ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಎಂಜಿ ಮೋಟಾರ್ ಇಂಡಿಯಾ (ಮೋರಿಸ್ ಗ್ಯಾರೇಜೆಸ್) ಸಂಸ್ಥೆಯು ತಮ್ಮ ಬಹು ನಿರೀಕ್ಷಿತ ಎಂಜಿ ಹೆಕ್ಟರ್ ಎಸ್‍ಯುವಿ ಕಾರನ್ನು ಜೂನ್ ಮಾಸದಲ್ಲಿ ಬಿಡುಗಡೆಗೊಳಿಸಲಿದ್ದು, ಈ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯ ಅಧಿಕೃತ ದಿನಾಂಕವನ್ನು ಇಂದು ಬಹಿರಂಗಗೊಳಿಸಿದೆ. ಈ ಕುರಿತಾದ ಮಾಹಿತನ್ನು ತಿಳಿಯಲು ಮುಂದಕ್ಕೆ ಓದಿರಿ.

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ದೇಶಿಯ ಮಾರುಕಟ್ಟೆಯಲ್ಲಿ ಎಂಜಿ ಮೋಟಾರ್‍ ಬಿಡುಗಡೆಗೊಳಿಸಲಿರುವ ಹೆಕ್ಟರ್ ಎಸ್‍ಯುವಿ ಕಾರು ಖರೀದಿಗಾಗಿ ಈಗಾಗಲೇ ದೇಶದಲ್ಲಿರುವ ಕೆಲ ಡೀಲರ್‍‍ಗಳು ಬುಕ್ಕಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ. ಆದರೆ ಸಂಸ್ಥೆಯು ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ ಜೂನ್ 4, 2019ರಿಂದ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯು ಪ್ರಾರಂಭಿಸಲಾಗುತ್ತದೆ ಎಂದು ಹೇಳಲಾಗಿದೆ. ಹಾಗೆಯೆ ಅದೇ ದಿನದಂದು ದೇಶದಲ್ಲಿರುವ 120 ಸೆಂಟರ್‍‍ಗಳಲ್ಲಿ ಖರೀದಿಗಾಗಿ ಬುಕ್ಕಿಂಗ್ ಆನ್ನು ಪ್ರಾರಂಭಿಸಲಾಗುತ್ತದೆ.

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಹೊಸ ಎಂಜಿ ಹೆಕ್ಟರ್ ಕಾರು ಖರೀದಿ ಮಾಡಲು ಬಯಸುವ ಗ್ರಾಹಕರು ಜೂನ್ 4 ಮಧ್ಯಾಹ್ನ 12 ಗಂಟೆಗೆ ಎಂಜಿ ಮೋಟಾರ್ ಸಂಸ್ಥೆಯ ಅಧಿಕೃತ ವೆಬ್‍ಸೈಟ್‍ ಆದ mgmotor.co.in ಗೆ ಭೇಟಿ ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದ್ದು, ಇಲ್ಲವಾದಲ್ಲಿ ನಿಮ್ಮ ಸಮೀಪದಲ್ಲಿರುವ ಡೀಲರ್‍‍ನ ಬಳಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದಾಗಿದೆ.

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳ ಪ್ರೇರಿತ ಕಾರು ಮಾದರಿಯಾಗಿರುವ ಎಂಜಿ ಹೆಕ್ಟರ್ ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯಗೊಂಡಿರುವ ಟಾಟಾ ಹ್ಯಾರಿಯರ್, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ತೀವ್ರ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರಿನಲ್ಲಿ ಒದಗಿಸಲಾಗಿರುವ ಅತ್ಯಾಧುನಿಕ ತಾಂತ್ರಿಕ ಸೌಲಭ್ಯಗಳು ಎಸ್‌ಯುವಿ ಪ್ರಿಯರ ಪ್ರಮುಖ ಆಕರ್ಷಣೆಯಾಗಿರಲಿವೆ.

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಎಂಜಿನ್ ಸಾಮರ್ಥ್ಯ

ಹೆಕ್ಟರ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ ಪೆಟ್ರೋಲ್ ಮತ್ತು ಡೀಸೆಲ್ ವರ್ಷನ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಇದರಲ್ಲಿ ಪೆಟ್ರೋಲ್ ಆವೃತ್ತಿಯು 1.5 ಲೀಟರ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 141-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು.

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಹಾಗೆಯೇ ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಪಡೆದುಕೊಂಡಿರಲಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಜೊತೆಗೆ ಹೆಕ್ಟರ್ ಕಾರಿನ ಪೆಟ್ರೋಲ್ ಹೈಎಂಡ್ ಆವೃತ್ತಿಯು 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಹೊಂದಿರಲಿದ್ದು, ಉತ್ತಮ ಪರ್ಫಾಮೆನ್ಸ್ ನೀಡಬಲ್ಲದು.

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಕಾರಿನ ಮೈಲೇಜ್

ಪೆಟ್ರೋಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 14.16 ಕಿ.ಮಿ, ಪೆಟ್ರೋಲ್ ವರ್ಷನ್(ಆಟೋಮ್ಯಾಟಿಕ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 13.96 ಕಿ.ಮಿ ಮತ್ತು ಡಿಸೇಲ್ ವರ್ಷನ್(ಮ್ಯಾನುವಲ್ ಗೇರ್‌ಬಾಕ್ಸ್)- ಪ್ರತಿ ಲೀಟರ್‌ಗೆ 17.41 ಕಿ.ಮಿ ಮೈಲೇಜ್ ನೀಡಬಲ್ಲದು.

