ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಭಾರತದಲ್ಲಿ ಸದ್ಯ ಮಧ್ಯಮ ಗಾತ್ರದ ಎಸ್‌ಯುವಿಗಳ ಸದ್ದು ಜೋರಾಗಿದ್ದು, ಸ್ಕೋಡಾ ಕೂಡಾ ಇದೇ ನಿಟ್ಟಿನಲ್ಲಿ ಹೊಸ ಮಾದರಿಯ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆ ಮಾಡುತ್ತಿದೆ. ಸದ್ಯ ಉತ್ಪಾದನೆ ಹಂತದಲ್ಲಿರುವ ಹೊಸ ಕಾರಿನ ಮೊದಲ ಟೀಸರ್ ಇಂದು ಬಿಡುಗಡೆಯಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

2019ರ ಮಾರ್ಚ್‌ನಲ್ಲಿ ನಡೆಯಲಿರುವ ಜಿನೆವಾ ಆಟೋ ಮೇಳದಲ್ಲಿ ಸ್ಕೋಡಾ ಬಿಡುಗಡೆ ಮಾಡಲಿರುವ ವಿಷನ್ ಎಕ್ಸ್ ಕಾನ್ಸೆಪ್ಟ್ ಮಾದರಿಯ ಅನಾವರಣಗೊಳ್ಳಲಿದ್ದು, ಇದೀಗ ಹೊಸ ಕಾರಿನ ಹೆಡ್‌ಲ್ಯಾಂಪ್ ಕುರಿತಾಗಿ ಮಾತ್ರ ಟೀಸರ್ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕೊಡಿಯಾಕ್ ಮಾದರಿಯಲ್ಲೇ ಮುಂಭಾಗದ ಡಿಸೈನ್ ಹೊಂದಿರುವ ಹೊಸ ಕಾರು ಎಸ್‌ಯುವಿ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಭಾರತದಲ್ಲಿ ಜನಪ್ರಿಯವಾಗುತ್ತಿರುವ ಹ್ಯುಂಡೈ ಕ್ರೇಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ವಿಷನ್ ಎಕ್ಸ್ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಈ ಬಗ್ಗೆ ಸ್ಕೋಡಾ ಇಂಡಿಯಾ ಮತ್ತಷ್ಟು ಮಾಹಿತಿ ಬಿಡುಗಡೆ ಮಾಡಲಿದೆ.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಅತ್ತ ಫೋಕ್ಸ್‌ವ್ಯಾಗನ್ ಜೊತೆಗಿನ 'ಇಂಡಿಯಾ 2.0 ಪ್ರೋಜೆಕ್ಟ್' ಸಹ ಭಾರತೀಯ ಗ್ರಾಹಕರನ್ನು ಗುರಿಯಾಗಿಸಿ ಅಗ್ಗದ ಬೆಲೆಯ ಕಾರುಗಳನ್ನು ಅಭಿವೃದ್ಧಿ ಮಾಡಲು ಒಪ್ಪಿಗೆ ಸೂಚಿಸಿರುವ ಸ್ಕೋಡಾ, ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳಿಗೆ MQB ಪ್ಲ್ಯಾಟ್‌ಫಾರ್ಮ್ ಆಧರಿಸಿ ಕಾರು ಅಭಿವೃದ್ಧಿ ಮಾಡುತ್ತಿರುವ ಉತ್ತಮ ಬೆಳವಣಿಗೆ ಎನ್ನಬಹುದು.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಅಗ್ಗದ ಬೆಲೆಗಳಲ್ಲಿ ಉತ್ತಮ ಎಸ್‌ಯುವಿಗಳ ಖರೀದಿಗೆ ಭಾರತೀಯ ಗ್ರಾಹಕರು ಹೆಚ್ಚಿನ ಆಸಕ್ತಿ ತೊರುತ್ತಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ.12 ಲಕ್ಷದಿಂದ ರೂ.16 ಲಕ್ಷದ ಒಳಗಿನ ಕಾರು ಮಾದರಿಗಳು ಬಹುತೇಕ ಯಶಸ್ವಿಯಾಗಿರುವುದು ವಿಷನ್ ಎಕ್ಸ್ ಕಾನ್ಸೆಪ್ಟ್ ಅಭಿವೃದ್ದಿಗೆ ಪ್ರೇರಣೆಯಾಗಿದೆ.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಫೋಕ್ಸ್‌ವ್ಯಾಗನ್ ಸಂಸ್ಥೆಯು ಭಾರತೀಯ ಮಾರುಕಟ್ಟೆ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗಾಗಿ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, 'ಇಂಡಿಯಾ 2.0 ಪ್ರೋಜೆಕ್ಟ್' ಎನ್ನುವ ಬೃಹತ್ ಯೋಜನೆ ಒಂದನ್ನು ಸಿದ್ದಪಡಿಸಿದೆ.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಹೊಸ ಯೋಜನೆಯ ಜವಾಬ್ದಾರಿಯನ್ನು ಸ್ಕೋಡಾ ಸಂಸ್ಥೆಯೇ ವಹಿಸಿಕೊಂಡಿದ್ದು, ಮುಂಬರುವ ಫೋಕ್ಸ್‌ವ್ಯಾಗನ್ ಸಂಸ್ಥೆಯ ಪ್ರತಿಯೊಂದು ಕಾರು ಮಾದರಿಯು ಸಹ ಸ್ಕೋಡಾ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಇದರಲ್ಲಿ ಫೋಕ್ಸ್‌ವ್ಯಾಗನ್ ಸಂಸ್ಥೆಯ ಟಿ-ಕ್ರಾಸ್ ಎಸ್‌ಯುವಿ ಕೂಡಾ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಇದೇ ಕಾರಿನ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಸ ವಿಷನ್ ಎಕ್ಸ್ ಕಾನ್ಸೆಪ್ಟ್ ಕಾರಿನಲ್ಲಿ ಬಳಕೆ ಮಾಡುವ ಸಾಧ್ಯತೆಗಳಿವೆ.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಭಾರತವನ್ನು ಹೊರತುಪಡಿಸಿ ಜಾಗತಿಕ ಮಾರುಕಟ್ಟೆಗಳಿಗಾಗಿ ಪೆಟ್ರೋಲ್ ಜೊತೆಗೆ ಸಿಎನ್‌ಜಿ ಹೈಬ್ರಿಡ್ ಎಂಜಿನ್ ಆಯ್ಕೆಯು ಸಹ ಹೊಸ ವಿಷನ್ ಎಕ್ಸ್ ಕಾರಿನಲ್ಲಿದ್ದು, ಎಂಜಿನ್‌ ಸಾಮರ್ಥ್ಯದಲ್ಲಿ ತುಸು ಕಡಿಮೆ ಅನ್ನಿಸಿದರೂ ಸಹ ಪರ್ಫಾಮೆನ್ಸ್ ವಿಚಾರದಲ್ಲಿ ಗಮನಸೆಳೆಯಲಿವೆ.

