ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ದುಬಾರಿಯಾಗುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಗಳು ಮತ್ತು ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯಲು ಪರ್ಯಾಯ ಇಂಧನ ಬಳಕೆಯ ವಾಹನಗಳತ್ತ ಮುಖಮಾಡುತ್ತಿದ್ದು, ಭವಿಷ್ಯದ ವಾಹನ ಮಾದರಿಗಳಾದ ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳ ಉತ್ಪಾದನೆಯಲ್ಲಿ ಇದೀಗ ಹೊಸದೊಂದು ಕ್ರಾಂತಿ ಶುರುವಾಗಿದೆ.

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

2030ರ ಹೊತ್ತಿಗೆ ವಿಶ್ವಾದ್ಯಂತ ಶೇ.100ರಷ್ಟು ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸುವ ಉದ್ದೇಶದೊಂದಿಗೆ ಜಗತ್ತಿನ ಎಲ್ಲಾ ಆಟೋ ಉತ್ಪಾದನಾ ಸಂಸ್ಥೆಗಳು ಬೃಹತ್ ಯೋಜನೆಯೊಂದಿಗೆ ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಚಾಲನೆ ನೀಡಿದ್ದು, ರೆನಾಲ್ಟ್ ಸಂಸ್ಥೆಯು ಸಹ ತನ್ನ ಕನಸಿನ ಕೂಸಾದ ಕೆ-ಜೆಡ್ಇ ಕಾನ್ಸೆಪ್ಟ್ ಅನಾವರಣಗೊಳಿಸಿರುವುದಲ್ಲದೇ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ಇದಲ್ಲದೇ ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಯ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ರೆನಾಲ್ಟ್ ಸಂಸ್ಥೆಯು ಇ-ವಾಹನಗಳಿಗೆ ಭಾರತದಲ್ಲಿ ಪೂರಕ ವಾತಾವರಣ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಬೇಡಿಕೆಗೆ ಅನುಸಾರವಾಗಿ ಚಾರ್ಜಿಂಗ್ ಸ್ಟೆಷನ್‌ಗಳನ್ನು ಒದಗಿಸಿದ್ದಲ್ಲಿ ಇಂದೇ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೆ ಸಿದ್ದವಿರುವುದಾಗಿ ಹೇಳಿದೆ.

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ಆದರೆ, ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ತೇಜನ ನೀಡುವತ್ತ ಹಲವು ಯೋಜನೆಗಳನ್ನು ಮಾಡಿದೆಯಾದರೂ ತ್ವರಿತಗತಿಯಲ್ಲಿ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಮಾಡದಿರುವುದು ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ತೀವ್ರಗತಿಯಲ್ಲಿ ಹೆಚ್ಚಿಸಲು ಹಿನ್ನಡೆಯಾಗುತ್ತಿರುವ ಬಗ್ಗೆ ರೆನಾಲ್ಟ್ ಸಂಸ್ಥೆಯು ಅಭಿಪ್ರಾಯ ವ್ಯಕ್ತಪಡಿಸಿದೆ.

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿಯೇ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆ ವಿಳಂಬವಾಗುತ್ತಿದ್ದು, 2020ರ ಮಧ್ಯಂತರದಲ್ಲಿ ಕ್ವಿಡ್ ವಿನ್ಯಾಸ ಆಧರಿತ ಕೆ-ಜೆಡ್ಇ ಕಾನ್ಸೆಪ್ಟ್ ಆವೃತ್ತಿಯನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಲಾಗುವುದಾಗಿ ರೆನಾಲ್ಟ್ ಮಾಹಿತಿ ನೀಡಿದೆ. ಕ್ವಿಡ್ ವಿನ್ಯಾಸವನ್ನೇ ಆಧಾರಿಸಿರುವ ಹೊಸ ಎಲೆಕ್ಟ್ರಿಕ್ ಕಾರು ಕೆಲವು ಸಣ್ಣಪುಟ್ಟ ಬದಲಾವಣೆ ಹೊರತುಪಡಿಸಿ ಬಹುತೇಕ ಸಾಮಾನ್ಯ ಮಾದರಿಯಲ್ಲೇ ಸಿದ್ದಗೊಂಡಿದ್ದು, ಈ ಹಿಂದೆ ಶಾಂಘೈ ಆಟೋ ಮೇಳದಲ್ಲಿ ಅನಾವರಣಗೊಂಡಿದ್ದ ಈ ಕಾರು 2020ರ ಫೆಬ್ರುವರಿನಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮತ್ತೊಮ್ಮೆ ಅನಾವರಣಗೊಳ್ಳಲಿದೆ.

