ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಹೊಸ ಕಾರು ಮಾರಾಟದಲ್ಲಿ ಭಾರೀ ಬದಲಾವಣೆಗಳನ್ನು ತರುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಫೇಸ್‌ಲಿಫ್ಟ್ ಆವೃತ್ತಿಗಳು ಸೇರಿದಂತೆ ಒಟ್ಟು ಐದು ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. ಇದರಲ್ಲಿ ಡಸ್ಟರ್ ಫೇಸ್‌ಲಿಫ್ಟ್ ಕೂಡಾ ಒಂದಾಗಿದ್ದು, ವಿನೂತನ ಸೌಲಭ್ಯಗಳೊಂದಿಗೆ ಹೊಸ ಕಾರು ರೋಡ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ರೆನಾಲ್ಟ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಡಸ್ಟರ್ ಆವೃತ್ತಿಯು ಈಗಾಗಲೇ ಕಂಪ್ಯಾಕ್ಟ್ ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ಇತ್ತೀಚೆಗೆ ಬಿಡುಗಡೆಯಾದ ನಿಸ್ಸಾನ್ ಕಿಕ್ಸ್ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ಡಸ್ಟರ್ ಫೇಸ್‌ಲಿಫ್ಟ್ ಸರಣಿಯಲ್ಲಿ ತುಸು ಬದಲಾವಣೆ ತರಲಾಗಿದೆ. 2020ರ ಏಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮಗಳಿಗೆ ಅನುಗುಣವಾಗಿ ಹೊಸ ಕಾರನ್ನು ಅಭಿವೃದ್ಧಿಗೊಳಿಸಲಾಗಿದ್ದು, ಉತ್ಪಾದನಾ ಗುಣಮಟ್ಟದ ಜೊತೆಗೆ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಗಮನಹರಿಸಲಾಗಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ಸದ್ಯ ಮಾರುಕಟ್ಟೆಯಲ್ಲಿ ಡಸ್ಟರ್ ಕಾರು ಒಟ್ಟು 3 ಪೆಟ್ರೋಲ್ ಆವೃತ್ತಿಗಳಲ್ಲಿ ಮತ್ತು 6 ಡೀಸೆಲ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13.09 ಲಕ್ಷಕ್ಕೆ ಖರೀದಿಸಬಹುದಾಗಿದ್ದು, ಇದೀಗ ಬಿಡುಗಡೆಯಾಗುತ್ತಿರುವ ಫೇಸ್‌ಲಿಫ್ಟ್ ಮಾದರಿಯಲ್ಲಿ ಸಂಪೂರ್ಣ ಬದಲಾವಣೆ ತರಲಾಗುತ್ತಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ಫೇಸ್‌ಲಿಫ್ಟ್ ಡಸ್ಟರ್ ಕಾರು ಈ ಬಾರಿ ಹೊಸದಾಗಿ ತ್ರಿ ಸ್ಲಾಟ್ ಕ್ರೋಮ್ ಗ್ರಿಲ್ ಡಿಸೈನ್ ಪಡೆದುಕೊಂಡಿದ್ದು, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಡ್ಯುಯಲ್ ಟೋನ್ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್ಸ್ ಮತ್ತು ಕ್ರೋಮ್ ಸ್ಟ್ರಿಪ್, ಏರ್ ಡ್ಯಾಮ್ ಮತ್ತು ಸ್ಕೀಡ್ ಪ್ಲೇಟ್ ಪಡೆದುಕೊಂಡಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ಹಾಗೆಯೇ ಹಿಂಭಾಗದ ವಿನ್ಯಾಸದಲ್ಲೂ ತುಸು ಬದಲಾವಣೆಗಳನ್ನು ಕಂಡಿರುವ ಡಸ್ಟರ್ ಫೇಸ್‌ಲಿಫ್ಟ್ ಕಾರಿನ ಟೈಲ್‌ಗೇಟ್ ಮೇಲೆ ಪ್ಲಾಸ್ಟಿಕ್ ಕ್ಲ್ಯಾಡಿಂಗ್, ಡ್ಯಯುಲ್ ಟೋನ್ ರಿಯರ್ ಬಂಪರ್, ರೂಫ್ ರೈಲ್ಸ್ ಮತ್ತು ಹೊಸ ಮಾದರಿಯ ಡ್ಯುಯಲ್ ಟೋನ್ ಅಲಾಯ್ ಚಕ್ರಗಳನ್ನು ಪಡೆದುಕೊಂಡಿರುವುದು ಮತ್ತಷ್ಟು ಎಸ್‌ಯುವಿ ಪ್ರಿಯರನ್ನು ಸೆಳೆಯುವತ್ತ ಸಿದ್ದವಾಗುತ್ತಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ಎಂಜಿನ್ ಸಾಮರ್ಥ್ಯ

