Just In
- 3 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 4 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 6 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 6 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರೈಬರ್ ಕಾರಿಗೆ ಭರ್ಜರಿ ಬೇಡಿಕೆ- ಕಾರು ಮಾರಾಟದಲ್ಲಿ 5ನೇ ಸ್ಥಾನಕ್ಕೇರಿದ ರೆನಾಲ್ಟ್
ಕಳೆದ ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆಗೊಂಡಿದ್ದ ಟ್ರೈಬರ್ ಎಂಪಿವಿ ಕಾರು ರೆನಾಲ್ಟ್ ನಿರ್ಮಾಣದ ಕಾರುಗಳ ಮಾರಾಟದಲ್ಲಿ ನಂ.1 ಸ್ಥಾನಕ್ಕೇರಿದ್ದು, ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಹೆಚ್ಚು ಮಾರಾಟ ದಾಖಲಿಸಿರುವ ಮೂಲಕ ರೆನಾಲ್ಟ್ ಸಂಸ್ಥೆಯು ದೇಶದ 5ನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿ ಹೊರಹೊಮ್ಮಿದೆ.
2018ರ ನವೆಂಬರ್ ಅವಧಿಯಲ್ಲಿ 6134 ಕಾರುಗಳನ್ನು ಮಾರಾಟ ಮಾಡಿದ್ದ ರೆನಾಲ್ಟ್ ಸಂಸ್ಥೆಯು 2019ರ ನವೆಂಬರ್ ಅವಧಿಯಲ್ಲಿ 10,882 ಮಾರಾಟ ಮಾಡುವ ಮೂಲಕ ಕಳೆದ ವರ್ಷಕ್ಕಿಂತ ಶೇ.77ರಷ್ಟು ಮುನ್ನಡೆ ಕಾಯ್ದುಕೊಂಡಿದ್ದು, ಟ್ರೈಬರ್, ಕ್ವಿಡ್ ಮತ್ತು ಡಸ್ಟರ್ ಕಾರುಗಳೇ ರೆನಾಲ್ಟ್ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿವೆ. ಎಂಟ್ರಿ ಲೆವೆಲ್ ಎಂಪಿವಿ ಕಾರುಗಳಲ್ಲಿ ಉತ್ತಮ ಬೇಡಿಕೆ ದಾಖಲಿಸಿರುವ ಟ್ರೈಬರ್ ಕಾರು ಕ್ವಿಡ್ ಮತ್ತು ಡಸ್ಟರ್ ಕಾರುಗಳನ್ನು ಹಿಂದಿಕ್ಕಿ ಸರಾಸರಿ 4,600 ಯುನಿಟ್ ಮಾರಾಟ ದಾಖಲೆಯನ್ನು ಹೊಂದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.
ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿರುವ ಟ್ರೈಬರ್ ಕಾರು ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ಹಲವು ವಿಭಿನ್ನ ವೈಶಿಷ್ಟಯತೆಗಳನ್ನು ಹೊಂದಿದ್ದು, 4 ಮೀಟರ್ನಲ್ಲಿಯೇ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ.
ರೆನಾಲ್ಟ್ ಸಂಸ್ಥೆಯು ಫೇಸ್ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವನ್ನು ಸಂಪೂರ್ಣ ಬದಲಾವಣೆಗೊಳಿಸಿದ್ದು, ಫೇಸ್ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಟ್ರೈಬರ್ ಎಂಪಿವಿ ಕಾರು ಕೂಡಾ ಹೊಸ ತಂತ್ರಜ್ಞಾನದಡಿಯಲ್ಲೇ ಅಭಿವೃದ್ಧಿಗೊಳಿಸಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಈ ಮೂಲಕ ಎಂಟ್ರಿ ಲೆವಲ್ ಕಾರುಗಳಲ್ಲಿ ವಿಭಿನ್ನ ಎನ್ನಿಸುವ ಹೊಸ ಕಾರು ತಾಂತ್ರಿಕವಾಗಿ ಬಲಿಷ್ಠವಾಗಿದ್ದು, ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಎಲ್ಇಡಿ ಡಿಆರ್ಎಸ್, ಪವರ್ ವಿಂಡೋ, ಕೀ ಲೆಸ್ ಎಂಟ್ರಿ, ಮೂರು ಸಾಲುಗಳಲ್ಲೂ ಎಸಿ ವೆಂಟ್ಸ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮೊಬೈಲ್ ಫೋನ್ ಚಾರ್ಜ್ ಸಾಕೆಟ್ ಮತ್ತು ರಿಯರ್ ವಾಷ್ ವೈಪರ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ಗಳನ್ನು ಪಡೆದುಕೊಂಡಿದೆ.
ಟ್ರೈಬರ್ ವೈಶಿಷ್ಟ್ಯತೆಗಳು
ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್ಪ್ಲೇ, 8-ಇಂಚಿನ ಟಚ್ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.
ಇನ್ನು ಹೊಸ ಟ್ರೈಬರ್ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.
ಆಸನ ಸೌಲಭ್ಯ
7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದು. ಹೀಗಾಗಿ ಮೂರನೇ ಸಾಲನ್ನು ಮಡಿಕೆ ಮಾಡಿದ್ದಲ್ಲಿ 625-ಲೀಟರ್ನಷ್ಟು ಸ್ಥಳಾವಕಾಶ ಮಾಡಿಕೊಳ್ಳಬಹುದಾಗಿದ್ದು, ಬೇಡವಾದಲ್ಲಿ 84-ಲೀಟರ್ನಷ್ಟು ಸ್ಥಳಾವಕಾಶ ಸಿಗಲಿದೆ.
ಎಂಜಿನ್ ಸಾಮರ್ಥ್ಯ
ಸದ್ಯಕ್ಕೆ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಸಹಾಯದೊಂದಿಗೆ 71-ಬಿಎಚ್ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಟರ್ಬೋ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಹೊಂದಲಿದೆ.
ಸುರಕ್ಷಾ ಸೌಲಭ್ಯಗಳು
ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.