ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಹೀಂದ್ರಾ ಸಂಸ್ಥೆಯು ಈ ವರ್ಷದಲ್ಲಿ ತಮ್ಮ ಹೊಸ ವಾಹಗನಗಳನ್ನು ಬಿಡುಗಡೆ ಮಾಡುವ ಯೋಜನೆಯಲಿದ್ದು, ಅವುಗಳಲ್ಲಿ ನೆಕ್ಸ್ಟ್ ಜನರೇಷನ್ ಥಾರ್ ಕೂಡಾ ಒಂದಾಗಿದೆ. ನೆಕ್ಸ್ಟ್ ಜನರೇಷನ್ ಥಾರ್ ಬಿಡುಗಡೆಗೂ ಮುನ್ನ ವಿವಿಧ ಬಗೆಯ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸದಾಗಿ ಸೋರಿಕೆಯಾದ ಚಿತ್ರಗಳನ್ನು ಗಮನಿಸಿದ್ದಲ್ಲಿ ಪ್ರಸ್ತುತ ಇರುವ ಥಾರ್‍‍ಗಿಂತಲೂ ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ಎನ್ನಲಾಗಿದೆ.

ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ಉದ್ದಳತೆಯಲ್ಲಿ ಪ್ರಸ್ತುತ ಇರುವ ಮಹೀಂದ್ರಾ ಥಾರ್‍‍ಗಿಂತಲೂ ಮುಂದಿನ ತಲೆಮಾರಿನ ಥಾರ್ ಕಾರುಗಳು ಸುಮಾರು 200ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿರಲಿದೆ ಎಂಬ ವರದಿಗಳು ಸಿಕ್ಕಿದ್ದು, ಇವುಗಳ ಜೊತೆಗೆ ಇನ್ನೇನು ಜಾರಿಗೊಳ್ಳುವ ಹೊಸ ಸುರಕ್ಷಾ ಕಾಯೆಯನ್ನು ಅನುಸರಿಸಲು ಬೇಕಾದ ಎಲ್ಲಾ ಸೇಫ್ಟಿ ಫೀಚರ್‍‍ಗಳನ್ನು ಹೊತ್ತು ಬಿಡುಗಡೆಯಾಗಲಿದೆ.

ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ಹೊಸ ತಲೆಮಾರಿನ ಥಾರ್ ಕಾರಿನಲ್ಲಿ ಮಹೀಂದ್ರಾ ಸಂಸ್ಥೆಯು ಇತ್ತೀಚೆಗೆ ಬಿಡುಗಡೆಗೊಳಿಸಿದ ಮರಾಜೊ ಕಾರು ನಿರ್ಮಾಣಕ್ಕಾಗಿ ಬಳಸಲಾದ ಲ್ಯಾಡರ್ ಫ್ರೇಮ್ ಅನ್ನು ಈ ಕಾರಿನಲ್ಲಿಯೂ ಬಳಸಲಾಗಿದ್ದು, ಹೆಚ್ಚಿನದಾಗಿ ಆಧುನಿಕ ಲುಕ್ ಮತ್ತು ಮರುವಿನ್ಯಾಸಗೊಳಿಸಲಾದ ವಿನ್ಯಾಸವನ್ನು ಪಡೆದುಕೊಂಡಿರುವುದು ಟೆಸ್ಟಿಂಗ್ ವೇಳೆ ಬಹಿರಂಗವಾಗಿದೆ.

ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ಎಂಜಿನ್ ಸಾಮರ್ಥ್ಯ

ಹೊಸ ತಲೆಮಾರಿನ ಮಹೀಂದ್ರಾ ಥಾರ್ ಕಾರು ಹೊಸ ಡೀಸೆಲ್ ಎಂಜಿನ್ ಅನ್ನು ಪಡೆಯಲಿದ್ದು, ಪ್ರಸ್ತುತ ಇರುವ 2.5 ಲೀಟರ್ ಡೀಸೆಲ್ ಎಂಜಿನ್ ಅನ್ನು 2020ರ ಏಪ್ರಿಲ್1 ರಿಂದ ಜಾರಿಯಾಗಲಿರುವ ಹೊಸ ಎಮಿಷನ್ ಬಿಎಸ್-6 ನಿಬಂಧನೆಗಳಿಗೆ ಅನುಗುಣವಾಗಿ ಜೋಡಣೆ ಮಾಡಲಾಗಿದೆ.

ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ಹಾಗೆಯೇ ಈ ಬಾರಿ ಥಾರ್ ಕಾರಿನಲ್ಲಿ ಮ್ಯಾನುವಲ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸಹ ನೀಡಲಾಗುತ್ತಿದ್ದು, ಇದರಲ್ಲಿ ಡಿಐ ವೆರಿಯೆಂಟ್ ಮಾರಾಟವನ್ನು ಬಂದ್ ಮಾಡಿರುವ ಮಹೀಂದ್ರಾ ಸಂಸ್ಥೆಯು ಹೊಸದಾಗಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಸಹ ಅಭಿವೃದ್ಧಿ ಪಡಿಸುತ್ತಿರುವ ಬಗ್ಗೆ ವದಂತಿಗಳಿವೆ. ಆದ್ರೆ ಈ ಬಗ್ಗೆ ಮಹೀಂದ್ರಾ ಸಂಸ್ಥೆಯೇ ಅಧಿಕೃತ ಮಾಹಿತಿ ಹಂಚಿಕೊಳ್ಳದ ಹೊರತ ಹೊಸ ಎಂಜಿನ್ ಕುರಿತು ಯಾವುದೇ ಉಹಾಪೋಹಗಳನ್ನು ನಂಬಲು ಸಾಧ್ಯವಿಲ್ಲ.

ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ನೆಕ್ಟ್ಟ್ ಜನರೇಷನ್ ಥಾರ್ ಕಾರಿನಲ್ಲಿ ಈ ಬಾರಿ ಡ್ಯುಯಲ್ ಏರ್‍‍ಬ್ಯಾಗ್‍, ಬ್ರೇಕ್ ಅಸಿಸ್ಟ್, ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್), ಎಲೆಕ್ಟ್ರಾನಿಕ್ ಬ್ರೇಕ್ ಫೋರ್ಸ್ ಡಿಸ್ಟ್ರಿಬ್ಯೂಷನ್ (ಎಬಿಡಿ)ಯನ್ನು ಸ್ಟ್ಯಾಂಡರ್ಡ್ ಆಗಿ ನೀಡಿರಲಿದೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್

ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ಇದರ ಜೊತೆಗೆ ರಿವರ್ಸ್ ಪಾರ್ಕಿಂಗ್ ಸೆನ್ಸಾರ್ಸ್, ಐಎಸ್ಒಫಿಕ್ಸ್ ಚೈಲ್ಡ್ ಸೀಟ್ ಮೌಂಟ್ಸ್, ಕ್ರಂಪಲ್ ಜೋನ್ ಮತ್ತು ಸೀಟ್ ಬೆಲ್ಟ್ ರಿಮೈಂಡರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್ಲೈ, ಟ್ರೈ ಪಾಡ್ ಯೂನಿಟ್, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಎಸಿ ಕಂಟ್ರೋಲ್, ಅತ್ಯುತ್ತಮ ದರ್ಜೆಯ ಸೀಟುಗಳು ಮತ್ತು ಎಂಬ ಸೇಫ್ಟಿ ಫೀಚರ್‍‍ಗಳನ್ನು ವಿಶೇಷವಾಗಿದ್ದು, ಸುಗಮ ಸವಾರಿಗೆ ನಾಲ್ಕು ಚಕ್ರಗಳಲ್ಲೂ ಡಿಸ್ಕ್ ಬ್ರೇಕ್ ಪಡೆದುಕೊಳ್ಳಲಿವೆ.

MOST READ: ದಂಡ ವಿಧಿಸಿದ ಪೊಲೀಸರಿಗೆ ಸರಿಯಾಗಿ ಚಮಕ್ ಕೊಟ್ಟ ಎಲೆಕ್ಟ್ರಿಷಿಯನ್

ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ಪ್ರಸ್ತುತ ತಲೆಮಾರಿನ ಥಾರ್ ಕಾರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 9.29 ಲಕ್ಷದ ಮಾರಾಟವನ್ನು ಪಡೆದುಕೊಂಡಿದ್ದು, ಹೊಸ ಫೀಚರ್ಸ್ ಪಡೆಯಲಿರುವ ಹೊಸ ಥಾರ್ ಕಾರುಗಳು ಕನಿಷ್ಠ ಅಂದ್ರು ರೂ. 1.50 ಲಕ್ಷದಿಂದ ರೂ.2.50 ಲಕ್ಷ ಹೆಚ್ಚುವರಿ ಬೆಲೆ ಪಡೆಯಲಿವೆ.

MOST READ: ರೈಲ್ವೆ ಹಳಿಯ ಮೇಲೆ ವೈರಲ್ ವಿಡಿಯೋ ಮಾಡಲು ಹೋಗಿ ಪೊಲೀಸರ ಅತಿಥಿಯಾದ ವಿದ್ಯಾರ್ಥಿ

ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹೊತ್ತು ಬರಲಿದೆ ನೆಕ್ಸ್ಟ್ ಜನರೇಷನ್ ಮಹೀಂದ್ರಾ ಥಾರ್

ಇನ್ನು ಹೊಸ ತಲೆಮಾರಿನ ಥಾರ್ ಕಾರು ಬಿಡುಗಡೆಗೊಂಡಲ್ಲಿ ಮಾರುಕಟ್ಟೆಯಲ್ಲಿರುವ ಫೋರ್ಸ್ ಗೂರ್ಖಾ ಮತ್ತು ಮಾರುತಿ ಸುಜುಕಿ ಸಂಸ್ಥೆಯು ಪರಿಚಯಿಸಲಿರುವ ಹೊಸ ಜಿಮ್ನಿ ಕಾರುಗಳಿಗೆ ಪೈಪೋಟಿ ನೀಡಲಿದ್ದು, ಆಫ್ ರೋಡ್ ಪ್ರಿಯರಿಗೆ ಹೊಸ ಥಾರ್ ಮತ್ತಷ್ಟು ಹೊಸ ಅನುಭವ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Source: Anything On Wheels

Most Read Articles

Kannada
English summary
Next Generation Mahindra Thar Gets High Ground Clearance Than Current Gen Thar. Read In Kannada
Story first published: Friday, August 16, 2019, 11:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X