ಜೂಮ್‍ಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಮಾರುಕಟ್ಟೆಯಲ್ಲಿ ಈಗಿರುವ ವಾಹನಗಳ ಬೆಲೆಯಲ್ಲಿ ಖರೀದಿ ಮಾದುವ ಬದಲಿಗೆ ಹಲವಾರು ಪ್ರಯಾಣಿಕರು ಪಬ್ಲಿಕ್ ಟ್ರಾನ್ಸ್ಪೋರ್ಟ್ ಅನ್ನು ಬಳಸುತ್ತಿದ್ದಾರೆ. ಆದರೆ ಕೆಲವರು ಮಾತ್ರ ಸ್ವಂತ ವಾಹನ ಖರೀದಿ ಬೇಡವೆಂದು ದ್ವಿಚಕ್ರ ಮತ್ತು ಕಾರುಗಳನ್ನು ಲೀಸ್‍ಗೆ ಮತ್ತು ಬಾಡಿಗೆಗೆ ಖರೀದಿ ಮಾಡುತ್ತಿದ್ದಾರೆ.

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ವಾಹನಗಳನ್ನು ಲೀಸ್ ಮತ್ತು ಬೋಗ್ಯಕ್ಕೆ ನೀಡಲುವ ಸಂಸ್ಥೆಯಾದ ಜೂಮ್‍‍ಕಾರ್ ಇದೀಗ ನಿಸ್ಸಾನ್ ಕಿಕ್ಸ್ ಕಾರನ್ನು ಸಹ ಲೀಸ್‍‍ಗೆ ನೀಡಲಾಗುತ್ತಿದ್ದು, ಆಸಕ್ತ ಗ್ರಾಹಕರು ಜೂಂಕಾರ್ ಅನ್ನು ಭೇಟಿಯಾಗಬಹುದಾಗಿದೆ. ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರನು ಲೀಸ್‍‍ಗಾಗಿ ಪಡೆಯಲು ಬಯಸುವ ಗ್ರಾಹಕರು ಮೊದಲಿಗೆ ಕಡ್ಡಾಯವಾಗಿ ನಿಸ್ಸಾನ್ ಕಿಕ್ಸ್ ಕಾರಿನ ಆರು ತಿಂಗಳ ಸಬ್‍ಸ್ಕ್ರಿಪ್ಷನ್ ಅನ್ನು ಪಡೆಯಬೇಕಿದ್ದು, ಅವರಿಗೆ ಸಂಸ್ಥೆಯು ಆಕರ್ಷಕವಾದ ಸಬ್‍‍‍ಸ್ಕ್ರಿಪ್ಷನ್ ಪ್ಯಾಕೇಜ್ ಅನ್ನು ನೀಡಲಾಗುವುದು.

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು ಈಗಾಗಲೇ ಎಕ್ಸ್ಎಲ್, ಎಕ್ಸ್‌ವಿ, ಮತ್ತು ಎಕ್ಸ್‌ವಿ ಪ್ರೀ ಎಂಬ ಡೀಸೆಲ್ ವೇರಿಯೆಂಟ್‍‍ಗಳಲ್ಲಿ ಖರೀದಿಗೆ ಲಭ್ಯವಿದ್ದ ಕಿಕ್ಸ್ ಕಾರು ಇದೀಗ ಲೋವರ್ ಮತ್ತು ಎಂಟ್ರಿ ಲೆವೆಲ್ 'ಎಕ್ಸ್ಇ' ವೇರಿಯೆಂಟ್‍ನಲ್ಲಿ ಕೂಡಾ ಖರೀದಿಗೆ ಲಭ್ಯವಿದೆ. ಬಿಡುಗಡೆಗೊಂಡ ಎಕ್ಸ್ಇ ಡೀಸೆಲ್ ವೇರಿಯೆಂಟ್ ಕಾರು ಎಕ್ಸ್ ಶೋರುಂ ಪ್ರಕಾರ ರೂ. 9.89 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ಇದೀಗ ಕಿಕ್ಸ್ ಎಸ್‍ಯುವಿ ಕಾರು ನಾಲ್ಕು ಡೀಸೆಲ್ ಮತು ನಾಲ್ಕು ಪೆಟ್ರೋಲ್ ವೇರಿಯೆಂಟ್‍‍ಗಳಲ್ಲಿ ದೊರೆಯುತ್ತದೆ.

