ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಇಂಧನ ಆಧರಿತ ವಾಹನಗಳ ಬಳಕೆಯನ್ನು ತಗ್ಗಿಸಿ ಪರಿಸರ ಸ್ನೇಹಿ ವಾಹನ ಅಭಿವೃದ್ದಿ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ದೇಶದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಟಾಟಾ ತನ್ನ ಭವಿಷ್ಯದ ಕಾರು ಮಾದರಿಗಳನ್ನು ಜನಪ್ರಿಯಗೊಳಿಸಲು ಮಹತ್ವದ ಯೋಜನೆಯೊಂದಕ್ಕೆ ಕೈಹಾಕಿದೆ.

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಹೌದು, ಟಾಟಾ ಸಂಸ್ಥೆಯು ಈಗಾಗಲೇ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಮತ್ತು ಮಾರಾಟ ಚಾಲನೆ ನೀಡಿರುವುದಲ್ಲದೇ ಗ್ರಾಹಕರ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದೆ. ಇದಕ್ಕಾಗಿ ಜಾಗತಿಕ ಮಟ್ಟದಲ್ಲಿ ಗಮನಸೆಳೆಯಬಹುದಾದಂತಹ ಯೋಜನೆಯೊಂದಕ್ಕೆ ಕೈ ಹಾಕಿರುವ ಟಾಟಾ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳ ಕಾರ್ಯಕ್ಷಮತೆ, ಬ್ಯಾಟರಿ ದಕ್ಷತೆ ಮತ್ತು ಗ್ರಾಹಕರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿಗಾಗಿ ಜಿಪ್‌ಟ್ರಾನ್ ಎನ್ನುವ ಡ್ರೈವ್ ಟೆಕ್ನಾಲಜಿಯೊಂದನ್ನು ಸಿದ್ದಪಡಿಸಿದೆ.

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಸದ್ಯ ಮಾರುಕಟ್ಟೆಯಲ್ಲಿರುವ ಟಿಗೋರ್ ಎಲೆಕ್ಟ್ರಿಕ್ ಹೊರತುಪಡಿಸಿ ಮುಂಬರುವ ಎಲ್ಲಾ ಟಾಟಾ ಎಲೆಕ್ಟ್ರಿಕ್ ಕಾರುಗಳಲ್ಲೂ ಜಿಪ್‌ಟ್ರಾನ್ ತಂತ್ರಜ್ಞಾನವು ಬಳಕೆಯಾಗಲಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸುವಲ್ಲಿ ಈ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಲಿದೆ.

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಎಂಜಿನಿಯರ್ ತಂಡದೊಂದಿಗೆ ಜಿಪ್‌ಟ್ರಾನ್ ತಂತ್ರಜ್ಞಾನವನ್ನು ಅಭಿವೃದ್ದಿಪಡಿಸಿರುವ ಟಾಟಾ ಸಂಸ್ಥೆಯು, ಹೊಸ ಇವಿ ಡ್ರೈವ್ ತಂತ್ರಜ್ಞಾನದ ಸಾಧಕ-ಬಾಧಕಗಳ ಕುರಿತಾಗಿ ಪರೀಕ್ಷಿಸಲು ಸುಮಾರು 10 ಲಕ್ಷ ಕಿ.ಮಿ ವಿಶ್ವಪರ್ಯಟನೆ ಕೈಗೊಂಡಿತ್ತು.

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಪರೀಕ್ಷಾರ್ಥ ಚಾಲನೆ ವೇಳೆ ಹೊಸ ತಂತ್ರಜ್ಞಾನದ ನ್ಯೂನತೆಗಳನ್ನು ಸರಿಪಡಿಸುತ್ತಲೇ ಅಂತಿಮ ಹಂತದ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದು, ಟಾಟಾ ಎಲೆಕ್ಟ್ರಿಕ್ ಕಾರುಗಳಿಗೆ ಜಿಪ್‌ಟ್ರಾನ್ ತಂತ್ರಜ್ಞಾನವು ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ತಂದುಕೊಡುವುದಾಗಿ ಭರವಸೆ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಟಾಟಾ ಸಂಸ್ಥೆಯೇ ಅಧಿಕೃತವಾಗಿ ಜಿಪ್‌ಟ್ರಾನ್ ತಂತ್ರಜ್ಞಾನ ವಿಶೇಷತೆಗಳ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದು, ಭವಿಷ್ಯದಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಜಿಪ್‌ಟ್ರಾನ್ ತಂತ್ರಜ್ಞಾನವು ಹೃದಯವಿದ್ದಂತೆ ಎಂದು ಬಣ್ಣಿಸಿದೆ.

