Just In
- 4 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 4 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 6 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 6 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Mrunal Thakur:"ಸರಿಯಾದ ಸಂಗಾತಿ ಸಿಗೋದು ಕಷ್ಟ; ಸೇಫ್ಟಿಗೆ ಅಂಡಾಣು ಶೇಖರಿಸಿ ಇಟ್ಕೊಳೋಣ ಅಂತಿದೀನಿ"
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳೆದ 18 ವರ್ಷಗಳಲ್ಲಿ ಮೊದಲ ಬಾರಿಗೆ ನೆಲಕಚ್ಚಿದ ಹೊಸ ವಾಹನಗಳ ಮಾರಾಟ
2019ರ ಅವಧಿಯಲ್ಲಿ ಭಾರತೀಯ ಆಟೋ ಉತ್ಪಾದನಾ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬಂದಿದ್ದು, ಹೊಸ ವಾಹನ ಮಾರಾಟದಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ನಷ್ಟ ಅನುಭವಿಸಿವೆ. ಅದರಲ್ಲೂ ಕಳೆದ ತಿಂಗಳು ಮೇ ಅವಧಿಯಲ್ಲಿನ ಹೊಸ ವಾಹನಗಳ ಮಾರಾಟವು ಪ್ರಮಾಣವು ಕಳೆದ 18 ವರ್ಷಗಳಲ್ಲೇ ಮೊದಲ ಬಾರಿಗೆ ಅತಿಕಡಿಮೆ ಎಂಬ ವರದಿಗಳಾಗಿವೆ.
ಹೌದು, ದೇಶಿಯ ಮಾರುಕಟ್ಟೆಯಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು 2019ರ ಆರಂಭದಿಂದಲೇ ಹೊಸ ವಾಹನಗಳ ಮಾರಾಟದಲ್ಲಿ ಹಿನ್ನಡೆ ಅನುಭವಿಸುತ್ತಿದ್ದು, ಮೇ ಅವಧಿಯಲ್ಲಿ ಅತಿ ಹೆಚ್ಚು ಹಿನ್ನಡೆಯಾಗಿದೆ. ಮಾಹಿತಿಗಳ ಪ್ರಕಾರ, ಶೇ. 20.5 ರಷ್ಟು ಹೊಸ ಪ್ಯಾಸೆಂಜರ್ ವಾಹನಗಳ ಮಾರಾಟ ಪ್ರಮಾಣವು ಕುಸಿತ ಕಂಡಿದ್ದು, 2001ರಿಂದ ಇದು ಮೊದಲ ಬಾರಿಗೆ ಗರಿಷ್ಠ ಪ್ರಮಾಣದ ಮಾರಾಟ ಕುಸಿತ ದಾಖಲಾಗಿದೆ.
2018ರ ಮೇ ಅವಧಿಯಲ್ಲಿ ದೇಶಾದ್ಯಂತ 3,01,238 ಹೊಸ ಪ್ಯಾಸೆಂಜರ್ ವಾಹನಗಳು ಮಾರಾಟವಾಗಿದ್ದರೆ ಅದೇ 2019ರ ಮೇ ಅವಧಿಯಲ್ಲಿ 2,39,347 ಹೊಸ ಪ್ಯಾಸೆಂಜರ್ ವಾಹನಗಳು ಮಾತ್ರವೇ ಮಾರಾಟವಾಗುವ ಮೂಲಕ ಭಾರೀ ಪ್ರಮಾಣದ ನಷ್ಟ ಅನುಭವಿಸಿವೆ.
ಹೀಗಾಗಿ ಮಾರಾಟವಾಗದೇ ಉಳಿದ ಸ್ಟಾಕ್ ಇದೀಗ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಹೊರೆಯಾಗಿ ಪರಿಣಮಿಸಿದ್ದು, ಬಹುತೇಕ ಆಟೋ ಸಂಸ್ಥೆಗಳು ತಮ್ಮ ಹೊಸ ವಾಹನಗಳ ಉತ್ಪಾದನೆಯನ್ನ ತಾತ್ಕಾಲಿಕವಾಗಿ ಬಂದ್ ಮಾಡಿ ಸ್ಟಾಕ್ ಕರಗಿಸಲು ಹರಸಾಹಸಪಡುತ್ತಿವೆ.
ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಮತ್ತು ಹೊಸ ವಾಹನಗಳ ಖರೀದಿ ಮೇಲೆ ಜಾರಿ ಮಾಡಲಾದ ಕೆಲವು ಹೊಸ ನಿಯಮಗಳಿಂದಾಗಿಯೂ ಕೂಡಾ ಹೊಸ ವಾಹನಗಳ ಖರೀದಿ ಪ್ರಕಿಯೆಗೆ ಪ್ರತಿಕೂಲಕರ ವಾತಾವರಣ ನಿರ್ಮಾಣವಾಗಿದ್ದರಿಂದ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ನಿಗದಿತ ಮಟ್ಟದ ಗುರಿ ಮುಟ್ಟಲು ಸಾಧ್ಯವಾಗದೇ ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಮಾರಾಟವಾಗದೇ ಉಳಿದಿರುವ ಸ್ಟಾಕ್ ಪ್ರಮಾಣವನ್ನು ಕರಗಿಸಲು ಕೆಲವು ಕಠಿಣ ನಿರ್ಣಯಗಳನ್ನು ತಗೆದುಕೊಳ್ಳುತ್ತಿವೆ.
