ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರುಗಳ ಉತ್ಪಾದನೆದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಸ್ಕೋಡಾ ಇಂಡಿಯಾ ಸಂಸ್ಥೆಯು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆ ಅನುಗುಣವಾಗಿ ಮುಂಬರುವ ಒಂದು ವರ್ಷದ ಅವಧಿಯಲ್ಲಿ ವಿವಿಧ ಮಾದರಿಯ ಐದು ಹೊಸ ಕಾರು ಮಾದರಿಗಳನ್ನು ಪರಿಚಯಿಸಲು ಸಜ್ಜಾಗುತ್ತಿದೆ.

ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸ್ಕೋಡಾ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಫೋಕ್ಸ್‌ವ್ಯಾಗನ್ ಸಂಸ್ಥೆಯ ಜೊತೆಗೂಡಿ ಇಂಡಿಯಾ 2.0 ಎನ್ನುವ ಯೋಜನೆಗೆ ಚಾಲನೆ ನೀಡಿದ್ದು, ಕಾರು ಉತ್ಪಾದನೆಯಲ್ಲಿ ಸುಧಾರಿತ ತಂತ್ರಜ್ಞಾನ ಅಳವಡಿಕೆ ಮತ್ತು ಮಾರಾಟ ಮಳಿಗೆಗಳ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಹೊಸ ಯೋಜನೆ ಅಡಿ ಒಟ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, 2020ರ ಕೊನೆಯಲ್ಲಿ ಕಾಮಿಕ್ ಹೆಸರಿನ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸ್ಕೋಡಾ ಸಂಸ್ಥೆಯು ಇಂಡಿಯಾ ಸದ್ಯ 2.0 ಯೋಜನೆಗಾಗಿ ಬರೋಬ್ಬರಿ ರೂ.200 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಕಾರು ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆಗಾಗಿ ಫೋಕ್ಸ್‌ವ್ಯಾಗನ್ ಕೂಡಾ ಸ್ಕೋಡಾ ಜೊತೆ ಕೈಜೋಡಿಸಿದೆ. ಹೊಸ ಯೋಜನೆ ಅಡಿಯಲ್ಲಿ ಕಾರು ಉತ್ಪಾದನೆಯಲ್ಲಿ ಬದಲಾವಣೆ ತರುವುದಲ್ಲದೇ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುತ್ತಿದ್ದು, ಕಾಮಿಕ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಕರೋಕ್ ಎಸ್‌ಯುವಿ ಸೇರಿದಂತೆ ಒಟ್ಟು ಐದು ಕಾರುಗಳು ರಸ್ತೆಗಿಳಿಸಲಿದೆ.

ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸದ್ಯ ಮಾರುಕಟ್ಟೆಯಲ್ಲಿ ಸ್ಕೋಡಾ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ರ‍್ಯಾಪಿಡ್ ಸೆಡಾನ್, ಒಕ್ಟಿವಿಯಾ ಸೆಡಾನ್, ಸೂರ್ಪಬ್ ಸೆಡಾನ್ ಮತ್ತು ಕೊಡಿಯಾಕ್ ಎಸ್‌ಯುವಿ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಐದು ಕಾರುಗಳಲ್ಲಿ ಎರಡು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳಲಾದ ಕಾರು ಮಾದರಿಗಳಾದರೆ ಇನ್ನುಳಿದ ಮೂರು ಹೊಸ ಕಾರುಗಳು ಇಂಡಿಯಾ 2.0 ಯೋಜನೆಯಡಿ ಭಾರತದಲ್ಲೇ ನಿರ್ಮಾಣವಾಗಲಿವೆ.

ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಕೇಂದ್ರ ಸರ್ಕಾರವು ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದ್ದು, 2,500 ಕಾರುಗಳನ್ನು ಯಾವುದೇ ಹೆಚ್ಚುವರಿ ತೆರಿಗೆ ಇಲ್ಲದೇ ವಿದೇಶಿ ಮಾರುಕಟ್ಟೆಗಳಿಂದ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಮಾಡುವ ಅವಕಾಶ ಒದಗಿಸಿದೆ.

