ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಬಿಎಸ್-6 ನಿಯಮವು 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹಲವು ಡೀಸೆಲ್ ಎಂಜಿನ್ ಕಾರು ಮಾದರಿಗಳು ಮಾರಾಟದಿಂದ ಸ್ಥಗಿತಗೊಳ್ಳಲಿವೆ. ಇದರಲ್ಲಿ ರೆನಾಲ್ಟ್ ನಿರ್ಮಾಣ ಕಾರು ಮಾದರಿಗಳು ಸಹ ಇದ್ದು, ಮೊದಲ ಬಾರಿಗೆ ಬಿಎಸ್-6 ಡಸ್ಟರ್ ಆವೃತ್ತಿಯನ್ನು ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರೆನಾಲ್ಟ್ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು 2020ರಿಂದಲೇ ಬಿಎಸ್-4 ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವ ಸುಳಿವು ನೀಡಿವೆ. ಹೀಗಾಗಿ ಹೊಸ ಕಾರುಗಳ ಉತ್ಪಾದನೆ ಮೇಲೆ ಹೆಚ್ಚು ಗಮನಹರಿಸುತ್ತಿದ್ದು, ಡಸ್ಟರ್ ಎಸ್‌ಯುವಿ ಕಾರು ಹಲವು ಬದಲಾವಣೆಯೊಂದಿಗೆ ರಸ್ತೆಗಿಳಿಯಲಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಆವೃತ್ತಿಗಿಂತ ಹಲವು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಎಂಜಿನ್ ಹೊತ್ತುಬರುತ್ತಿರುವ ಬಿಎಸ್-6 ಡಸ್ಟರ್ ಮಾದರಿಯು ಈ ಬಾರಿ ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್‌ನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಒಂದು ವೇಳೆ ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತಿಕರಿಸಿದರೂ ಸಹ ಕಾರಿನ ಬೆಲೆಗಳು ಕನಿಷ್ಠ ರೂ. 1.50 ರಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಇದರಿಂದಾಗಿ ಅಗ್ಗದ ಕಾರು ಉನ್ಪತ್ನಗಳನ್ನು ಮಾರಾಟಮಾಡುವ ಕಾರು ಸಂಸ್ಥೆಗಳಿಗೆ ಇದು ಬಿಸಿತುಪ್ಪವಾಗಿ ಪರಿಣಮಿಸಲಿದ್ದು, ಕಾರುಗಳ ಬೆಲೆಗಳನ್ನು ಒಂದೇ ಬಾರಿಗೆ ರೂ.1.50 ಲಕ್ಷ ರೂ. 2 ಲಕ್ಷ ಹೆಚ್ಚಳ ಮಾಡಿದ್ದಲ್ಲಿ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ರೆನಾಲ್ಟ್ ಸಂಸ್ಥೆಯು 1.5-ಲೀಟರ್ ಸಾಮರ್ಥದ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈ ಕೈಬಿಟ್ಟು, ಹೊಸದಾಗಿ 1.3-ಲೀಟರ್ ಟರ್ಬೋ ಪೆಟ್ರೋಲ್ ಮತ್ತು1.6-ಲೀಟರ್ ಇನ್-ಲೈನ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಉನ್ನತಿಕರಿಸಿ ಬಿಡುಗಡೆ ಮಾಡುವ ಯೋಜನೆ ಹೊಂದಲಾಗಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಹೊಸ ಎಂಜಿನ್ ಅಭಿವೃದ್ದಿಗೆ ಒಂದಾಗಿರುವ ರೆನಾಲ್ಟ್, ನಿಸ್ಸಾನ್ ಮತ್ತು ಮಿಟ್ಸುಬಿಷಿ ಸಂಸ್ಥೆಗಳು ಒಂದಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಕೆಲವು ಮಹತ್ವದ ಬದಲಾವಣೆಗಳೊಂದಿಗೆ ಹೊಸ ಕಾರು ಮಾರಾಟದಲ್ಲಿ ಬದಲಾವಣೆಗೆ ಮುಂದಾಗಿವೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿರುವ ಡಸ್ಟರ್ ಫೇಸ್‌ಲಿಫ್ಟ್ ಆವೃತ್ತಿಯು ಒಟ್ಟು ಒಂಬತ್ತು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಕಾರಿನಲ್ಲಿ ನೀಡಲಾಗಿರುವ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.99 ಲಕ್ಷಕ್ಕೆ ಮತ್ತು ಅತ್ಯುತ್ತಮ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಗೆ ರೂ.12.50 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.