ಮಾಹಿತಿಗಳ ಪ್ರಕಾರ, ಸುಮಾರು ರೂ.35 ಸಾವಿರ ಕೋಟಿ ಮೌಲ್ಯದ ಹೊಸ ಕಾರುಗಳು ಮತ್ತು 15 ಸಾವಿರ ಕೋಟಿ ಮೌಲ್ಯದ ಹೊಸ ಬೈಕ್ಗಳ ಸ್ಟಾಕ್ ಪ್ರಮಾಣವು ಮಾರಾಟವಾಗದೆ ಆರ್ಥಿಕವಾಗಿ ಹೊರೆಯಾಗಿ ಪರಿಣಮಿಸಿದ್ದು, ಸ್ಟಾಕ್ ಪ್ರಮಾಣವನ್ನು ತೆರೆವುಗೊಳಿಸಲು ಭಾರೀ ಪ್ರಮಾಣದ ಆಫರ್ಗಳನ್ನು ನೀಡಿ ಗ್ರಾಹಕರನ್ನು ಸೆಳೆಯಲಾಗುತ್ತಿದೆ.
ಸದ್ಯ ಮಾರುಕಟ್ಟೆಯಲ್ಲಿ ಲೋಕಸಭಾ ಚುನಾವಣೆ ನಂತರ ಹೊಸ ವಾಹನಗಳ ಮಾರಾಟ ಪ್ರಕ್ರಿಯೆಯಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಸ್ಟಾಕ್ ಪ್ರಮಾಣವನ್ನು ಕರಗಿಸುವ ನಿಟ್ಟಿನಲ್ಲಿ ಬಹುತೇಕ ಕಾರು ಸಂಸ್ಥೆಗಳು ವಿವಿಧ ಮಾದರಿಯ ಆಫರ್ ನೀಡುವ ಮೂಲಕ ಮಾರಾಟದ ಸಂಖ್ಯೆಗಳನ್ನು ಹೆಚ್ಚಿಸುವತ್ತ ಗಮನಹರಿಸಿವೆ. ಹಾಗೆಯೇ ದ್ವಿಚಕ್ರ ವಾಹನಗಳ ಉತ್ಪಾದನಾ ಸಂಸ್ಥೆಗಳು ಸಹ ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದು, ಸ್ಟಾಕ್ ಕ್ಲಿಯೆರೆನ್ಸ್ ಹರಸಾಹಸಪಡುತ್ತಿವೆ.
MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್ಗೆ ಬಿತ್ತು ರೂ. 50 ಸಾವಿರ ದಂಡ..!
ಹೀಗಾಗಿಯೇ ಸದ್ಯಕ್ಕೆ ಹೊಸ ಕಾರು ಮತ್ತು ಬೈಕ್ ಉತ್ಪಾದನೆ ಮಾಡದಿರಲು ನಿರ್ಧರಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಜೂನ್ 23ರಿಂದ ಜೂನ್ 30ಕ ತನಕ, ಹೋಂಡಾ ಕಾರ್ಸ್ ಸಂಸ್ಥೆಯು ಜೂನ್ 5 ರಿಂದ ಜೂನ್ 10 ವರೆಗೆ, ಟಾಟಾ ಸಂಸ್ಥೆಯು ಮೇ 27ರಿಂದ ಜೂನ್ 3ರ ತನಕ, ರೆನಾಲ್ಟ್ ನಿಸ್ಸಾಸ್ ಸಂಸ್ಥೆಗಳು ಮೇ 26ರಿಂದ ಜೂನ್ 5ರ ತನಕ ಮತ್ತು ಹೋಂಡಾ ಮೋಟಾರ್ಸೈಕಲ್ ಸಂಸ್ಥೆಯು ಜೂನ್ 4ರಿಂದ ಜೂನ್ 11ರ ತನಕ ಹೊಸ ವಾಹನಗಳ ಉತ್ಪಾದನೆ ಸ್ಥಗಿತ ಮಾಡಿವೆ.
ಆಟೋ ಉತ್ಪಾದನಾ ಸಂಸ್ಥೆಗಳ ಪ್ರಕಾರ, ಹೊಸದಾಗಿ ಉತ್ಪಾದನೆ ಮಾಡಲಾದ ವಾಹನಗಳನ್ನು ಕೇವಲ 3 ತಿಂಗಳು ಕಾಲ ಮಾಡಲಾಗುವ ಸ್ಟಾಕ್ ಮಾತ್ರವೇ ಆರೋಗ್ಯಕಾರಿಯಾಗಿದ್ದು, ತದನಂತರದ ಆ ಸ್ಟಾಕ್ ಪ್ರಮಾಣವು ಆರ್ಥಿಕವಾಗಿ ಹೊರೆ ಎಂದು ಪರಿಗಣಿಸಲಾಗುತ್ತದೆ.
MOST READ: ಲೋನ್ ಚಿಂತೆ ಬೇಡವೇ ಬೇಡ- ಇನ್ಮುಂದೆ ಲೀಸ್ಗೆ ಸಿಗಲಿವೆ ಹ್ಯುಂಡೈ ಕಾರುಗಳು..!
ಇದರಿಂದ ಈಗಾಗಲೇ ನಾಲ್ಕೈದು ತಿಂಗಳಿನಿಂದ ಸರಿಯಾದ ಪ್ರಮಾಣದಲ್ಲಿ ಹೊಸ ವಾಹನಗಳು ಮಾರಾಟವಾಗದಿರುವುದು ಆಟೋ ಉತ್ಪಾದನಾ ಸಂಸ್ಥೆಗಳಿಗೆ ತಲೆ ನೋವಾಗಿ ಪರಿಣಮಿಸಿದ್ದು, ಆಟೋ ಮಾರುಕಟ್ಟೆಯೂ ಸಹಜ ಸ್ಥಿತಿಯತ್ತ ಮರಳಲು ಮುಂದಿನ 2 ತಿಂಗಳ ಕಾಲ ಸಮಯಾವಕಾಶ ಬೇಕು ಎನ್ನಲಾಗುತ್ತಿದೆ.