ಡಿ.1ರಿಂದ ಕಡ್ಡಾಯವಾಗಲಿರುವ ಫಾಸ್ಟ್‌ಟ್ಯಾಗ್ ಈಗಲೇ ಉಚಿತವಾಗಿ ಪಡೆಯಿರಿ..!
ಮುಂದಿನ ತಿಂಗಳು ಡಿಸೆಂಬರ್ 1ರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶುಲ್ಕ ಪಾವತಿಗೆ ತಡೆರಹಿತ ಸೌಲಭ್ಯ ಒದಗಿಸುವ ಸಂಬಂಧ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸುತ್ತಿದ್ದು, ಸೀಮಿತ ಅವಧಿಯೊಳಗೆ ಯಾವುದೇ ಹೆಚ್ಚುವರಿ ಮೊತ್ತವಿಲ್ಲದೇ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಉಚಿತವಾಗಿ ನೀಡಲು ಮುಂದಾಗಿದೆ.

ಡಿಸೆಂಬರ್ 1ರಿಂದ ಫಾಸ್ಟ್‌ಟ್ಯಾಗ್ ಇಲ್ಲದ ವಾಹನ ಸವಾರರು ದುಪ್ಪಟ್ಟು ಶುಲ್ಕ ಪಾವತಿ ಮಾಡಬೇಕಿದ್ದು, ಈ ಸಂಬಂಧ ದೇಶದ ಬಹುತೇಕ ಟೋಲ್ ಗೇಟ್‌ಗಳನ್ನು ಉನ್ನತೀಕರಿಸಲಾಗಿದೆ. ಇದರಿಂದ ಗಂಟೆಗಟ್ಟಲೇ ಕ್ಯೂ ನಿಂತು ಟೋಲ್ ಶುಲ್ಕ ಕಟ್ಟುವ ತಾಪತ್ರಯ ಇನ್ಮುಂದೆ ಕಡಿಮೆಯಾಗಲಿದ್ದು, ವಾಹನಗಳ ಮಾಲೀಕರಿಗೆ ಫಾಸ್ಟ್‌ಟ್ಯಾಗ್ ಖರೀದಿಗೂ ಸಹ ಸರಳವಾಗುವಂತೆ ಹಲವು ಸೌಲಭ್ಯಗಳನ್ನು ತೆರೆಯಲಾಗಿದೆ.

ಫಾಸ್ಟ್‌ಟ್ಯಾಗ್ ಸೌಲಭ್ಯದಿಂದಾಗಿ ವಾಹನ ಮಾಲೀಕರಿಗೆ ಸಾಕಷ್ಟು ಅನುಕೂಲತೆಗಳಿದ್ದು, ಫಾಸ್ಟ್‌ಟ್ಯಾಗ್ ಖರೀದಿಸಲೂ ಗ್ರಾಹಕರಿಗೆ ಸುಲಭವಾಗುವಂತೆ ಅಮೆಜಾನ್ ಡಾಟ್ ಕಾಮ್‌ನಲ್ಲೂ ಸಹ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.

ಇಷ್ಟು ದಿನ ಫಾಸ್ಟ್‌ಟ್ಯಾಗ್ ಸೌಲಭ್ಯ ಪಡೆದುಕೊಳ್ಳಲು ಬಯಸುವ ವಾಹನ ಮಾಲೀಕರು ಟೋಲ್ ಬೂತ್‌ಗಳ ಬಳಿ ಇರುವ ಫಾಸ್ಟ್‌ಟ್ಯಾಗ್ ಕೇಂದ್ರಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳನ್ನು ನೀಡಬೇಕಾಗಿತ್ತು. ಇದರಿಂದ ವಾಹನ ಮಾಲೀಕರಿಗೆ ಕಿರಿಕಿರಿ ಉಂಟಾಗುತ್ತಿತ್ತು.

ಆದರೆ ಫಾಸ್ಟ್‌ಟ್ಯಾಗ್ ಖರೀದಿ ಸುಲಭವಾಗಿಸಲು ಆನ್‌ಲೈನ್ ಮೂಲಕವೇ ಮಾರಾಟಕ್ಕೆ ಚಾಲನೆ ನೀಡಲಾಗಿದ್ದು, ಅಮೆಜಾನ್‌ನಲ್ಲಿ ಆಸಕ್ತ ವಾಹನ ಮಾಲೀಕರು ಅಗತ್ಯ ದಾಖಲೆಗಳನ್ನು ಪೂರೈಸುವ ಮೂಲಕ ಸುಲಭವಾಗಿ ಫಾಸ್ಟ್‌ಟ್ಯಾಗ್ ಸೌಲಭ್ಯವನ್ನು ಅಳವಡಿಸಿಕೊಳ್ಳಬಹುದಾಗಿದೆ.

