ಭಾರತೀಯ ಆಟೋ ಉದ್ಯಮದಲ್ಲಿ ಪ್ಯಾನಸೋನಿಕ್ ಹೊಸ ಅಧ್ಯಾಯ ಶುರು..!
ಜಪಾನ್ ಎಲೆಕ್ಟ್ರಾನಿಕ್ ದೈತ್ಯ ನಿರ್ಮಾಣ ಸಂಸ್ಥೆ ಪ್ಯಾನಸೋನಿಕ್ ಇದೀಗ ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದು, ಭವಿಷ್ಯದಲ್ಲಿ ಅತಿ ಹೆಚ್ಚು ಬೇಡಿಕೆ ಗಿಟ್ಟಿಸಿಕೊಳ್ಳಲಿರುವ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಚಾರ್ಜಿಂಗ್ ಸ್ಟೇಷನಗಳ ನಿರ್ಮಾಣಕ್ಕೆ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡುತ್ತಿದೆ.

ಹೌದು, ಪ್ಯಾನಸೋನಿಕ್ ಸಂಸ್ಥೆಯು ಸದ್ಯ ದಿನ ಬಳಕೆಯ ಎಲೆಕ್ಟ್ರಿಕ್ ಉತ್ನನ್ನಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿ ಭಾರತೀಯ ಆಟೋ ಉದ್ಯಮದಲ್ಲೂ ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದೆ. ಇದಕ್ಕಾಗಿ ಹಲವು ಆಟೋ ಉತ್ಪಾದನಾ ಸಂಸ್ಥೆಗಳ ಜೊತೆಗೆ ಕೈಜೋಡಿಸಿರುವ ಪ್ಯಾನಸೋನಿಕ್ ಸಂಸ್ಥೆಯು ದೇಶಾದ್ಯಂತ ವಿವಿಧ ನಗರಗಳಲ್ಲಿ ಬೇಡಿಕೆಗೆ ತಕ್ಕಂತೆ ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡಲಿದೆ.

ಮೊದಲ ಹಂತದಲ್ಲಿ ಬೆಂಗಳೂರು, ದೆಹಲಿ, ಮುಂಬೈ, ಪುಣೆ, ಹೈದ್ರಾಬಾದ್, ಚೆನ್ನೈ ಮತ್ತು ಅಮರಾವತಿಯಲ್ಲಿ ಚಾರ್ಚಿಂಗ್ ಸ್ಟೆಷನ್‌ಗಳನ್ನು ತೆರೆಯಲು ಯೋಜಿಸಿರುವ ಪ್ಯಾನಸೋನಿಕ್ ಸಂಸ್ಥೆಯು ಇದಕ್ಕಾಗಿ ರೂ. 50 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದೆ.

ಮಾಹಿತಿಗಳ ಪ್ರಕಾರ, ಪ್ಯಾನಸೋನಿಕ್ ಸಂಸ್ಥೆಯು ಮೊದಲ ಹಂತದಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿ ಚಕ್ರ ವಾಹನಗಳಿಗಾಗಿ ಮಾತ್ರ ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡುತ್ತಿದ್ದು, ಮುಂದಿನ 2 ವರ್ಷಗಳ ನಂತರವಷ್ಟೇ ಎಲೆಕ್ಟ್ರಿಕ್ ಕಾರು ಮತ್ತು ವಾಣಿಜ್ಯ ವಾಹನಗಳಿಗಾಗಿ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲಿದೆ.

ಈ ಕುರಿತಂತೆ ಮಾತನಾಡಿರುವ ಪ್ಯಾನಸೋನಿಕ್ ಇಂಡಿಯಾ ಎನರ್ಜಿ ಸಿಸ್ಟಂ ಮುಖ್ಯಸ್ಥ ಅತುಲ್ ಆರ್ಯ ಅವರು, ಮುಂದಿನ ಐದು ವರ್ಷಗಳಿಗಾಗಿ ಪ್ಯಾನಸೋನಿಕ್ ಸಂಸ್ಥೆಯು ಆಟೋ ಉದ್ಯಮದಲ್ಲಿ ಹೊಸ ಬದಲಾವಣೆಗೆ ಮಹತ್ವದ ಯೋಜನೆಗಳನ್ನು ರೂಪಿಸಿದ್ದು, ಸದ್ಯದ ಬೇಡಿಕೆ ಅನ್ವಯ ದ್ವಿಚಕ್ರ ಮತ್ತು ತ್ರಿ ಚಕ್ರ ವಾಹನಗಳಿಗೆ ಪ್ಯಾನಸೋನಿಕ್ ಚಾರ್ಚಿಂಗ್ ಸ್ಟೆಷನ್‌ಗಳ ಮೂಲಕ ಉತ್ತಮ ಸೇವೆ ನೀಡುವ ಗುರಿಹೊಂದಿದ್ದೇವೆ ಎಂದಿದ್ದಾರೆ.

