ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಹೋಂಡಾ ಸಂಸ್ಥೆಯು ಭಾರತ ಸೇರಿದಂತೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ತನ್ನ ಜನಪ್ರಿಯ ಸಿಟಿ ಸೆಡಾನ್ ಕಾರಿನ 5ನೇ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆಯನ್ನು ಅರಿಯಲು ಮೊದಲ ಬಾರಿಗೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಸಿವಿಕ್ ನಂತರ ಸಿಟಿ ಸೆಡಾನ್ ಕಾರಿನ ಮೇಲೆ ಹೆಚ್ಚಿನ ಗಮನಹರಿಸಿರುವ ಹೋಂಡಾ ಸಂಸ್ಥೆಯು 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೊಸ ತಲೆಮಾರಿನ ಸಿಟಿ ಕಾರನ್ನು ಪ್ರದರ್ಶನ ಮಾಡಿದ ನಂತರವಷ್ಟೇ ಬಿಡುಗಡೆ ಮಾಡಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸಿಟಿ ಕಾರಿಗಿಂತ ಹೊಸ ಆವೃತ್ತಿಯು ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

2014ರಲ್ಲಿ 4ನೇ ತಲೆಮಾರಿನ ಸಿಟಿ ಸೆಡಾನ್ ಕಾರನ್ನು ಬಿಡುಗಡೆ ಮಾಡಿದ ಬಳಿಕ ಯಾವುದೇ ಬದಲಾವಣೆ ತರದ ಹೋಂಡಾ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕೆಲವು ತಾಂತ್ರಿಕ ಅಂಶಗಳಲ್ಲಿ ಮಾತ್ರವೇ ಬದಲಾವಣೆ ಮಾಡಿಕೊಂಡು ಬಂದಿದೆ.

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಇದೀಗ ಬಿಡುಗಡೆಗೆ ಸಿದ್ದವಾಗಿರುವ 5ನೇ ತಲೆಮಾರಿನ ಸಿಟಿ ಸೆಡಾನ್ ಕಾರು ಪ್ರಸ್ತುತ ಮಾದರಿಗಿಂತಲೂ ತುಸು ದೊಡ್ಡ ಗಾತ್ರವನ್ನು ಹೊಂದಿದ್ದು, ಬೂಟ್ ಸ್ಪೆಸ್ ಜೊತೆಗೆ ಹಿಂಬದಿಯ ಸವಾರರ ಲೆಗ್ ರೂಂ ಮತ್ತು ಹೆಡ್ ರೂಂ ವಿಸ್ತರಣೆಗೊಂಡಿದೆ.

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಸದ್ಯ ಥೈಲ್ಯಾಂಡ್‌ನಲ್ಲಿ ಹೊಸ ತಲೆಮಾರಿನ ಕಾರಿನ ಟೆಸ್ಟಿಂಗ್ ಪ್ರಕ್ರಿಯೆ ಚಾಲನೆ ನೀಡಿರುವ ಹೋಂಡಾ ಸಂಸ್ಥೆಯು ಬಿಎಸ್-6 ನಿಯಮಗಳಿಗೆ ಅನುಗುಣವಾಗಿ ಹೊಸ ಕಾರಿನ ಎಂಜಿನ್ ಅನ್ನು ಅಲ್ಲಿಯೇ ಅಭಿವೃದ್ಧಿಪಡಿಸಿದೆ. ಥೈಲ್ಯಾಂಡ್‌ನಲ್ಲಿರುವ ಹೋಂಡಾ ಉತ್ಪಾದನಾ ಘಟಕವು ಏಷ್ಯಾದ ಅತಿದೊಡ್ಡ ಕಾರು ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆ ಹೊಂದಿದ್ದು, ಇಲ್ಲಿಂದಲೇ ಹೊಸ ಸಿಟಿ ಸೆಡಾನ್ ಕಾರು ಅಂತಿಮ ರೂಪ ಪಡೆದುಕೊಂಡು ಭಾರತಕ್ಕೆ ಪ್ರವೇಶಿಸಲಿದೆ.