ಎಲ್ಲೆಲ್ಲಿ ಫಾಸ್ಟ್‌ಟ್ಯಾಗ್ ಖರೀದಿಗೆ ಲಭ್ಯ?
ಟೋಲ್ ಪ್ಲಾಜ್‌ಗಳಲ್ಲೇ ಫಾಸ್ಟ್‌ಟ್ಯಾಗ್ ಖರೀದಿ ಮಾಡಬಹುದಾಗಿದ್ದು, ಇಲ್ಲವೇ ಫಾಸ್ಟ್‌ಟ್ಯಾಗ್ ಮಾರಾಟ ಮಾಡುವ ಖಾಸಗಿ ಏಜೆನ್ಸಿಗಳಿಂದಲೂ ಖರೀದಿ ಮಾಡಬಹುದು. ಜೊತೆಗೆ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ಗಳಲ್ಲೂ ಫಾಸ್ಟ್‌ಟ್ಯಾಗ್ ವಿತರಣೆಗೆ ಅವಕಾಶ ಕಲ್ಪಿಸಲಾಗಿದ್ದು, ಅಮೆಜಾನ್ ಡಾಟ್ ಕಾಮ್ ಮೂಲಕ ಫಾಸ್ಟ್‌ಟ್ಯಾಗ್ ಪಡೆಯಬಹುದಾಗಿದೆ.

ಫಾಸ್ಟ್‌ಟ್ಯಾಗ್‌ನಿಂದ ಏನು ಪ್ರಯೋಜನ?
ಹೆದ್ದಾರಿಯಲ್ಲಿ ಪ್ರಯಾಣಿಸುವಾಗ ಫಾಸ್ಟ್‌ಟ್ಯಾಗ್ ಹೊಂದಿದ್ದರೆ ಹಲವು ಪ್ರಯೋಜನಗಳಿದ್ದು, ಸುಲಭವಾಗಿ ಟೋಲ್ ಶುಲ್ಕ ಪಾವತಿ ಮಾಡಬಹುದಲ್ಲದೇ ಆನ್‌ಲೈನ್ ರೀಚಾರ್ಜಿಂಗ್, ಎಸ್ಎಂಎಸ್ ಅಲರ್ಟ್ ಸೌಲಭ್ಯವಿರುತ್ತದೆ.

ಇದರಿಂದ ನಿಮ್ಮ ಫಾಸ್ಟ್‌ಟ್ಯಾಗ್‌ನಲ್ಲಿರುವ ಮೊತ್ತ ಮತ್ತು ನೀವು ಹೊರಟಿರುವ ಸ್ಥಳಗಳಲ್ಲಿನ ಟೋಲ್ ಸಂಗ್ರಹ ಕೇಂದ್ರಗಳ ಮಾಹಿತಿ ಜೊತೆ ಶುಲ್ಕುಗಳ ಮಾಹಿತಿ ಸಂದೇಶಗಳನ್ನು ಪಡೆಯಬಹುದಾಗಿದ್ದು, ವಿಶೇಷ ಸಂದರ್ಭಗಳಲ್ಲಿ ನೀವು ಕ್ಯಾಶ್ ಬ್ಯಾಕ್ ಆಫರ್‌ಗಳನ್ನು ಸಹ ಪಡೆಯುವ ಅವಕಾಶವಿರುತ್ತೆ.

ಫಾಸ್ಟ್‌ಟ್ಯಾಗ್ ರೀಚಾರ್ಜ್ ಹೇಗೆ?
ಕ್ರೇಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಕಿಂಗ್ ಇಲ್ಲವೇ ಚೆಕ್ ಪಾವತಿಸಿಯೂ ರೀಚಾರ್ಜ್ ಮಾಡಿಕೊಳ್ಳಬಹುದಾಗಿದ್ದು, ಕನಿಷ್ಠ ರೂ.100 ರಿಂದ ಗರಿಷ್ಠ 1 ಲಕ್ಷ ತನಕ ರೀಚಾರ್ಜ್ ಮಿತಿ ಹೊಂದಿರುತ್ತೆ.

