ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ದೇಶದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾದ ಮಾರುತಿ ಸುಜುಕಿ ನಿರ್ಮಾಣದ ಬಲೆನೊ ಹ್ಯಾಚ್‌ಬ್ಯಾಕ್ ಕಾರು ಆವೃತ್ತಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸತನಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಸ್ಮಾರ್ಟ್ ಹೈಬ್ರಿಡ್‌ ತಂತ್ರಜ್ಞಾನ ಪ್ರೇರಿತ ಎಂಜಿನ್‌ನೊಂದಿಗೆ ಬಿಡುಗಡೆಯಾದ ಬಲೆನೊ ಆವೃತ್ತಿಯು ಹೊಸ ಸಂಚಲನಕ್ಕೆ ಕಾರಣವಾಗಿದೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ಹೌದು, ಭಾರತದಲ್ಲಿ ಸದ್ಯ ಹೊಸ ವಾಹನಗಳ ಉತ್ಪಾದನಾ ನೀತಿಯಲ್ಲಿ ಬಹುದೊಡ್ಡ ಬದಲಾವಣೆ ತರಲಾಗುತ್ತಿದ್ದು, ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯುವ ಉದ್ದೇಶದಿಂದ ಮುಂದಿನ ಕೆಲವೇ ದಿನಗಳಲ್ಲಿ ಬಿಎಸ್-6 (ಭಾರತ್ ಸ್ಟೇಜ್) ನಿಯಮವನ್ನು ಜಾರಿಗೆ ತರಲಾಗುತ್ತಿದೆ. ಈ ಹಿನ್ನೆಲೆ ಹೊಸ ವಾಹನ ಉತ್ಪಾದನಾ ನೀತಿ ಜಾರಿಯಾಗುವುದಕ್ಕೂ ಮುನ್ನವೇ ಮಾರುತಿ ಸುಜುಕಿ ತನ್ನ ಜನಪ್ರಿಯ ಬಲೆನೊ ಆವೃತ್ತಿಯನ್ನು ಬಿಎಸ್-6 ನಿಯಮಗಳಿಗೆ ಅನುಗುಣವಾಗಿ ಬಿಡುಗಡೆಗೊಳಿಸಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ಕೇಂದ್ರ ಸರ್ಕಾರವು ಈ ಹಿಂದೆ 2017ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಬಿಎಸ್-3 ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಗೊಳಿಸಿ ಬಿಎಸ್-4 ನಿಯಮವನ್ನು ಜಾರಿಗೆ ತಂದಿತ್ತು. ಇದೀಗ ಮತ್ತೊಂದು ಸುತ್ತಿನ ಮೂಲಕ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಬಿಎಸ್-6 ನಿಯಮ ಜಾರಿಯತ್ತ ಮಹತ್ವದ ಹೆಜ್ಜೆಯಿಡುತ್ತಿದೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

