2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಡೆಯುವ ಉದ್ದೇಶದಿಂದ ವಿಶ್ವಾದ್ಯಂತ ಬಹುತೇಕ ರಾಷ್ಟ್ರಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳ ಬಳಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕೇಂದ್ರ ಸರ್ಕಾರವು ಸಹ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಡಲು ಸಜ್ಜಾಗುತ್ತಿದೆ.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಹೌದು, ಈಗಾಗಲೇ ವಿಶ್ವದ ಪ್ರಮುಖ ರಾಷ್ಟ್ರಗಳು ಮಾಲಿನ್ಯ ತಗ್ಗಿಸಲು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ವಾಹನಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುತ್ತಿದ್ದು, ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವತ್ತ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರುತ್ತಿದೆ.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

2030ರ ವೇಳೆಗೆ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ಸ್ಧಗಿತಗೊಳಿಸುವ ಸಂಬಂಧ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟದ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಹಾಗೆಯೇ 2022ರ ವೇಳೆಗೆ ಶೇ.25ರಷ್ಟು ಎಲೆಕ್ಟ್ರಿಕ್ ವಾಹನಗಳ ಮಾರಾಟ ಗುರಿಹೊಂದಿರುವ ಕೇಂದ್ರ ಸರ್ಕಾರವು 2025ರ ವೇಳೆಗೆ 150ಸಿಸಿಗಿಂತ ಕಡಿಮೆ ಸಾಮಾರ್ಥ್ಯವುಳ್ಳ ಬೈಕ್ ಮಾದರಿಗಳ ಮಾರಾಟವನ್ನು ನಿಷೇಧಿಸಲು ತೀರ್ಮಾನಿಸಿದೆ.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ನಂತರ ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆಯನ್ನು ನಿಷೇಧಿಸಲಿದ್ದು, ಶೇ.100 ರಷ್ಟು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಿದೆ. ಈ ಸಂಬಂಧ ನವದೆಹಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸುವ ಸಂಬಂಧ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಮುಂಬರುವ ದಿನಗಳಲ್ಲಿ ಹೊಸ ನಿಯಮಗಳು ಜಾರಿಗೆ ಬರಲಿವೆ.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಹಾಗೆಯೇ ದೇಶದ ಆರ್ಥಿಕ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡುವ ರಾಷ್ಟ್ರೀಯ ಹೆದ್ದಾರಿಗಳನ್ನು ಸಹ ಇ-ಹೆದ್ದಾರಿಯಾಗಿ ಪರಿವರ್ತಿಸುವ ಯೋಜನೆ ಬಗ್ಗೆಯೂ ನೀತಿ ಆಯೋಗವು ನೀಲ ನಕ್ಷೆ ರೂಪಿಸಿದ್ದು, ಎಲೆಕ್ಟ್ರಿಕ್ ವಾಹನಗಳ ಅಗತ್ಯವಾಗಿ ಬೇಕಿರುವ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ವಿವಿಧ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಲಾಗಿದೆ.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಹೀಗಾಗಿ ಮುಂದಿನ ಐದು ವರ್ಷದೊಳಗೆ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಸಂಬಂಧ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿರುವ ನೀತಿ ಆಯೋಗವು, ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಉತ್ಪಾದನೆಯನ್ನು ತಗ್ಗಿಸಿ ಎಲೆಕ್ಟ್ರಿಕ್ ವಾಹನಗಳ ಮೇಲೆ ಹೆಚ್ಚಿನ ಒತ್ತು ನೀಡುವಂತೆ ಉತ್ಪಾದನಾ ಸಂಸ್ಥೆಗಳಿಗೂ ಸಹ ಖಡಕ್ ಸೂಚನೆ ನೀಡಿದೆ.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಇನ್ನು ಎಲೆಕ್ಟ್ರಿಕ್ ಕಾರುಗಳಿಗೆ ಸಬ್ಸಡಿ ಸೇರಿದಂತೆ ಇವಿ ವಾಹನ ಉತ್ಪಾದನಾ ಸಂಸ್ಥೆಗಳನ್ನು ಉತ್ತೇಜಿಸಲು 2017ರಲ್ಲಿ ಫೇಮ್(ಫಾಸ್ಟರ್ ಅಡಾಪ್ಷನ್ ಆ್ಯಂಡ್ ಮ್ಯಾನುಫ್ಯಾಚ್ಚರಿಂಗ್ ಆಫ್ ಎಲೆಕ್ಟ್ರಿಕ್ ವೆಹಿಕಲ್) ಯೋಜನೆ ಆರಂಭಿಸಿದ್ದ ಕೇಂದ್ರ ಸರ್ಕಾರವು, ಕಳೆದ ವರ್ಷವಷ್ಟೇ ಎರಡನೇ ಹಂತದ ಅಭಿವೃದ್ದಿಗಾಗಿ ಬರೋಬ್ಬರಿ ರೂ.10 ಸಾವಿರ ಕೋಟಿ ಬಿಡುಗಡೆ ಮಾಡಿತ್ತು.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಫೇಮ್ ಮೊದಲ ಹಂತದ ಯೋಜನೆಗಾಗಿ ರೂ. 795 ಕೋಟಿ ಖರ್ಚು ಮಾಡಿದ್ದ ಕೇಂದ್ರ ಸರ್ಕಾರವು ಎರಡನೇ ಹಂತದ ಫೇಮ್ ಯೋಜನೆಯನ್ನು ಯಶಸ್ವಿಗೊಳಿಸಲು 2019ರಿಂದ 2021ರ ಅವಧಿಗಾಗಿ ರೂ.10 ಸಾವಿರ ಕೋಟಿ ಮೀಸಲು ಇರಿಸಿದ್ದು, ಎಲೆಕ್ಟ್ರಿಕ್ ಕಾರುಗಳ ಸಬ್ಸಡಿ ಸೇರಿದಂತೆ ವಿವಿಧ ಯೋಜನೆಗಾಗಿ ಪ್ರತಿ ವರ್ಷ ರೂ.3,300 ಕೋಟಿ ಖರ್ಚು ಮಾಡಲಿದೆ.