MOST READ: ಮಹೀಂದ್ರಾ ಅಲ್ಟುರಾಸ್ ಜಿ4 ಕಾರಿಗೆ ಹೊಸ ಹೆಸರು ನೀಡಿದ್ರೆ 2 ಕಾರು ಫ್ರೀ ಅಂತೆ..!

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಬಿಡುಗಡೆ ಮತ್ತು ಬೆಲೆ(ಅಂದಾಜು)

ಮುಂಬರುವ ಮಾರ್ಚ್‌ನಲ್ಲಿ ನಡೆಯಲಿರುವ ಜಿನೆವಾ ಆಟೋ ಮೇಳದಲ್ಲಿ ಅನಾವರಣಗೊಳ್ಳಲಿರುವ ಹೊಸ ಕಾರು ಮೊದಲಿಗೆ ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ತದನಂತರವಷ್ಟೇ ಭಾರತದಲ್ಲಿ ಬಿಡುಗಡೆಯಾಗಲಿರುವ ವಿಷನ್ ಎಕ್ಸ್ ಕಾರು ವರ್ಷಾಂತ್ಯಕ್ಕೆ ರಸ್ತೆಗಿಳಿಯುವ ಸಾಧ್ಯತೆಗಳಿವೆ.

ಬಹುನೀರಿಕ್ಷಿತ ಹೊಸ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆಗೊಳಿಸಿದ ಸ್ಕೋಡಾ

ಅದೇ ರೀತಿ ಫೋಕ್ಸ್‌ವ್ಯಾಗನ್ ನಿರ್ಮಾಣದ ಟಿ-ಕ್ರಾಸ್ ಎಸ್‌ಯುವಿ ಕೂಡಾ ಇದೇ ವರ್ಷದ ಮಧ್ಯಂತರದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ಟಿ-ಕ್ರಾಸ್ ಬಿಡುಗಡೆಯ ನಂತರವಷ್ಟೇ ವಿಷನ್ ಎಕ್ಸ್ ಗ್ರಾಹಕರ ಕೈಸೆೇರಲಿದೆ.

Article Published On: Thursday, January 17, 2019, 20:04 [IST]
English summary
New Skoda SUV Teased Ahead Of Debut — To Be Based On The Vision X Concept. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+