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವು ಹವಲು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಈ ಪವರ್‌ಟ್ರೈನ್‌ನಲ್ಲಿ ಅಳವಡಿಸಲಾಗಿದೆ.

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಜೊತೆಗೆ ರಿಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನೀರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲ ಬಾಳಿಕೆಗೆ ಸಹಕರಿಸಲಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

8 ವರ್ಷಗಳ ವಾರಂಟಿ..!

ಇದು ನಿಮಗೆ ಅಚ್ಚರಿಯಾದರೂ ನಿಜ. ಟಾಟಾ ಸಂಸ್ಥೆಯು ತನ್ನ ವಿನೂತನ ಜಿಪ್‌ಟ್ರಾನ್ ತಂತ್ರಜ್ಞಾನದ ಮೇಲೆ ಸುಮಾರು 8 ವರ್ಷಗಳ ವಾರಂಟಿ ನೀಡವುದಾಗಿ ಘೋಷಿಸಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಮ್ಯಾಗ್ನೆಟ್ ಎಸಿ ಮೋಟಾರ್ ಜೋಡಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

MOST READ: ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಈ ಮೂಲಕ ಆಟೋ ಉದ್ಯಮದಲ್ಲಿ ಇದುವರೆಗೆ ಅಭಿವೃದ್ದಿಪಡಿಸಲಾಗದ ಸುಧಾರಿತ ಮಾದರಿಯ ಇವಿ ಪವರ್‌ಟ್ರೈನ್ ತಂತ್ರಜ್ಞಾನವನ್ನು ಟಾಟಾ ಅಭಿವೃದ್ದಿಪಡಿಸುವಲ್ಲಿ ಯಶಸ್ವಿಯಾಗಿದ್ದು, ಭವಿಷ್ಯದ ಟಾಟಾ ಎಲೆಕ್ಟ್ರಿಕ್ ಕಾರುಗಳಲ್ಲಿ ಈ ಹೊಸ ತಂತ್ರಜ್ಞಾನವು ಬಳಕೆಯಾಗಲಿದೆ.

MOST READ: ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

ಇನ್ನು ಟಾಟಾ ಸಂಸ್ಥೆಯು ಸದ್ಯ ಟಿಗೋರ್ ಇವಿ ಕಾರನ್ನು ಬಿಡುಗಡೆ ಮಾಡಿದ್ದರೂ ಸಹ ಸರ್ಕಾರಿ ಸಂಸ್ಥೆಗಳಿಗೆ ಮಾತ್ರವೇ ಪೂರೈಕೆ ಮಾಡುತ್ತಿದ್ದು, ಸಾರ್ವಜನಿಕ ಬಳಕೆಗಾಗಿ ಇನ್ನು ಹೆಚ್ಚಿನ ಬ್ಯಾಟರಿ ಸಾಮಾರ್ಥ್ಯದ ಇವಿ ಕಾರುಗಳನ್ನು ಅಭಿವೃದ್ದಿಪಡಿಸುತ್ತಿದೆ.

ಟಾಟಾ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಹೊಸ ಆಯಾಮಾ ನೀಡಲಿದೆ ಈ ಜಿಪ್‌ಟ್ರಾನ್ ಟೆಕ್ನಾಲಜಿ

2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಟಾಟಾ ನಿರ್ಮಾಣದ ಆಲ್‌ಟ್ರೊಜ್ ಎಲೆಕ್ಟ್ರಿಕ್ ಮತ್ತು ನೆಕ್ಸಾನ್ ಎಲೆಕ್ಟ್ರಿಕ್ ಕಾರುಗಳು ಪ್ರದರ್ಶನಗೊಳ್ಳುವ ಸಾಧ್ಯತೆಗಳಿದ್ದು, ಈ ಎರಡು ಕಾರುಗಳಲ್ಲೂ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಬಹುತೇಕ ಖಚಿತ ಎನ್ನಲಾಗಿದೆ.

Most Read Articles

Kannada
English summary
Tata Motors To Launch New Electric Car In India Next Year: Will Debut New 'Ziptron' EV Technology.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X