ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಭಾರತದಲ್ಲಿ ಸದ್ಯ ಮಧ್ಯಮ ಗಾತ್ರದ ಎಸ್‌ಯುವಿಗಳ ಸದ್ದು ಜೋರಾಗಿದ್ದು, ಸ್ಕೋಡಾ ಕೂಡಾ ಇದೇ ನಿಟ್ಟಿನಲ್ಲಿ ಹೊಸ ಮಾದರಿಯ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆ ಮಾಡುತ್ತಿದೆ. ಸದ್ಯ ಉತ್ಪಾದನೆ ಹಂತದಲ್ಲಿರುವ ಹೊಸ ಕಾರಿನ ಡಿಸೈನ್ ಕುರಿತಾದ ರೇಖಾ ಚಿತ್ರಗಳನ್ನು ಬಿಡುಗಡೆ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

2019ರ ಮಾರ್ಚ್‌ನಲ್ಲಿ ನಡೆಯಲಿರುವ ಜಿನೆವಾ ಆಟೋ ಮೇಳದಲ್ಲಿ ಸ್ಕೋಡಾ ಬಿಡುಗಡೆ ಮಾಡಲಿರುವ ವಿಷನ್ ಎಕ್ಸ್ ಕಾನ್ಸೆಪ್ಟ್ ಮಾದರಿಯು ಅನಾವರಣಗೊಳ್ಳಲಿದ್ದು, ಹೊಸ ಕಾರಿಗೆ ಕಾಮಿಕ್ ಎಂದು ನಾಮಕರಣ ಮಾಡಲಾಗಿದೆ ಎಂಬ ಮಹತ್ವದ ಮಾಹಿತಿ ಕೂಡಾ ಈಗಾಗಲೇ ಲಭ್ಯವಾಗಿದೆ.

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕೊಡಿಯಾಕ್ ಎಸ್‌ಯುವಿ ಮಾದರಿಯಲ್ಲೇ ಮುಂಭಾಗದ ಡಿಸೈನ್ ಹೊಂದಿರುವ ಕಾಮಿಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಾರು ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಭಾರತದಲ್ಲಿ ಜನಪ್ರಿಯವಾಗುತ್ತಿರುವ ಹ್ಯುಂಡೈ ಕ್ರೇಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಕಾಮಿಕ್ ಕಾರನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಈ ಬಗ್ಗೆ ಸ್ಕೋಡಾ ಇಂಡಿಯಾ ಮತ್ತಷ್ಟು ಮಾಹಿತಿ ಬಿಡುಗಡೆ ಮಾಡಲಿದೆ.

ಇತ್ತ ಫೋಕ್ಸ್‌ವ್ಯಾಗನ್ ಜೊತೆಗಿನ 'ಇಂಡಿಯಾ 2.0 ಪ್ರೋಜೆಕ್ಟ್' ಸಹ ಭಾರತೀಯ ಗ್ರಾಹಕರನ್ನು ಗುರಿಯಾಗಿಸಿ ಅಗ್ಗದ ಬೆಲೆಯ ಕಾರುಗಳನ್ನು ಅಭಿವೃದ್ಧಿ ಮಾಡಲು ಒಪ್ಪಿಗೆ ಸೂಚಿಸಿರುವ ಸ್ಕೋಡಾ, ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳಿಗೆ MQB ಪ್ಲ್ಯಾಟ್‌ಫಾರ್ಮ್ ಆಧರಿಸಿ ಕಾರು ಅಭಿವೃದ್ಧಿ ಮಾಡುತ್ತಿರುವ ಉತ್ತಮ ಬೆಳವಣಿಗೆ ಎನ್ನಬಹುದು.

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಅಗ್ಗದ ಬೆಲೆಗಳಲ್ಲಿ ಉತ್ತಮ ಎಸ್‌ಯುವಿಗಳ ಖರೀದಿಗೆ ಭಾರತೀಯ ಗ್ರಾಹಕರು ಹೆಚ್ಚಿನ ಆಸಕ್ತಿ ತೊರುತ್ತಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ.12 ಲಕ್ಷದಿಂದ ರೂ.16 ಲಕ್ಷದ ಒಳಗಿನ ಕಾರು ಮಾದರಿಗಳು ಬಹುತೇಕ ಯಶಸ್ವಿಯಾಗಿರುವುದು ಕಾಮಿಕ್ ಕಾರು ಅಭಿವೃದ್ದಿಗೆ ಪ್ರೇರಣೆಯಾಗಿದೆ.

