Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹಸಿರು ಬಣ್ಣದ ನಂಬರ್‍ಪ್ಲೇಟ್‍ನೊಂದಿಗೆ ಕಾಣಿಸಿಕೊಂಡ ನಿಸ್ಸಾನ್ ಲೀಫ್ ಇವಿ ಕಾರು
ನಿಸ್ಸಾನ್ ಸಂಸ್ಥೆಯ ಲೀಫ್ ಎಲೆಕ್ಟ್ರಿಕ್ ಕಾರು ಜಾಗತಿಕ ಮಾರುಕಟ್ಟೆಯಲ್ಲಿ 2010ರಿಂದಲೂ ಮಾರಟಗೊಳ್ಳುತ್ತಿದೆ. ಎರಡನೆಯ ತಲೆಮಾರಿನ ನಿಸ್ಸಾನ್ ಲೀಫ್ ಇವಿ ಕಾರು 2017ರಲ್ಲಿ ನಿರ್ಮಾಣಗೊಂಡಿದ್ದು, ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ದಿ ಬೆಸ್ಟ್ ಎಲೆಕ್ಟ್ರಿಕ್ ಕಾರಾಗಿ ಪರಿವರ್ತನೆಯಾಗಿದೆ. ಇನ್ನು ದೇಶಿಯ ಮಾರುಕಟ್ಟೆಗೆ ಕೂಡಾ ಕಾಲಿಡಲಿರುವ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರು ಸಧ್ಯ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಕಳೆದ ಬಾರಿ ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ದೆಹಲಿಯಲ್ಲಿ ಕಾಣಿಸಿಕೊಂಡಿದ್ದು, ಇದೀಗ ಕೇರಳದ ತಿರುವನಂತಪುರಂ ನಲ್ಲಿ ಹಸಿರು ಬಣ್ಣದ ನಂಬರ್ ಪ್ಲೆಟ್‍ನೊಂದಿಗೆ ಕಾಣಿಸಿಕೊಂಡಿದೆ. ಕೇರಳದಲ್ಲಿ ಕಾಣಿಸಿಕೊಂಡ ನಿಸ್ಸಾನ್ ಲೀಫ್ ಇವಿ ಕಾರು ಅಲ್ಲಿನ ಸ್ಥಳೀಯ ಆರ್‍ಟಿಒ ಇಂದ ನೋಂದಾಯಿಸಲಾಗಿದ್ದು, ಬಿಎಸ್-4 ಆಧಾರಿತ ವಾಹನದ ರೂಪದಲ್ಲಿ ಕಾಣಿಸಿಕೊಂಡಿದೆ. ನಿಸ್ಸಾನ್ ಲೀಫ್ ಇವಿ ಕಾರು 50ಕ್ಕೂ ಹೆಚ್ಚಿನ ಜಾಗತಿಕ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ.

ಈ ತಿಂಗಳ ಅಂತ್ಯದಲ್ಲಿ ಲ್ಯಾಟಿನ್ ಅಮೇರಿಕಾದಲ್ಲಿರುವ 7 ಮಾರುಕಟ್ಟೆಗಳು ಮತ್ತು ಡಿಸೆಂಬರ್ 2019ರ ಅಂತ್ಯದಲ್ಲಿ ಏಷ್ಯಾ ಹಾಗು ಓಷಿಯಾನಿಯಾದ 7 ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಲಭ್ಯವಿರಲಿದೆ.
ಸೇಕೆಂಡ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಲೀಫ್ ಕಾರ್‌ನ್ನು ಅಭಿವೃದ್ಧಿ ಮಾಡಿರುವ ನಿಸ್ಸಾನ್ ಸಂಸ್ಥೆಯು, ಇದುವರೆಗೆ ಯಾವುದೇ ಆಟೋ ಉತ್ಪಾದನಾ ಸಂಸ್ಥೆಗಳು ಬಳಸದ ಸುಧಾರಿತ ಮಾದರಿಯ ಎಲೆಕ್ಟ್ಕಿಕ್ ಎಂಜಿನ್ ಅಳವಡಿಸಿರುವುದು ಈ ಕಾರಿನ ಪ್ರಮುಖ ಆಕರ್ಷಣೆ.

ಇದೇ ಕಾರಣಕ್ಕೆ ಒಂದು ಬಾರಿ ಚಾರ್ಜ್ ಮಾಡಿದಲ್ಲಿ ಬರೋಬ್ಬರಿ 400 ಕಿ.ಮೀ ಮೈಲೇಜ್ ನೀಡಲಿದೆ ಎಂದು ಹೇಳಿಕೊಂಡಿರುವ ನಿಸ್ಸಾನ್ ಸಂಸ್ಥೆಯು, 380 ಕಿಮಿ ಮೈಲೇಜ್ ರೇಂಜ್ ಹೊಂದಿರುವ ಟೆಸ್ಲಾ ಮಾಡೆಲ್ 3 ಕಾರಿಗಿಂತಲೂ ಅತ್ಯತ್ತಮ ಎಲೆಕ್ಟ್ರಿಕ್ ಕಾರು ಮಾದರಿ ಇದಾಗಿದೆ ಎಂದಿದೆ. ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರುಗಳಲ್ಲಿ 40kWh ಬ್ಯಾಟರಿ ಬಳಕೆ ಮಾಡಲಾಗಿದ್ದು, ಪೂರ್ಣ ಪ್ರಮಾಣದ ಬ್ಯಾಟರಿ ಚಾರ್ಜ್ ಮಾಡಲು 8 ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳುತ್ತೆ.