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಎಂಜಿನ್ ಸಾಮರ್ಥ್ಯ

ಹೊಸ ಕಿಕ್ಸ್ ಮಾದರಿಯು 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಹಾಗೂ 1.5-ಲೀಟರ್ ಕೆ9ಕೆ ಡಿಸೇಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು ಡಿಸೇಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೋಡಿಸಲಾಗಿದೆ. ಈ ಪೆಟ್ರೋಲ್ ಮಾದರಿಯು 104-ಬಿಎಚ್‌ಪಿ, 142-ಎನ್ಎಂ ಟಾರ್ಕ್ ಉತ್ಪಾದಿಸಿದ್ದಲ್ಲಿ ಡೀಸೆಲ್ ಮಾದರಿಯು 108-ಬಿಎಚ್‌ಪಿ, 240-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಉತ್ತಮ ಇಂಧನ ದಕ್ಷತೆಯನ್ನು ಹೊಂದಿವೆ.

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಮೈಲೇಜ್

ಕಾಂಪ್ಯಾಕ್ಟ್ ಎಸ್‍ಯುವಿ ಕಾರುಗಳಲ್ಲಿ ವಿಶೇಷವೆನ್ನಿಸುವ ಹಾಗೆ ಈ ಕಾರು ಹಲವಾರು ವೈಶಿಷ್ಟ್ಯತೆಗಳನ್ನು ಮತ್ತು ಸೆಗ್ಮೆಂಟ್ ಫರ್ಸ್ಟ್ ಫೀಚರ್ಸ್ ಅನ್ನು ಪಡೆದುಕೊಂಡಿದ್ದು, ಈ ಕಾರಿನ ಪೆಟ್ರೋಲ್ ಮಾದರಿಗಳು ಒಂದು ಲೀಟರ್‍‍ಗೆ 14.23 ಕಿ.ಮೀ ಮೈಲೇಜ್ ನೀಡಿದ್ದಲ್ಲಿ, ಡೀಸೆಲ್ ಎಂಜಿನ್ ಕಾರುಗಳು ಪ್ರತೀ ಲೀಟರ್‍‍ಗೆ 20.45 ಕಿ.ಮೀ ಮೈಲೇಜ್ ನೀಡಬಲ್ಲದು.

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಲಬ್ಯವಿರುವ ಬಣ್ಣಗಳು

ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು ಪರ್ಲ್ ವೈಟ್, ಬ್ಲೇಡ್ ಸಿಲ್ವರ್, ಬ್ರಾಂಝ್ ಗ್ರೇ, ಫೈರ್ ರೆಡ್, ಆಂಬರ್ ಆರೆಂಝ್, ಡೀಪ್ ಬ್ಲೂ ಪರ್ಲ್, ನೈಟ್ ಶೇಡ್, ಫೈರ್ ರೆಡ್ ಮತ್ತು ಆನಿಕ್ಸ್ ಬ್ಲಾಕ್, ಬ್ರಾಂಝ್ ಗ್ರೇ ಮತ್ತು ಆಂಬರ್ ಆರೆಂಜ್, ಪರ್ಲ್ ವೈಟ್ ಮತ್ತು ಆನಿಕ್ಸ್ ಬ್ಲಾಕ್, ಹಾಗು ಪರ್ಲ್ ಬೈಟ್ ಮತ್ತು ಆಂಬರ್ ಆರೆಂಜ್ ಎಂಬ 11 ವಿವಿಧ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಕಿಕ್ಸ್ ಕಾರಿನ ಡಿಸೈನ್

