ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ನಿಸ್ಸಾನ್ ಸಂಸ್ಥೆಯು 2019ರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅಧಿಕೃತ ಕಾರ್ ಬ್ರಾಂಡ್ ಅಥಿತ್ಯವನ್ನು ವಹಿಸಿದ್ದು, ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಹಿನ್ನೆಲೆಯಲ್ಲಿ ನಮ್ಮ ಬೆಂಗಳೂರಿನ ವಲ್ಡ್ ಟ್ರೆಡ್ ಸೆಂಟರ್‌ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ವೇಳೆ ತನ್ನ ಭವಿಷ್ಯ ಕಾರು ಮಾದರಿಗಳ ಬಗೆಗೆ ಮಾಹಿತಿ ಹಂಚಿಕೊಂಡ ನಿಸ್ಸಾನ್ ಸಂಸ್ಥೆಯು ಭಾರತದ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರನ್ನು ಇದೇ ವೇಳೆ ಪ್ರದರ್ಶನಗೊಳಿಸಿತು.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ನಿಸ್ಸಾನ್ ಇಂಡಿಯಾ ಸಂಸ್ಥೆಯು ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಹೊಸ ಮಾದರಿಯ ಕಾರುಗಳನ್ನು ಪರಿಚಯಿಸುವ ಇರಾದೆಯಲ್ಲಿದೆ. ಇದರಲ್ಲಿ ಕಿಕ್ಸ್ ಎಸ್‌ಯುವಿ ಬಿಡುಗಡೆ ನಂತರ ಭಾರತದಲ್ಲಿ ನಿಸ್ಸಾನ್ ಬ್ರಾಂಡ್ ಯಶಸ್ವಿ ಮುನ್ನಡೆ ಸಾಧಿಸುತ್ತಿದ್ದು, ಭವಿಷ್ಯ ಕಾರು ಮಾದರಿಗಳ ಬಗ್ಗೆ ಹೆಚ್ಚು ಉತ್ಸುಕವಾಗಿದೆ. ಇದರಲ್ಲಿ ಲೀಫ್ ಕಾರು ಹೆಚ್ಚು ಗಮನಸೆಳೆದಿದ್ದು, ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಈ ಕಾರು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರದರ್ಶನಗೊಂಡಿದೆ.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಸ್ಟ್ ಎಲೆಕ್ಟ್ರಿಕ್ ಕಾರುಗಳ ಮಾರಾಟ ಸಂಸ್ಥೆಯೆಂದೇ ಜನಪ್ರಿಯವಾಗುತ್ತಿರುವ ನಿಸ್ಸಾನ್ ಸಂಸ್ಥೆಯು ಸದ್ಯ ಭಾರತದಲ್ಲೂ ತನ್ನ ಯಶಸ್ವಿ ಲೀಫ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದ್ದು, ಹತ್ತು ಹಲವು ಹೊಸ ಸೌಲಭ್ಯವನ್ನು ಪಡೆದಿರುವ ಈ ಕಾರು ಈಗಾಗಲೇ ವಿಶ್ವಾದ್ಯಂತ ಲಕ್ಷಾಂತರ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ನಿಸ್ಸಾಸ್ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಹೊಂದಿರುವ ಲೀಫ್ ಎಲೆಕ್ಟ್ರಿಕ್ ಹ್ಯಾ‌ಚ್‌ಬ್ಯಾಕ್ ಕಾರು ಆವೃತ್ತಿಯನ್ನು ಭಾರತದಲ್ಲೂ ಶೀಘ್ರದಲ್ಲೇ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಈ ಕಾರು ದೇಶಿಯ ಮಾರುಕಟ್ಟೆಗೆ ಲಗ್ಗೆಯಿಟ್ಟಲ್ಲಿ ಹಲವು ಐಷಾರಾಮಿ ಕಾರುಗಳನ್ನು ಹಿಂದಿಕ್ಕಿ ಹೊಸ ದಾಖಲೆ ಸೃಷ್ಠಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಶೈಲಿಯನ್ನು ಹೊಂದಿರುವ ನಿಸ್ಸಾನ್ ಲೀಫ್ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ನಮೂನೆಯ ಹೊರ ವಿನ್ಯಾಸಗಳನ್ನು ಪಡೆದುಕೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಬಳಕೆಯು ಈ ಕಾರಿನ ಪ್ರಮುಖ ಆಕರ್ಷಣೆಯಾಗಿದೆ. ಸೇಕೆಂಡ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಲೀಫ್ ಕಾರ್‌ನ್ನು ಅಭಿವೃದ್ಧಿ ಮಾಡಿರುವ ನಿಸ್ಸಾನ್ ಸಂಸ್ಥೆಯು ಇದುವರೆಗೆ ಯಾವುದೇ ಆಟೋ ಉತ್ಪಾದನಾ ಸಂಸ್ಥೆಗಳು ಬಳಸದ ಸುಧಾರಿತ ಮಾದರಿಯ ಎಲೆಕ್ಟ್ರಿಕ್ ಮೋಟಾರ್ ಅನ್ನು ಇದರಲ್ಲಿ ಅಳವಡಿಸಿದೆ.