2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ಟ್ರೈಬರ್ ಮಿನಿ ಎಂಪಿವಿ, ಡಸ್ಟರ್ ಫೇಸ್‌ಲಿಫ್ಟ್ ಮತ್ತು ಕ್ವಿಡ್ ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಮತ್ತೊಂದು ಹೊಸ ಕಾರು ಆವೃತ್ತಿಯ ಬಿಡುಗಡೆಗೆ ಸಿದ್ದವಾಗುತ್ತಿರುವ ರೆನಾಲ್ಟ್ ಸಂಸ್ಥೆಯು ವಿನೂತನ ವಿನ್ಯಾ,ಸದ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಇಂಡಿಯಾ ಸಂಸ್ಥೆಯು ಮುಂಬರುವ ದಿನಗಳಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಮತ್ತೊಂದು ಹೊಸ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹ್ಯುಂಡೈ ವೆನ್ಯೂ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪೈಪೋಟಿಯಾಗಿ ವಿನೂತನ ಆವೃತ್ತಿಯೊಂದನ್ನು ಅಭಿವೃದ್ಧಿಗೊಳಿಸಿದೆ. ದೇಶಿಯ ಮಾರುಕಟ್ಟೆಯಲ್ಲಿನ ಹೊಸ ಕಾರುಗಳ ಮಾರಾಟದಲ್ಲಿ ಸಾಕಷ್ಟು ಬದಲಾವಣೆ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಸಂಸ್ಥೆಯು ಟ್ರೈಬರ್, ಕ್ವಿಡ್ ಮತ್ತು ಡಸ್ಟರ್ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳ ಮಾರಾಟದಲ್ಲಿ ಸತತ ಹಿನ್ನಡೆ ಅನುಭವಿಸುತ್ತಿದ್ದು, ಕಾರು ಉತ್ಪಾದನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರುವ ಮೂಲಕ ದೇಶಿಯ ಮತ್ತು ವಿದೇಶಿ ಮಾರುಕಟ್ಟೆಗಳ ಬೇಡಿಕೆ ಅನುಸಾರವಾಗಿ ಹೊಸ ಕಾರು ಉತ್ಪನ್ನಗಳನ್ನು ಸಿದ್ದಪಡಿಸುತ್ತಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ಟ್ರೈಬರ್ ಆವೃತ್ತಿಯ ಮೂಲಕ ಎಂಪಿವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಸಂಸ್ಥೆಯು ತದನಂತರ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಾರು ಮಾದರಿಯ ಮೂಲಕ ಭಾರತದಲ್ಲಿ ಮತ್ತಷ್ಟು ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ಹೊಸ ಕಾರನ್ನು ಟೆಸ್ಟಿಂಗ್ ಮಾಡಲಾಗುತ್ತಿದ್ದು, ಮಾರುತಿ ಬ್ರೆಝಾ ಮತ್ತು ಹ್ಯುಂಡೈ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ವೆನ್ಯೂ ಕಾರುಗಳಿಗೆ ರೆನಾಲ್ಟ್ ಹೊಸ ಕಾರು ಭರ್ಜರಿಯಾಗಿ ಪೈಪೋಟಿ ನೀಡಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಹೆಚ್‌ಬಿಸಿ ಕಾರು ನಗರ ಪ್ರದೇಶದಲ್ಲಿನ ಪ್ರಯಾಣಕ್ಕಾಗಿ ಸೂಕ್ತ ಆಯ್ಕೆಯಾಗಲಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ಗ್ರಾಹಕರ ಬೇಡಿಕೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಸದ್ಯ ಭಾರೀ ಪ್ರಮಾಣದ ಬೇಡಿಕೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದು, ಇದೇ ಕಾರಣಕ್ಕಾಗಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ವಿಭಾಗದ ಮೇಲೆ ಹೆಚ್ಚಿನ ಗಮನ ಹರಿಸಿರುವ ರೆನಾಲ್ಟ್ ಸಂಸ್ಥೆಯು ಹೆಚ್‌ಬಿಸಿ ಎನ್ನುವ ಕಾನ್ಸೆಪ್ಟ್ ಆವೃತ್ತಿಯನ್ನು ಬಿಡುಗಡೆಗಾಗಿ ಅಂತಿಮ ಹಂತದ ನಿರ್ಧಾರ ಕೈಗೊಂಡಿದೆ.

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇತರೆ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ.

MOST READ: ಮಾಲಿನ್ಯ ತಡೆಗೆ ಹೊಸ ಉಪಕರಣ ಅಭಿವೃದ್ಧಿಪಡಿಸಿದ ಐಐಟಿ ಎಂಜಿನಿಯರ್

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ಬಿಡುಗಡೆಯಾಗುತ್ತಿರುವ ಟ್ರೈಬರ್ ಕಾರಿನಲ್ಲಿ ಬಳಕೆ ಮಾಡಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಕೂಡಾ ಪಡೆದುಕೊಳ್ಳಲಿದ್ದು, ಆಕರ್ಷಕ ನೋಟ ಮತ್ತು ಬಲಿಷ್ಠ ಬಾಡಿ ಕಿಟ್ ಜೋಡಣೆ ಹೊಂದಿರಲಿದೆ.

MOST READ: ಮುಂದಿನ ಒಂದು ವರ್ಷದೊಳಗೆ ಏಳು ಹೊಸ ಕಾರು ಬಿಡುಗಡೆ ಮಾಡಲಿದೆ ಮಹೀಂದ್ರಾ

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಹೊಸ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಕೂಡಾ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದುವುದು ಬಹುತೇಕ ಖಚಿತ ಎನ್ನಲಾಗಿದೆ.

MOST READ: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್‍‍ ಆಯ್ಕೆ ಸಂಬಂಧ ಹೊಸ ಆದೇಶ

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ ರೆನಾಲ್ಟ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಸಂಸ್ಥೆಯು ಹೊಸ ಕಾರನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಬಿಡುಗಡೆಗೊಳಿಸಲಿದ್ದು, ಹೊಸ ಕಾರು ಬಿಎಸ್-6 ನಿಯಮ ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡುವ ನೀರಿಕ್ಷೆಯಿದೆ.

Most Read Articles

Kannada
English summary
According to reports, Renault is planning to unveil of its all new Compact SUV at 2020 Auto Expo.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X