GRAPHENE ಡಿಸೈನ್ ತಂತ್ರಜ್ಞಾನದೊಂದಿಗೆ ಸಿದ್ದವಾಗಿರುವ ಹೊರ ವಿನ್ಯಾಸಗಳು ಕಿಕ್ಸ್‌ಗೆ ಪ್ರೀಮಿಯಂ ವೈಶಿಷ್ಟ್ಯತೆಯು ಮೆರಗು ತಂದಿದ್ದು, ವಿ ಮೊಷನ್ ಗ್ರಿಲ್, ಎಲ್‌ಇಡಿ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಕೆಳಭಾಗದಲ್ಲಿ ಅಳವಡಿಸಲಾಗಿರುವ ಫಾಗ್ ಲ್ಯಾಂಪ್, ಸಿಲ್ವರ್ ಸ್ಕೀಡ್ ಪ್ಲೇಟ್ ಮತ್ತು ಬಲಿಷ್ಠವಾಗಿರುವ ಫ್ರಂಟ್ ಪ್ರೋಫೈಲ್ ನೀಡಲಾಗಿದೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಕಿಕ್ಸ್ ಕಾರುಗಳಿಗೆ ಮತ್ತಷ್ಟು ಮೆರಗು ತರುವ ಉದ್ದೇಶದಿಂದ ಕಾರಿನ ಎಡ್ಜ್‌ಗಳಲ್ಲಿ ಶಾರ್ಪ್ ಡಿಸೈನ್ ಬಳಕೆ ಮಾಡಲಾಗಿದ್ದು, ರೂಫ್ ರೈಲ್ಸ್ ಹಾಗೂ ಕಾರಿನ ಎರಡು ಬದಿಗಳಲ್ಲೂ ನೀಡಲಾಗಿರುವ ಕ್ರೋಮ್ ಸೌಲಭ್ಯವು ಕಾರಿನ ಸೈಡ್ ಪ್ರೋಫೈಲ್‌ಗೆ ಲುಕ್ ನೀಡಿದೆ. ಇನ್ನು ಕಾರಿನಲ್ಲಿ 17-ಇಂಚಿನ 5 ಸ್ಪೋಕ್ ಅಲಾಯ್ ಚಕ್ರಗಳ ಜೋಡಣೆ, 210 ಎಂಎಂ ನಷ್ಟು ಗ್ರೌಂಡ್ ಕ್ಲಿಯೆರೆನ್ಸ್, ಬೂಮೆರ್ಗ್ ಟೈಲ್ ಲ್ಯಾಂಪ್ಸ್, ಗಮನ ಸೆಳೆಯುವ ರಿಯರ್ ಬಂಪರ್ ಸೇರಿದಂತೆ ಹಲವು ಸುಧಾರಿತ ಸೌಲಭ್ಯಗಳು ಕಿಕ್ಸ್ ಕಾರಿನಲ್ಲಿವೆ.

MOST READ: ದಂಡ ವಿಧಿಸಿದ ಪೊಲೀಸರಿಗೆ ಸರಿಯಾಗಿ ಚಮಕ್ ಕೊಟ್ಟ ಎಲೆಕ್ಟ್ರಿಷಿಯನ್

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಕಾರಿನ ಒಳವಿನ್ಯಾಸ

ಗ್ಲೈಡಿಂಗ್ ವಿಂಗ್ ಡ್ಯಾಶ್‌ಬೋರ್ಡ್ ಹೊಂದಿರುವ ಕಿಕ್ಸ್ ಕಾರಿನಲ್ಲಿ ಒಳಾಂಗಣ ವಿಸ್ತಿರ್ಣವು ಚಿಕ್ಕದು ಎನಿಸಿದರೂ ಆಧುನಿಕ ಕಾರುಗಳಲ್ಲಿ ಇರಬೇಕಾದ ಬಹುತೇಕ ಸೌಲಭ್ಯವು ಇದರಲ್ಲಿವೆ. ಬ್ಲ್ಯಾಕ್ ಪ್ಲಾಸ್ಟಿಕ್ ಪ್ಯಾನೆಲ್, ಬ್ರೌನ್ ಲೆದರ್‌ನಿಂದ ಸಿದ್ದವಾದ ಡ್ಯಾಶ್‌ಬೋರ್ಡ್, ಲೆದರ್ ಹೊದಿಕೆಯುಳ್ಳ ಸ್ಟೀರಿಂಗ್ ವೀಲ್ಹ್ ಹೊಂದಿರುವುದು ಕಾರು ಚಾಲನೆಯಲ್ಲಿ ಐಷಾರಾಮಿ ಅನುಭವ ನೀಡುತ್ತೆ.