ಈ ಹಿನ್ನಲೆಯಲ್ಲಿ ಬಹುತೇಕ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಕೆಲವು ಕಾರು ಮಾದರಿಗಳನ್ನು ಹೊಸ ಆಮದು ನೀತಿಯಡಿ ಮಾರಾಟ ಮಾಡಲು ನಿರ್ಧರಿಸಿವೆ.

ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸ್ಕೋಡಾ ಇಂಡಿಯಾ ಕೂಡಾ ಇದೇ ನಿಟ್ಟಿನಲ್ಲಿ ಯುರೋಪ್ ಮಾರುಕಟ್ಟೆಯಿಂದ ಎರಡು ಐಷಾರಾಮಿ ಕಾರು ಆವೃತ್ತಿಗಳನ್ನು ಆಮದು ಮಾಡಿಕೊಳ್ಳಲಿದ್ದು, ಇನ್ನುಳಿದ ಮೂರು ಕಾರು ಮಾದರಿಗಳಾದ ಕಾಮಿಕ್, ಕರೋಕ್ ಮತ್ತು ಹೊಸ ತಲೆಮಾರಿನ ರ‍್ಯಾಪಿಡ್ ಸೆಡಾನ್ ಕಾರುಗಳನ್ನು ಇಲ್ಲಿಯೇ ಉತ್ಪಾದನೆ ಮಾಡಿ ಮಾರಾಟ ಮಾಡಲಿದೆ.

ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಈ ಕುರಿತಂತೆ ಸುದ್ದಿಮಾಧ್ಯಮಗಳ ಸಂದರ್ಶನದಲ್ಲಿ ಮಾತನಾಡಿದ್ದ ಸ್ಕೋಡಾ ಇಂಡಿಯಾ ಅಧ್ಯಕ್ಷ ಜಾಕ್ ಹೊಲಿಸ್ ಅವರು ಮುಂದಿನ ಒಂದು ವರ್ಷದೊಳಗಾಗಿ ಐದು ಹೊಸ ಕಾರುಗಳು ಮಾರಾಟಕ್ಕೆ ಸಿದ್ದವಾಗುತ್ತಿದ್ದು, ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಯೋಜನೆಯು ಹೊಸ ಭರವಸೆಗೆ ಕಾರಣವಾಗಿದೆ ಎಂದಿದ್ದರು.

MOST READ: ನಮ್ಮ ಬೆಂಗಳೂರಿನಲ್ಲಿ K-1000 ರ‍್ಯಾಲಿ- ಗೌರವ್ ಗಿಲ್ ಔಟ್, ಚೇತನ್ ಶಿವರಾಮ್ ಶೈನ್..!

ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು 2.0-ಇಂಡಿಯಾ ಯೋಜನೆಗಾಗಿ ಸ್ಕೋಡಾ ಸಂಸ್ಥೆಯು ರೂ.200 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದಲ್ಲಿ ಫೋಕ್ಸ್‌ವ್ಯಾಗನ್ ಸಂಸ್ಥೆಯು 1 ಬಿಲಿಯನ್ ಯುರೋ(ರೂ.8 ಸಾವಿರ ಕೋಟಿ) ಬಂಡವಾಳ ಹೂಡಿಕೆಯೊಂದಿಗೆ ಹಲವು ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದೆ.

MOST READ: ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಸ್ಕೋಡಾ ಬಹುನೀರಿಕ್ಷಿತ ಕಾಮಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೀಗಾಗಿ ಭಾರತದಲ್ಲಿ ಬಿಡುಗಡೆಯಾಗಲಿರುವ ಸ್ಕೋಡಾ ಕಾರುಗಳು ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದ್ದು, ಬೆಲೆ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಳ್ಳುತ್ತಿದೆ. ಒಂದು ವೇಳೆ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ರೂ.12 ಲಕ್ಷದಿಂದ ರೂ.16 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಿದ್ದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

Article Published On: Tuesday, November 26, 2019, 11:21 [IST]
English summary
According to Skoda official, the all new Kamiq SUV will be launched in India by end of next year.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+