ಪ್ಲಸ್ ಕಾರು ಉತ್ಪಾದನಾ ಪ್ಯಾರ್ಟ್‌ಫಾರ್ಮ್ ಅಡಿಯಲ್ಲಿ ಈ ಹೊಸ ಕಾರನ್ನು ಅಭಿವೃದ್ಧಿ ಮಾಡಲಾಗಿದೆಯೆಂತೆ.
ಎಂಪಿವಿ ಮಾದರಿಗಳಲ್ಲೇ ಸಣ್ಣ ಗಾತ್ರದ ಕಾರು ಆವೃತ್ತಿಯಾಗಿರುವ ರೆನಾಲ್ಟ್ ಹೊಸ ಕಾರು ಬೆಲೆ ಮತ್ತು ಎಂಜಿನ್ ಗಾತ್ರದಲ್ಲೂ ತುಸು ಬದಲಾವಣೆಯೊಂದಿಗೆ ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದ್ದು, ಲೊಡ್ಜಿ ಕಾರುಗಳ ಮಾರಾಟದಲ್ಲಿ ಆದ ಹಿನ್ನಡೆಯನ್ನು ಈ ಕಾರಿನ ಮೂಲಕ ಗ್ರಾಹಕರ ಬೇಡಿಕೆಯನ್ನು ಕಾಯ್ದುಕೊಳ್ಳಲು ಇದು ನೆರವಾಗಲಿದೆ.
ಲಭ್ಯವಾಗಿರುವ ಮಾಹಿತಿಗಳ ಪ್ರಕಾರ, 7 ಸೀಟರ್ ಸೌಲಭ್ಯವನ್ನು ಹೊಂದಿರುವ ರೆನಾಲ್ಟ್ ಹೊಸ ಎಂಪಿವಿ ಕಾರು ಗುಣಮಟ್ಟ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಲ್‌ಇಡಿ ಡಿಆರ್‌ಎಸ್, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಮತ್ತು ಪುಶ್ ಬಟನ್ ಸ್ಟಾರ್ಟ್ ಸೌಲಭ್ಯಗಳು ಇದರಲ್ಲಿವೆ.
ಎಂಜಿನ್ ಸಾಮರ್ಥ್ಯ
ಹೊಸ ಕಾರುಗಳಲ್ಲಿ 1.2-ಲೀಟರ್ ಪೆಟ್ರೋಲ್ ಅಥವಾ 1.5-ಲೀಟರ್ ಡೀಸೆಲ್ ಎಂಜಿನ್ ಒದಗಿಸುವ ಸಾಧ್ಯತೆಗಳಿದ್ದು, ಇದು ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆ ಕಾಯ್ದುಕೊಳ್ಳವು ನೆರವಾಗಲಿದೆ ಎನ್ನಬಹುದು.
ಕಾರಿನ ಬೆಲೆ ಮತ್ತು ಬಿಡುಗಡೆ ಮಾಹಿತಿ
ಕಾರಿನ ಗುಣಮಟ್ಟ ಮತ್ತು ಎಂಜಿನ್ ಸಾಮರ್ಥ್ಯವನ್ನು ನೋಡಿದಾಗ ಹೊಸ ಕಾರಿನ ಬೆಲೆಯು ರೂ. 7 ಲಕ್ಷದಿಂದ ರೂ. 11 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರುಗಳು 2019ರ ಮೊದಲ ತ್ರೈಮಾಸಿಕ ಅಂತ್ಯಕ್ಕೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.
ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಕ್ವಿಡ್ ಕಾರುಗಳ ಡಿಸೈನ್ ಆಧಾರಿತ ಹೊಸ ರೆನಾಲ್ಟ್ ಕಾರುಗಳು 7 ಸೀಟರ್ ವ್ಯವಸ್ಥೆಯಿಂದಾಗಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಗಳಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇಷ್ಟೇ ಪ್ರಮಾಣದ ತಾಂತ್ರಿಕ ಅಂಶಗಳನ್ನು ಹೊಂದಿರುವ ಮಾರುತಿ ಸುಜುಕಿ ಎರ್ಟಿಗಾ ಮತ್ತು ಮಹೀಂದ್ರಾ ಮರಾಜೋ ಕಾರುಗಳಿಗೆ ಇದು ಉತ್ತಮ ಪೈಪೋಟಿ ನೀಡಬಲ್ಲದು.