2020ರ ಏಪ್ರಿಲ್ 1ರಿಂದಲೇ ಬಿಎಸ್-6 ನಿಯಮವು ಜಾರಿಯಾಗುವುದು ಬಹುತೇಕ ಖಚಿತವಾಗಿದ್ದು, ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟ ಸಂಪೂರ್ಣ ನಿಷೇಧಗೊಳ್ಳಲಿದೆ. ಹೀಗಾಗಿ ಹೊಸ ನಿಯಮವು ವಾಹನ ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆಗಳಿಗೆ ಕಾರಣವಾಗಿದ್ದು, ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯುವಲ್ಲಿ ಹೊಸ ಬಿಎಸ್-6 ಎಂಜಿನ್‌ಗಳು ಸಾಕಷ್ಟು ಸಹಕಾರಿಯಾಗಿವೆ ಎನ್ನುವುದು ಆಟೋ ತಜ್ಞರ ವಿಶ್ಲೇಷಣೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ಇದರಿಂದಾಗಿ ಮಾರುತಿ ಸುಜುಕಿ ಸೇರಿದಂತೆ ದೇಶದ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಕಾರುಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಿ ಟೆಸ್ಟಿಂಗ್ ನಡೆಸುತ್ತಿದ್ದು, ಡೆಡ್‌ಲೈನ್‌ಗೂ ಮುನ್ನವೇ ಮಾರುತಿ ಸುಜುಕಿ ತನ್ನ ಬಹುಬೇಡಿಕೆಯ ಬಲೆನೊ ಹ್ಯಾಚ್‌ಬ್ಯಾಕ್ ಕಾರನ್ನು ಹೊಸ ನಿಯಮದಂತೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಿದೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ಮೊದಲ ಬಾರಿಗೆ 2015ರಲ್ಲಿ ಬಿಡುಗೊಂಡ ಬಲೆನೊ ಕಾರು ಇದುವರೆಗೆ ಭಾರತೀಯ ಮಾರುಕಟ್ಟೆಯಲ್ಲಿ 5.5 ಲಕ್ಷ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದ್ದು, ಇದೀಗ ಬಿಎಸ್-6 ಎಂಜಿನ್‌ನೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಕಾರು ಮಾದರಿಯಾಗಿ ರಸ್ತೆಗಿಳಿದೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ಬಿಎಸ್-6 ವೈಶಿಷ್ಟ್ಯತೆಯ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಹೊಂದಿರುವ ಹೊಸ ಬಲೆನೊ ಕಾರು ಈ ಹಿಂದಿನ ಆವೃತ್ತಿಗಿಂತಲೂ ಶೇ.25ರಷ್ಟು ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಜೊತೆಗೆ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನದಿಂದಾಗಿ ಕಾರಿನ ಎಂಜಿನ್ ದಕ್ಷತೆ ಮತ್ತು ಮೈಲೇಜ್ ಹೆಚ್ಚಳವಾಗಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಲಿದೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿ ಬಲೆನೊ ಕಾರುಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಡೆಲ್ಟಾ ಪೆಟ್ರೋಲ್ ಮತ್ತು ಜೆಟಾ ಪೆಟ್ರೋಲ್ ವೆರಿಯೆಂಟ್‌ಗಳಲ್ಲಿ ಮಾತ್ರವೇ ಹೊಸ ಬಿಎಸ್-6 ಪ್ರೇರಿತ ಡ್ಯುಯೆಲ್ ಜೆಟ್ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಜೋಡಣೆ ಮಾಡಿ ಬಿಡುಗಡೆಗೊಳಿಸಲಾಗಿದೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ಈ ಮೂಲಕ ಹೊಸ ಎಂಜಿನ್ ಪ್ರೇರಿತ ಡೆಲ್ಟಾ ಪೆಟ್ರೋಲ್ ಆವೃತ್ತಿಯು ಲೀಟರ್‍‌ಗೆ 21.4ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಜೆಟಾ ಪೆಟ್ರೋಲ್ ಆವೃತ್ತಿಯು ಪ್ರತಿ ಲೀಟರ್‌ಗೆ 23.87ಕಿ.ಮಿ ಮೈಲೇಜ್ ನೀಡಲಿದ್ದು, ಇವು ಸಾಮಾನ್ಯ ಆವೃತ್ತಿಗಳಿಂತ ರೂ. 89 ಸಾವಿರದಷ್ಟು ದುಬಾರಿಯಾಗಿರಲಿವೆ. ಹಾಗಾದ್ರೆ ಹೊಸ ಕಾರಿನ ಬಗೆಗೆ ಇನ್ನುಷ್ಟು ತಿಳಿದುಕೊಳ್ಳುವ ಕುತೂಹಲವಿದ್ದಲ್ಲಿ ನಿಮ್ಮ ಹತ್ತಿರದ ನೆಕ್ಸಾ ಶೋರೂಂಗಳನ್ನು ಭೇಟಿ ನೀಡಬಹುದಾಗಿದ್ದು, ಮಧ್ಯಮ ವರ್ಗದ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಇದೊಂದು ಅತ್ಯುತ್ತಮ ಆಯ್ಕೆಯಾಗಿದೆ.

ಅತಿ ಮೈಲೇಜ್ ನೀಡಬಲ್ಲ ಸ್ಮಾರ್ಟ್ ಹೈಬ್ರಿಡ್‌ ಎಂಜಿನ್‌ನೊಂದಿಗೆ ಮಾರುತಿ ಬಲೆನೊ ಬಿಡುಗಡೆ

ಇನ್ನು ಹೊಸ ಕಾರು ಪ್ರೀಮಿಯಂ ಸೌಲಭ್ಯಗಳ ಪ್ಯಾಕೇಜ್ ಹೊಂದಿದ್ದು, ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಸ್ಮಾರ್ಟ್ ಸ್ಟುಡಿಯೋ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೇ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ಡ್ಯುಯಲ್ ಏರ್‌ಬ್ಯಾಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್, ಹೈ ಸ್ಪೀಡ್ ವಾರ್ನಿಂಗ್ ನೋಟಿಫಿಕೇಷನ್ ಮತ್ತು ISOFIX ಚೈಲ್ಡ್ ಸೀಟ್ ಮೌಂಟ್ ಜೋಡಣೆ ಹೊಂದಿದೆ.

More from DriveSpark

Article Published On: Thursday, May 30, 2019, 18:36 [IST]
English summary
NEXA Baleno — A Game Changer With Its Smart Hybrid Technology.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+