ಬಿಡುಗಡೆಯ ಸನಿಹದಲ್ಲಿ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ವರ್ಷನ್
ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸಿರುವ ಟಾಟಾ ನೆಕ್ಸಾನ್ ಮಾದರಿಯು ಮುಂಬರುವ ಕೆಲವೇ ದಿನಗಳಲ್ಲಿ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಟಾಟಾ ಮೋಟಾರ್ಸ್ ಸಂಸ್ಥೆಯು ಈಗಾಗಲೇ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಭಾರೀ ಬದಲಾವಣೆ ತರುವ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸದ್ಯ ಮಾರಾಟಕ್ಕಿರುವ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಕಾರುಗಳ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಸಹ ಹೊಸ ತಂತ್ರಜ್ಞಾನ ಪ್ರೇರಿತ ಅಲ್ಫಾ ಪ್ಲ್ಯಾಟ್‌ಫಾರ್ಮ್ ಡಿಸೈನ್‌ನಡಿಯಲ್ಲಿ ಅಭಿವೃದ್ಧಿಗೊಳಿಸುತ್ತಿರುವುದು ರೋಡ್ ಟೆಸ್ಟಿಂಗ್‌ನಲ್ಲಿ ಬಹಿರಂಗವಾಗಿದೆ.

ಟಾಟಾ ಸಂಸ್ಥೆಯು ಸದ್ಯ ಹೊಸ ಕಾರುಗಳ ಅಭಿವೃದ್ಧಿಗಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಅಲ್ಫಾ(ALFA) ಮತ್ತು ಒಮೇಗಾ(OMEGA) ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಫೇಸ್‌ಲಿಫ್ಟ್ ಕಾರುಗಳ ವಿನ್ಯಾಸದಲ್ಲಿ ಮತ್ತಷ್ಟು ಹೊಸ ಮೆರಗು ತಂದಿದೆ.

ಕಳೆದ ಜನವರಿಯಲ್ಲಿ ಬಿಡುಗಡೆಯಾದ ಹ್ಯಾರಿಯರ್ ಕೂಡಾ ಒಮೇಗಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಆಲ್‌ಟ್ರೊಜ್, ಬಝರ್ಡ್ ಮತ್ತು ಹಾರ್ನ್‌ಬಿಲ್ ಕಾರುಗಳು ಅಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಅಭಿವೃದ್ಧಿಗೊಳಿಸಲಾಗುತ್ತಿದೆ.

ಹೀಗಾಗಿಯೇ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಟಿಗೋರ್, ಟಿಯಾಗೋ ಮತ್ತು ನೆಕ್ಸಾನ್ ಫೇಸ್‌ಲಿಫ್ಟ್ ಕಾರುಗಳನ್ನು ಕೂಡಾ ಹೊಸ ತಂತ್ರಜ್ಞಾನ ಪ್ರೇರಿತ ಅಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಮರುಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಸ್ಪಾಟ್ ಟೆಸ್ಟಿಂಗ್ ವೇಳೆ ಹೊಸ ನೆಕ್ಸಾನ್ ಕಾರು ಸ್ಪೋರ್ಟಿ ಲುಕ್ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಮತ್ತಷ್ಟು ಬೇಡಿಕೆ ಗಿಟ್ಟಿಸಿಕೊಳ್ಳುವ ಸುಳಿವು ನೀಡಿದೆ.

ಇನ್ನು ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್‌ನಲ್ಲಿ ಯುರೋ-6 ನಂತೆ, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳ ಮಾರಾಟಕ್ಕೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ 2020ರ ಏಪ್ರಿಲ್ 1ರಿಂದ ಬಿಎಸ್-6 ವಾಹನಗಳು ರಸ್ತೆಗಿಳಿಯುತ್ತಿವೆ.

ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಇದೀಗ ಸುಪ್ರೀಂಕೋರ್ಟ ಕೂಡಾ ಈ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿರುವುದು ಕೇಂದ್ರ ಸರ್ಕಾರವು ಪಾಲನೆ ಮಾಡಲೇಬೇಕಾದ ಅನಿವಾರ್ಯತೆಯಲ್ಲಿದೆ.
MOST READ: 15 ವರ್ಷ ಮೇಲ್ಪಟ್ಟ ಹಳೆಯ ವಾಹನ ಹೊಂದಿರೋ ಮಾಲೀಕರಿಗೆ ಸದ್ಯದಲ್ಲೇ ಶಾಕಿಂಗ್ ನ್ಯೂಸ್..!?

ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ ತೀರ್ಪಿನ ಪ್ರಕಾರ, ಮುಂಬರುವ ದಿನಗಳಲ್ಲಿ ಮಾಲಿನ್ಯ ತಡೆಯಲು ಬಿಎಸ್-6 ತಾಂತ್ರಿಕ ಅಂಶಗಳ ಅಳವಡಿಕೆ ಅವಶ್ಯವಿದ್ದು, 2020ರ ಏಪ್ರಿಲ್ 1ರಿಂದಲೇ ಹೊಸ ನಿಯಮ ಜಾರಿಗೆ ಸಿದ್ದತೆ ಮಾಡಿಕೊಳ್ಳುವಂತೆ ಕೇಂದ್ರಕ್ಕೆ ಖಡಕ್ ಸೂಚನೆ ನೀಡಿದೆ.
MOST READ: ಜಿಟಿಎಸ್ ದರದಲ್ಲಿ ಇಳಿಕೆ- ಹ್ಯುಂಡೈ ಕೋನಾ ಬೆಲೆಯಲ್ಲಿ ಭಾರೀ ಕಡಿತ

ಹೀಗಾಗಿ ಟಾಟಾ ಮೋಟಾರ್ಸ್ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಕಾರು ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಪ್ರಮುಖ ಕಾರುಗಳು ಹೊಸ ಎಂಜಿನ್ ಮತ್ತು ಕೆಲವು ಸುಧಾರಿತ ವಿನ್ಯಾಸಗಳೊಂದಿಗೆ ಮರುಅಭಿವೃದ್ಧಿಗೊಳ್ಳುತ್ತಿವೆ.
MOST READ: ಕೇಂದ್ರದಿಂದ ಮಹತ್ವದ ಯೋಜನೆ- ಶೀಘ್ರದಲ್ಲೇ ಸಂಚಾರ ಆರಂಭಿಸಲಿವೆ 5,559 ಎಲೆಕ್ಟ್ರಿಕ್ ಬಸ್‌ಗಳು

ನೆಕ್ಸಾನ್ ಕೂಡಾ ಈಗಾಗಲೇ 5 ಸ್ಟಾರ್ ಸೆಫ್ಟಿ ಫೀಚರ್ಸ್ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಫೇಸ್‌ಲಿಫ್ಟ್ ಆವೃತ್ತಿ ಬಂದಲ್ಲಿ ಮತ್ತಷ್ಟು ಸದ್ದು ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಹಾಗೆಯೇ ಹೊಸ ಫೀಚರ್ಸ್‌ಗಳಿಂದಾಗಿ ಕಾರಿನ ಬೆಲೆಗಳಲ್ಲೂ ತುಸು ದುಬಾರಿಯಾಗಿರಲಿವೆ.
Source: Gaadiwaadi


Click it and Unblock the Notifications