MOST READ: ರೈಲ್ವೆ ಹಳಿಯ ಮೇಲೆ ವೈರಲ್ ವಿಡಿಯೋ ಮಾಡಲು ಹೋಗಿ ಪೊಲೀಸರ ಅತಿಥಿಯಾದ ವಿದ್ಯಾರ್ಥಿ

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ವಿನೂತನ ಕಾರಿನಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋ‌ಟೈನ್‌ಮೆಂಟ್ ಹಾಗೂ ಕಾರಿನ ಸುತ್ತ ನೋಡಬಹುದಾದ 360 ಡಿಗ್ರಿ ವಿವ್ಯೂ ಮಾನಿಟರ್ ವ್ಯವಸ್ಥೆಯಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರಾಟವಾಗುತ್ತಿರುವ ಇತರೆ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಈ ಕಾರು ವಿಶೇಷ ಎನ್ನಿಸಲಿದೆ. ಇದಲ್ಲದೇ ನಿಸ್ಸಾನ್ ಮುಂಬರುವ ಮತ್ತೊಂದು ಕಾರು ಮಾದರಿಯಾದ ಅಲ್ಟಿಮಾ ಸೆಡಾನ್ ಕಾರಿನಿಂದಲೂ ಕೆಲವು ಫೀಚರ್ಸ್‌ಗಳನ್ನು ಕಿಕ್ಸ್ ಕಾರಿನಲ್ಲಿ ಎರವಲು ಪಡೆದುಕೊಳ್ಳಲಾಗಿದ್ದು, ಆ್ಯಪಲ್ ಕಾರ್ ಪ್ಲೇ, ಅಂಡ್ರಾಯಿಡ್ ಆಟೋ, ಧ್ವನಿ ಗ್ರಹಿಸಿ ಕಾರ್ಯನಿರ್ವಹಿಸುವ "Hey Siri" ಮತ್ತು "Okay Google" ಆ್ಯಪ್ ಸೌಲಭ್ಯವಿದೆ.

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಜೊತೆಗೆ ನಿಸ್ಸಾನ್ ಕನೆಕ್ಟ್ ಆ್ಯಪ್ ಸೌಲಭ್ಯವು ಸಹ ವಿವಿಧ ಕಾರ್ಯಗಳಿಗೆ ಬಳಕೆಯಾಗಲಿದ್ದು, ಚಾಲಕನಿಗೆ ಸರ್ವಿಸ್ ಬುಕ್ಕಿಂಗ್ ರಿಮೆಂಡರ್, ಕಾರಿನ ಆರೋಗ್ಯ(ಎಂಜಿನ್, ಬ್ಯಾಟರಿ, ಬ್ರೇಕಿಂಗ್) ಮತ್ತು ಡೋರ್ ಲಾಕ್/ಅನ್ ಲಾಕ್‌ಗೆ ಸಂಬಂಧಿಸಿದಂತೆ ಸಮಸ್ಯೆಗಳ ಕುರಿತಾಗಿ ಸಮಯಕ್ಕೆ ಸರಿಯಾಗಿ ಎಚ್ಚರಿಕೆ ನೀಡುತ್ತೆ. ಇನ್ನುಳಿದಂತೆ ಆರಾಮದಾಯಕ ಪ್ರಯಾಣಕ್ಕೆ ಸಹಕಾರಿಯಾಗುವ ಅಂಡ್ರಾಯಿಡ್ ಆಟೋ ಪ್ಲೇ, ಆ್ಯಪಲ್ ಕಾರ್ ಪ್ಲೇ, ಯುಎಸ್‌ಬಿ ಪೋರ್ಟ್, ಚಾಲಕ ಮತ್ತು ಮುಂಭಾಗದ ಪ್ರಯಾಣಿಕರಿಗೆ ಆರ್ಮ್ ರೆಸ್ಟ್, ಹಿಂಬದಿಯಲ್ಲಿ ಎಸಿ ವೆಂಟ್ಸ್, ಸ್ಪೀಡ್ ಸೆನ್ಸಾರ್ ಡೋರ್ ಲಾಕ್/ಅನ್‌ಲಾಕ್ ಸೌಲಭ್ಯ, ರಿಯರ್ ಪಾರ್ಕಿಂಗ್ ವ್ಯವಸ್ಥೆಯಿರಲಿದೆ.

ಜೂಂಕಾರ್‍‍ನಲ್ಲಿ ಲೀಸ್‍ಗೆ ಪಡೆಯಿರಿ ನಿಸ್ಸಾನ್ ಕಿಕ್ಸ್ ಎಸ್‍ಯುವಿ ಕಾರು

ಸುರಕ್ಷಾ ಸೌಲಭ್ಯಗಳು

ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ವೆಹಿಕಲ್ ಡೈನಾಮಿಕ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಸ್ಟಾರ್ಟ್ ಅಸಿಸ್ಟ್, ಮೂರು ಏರ್‌ಬ್ಯಾಗ್, ಎಬಿಎಸ್, ಇಕೋ ಮೂಡ್ ಮತ್ತು ಕ್ರೂಸ್ ಕಂಟ್ರೋಲ್ ಸೌಲಭ್ಯವಿದೆ.

More from DriveSpark

Article Published On: Wednesday, August 14, 2019, 14:30 [IST]
English summary
Nissan Kicks ZoomCar Banglaore Partnership Leasing Subscription Packages Details. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+