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಹೊಸ ಸಿಟಿ ಸೆಡಾನ್ ಕಾರಿನಲ್ಲಿ ಈ ಬಾರಿ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಮಾರುತಿ ಸುಜುಕಿ ಸಿಯಾಜ್ ಮತ್ತು ಹ್ಯುಂಡೈ ವೆರ್ನಾ ಕಾರಿಗೆ ಮಾತ್ರವಲ್ಲದೇ ಟೊಯೊಟಾ ಕರೊಲ್ಲಾ ಆಟ್ಲಿಸ್ ಕಾರಿಗೂ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಎಂಜಿನ್ ಸಾಮರ್ಥ್ಯ

ಹೊಸ ತಲೆಮಾರಿನ ಹೋಂಡಾ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಪೆಟ್ರೋಲ್ ಎಂಜಿನ್ ಜೊತೆಗೆ ಈ ಬಾರಿ ಮೈಲ್ಡ್ ಹೈಬ್ರಿಡ್ ಆಯ್ಕೆಯನ್ನು ಪಡೆದುಕೊಳ್ಳಲಿದ್ದು, ಇದು ಸೆಡಾನ್ ಕಾರು ಪ್ರಿಯರನ್ನು ಮತ್ತಷ್ಟು ಸೆಳೆಯಲಿದೆ.

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮಾದರಿಯು 1.5-ಲೀಟರ್ ಮತ್ತು ಡೀಸೆಲ್ ಮಾದರಿಯು 1.5-ಲೀಟರ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಹೊಸ ತಲೆಮಾರಿನಲ್ಲೂ 1.5-ಲೀಟರ್ ಎಂಜಿನ್ ಆಯ್ಕೆಯನ್ನೇ ಮುಂದುವರಿಸಿದ್ದರೂ ಸಹ ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಕಾರಿನ ಪರ್ಫಾಮೆನ್ಸ್ ಮತ್ತು ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಜೊತೆಗೆ 2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮ ಜಾರಿಗೆ ಹಿನ್ನೆಲೆಯಲ್ಲಿ ಹೊಸ ವಾಹನ ಎಂಜಿನ್‌ನಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತಿದ್ದು, ಶೇ.25 ರಷ್ಟು ಹೊಗೆ ಉಗುಳುವ ಪ್ರಮಾಣ ಕಡಿಮೆಯಾದಲ್ಲಿ, ಶೇ.10ರಿಂದ 15ರಷ್ಟು ಮೈಲೇಜ್ ಪ್ರಮಾಣ ಹೆಚ್ಚಳವಾಗಲಿದೆ.

MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್‌ಗೆ ಬಿತ್ತು ರೂ. 50 ಸಾವಿರ ದಂಡ..!

ಬಿಡುಗಡೆಗಾಗಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟಿಂಗ್ ನಡೆಸಿದ 2020ರ ಹೋಂಡಾ ಸಿಟಿ

ಹಾಗೆಯೇ ಹೊಸ ಎಂಜಿನ್ ಹೊತ್ತುಬರುತ್ತಿರುವ ಬಿಎಸ್-6 ವಾಹನ ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಬೆಲೆಗಳಿಗೆ ಅನುಗುಣವಾಗಿ ರೂ.80 ಸಾವಿರದಿಂದ ರೂ.2 ಲಕ್ಷದ ತನಕ ಈಗಿರುವ ಬೆಲೆಗಳಿಂತಲೂ ಹೆಚ್ಚು ಬೆಲೆ ಪಡೆದುಕೊಳ್ಳಲಿವೆ. ಇವುಗಳಲ್ಲಿ ಭಾರೀ ಬದಲಾವಣೆ ಪಡೆದುಕೊಳ್ಳುತ್ತಿರುವ ಹೋಂಡಾ ಸಿಟಿ ಸಹ ಈಗಿರುವ ವಿನ್ಯಾಸಕ್ಕಿಂತಲೂ ಹೆಚ್ಚಿನ ವೈಶಿಷ್ಟ್ಯತೆ ಹೊಂದಲಿದ್ದು, ಬೆಲೆಯೂ ಕೂಡಾ ತುಸು ದುಬಾರಿ ಎನ್ನಿಸಲಿದೆ.

Source: Drive Master

Most Read Articles

Kannada
Read more on ಹೋಂಡಾ honda
English summary
Upcoming 2020 Honda City Spotted For The First Time — India Launch Next.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X