MOST READ: ಸ್ಮಾರ್ಟ್ ಹೈಬ್ರಿಡ್ ಟೆಕ್ನಾಲಜಿಯೊಂದಿಗೆ ಮಾರಾಟದಲ್ಲಿ ಮಿಂಚುತ್ತಿದೆ ಮಾರುತಿ ಬಲೆನೊ

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಕಾರಿನ ಉದ್ದಳತೆ

ಮಾರುಕಟ್ಟೆಯಲ್ಲಿರುವ ಇತರೆ ಸಬ್ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲೇ ವಿಭಿನ್ನ ಗಾತ್ರ ಹೊಂದಿರುವ ಹೆಕ್ಟರ್ ಕಾರು 4,655ಎಂಎಂ ಉದ್ದ, 1,835ಎಂಎಂ ಅಗಲ, 1,760ಎಂಎಂ ಎತ್ತರ, 2,750ಎಂಎಂ ವೀಲ್ಹ್‌ಬೆಸ್ ಮತ್ತು 192ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ.

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಇದರೊಂದಿಗೆ ಹೊಸ ಕಾರಿನಲ್ಲಿ ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ರಿಮೋಟ್ ಕಾರ್ ಆಪರೇಷನ್, ಸ್ಮಾರ್ಟ್ ಸಿಮ್ ಪ್ರೇರಿತ ಇಂಟರ್‌ನೆಟ್ ಸೌಲಭ್ಯ, 10.4-ಇಂಚಿನ ಟಚ್ ಇನ್ಪೋಟೈನ್ ಸಿಸ್ಟಂ, 8-ಸ್ಪೀಕರ್ಸ್‌ಗಳು, ಆನ್ ಲೈನ್ ನೆವಿಗೇಷನ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, 7-ಇಂಚಿನ ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ, ಪವರ್ ಅಡ್ಜೆಸ್ಟೆಬಲ್ ರಿಯರ್ ವ್ಯೂ ಮಿರರ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಪಡೆದುಕೊಂಡಿದೆ.

MOST READ: ರಾಜ್ಯದೆಲ್ಲೆಡೆ ಎಂಬತ್ತೊಂಬತ್ತು ಸಾವಿರಕ್ಕು ಹೆಚ್ಚಿನ ಡ್ರೈವಿಂಗ್ ಲೈಸೆನ್ಸ್ ರದ್ದು

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಜೊತೆಗೆ ಹೊಸ ಕಾರಿನಲ್ಲಿ ರೂಫ್ ರೈಲ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್, 360 ಡಿಗ್ರಿ ವ್ಯೂವ್ ಕ್ಯಾಮೆರಾ, ಎರಡು ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್, ರಿಯರ್ ಎಸಿ ವೆಂಟ್ಸ್, ಸನ್ ಗ್ಲಾಸ್ ಹೊಲ್ಡರ್, ಡ್ರೈವರ್ ಆರ್ಮ್ ರೆಸ್ಟ್, ಪನಾರೊಮಿಕ್ ಸನ್‌ರೂಫ್, 17-ಇಂಚಿನ ಅಲಾಯ್ ವೀಲ್ಹ್, ರಿಯರ್ ಸೀಟ್ ಆರ್ಮ್ ರೆಸ್ಟ್, ಆರು ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೌಲಭ್ಯದೊಂದಿಗೆ ಲೆದರ್ ಸೀಟ್‌ಗಳನ್ನು ಜೋಡಿಸಲಾಗಿದೆ.

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಇನ್ನು ಪ್ರಯಾಣಿಕರ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆಗೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಕ್ರೂಸ್ ಕಂಟ್ರೊಲರ್ ISOFIX ಚೈಲ್ಡ್ ಸೀಟ್, ಎಲೆಕ್ಟ್ರಿಕ್ ಹ್ಯಾಂಡಲ್ ಬ್ರೇಕ್ ಸೇರಿದಂತೆ ಹಲವು ಹೊಸ ಫೀಚರ್ಸ್ ಈ ಕಾರಿನಲ್ಲಿವೆಯೆಂತೆ.

MOST READ: ಮುಂಬೈನಲ್ಲಿ ಶುರುವಾದ ಬಜಾಜ್ ಕ್ಯೂಟ್ ಸಂಚಾರ - ಇದು ದೇಶದ ಮೊದಲ 4 ವ್ಹೀಲರ್ ಆಟೋ ರಿಕ್ಷಾ

ಜೂನ್ 4ರಿಂದ ಎಂಜಿ ಹೆಕ್ಟರ್ ಕಾರಿನ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಶುರು

ಕಾರಿನ ಬೆಲೆಗಳು(ಅಂದಾಜು)

ಎಂಜಿ ಮೋಟಾರ್ ಹೆಕ್ಟರ್ ಕಾರುಗಳು ಸಿ ಸೆಗ್ಮೆಂಟ್ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 19 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Official Bookings For MG Hector To Start From June 4th. Read In Kannada

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more