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಹೀಗಾಗಿಯೇ ಫೋಕ್ಸ್‌ವ್ಯಾಗನ್ ಸಂಸ್ಥೆಯು ಸಹ ಭಾರತೀಯ ಮಾರುಕಟ್ಟೆ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗಾಗಿ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, 'ಇಂಡಿಯಾ 2.0 ಪ್ರೋಜೆಕ್ಟ್' ಎನ್ನುವ ಬೃಹತ್ ಯೋಜನೆ ಒಂದನ್ನು ಸಿದ್ದಪಡಿಸಿದೆ.

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಈ ಹೊಸ ಯೋಜನೆಯ ಜವಾಬ್ದಾರಿಯನ್ನು ಸ್ಕೋಡಾ ಸಂಸ್ಥೆಯೇ ವಹಿಸಿಕೊಂಡಿದ್ದು, ಮುಂಬರುವ ಫೋಕ್ಸ್‌ವ್ಯಾಗನ್ ಸಂಸ್ಥೆಯ ಪ್ರತಿಯೊಂದು ಕಾರು ಮಾದರಿಯು ಸಹ ಸ್ಕೋಡಾ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆಗೆ ಪ್ರವೇಶಿಸಲಿವೆ.

MOST READ: ರೀ ಸೇಲ್ ಮೌಲ್ಯವಿಲ್ಲದ ಈ ಕಾರುಗಳನ್ನು ಖರೀದಿ ಮಾಡುವ ಮುನ್ನ 10 ಬಾರಿ ಯೋಚಿಸಿ..!

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಇದರಲ್ಲಿ ಫೋಕ್ಸ್‌ವ್ಯಾಗನ್ ಸಂಸ್ಥೆಯ ಟಿ-ಕ್ರಾಸ್ ಎಸ್‌ಯುವಿ ಕೂಡಾ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಇದೇ ಕಾರಿನ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಸ ಕಾಮಿರ್ ಕಾರಿನಲ್ಲೂ ಸಹ ಬಳಕೆ ಮಾಡುವ ಸಾಧ್ಯತೆಗಳಿವೆ.

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಭಾರತವನ್ನು ಹೊರತುಪಡಿಸಿ ಜಾಗತಿಕ ಮಾರುಕಟ್ಟೆಗಳಿಗಾಗಿ ಪೆಟ್ರೋಲ್ ಜೊತೆಗೆ ಸಿಎನ್‌ಜಿ ಹೈಬ್ರಿಡ್ ಎಂಜಿನ್ ಆಯ್ಕೆಯು ಸಹ ಹೊಸ ಕಾಮಿಕ್ ಕಾರಿನಲ್ಲಿದ್ದು, ಎಂಜಿನ್‌ ಸಾಮರ್ಥ್ಯದಲ್ಲಿ ತುಸು ಕಡಿಮೆ ಅನ್ನಿಸಿದರೂ ಸಹ ಪರ್ಫಾಮೆನ್ಸ್ ವಿಚಾರದಲ್ಲಿ ಗಮನಸೆಳೆಯಲಿವೆ.

MOST READ: ಟರ್ಬನ್ ಬಣ್ಣಕ್ಕೆ ತಕ್ಕಂತೆ ಮತ್ತೆ ಮೂರು ಹೊಸ ರೋಲ್ಸ್ ರಾಯ್ಸ್ ಕಾರು ಖರೀದಿಸಿದ ಭಾರತೀಯ ಉದ್ಯಮಿ

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಬಿಡುಗಡೆ ಮತ್ತು ಬೆಲೆ(ಅಂದಾಜು)

ಮೊದಲು ಜಿನೆವಾ ಆಟೋ ಮೇಳದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾಮಿಕ್ ಕಾರು ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದ್ದು, ತದನಂತರವಷ್ಟೇ ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.11 ಲಕ್ಷದಿಂದ ರೂ.14 ಲಕ್ಷ ಬೆಲೆ ಪಡೆದುಕೊಳ್ಳಲಿದೆ.

ಬಿಡುಗಡೆಯಾಗಲಿರುವ ಸ್ಕೋಡಾ ಕಾಮಿಕ್ ಕಾರಿನ ಡಿಸೈನ್ ಹೀಗಿರಲಿದೆ..!

ಅದೇ ರೀತಿ ಫೋಕ್ಸ್‌ವ್ಯಾಗನ್ ನಿರ್ಮಾಣದ ಟಿ-ಕ್ರಾಸ್ ಎಸ್‌ಯುವಿ ಕೂಡಾ ಇದೇ ವರ್ಷದ ಮಧ್ಯಂತರದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ಟಿ-ಕ್ರಾಸ್ ಬಿಡುಗಡೆಯ ನಂತರವಷ್ಟೇ ಕಾಮಿಕ್ ಕಾರು ಗ್ರಾಹಕರ ಕೈಸೆೇರಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda Kamiq Design Sketches Revealed — The New City SUV From Skoda. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X