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ಇದೇ ಕಾರಣಕ್ಕೆ ಒಂದು ಬಾರಿ ಚಾರ್ಜ್ ಮಾಡಿದಲ್ಲಿ ಬರೋಬ್ಬರಿ 400 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಮಾದರಿಯನ್ನು ಲೀಫ್‌ನಲ್ಲಿ ಅಳವಡಿಸಲಾಗಿದ್ದು, ಫಾಸ್ಟ್ ಚಾರ್ಜಿಂಗ್ ಸಿಸ್ಟಂ ಹೊಂದಿರುವ ಈ ಕಾರು 380 ಕಿಮಿ ಮೈಲೇಜ್ ರೇಂಜ್ ಹೊಂದಿರುವ ಟೆಸ್ಲಾ ಮಾಡೆಲ್ 3 ಕಾರಿಗಿಂತಲೂ ಅತ್ಯತ್ತಮ ಎಲೆಕ್ಟ್ರಿಕ್ ಕಾರು ಮಾದರಿ ಇದಾಗಿದೆ ಎಂದಿದೆ.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರುಗಳಲ್ಲಿ 40kWh ಬ್ಯಾಟರಿ ಬಳಕೆ ಮಾಡಲಾಗಿದ್ದು, ಪೂರ್ಣ ಪ್ರಮಾಣದ ಬ್ಯಾಟರಿ ಚಾರ್ಜ್ ಮಾಡಲು 8 ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳುತ್ತೆ. ಮತ್ತೊಂದು ವಿಶೇಷ ಅಂದ್ರೆ ಕೇವಲ 40 ನಿಮಿಷಗಳಲ್ಲಿ ಶೇ.80ರಷ್ಟು ಚಾರ್ಜ್ ಆಗಲಿದ್ದು, 148-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ಇದಲ್ಲದೇ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಕಾರುಗಳ ಕುರಿತು ಪ್ರಚಾರಕ್ಕಾಗಿ ಎರಡು ಲೀಫ್ ಎಲೆಕ್ಟ್ರಿಕ್ ಕಾರುಗಳನ್ನು ಸಹ ಭಾರತದಲ್ಲಿ ಆಮದು ಮಾಡಿಕೊಳ್ಳಲಾಗಿದ್ದು, ಆಸಕ್ತ ಗ್ರಾಹಕರು ಟೆಸ್ಟ್ ಡ್ರೈವ್ ಮೂಲಕ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ಅನುಭವ ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿಯೇ ಚೆನ್ನೈ ಬಳಿ 650 ಎಕರೆ ವಿಸ್ತಿರಣದ ಟ್ರ್ಯಾಕ್ ನಿರ್ಮಾಣ ಮಾಡಿರುವ ನಿಸ್ಸಾನ್ ಸಂಸ್ಥೆಯು ಅಲ್ಲಿ ತನ್ನ ಹೊಸ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ಧಿ ಮತ್ತು ಟೆಸ್ಟ್ ಡ್ರೈವ್ ಕಾರ್ಯವನ್ನು ನಡೆಸುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ಕಾರು ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ವರದಿಗಳ ಪ್ರಕಾರ ಹೊಚ್ಚ ಹೊಸ ಲೀಫ್ ಕಾರು ಮಾದರಿಯನ್ನು ಇದೇ ವರ್ಷದ ಅಂತ್ಯದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಐಷಾರಾಮಿ ಗುಣಲಕ್ಷಣಗಳನ್ನು ಹೊಂದಿರುವ ಹೊಸ ಕಾರಿನ ಬೆಲೆಯು ರೂ.25 ಲಕ್ಷದಿಂದ ರೂ.30 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ. ಆದ್ರೆ ಭಾರತದಲ್ಲೇ ಹೊಸ ಕಾರುಗಳು ನಿರ್ಮಾಣವಾದಲ್ಲಿ ಕಾರಿನ ಬೆಲೆಗಳು ಗಣನೀಯವಾಗಿ ತಗ್ಗಬಹುದು ಎನ್ನಲಾಗಿದೆ.

ನಮ್ಮ ಬೆಂಗಳೂರಿನಲ್ಲಿ ಪ್ರದರ್ಶನಗೊಂಡ ನಿಸ್ಸಾನ್ ಬಹುನೀರಿಕ್ಷಿತ ಲೀಫ್ ಎಲೆಕ್ಟ್ರಿಕ್ ಕಾರು..!

ಒಟ್ಟಿನಲ್ಲಿ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಪ್ರಿಯವಾಗುತ್ತಿರುವ ಲೀಫ್ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲೂ ಬಿಡುಗಡೆಯಾಗುವುದು ಖಚಿತವಾಗಿದ್ದು, ಹ್ಯುಂಡೈ ಸಂಸ್ಥೆಯು ಇಂದು ಬಿಡುಗಡೆ ಮಾಡಿರುವ ಕೋನಾ ಎಲೆಕ್ಟ್ರಿಕ್ ಕಾರಿಗೆ ಲೀಫ್ ಕಾರು ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

Article Published On: Tuesday, July 9, 2019, 18:56 [IST]
English summary
Nissan Leaf EV Showcased In Bangalore — Powers The ICC World Cup 2019 Semi-Finals Live Streaming.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+