ಮಾರುತಿ ಸುಜುಕಿ ಬ್ರೆಝಾ ಕಾರಿಗೆ ಪೈಪೋಟಿ ನೀಡಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ
ಟ್ರೈಬರ್ ಮಿನಿ ಎಂಪಿವಿ, ಡಸ್ಟರ್ ಫೇಸ್‌ಲಿಫ್ಟ್ ಮತ್ತು ಕ್ವಿಡ್ ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಮತ್ತೊಂದು ಹೊಸ ಕಾರು ಆವೃತ್ತಿಗಳ ಬಿಡುಗಡೆಗೆ ಸಿದ್ದವಾಗುತ್ತಿರುವ ರೆನಾಲ್ಟ್ ಸಂಸ್ಥೆಯು ವಿನೂತನ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.

2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳನ್ನು ಉನ್ನತೀಕರಿಸುತ್ತಿರುವ ರೆನಾಲ್ಟ್ ಸಂಸ್ಥೆಯು ಡೀಸೆಲ್ ಕಾರುಗಳ ಮಾರಾಟ ಬಂದ್ ಮಾಡಲು ನಿರ್ಧರಿಸಿದ್ದು, ಪೆಟ್ರೋಲ್ ಎಂಜಿನ್ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ. ಹೀಗಾಗಿ ರೆನಾಲ್ಟ್ ಬಿಡುಗಡೆ ಮಾಡಲಿರುವ ಹೊಸ ಪೆಟ್ರೋಲ್ ಕಾರುಗಳಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರುಗಳಷ್ಟೇ ಅಲ್ಲದೇ ಇನ್ನು ಕೆಲವು ಹೊಸ ಮಾದರಿಗಳು ಬಿಡುಗಡೆಗಾಗಿ ಸಿದ್ದವಾಗುತ್ತಿವೆ.

ದೇಶಿಯ ಮಾರುಕಟ್ಟೆಯಲ್ಲಿನ ಹೊಸ ಕಾರುಗಳ ಮಾರಾಟದಲ್ಲಿ ಸಾಕಷ್ಟು ಬದಲಾವಣೆ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಕೆಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

ಟ್ರೈಬರ್ ಆವೃತ್ತಿಯ ಮೂಲಕ ಎಂಪಿವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಸಂಸ್ಥೆಯು ಇದೀಗ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಾರು ಮಾದರಿಯ ಮೂಲಕ ಭಾರತದಲ್ಲಿ ಮತ್ತಷ್ಟು ಸದ್ದು ಮಾಡುವ ನೀರಿಕ್ಷೆಯಲ್ಲಿದೆ

ಹ್ಯುಂಡೈ ವೆನ್ಯೂ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪೈಪೋಟಿಯಾಗಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ರಸ್ತೆಗಿಳಿಯಲಿದ್ದು, ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ಹೊಸ ಕಾರನ್ನು ಟೆಸ್ಟಿಂಗ್ ಮಾಡಲಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಹೆಚ್‌ಬಿಸಿ ಕಾರು ನಗರ ಪ್ರದೇಶದಲ್ಲಿನ ಪ್ರಯಾಣಕ್ಕಾಗಿ ಸೂಕ್ತ ಆಯ್ಕೆಯಾಗಲಿದ್ದು, ಕೈಗೆಟುಕುವ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರ ಗಮನಸೆಳೆಯಲಿದೆ.

ಗ್ರಾಹಕರ ಬೇಡಿಕೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಸದ್ಯ ಭಾರೀ ಪ್ರಮಾಣದ ಬೇಡಿಕೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದು, ಇದೇ ಕಾರಣಕ್ಕಾಗಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ವಿಭಾಗದ ಮೇಲೆ ಹೆಚ್ಚಿನ ಗಮನಹರಿಸಿರುವ ರೆನಾಲ್ಟ್ ಸಂಸ್ಥೆಯು ಹೆಚ್‌ಬಿಸಿ ಎನ್ನುವ ಕಾನ್ಸೆಪ್ಟ್ ಆವೃತ್ತಿಯನ್ನು ಬಿಡುಗಡೆಗಾಗಿ ಅಂತಿಮ ಹಂತದ ನಿರ್ಧಾರ ಕೈಗೊಂಡಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇತರೆ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ.
MOST READ: ಆಟೋದಲ್ಲೇ ಐಷಾರಾಮಿ ಮನೆ ಕಟ್ಟಿದ ಭೂಪ..!

ಬಿಡುಗಡೆಯಾಗುತ್ತಿರುವ ಟ್ರೈಬರ್ ಹೊಸ ಕಾರಿನಲ್ಲಿ ಹೊಸದಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ಆಕರ್ಷಕ ನೋಟ ಮತ್ತು ಬಲಿಷ್ಠ ಬಾಡಿ ಕಿಟ್ ಜೋಡಣೆಯೊಂದಿಗೆ ರಸ್ತೆಗಿಳಿಯಲಿದೆ.
MOST READ: ವಾಹನ ಡೀಲರ್‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಜೊತೆಗೆ ಹೊಸ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಕೂಡಾ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದುವುದು ಬಹುತೇಕ ಖಚಿತ ಎನ್ನಲಾಗಿದೆ.
MOST READ: 2019ರಲ್ಲಿ ಬಿಡುಗಡೆಗೊಂಡು ಜನಪ್ರಿಯವಾಗಿರುವ ಟಾಪ್ 10 ಕಾರುಗಳಿವು..!

ರೆನಾಲ್ಟ್ ಸಂಸ್ಥೆಯು ಹೊಸ ಕಾರನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಬಿಡುಗಡೆಗೊಳಿಸಲಿದ್ದು, ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ. 6 ಲಕ್ಷದಿಂದ ರೂ.8 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿವೆ.
Source: ET Auto


Click it and Unblock the Notifications