ಇನ್ನು ಪ್ಯಾನಸೋನಿಕ್ ಸಂಸ್ಥೆಯು ಚಾರ್ಚಿಂಗ್ ಸ್ಟೆಷನ್‌ಗಳನ್ನು ಮಾಡುತ್ತಿರುವುದು ಎಲೆಕ್ಟ್ರಿಕ್ ಸ್ಕೂಟರ್/ಬೈಕ್ ಮತ್ತು ಆಟೋ ರಿಕ್ಷಾಗಳಿಗೆ ಸಾಕಷ್ಟು ಅನುಕೂಲಕರವಾಗಲಿದ್ದು, ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿರುವ ಗ್ರಾಹಕರನ್ನು ಸೆಳೆಯಲು ಈ ಯೋಜನೆ ಪೂರಕವಾಗಿದೆ.

ಸದ್ಯ ಭಾರತದಲ್ಲಿ ಮಾಲಿನ್ಯ ಪ್ರಮಾಣವನ್ನು ತಡೆಯುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟ ಮೇಲೆ ಗರಿಷ್ಠ ಮಟ್ಟದ ಡಿಸ್ಕೌಂಟ್, ಸಬ್ಸಡಿ ನೀಡುತ್ತಿದ್ದರೂ ಸಹ ಗ್ರಾಹಕರು ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳತ್ತ ಹೆಚ್ಚಿನ ಒಲವು ಹೊಂದಿರುವುದಕ್ಕೆ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯೇ ಪ್ರಮುಖ ಸಮಸ್ಯೆಯಾಗಿದೆ.
MOST READ: ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್- ಕರ್ನಾಟಕದಲ್ಲಿ ಕಾರುಗಳ ನೋಂದಣಿ ಕಷ್ಟ ಕಷ್ಟ..!

ಹೀಗಾಗಿ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಮೂಲಕ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಉತ್ತೇಜಿಸಲು ಮತ್ತು ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಸಬ್ಸಡಿ ಘೋಷಣೆ ಮಾಡಿರುವುದನ್ನು ಪ್ಯಾನಸೋನಿಕ್ ಸಂಸ್ಥೆಯು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದೆ.

ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳ ಅವಧಿಗೆ ಅನ್ವಯಸುವಂತೆ ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಇದಕ್ಕಾಗಿ ಬರೋಬ್ಬರಿ 10 ಸಾವಿರ ಕೋಟಿ ವ್ಯಯ ಮಾಡುತ್ತಿದೆ. ಇದರಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ನಿರ್ಮಾಣ ಮಾಡುವ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಅಷ್ಟೇ ಅಲ್ಲದೇ ಚಾರ್ಜಿಂಗ್ ನಿರ್ಮಾಣ ಮಾಡುವ ಸಂಸ್ಥೆಗಳಿಗೂ ಸೇರಿ ಎಲೆಕ್ಟಿಕ್ ಕಾರು ಖರೀದಿಸುವ ಗ್ರಾಹಕರಿಗೂ ಕೂಡಾ ಸಬ್ಸಡಿ ದೊರೆಯಲಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಇದರಿಂದ ಆಟೋ ಉದ್ಯಮದಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದ ಮೇಲೆ ಸಾಕಷ್ಟು ಒತ್ತು ನೀಡುತ್ತಿರುವ ವಾಹನ ಉತ್ಪಾದಕರು ಮುಂದಿನ 2020 ರ ಆರಂಭದಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದ್ದು, ಇದಕ್ಕೆ ಪೂರಕವಾಗಿ ನಗರಪ್ರದೇಶಗಳಲ್ಲಿ ಪ್ರತಿ 3 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರವು ಬೃಹತ್ ಯೋಜನೆ ರೂಪಿಸಿದೆ.


Click it and Unblock the Notifications