ಈ ಹಿಂದಿನಂತೆಯೇ ಫೇಸ್‌ಲಿಫ್ಟ್ ಡಸ್ಟರ್ ಮಾದರಿಯು 1.5-ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದರೂ ಸಹ ಈ ಬಾರಿ ಹೊಸ ಎಂಜಿನ್ ಬಿಎಸ್-6 ವೈಶಿಷ್ಟ್ಯತೆಗಳನ್ನು ಹೊಂದಿರಲಿದ್ದು, ಇದು ಈ ಹಿಂದಿಗಿಂತಲೂ ಹೆಚ್ಚು ಇಂಧನ ದಕ್ಷತೆಯ ಜೊತೆಗೆ ಪರ್ಫಾಮೆನ್ಸ್‌ನಲ್ಲೂ ಸುಧಾರಣೆ ಕಂಡಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ಮಾಹಿತಿಗಳ ಪ್ರಕಾರ ಹೊಸ ಕಾರಿನ 1.5-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಮಾದರಿಯು 108-ಬಿಎಚ್‌ಪಿ, 245-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ, 1.5-ಲೀಟರ್ ಫೋರ್ ಸಿಲಿಂಡರ್ ಪೆಟ್ರೋಲ್ ಮಾದರಿಯು 105-ಬಿಎಚ್‌ಪಿ, 142-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಇದರಲ್ಲಿ 84-ಬಿಎಚ್‌ಪಿ ಉತ್ಪಾದನೆಯ ಡೀಸೆಲ್ ಎಂಜಿನ್ ಮಾದರಿಯನ್ನು ಸ್ಥಗಿತಗೊಳಿಸಲಾಗುತ್ತಿದೆ.

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ಹೀಗಾಗಿ ಫೇಸ್‌ಲಿಫ್ಟ್ ಡಸ್ಟರ್ ಮಾದರಿಯು ಸಾಕಷ್ಟು ಸುಧಾರಣೆಯೊಂದಿಗೆ ರಸ್ತೆಗಿಳಿಯುತ್ತಿದ್ದು, ಹೊಸ ಕಾರಿನ ಡೀಸೆಲ್ ಮಾದರಿಯಲ್ಲಿ ಈ ಹಿಂದಿನಂತೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆ ಎಎಂಟಿ ವರ್ಷನ್ ಮತ್ತು ಪೆಟ್ರೋಲ್ ವರ್ಷನ್‌ನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆ ಸಿವಿಟಿ ಆಯ್ಕೆಯನ್ನು ಹೊಂದಿರಲಿವೆ.

MOST READ: ಎಂಜಿ ಮೋಟಾರ್ ಹೆಕ್ಟರ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಭಾರೀ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ರೆನಾಲ್ಟ್ ಡಸ್ಟರ್ ಫೇಸ್‌ಲಿಫ್ಟ್

ಈ ಮೂಲಕ ಹೊಸ ಡಸ್ಟರ್‌ನಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಆದ್ಯತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಬೆಲೆಯಲ್ಲೂ ತುಸು ದುಬಾರಿ ಎನ್ನಿಸಲಿದೆ. 2020ರ ಮೊದಲ ತ್ರೈಮಾಸಿಕ ಅಂತ್ಯದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಎಕ್ಸ್‌ಶೋರೂಂ ಆರಂಭಿಕವಾಗಿ ರೂ.9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.50 ಲಕ್ಷ ಬೆಲೆ ಹೊಂದುವ ನೀರಿಕ್ಷೆಯಿದೆ.

Image Courtesy: Digvijay Singh

Most Read Articles

Kannada
English summary
Renault Duster SUV Facelift spied uncamouflaged in the Himalayas. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X