ಹಾಗೆಯೇ ಮತ್ತೊಂದು ವಿಶೇಷ ಅಂದ್ರೆ ಕೇವಲ 40 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜ್ ಆಗುವ ಇದರ ಗುಣಲಕ್ಷಣವಾಗಿದೆ.ಇದಲ್ಲದೇ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಕಾರುಗಳ ಕುರಿತು ಪ್ರಚಾರಕ್ಕಾಗಿ ಎರಡು ಲೀಫ್ ಎಲೆಕ್ಟ್ರಿಕ್ ಕಾರುಗಳನ್ನು ಸಹ ಭಾರತದಲ್ಲಿ ಆಮದು ಮಾಡಿಕೊಳ್ಳಲಾಗಿದ್ದು, ಆಸಕ್ತ ಗ್ರಾಹಕರು ಟೆಸ್ಟ್ ಡ್ರೈವ್ ಮೂಲಕ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ಅನುಭವ ಪಡೆದುಕೊಳ್ಳಬಹುದಾಗಿದೆ.

ಇದಕ್ಕಾಗಿಯೇ ಚೆನ್ನೈ ಬಳಿ 650 ಎಕರೆ ವಿಸ್ತಿರಣದ ಟ್ರ್ಯಾಕ್ ನಿರ್ಮಾಣ ಮಾಡಿರುವ ನಿಸ್ಸಾನ್ ಸಂಸ್ಥೆಯು ಅಲ್ಲಿ ತನ್ನ ಹೊಸ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ಧಿ ಮತ್ತು ಟೆಸ್ಟ್ ಡ್ರೈವ್ ಕಾರ್ಯವನ್ನು ನಡೆಸಲಿದೆ ಎಂಬ ಮಹತ್ವದ ಮಾಹಿತಿ ಕೂಡಾ ಲಭ್ಯವಾಗಿದೆ.

ಕಾರು ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು) ವರದಿ ಪ್ರಕಾರ ಹೊಚ್ಚ ಹೊಸ ಲೀಫ್ ಕಾರು ಮಾದರಿಯನ್ನು 2019ರ ಕೊನೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದ್ದು, ಐಷಾರಾಮಿ ಗುಣಲಕ್ಷಣಗಳನ್ನು ಹೊಂದಿರುವ ಹೊಸ ಕಾರಿನ ಬೆಲೆಯು ರೂ.30 ಲಕ್ಷದಿಂದ ರೂ.35 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ. ಆದ್ರೆ ಭಾರತದಲ್ಲೇ ಹೊಸ ಕಾರುಗಳು ನಿರ್ಮಾಣವಾದಲ್ಲಿ ಕಾರಿನ ಬೆಲೆಗಳು ಗಣನೀಯವಾಗಿ ತಗ್ಗಬಹುದು.

ಇನ್ನು ಲೀಫ್ ಕಾರುಗಳಲ್ಲಿ ಒದಗಿಸಲಾಗಿರುವ ವಿಶ್ವದರ್ಜೆ ಸೌಲಭ್ಯಗಳು ಕಾರಿನ ಪ್ರಯಾಣವನ್ನು ಮತ್ತಷ್ಟು ಸುಖಕರವಾಗಿಸಿದ್ದು, ಕಾರಿನ ಹೊರ ಮತ್ತು ಒಳ ವಿನ್ಯಾಸಗಳು ಸಾಕಷ್ಟು ಆಕರ್ಷಣೆಯಿಂದ ಕೂಡಿರುವುದಲ್ಲದೇ ಸ್ಪೋರ್ಟಿ ಲುಕ್ ಸಹ ಪಡೆದುಕೊಂಡಿವೆ.

ಒಟ್ಟಿನಲ್ಲಿ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಪ್ರಿಯವಾಗುತ್ತಿರುವ ಲೀಫ್ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲೂ ಬಿಡುಗಡೆಯಾಗುವುದು ಖಚಿತವಾಗಿದ್ದು, ಲೀಫ್ ಬಿಡುಗಡೆಯ ನಂತರ ಹಲವು ಮಾದರಿಯ ಐಷಾರಾಮಿ ಕಾರುಗಳು ಉತ್ಪಾದನೆಯಿಂದ ಹಿಂದೆ ಸರಿಯಬಹುದಾದ ಸಾಧ್ಯತೆಗಳು ಕೂಡಾ ಇವೆ.
Source: Rushlane