MOST READ: ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ರೆನಾಲ್ಟ್ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಫೇಸ್‌ಲಿಫ್ಟ್ ಆವೃತ್ತಿಗಳು ಸೇರಿದಂತೆ ಒಟ್ಟು ಐದು ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. ಇದರಲ್ಲಿ ಇದೀಗ ಡಸ್ಟರ್ ಫೇಸ್‌ಲಿಫ್ಟ್ ಬಿಡುಗಡೆಗೊಂಡಿದ್ದು, ವಿನೂತನ ಸೌಲಭ್ಯ ಹೊತ್ತು ಬಂದಿರುವ ಫೇಸ್‌ಲಿಫ್ಟ್ ಮಾದರಿಯು ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

MOST READ: ಸುಳ್ಳು ಮಾಹಿತಿಯಿಂದ ಪೆಟ್ರೋಲ್‌ಗೆ ಲಕ್ಷ ಲಕ್ಷ ಖರ್ಚು- ಡೀಲರ್ಸ್ ವಿರುದ್ಧ ಕೇಸ್ ಜಡಿದ ಜೀಪ್ ಕಂಪಾಸ್ ಮಾಲೀಕ..!

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಫೇಸ್‌ಲಿಫ್ಟ್ ಡಸ್ಟರ್ ಮಾದರಿಯು 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡಿಸೇಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಈ ಹಿಂದಿಗಿಂತಲೂ ಹೊಸ ಕಾರಿನ ಎಂಜಿನ್ ಮಾದರಿಯು ಹೆಚ್ಚು ಇಂಧನ ದಕ್ಷತೆಯ ಜೊತೆಗೆ ಪರ್ಫಾಮೆನ್ಸ್‌ನಲ್ಲೂ ತುಸು ಸುಧಾರಣೆ ಕಂಡಿದೆ.

MOST READ: ಬೆಂಗಳೂರಿನಲ್ಲಿ ಈ ಕಾರ್ಯಕ್ಕಾಗಿ ಬಳಕೆಯಾಗಲಿದೆಯಂತೆ ದಂಡದ ಹಣ

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಬಿಎಸ್-6 ಡಸ್ಟರ್ ಎಸ್‌ಯುವಿ

ಹಾಗೆಯೇ ಈ ಬಾರಿ ಟಾಪ್ ಎಂಡ್ ಡೀಸೆಲ್ ಮಾದರಿಯಲ್ಲೂ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, 5-ಸ್ಪೀಡ್ ಮ್ಯಾನುವರ್ ಗೇರ್‌ಬಾಕ್ಸ್‌ನೊಂದಿಗೆ ಆಫ್ ರೋಡ್ ಕೌಶಲ್ಯವನ್ನು ಬಯಸುವ ಗ್ರಾಹಕರು ಆಲ್ ವೀಲ್ಹ್ ಡ್ರೈವ್ ಟೆಕ್ನಾಲಜಿ ಪ್ರೇರಿತ ಟಾಪ್ ಎಂಡ್ ಆರ್‌ಎಕ್ಸ್‌ಎಸ್ ಡೀಸೆಲ್ ವೆರಿಯೆಂಟ್ ಖರೀದಿ ಮಾಡಬಹುದಾಗಿದೆ.

Source: Gaadiwaadi

Most Read Articles

Kannada
English summary
New Renault Duster BS-VI Spied Testing Ahead Of Launch: Spy Pics & Other Details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X