ಫ್ಯಾಸ್ಟ್ ಟ್ಯಾಗ್ ಹೇಗೆ ಕಾರ್ಯನಿರ್ವಹಿಸುತ್ತೆ?
ಆರ್‌ಎಫ್ಐಡಿ ಎನ್ನುವ ತಂತ್ರಜ್ಞಾನ ಸಹಾಯದೊಂದಿಗೆ ಕಾರ್ಯನಿರ್ವಹಿಸುವ ಫಾಸ್ಟ್‌ಟ್ಯಾಗ್ ಸೌಲಭ್ಯವು ಕಾರಿನ ವಿಂಡ್‌ಶೀಲ್ಡ್ ಬಳಿ ಅಳವಡಿಸಲಾಗಿರುತ್ತದೆ.
MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಇದು ಟೋಲ್ ಪ್ಲಾಜಾನಲ್ಲಿರುವ ಫಾಸ್ಟ್ ಟ್ಯಾಗ್ ಲೈನ್ ಮೂಲಕ ಹಾಯ್ದುಹೋಗುವಾಗ ಆಟೋಮ್ಯಾಟಿಕ್ ಆಗಿ ನಿಮ್ಮ ಫಾಸ್ಟ್‌ಟ್ಯಾಗ್ ಖಾತೆ ಮೂಲಕ ಶುಲ್ಕ ಸಂದಾಯವಾಗುತ್ತೆ.

ಇದಕ್ಕಾಗಿಯೇ ಫಾಸ್ಟ್‌ಟ್ಯಾಗ್ ಆಪ್ ಕೂಡಾ ಲಭ್ಯವಿದ್ದು, ಈ ಮೂಲಕವು ನೀವು ಮತ್ತಷ್ಟು ಮಾಹಿತಿ ಪಡೆಯಬಹದು. ಫಾಸ್ಟ್ ಟ್ಯಾಗ್ ನೋಂದಣಿ ಮಾಡುವಾಗ ಆ್ಯಪ್‌ಗೆ ಸಂಬಂಧಿಸಿದಂತೆ ನಿಮಗೆ ಕೆಲವು ಪಾಸ್‌ವರ್ಡ್ ನೀಡಲಾಗುತ್ತೆ.
MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!

ಆ್ಯಪ್ ಬಳಸುವಾಗ ನೀವು ನಿಮ್ಮ ಪರ್ಸನಲ್ ಪಾಸ್‌ವರ್ಡ್ ಬಳಕೆ ಮಾಡಬೇಕಾಗುತ್ತೆ. ಯಾಕೆಂದ್ರೆ ಇದರಲ್ಲಿ ವ್ಯಯಕ್ತಿಕ ಮಾಹಿತಿ ನೀಡಬೇಕಾಗುತ್ತೆ.

ಶುಲ್ಕ ಸಂದಾಯವಾದ ಕೆಲವೇ ಸೇಕೆಂಡುಗಳಲ್ಲಿ ಶುಲ್ಕ ಪಾವತಿಯಾದ ಸಂದೇಶವು ನಿಮ್ಮ ನೋಂದಣಿಯಾದ ಮೊಬೈಲ್ ಸಂಖ್ಯೆಗೆ ಬರಲಿದ್ದು, ಟ್ರೋಲ್ ಪ್ಲಾಜಾ ಮಾಹಿತಿ ಮತ್ತು ಕಡಿತವಾದ ಶುಲ್ಕದ ಮೊತ್ತ ಮತ್ತು ಉಳಿದ ಕರೆನ್ಸಿ ಮಾಹಿತಿಯೂ ನಿಮಗೆ ಲಭ್ಯವಾಗಲಿದೆ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಒಂದು ಫಾಸ್ಟ್ ಟ್ಯಾಗ್ ಅನ್ನು ಮತ್ತೊಂದು ವಾಹನಕ್ಕೆ ಬಳಕೆ ಮಾಡಲು ಯಾವುದೇ ಅವಕಾಶವಿಲ್ಲ.

ಹೀಗಾಗಿ ಫಾಸ್ಟ್‌ಟ್ಯಾಗ್ ಬೇಡ ಎನ್ನಿಸಿದಲ್ಲಿ ವಾಹನ ಮಾಲೀಕರು ಕಸ್ಟಮರ್ ಕೇರ್ ಮೂಲಕ ಕಾರ್ಡ್ ಸೌಲಭ್ಯವನ್ನು ಸ್ಥಗಿತಗೊಳಿಸಬಹುದಾದ ಸೌಲಭ್ಯವು ಇದರಲ್ಲಿದೆ.


Click it and Unblock the Notifications