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ವಿಫುಲ ಅವಕಾಶಗಳಿದ್ದರೂ ಸಹ ಗ್ರಾಹಕರು ಮಾತ್ರ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಮೇಲೆಯೇ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಗ್ರಾಹಕರನ್ನು ಸೆಳೆಯಲು ಕೇಂದ್ರ ಸರ್ಕಾರವು ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

2030ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಸಂಪೂರ್ಣ ಬಂದ್..

ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿದರೂ ಹೆಚ್ಚಿನ ಪ್ರಮಾಣದಲ್ಲಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದರಿಂದ ಇವಿ ಕಾರುಗಳ ಖರೀದಿಗೆ ಗ್ರಾಹಕರು ಹಿಂದೇಟು ಹಾಕುತ್ತಿದ್ದು, ಕೇಂದ್ರ ಸರ್ಕಾರದ ಹೊಸ ಯೋಜನೆ ಅಡಿ ನಗರ ಪ್ರದೇಶಗಳಲ್ಲಿ ಪ್ರತಿ 3 ಕಿ.ಮಿ ಒಂದು ಚಾರ್ಜಿಂಗ್ ಸ್ಟೆಷನ್‌ಗಳು ನಿರ್ಮಾಣವಾಗಲಿದ್ದರೆ, ಪ್ರಮುಖ ರಸ್ತೆಗಳಲ್ಲಿ ಮತ್ತು ಹೆದ್ದಾರಿಗಳಲ್ಲಿ ಪ್ರತಿ 25 ಕಿ.ಮಿ ಗೆ ಒಂದು ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‍ಗಳು ತಲೆ ಎತ್ತಲಿವೆ.

Most Read Articles

Kannada
English summary
According to NITI Aayog proposal to central government that after 2030, only electric vehicles should be sold in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X