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ಇನ್ನೊಂದು ವಿಶೇಷ ಅಂದ್ರೆ, ಹೊಸ ಕಾರಿನ ಡಿಸೈನ್‌ಗಳನ್ನು ಚೆನ್ನೈನಲ್ಲಿರುವ ರೆನಾಲ್ಟ್ ಕಾರು ಉತ್ಪಾದನಾ ಕೇಂದ್ರದಲ್ಲಿ ಸಿದ್ದಪಡಿಸಲಾಗಿದ್ದು, ಮೊದಲ ಹಂತವಾಗಿ ಹೊಸ ಕಾರು ಚೀನಾದಲ್ಲಿ ಹಾಗೂ ತದನಂತರವಷ್ಟೇ ಭಾರತದಲ್ಲಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ಸಾಮಾನ್ಯ ಮಾದರಿಯ ಕ್ವಿಡ್ ಹ್ಯಾಚ್‌ಬ್ಯಾಕ್ ಕಾರಿನ ಹೋಲಿಕೆ ಇರುವ ಕೆ-ಜೆಡ್ಇ ಕಾನ್ಸೆಪ್ಟ್ ಕಾರು ಸ್ಲಿಕ್ ಹೆಡ್‌ಲ್ಯಾಂಪ್ಸ್, ಮರು ವಿನ್ಯಾಸಗೊಳಿಸಲಾದ ಗ್ರೀಲ್, ಸ್ಪೋರ್ಟಿ ಬಂಪರ್ ಮತ್ತು ಕಾರಿನ ಬಹುತೇಕ ಕಡೆ ಇರಿಸಲಾಗಿರುವ ಬ್ಲ್ಯೂ ಅಸೆಸ್ಟ್ಸ್ ಕಾರಿನ ಲುಕ್ ಹೆಚ್ಚಿಸಿದೆ.

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ಕಾರಿನ ಮೈಲೇಜ್ ಕೆ-ಜೆಡ್ಇ ಕಾರಿನಲ್ಲಿ ಅಳವಡಿಸಲಾಗಿರುವ ಬ್ಯಾಟರಿ ವೈಶಿಷ್ಟ್ಯತೆಗಳ ಬಗ್ಗೆ ಯಾವುದೇ ನಿಖರ ಮಾಹಿತಿ ಇಲ್ಲವಾದರೂ ಪ್ರತಿ ಚಾರ್ಜ್‌ಗೆ ಬರೋಬ್ಬರಿ 250ಕಿ.ಮಿ ಮೈಲೇಜ್ ರೇಂಜ್ ಹೊಂದಿರುವ ಈ ಎಲೆಕ್ಟ್ರಿಕ್ ಕಾರನ್ನು ನಿಸ್ಸಾನ್ ಜೊತೆಗೂಡಿ ಅಭಿವೃದ್ಧಿ ಮಾಡಲಾಗುತ್ತಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ಭಾರತದಲ್ಲಿ ಬಿಡುಗಡೆ ಯಾವಾಗ?

ಮೇಲೆ ಹೇಳಿದ ಹಾಗೆ ಮೊದಲು ಚೀನಾದಲ್ಲಿ ಬಿಡುಗಡೆಗೊಳಿಸಿದ ನಂತರವಷ್ಟೇ ಭಾರತದಲ್ಲಿ ಬಿಡುಗಡೆ ಮಾಡುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರೆನಾಲ್ಟ್ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳಿಗೆ ಬೇಕಿರುವ ಅಗತ್ಯ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಮಾಡುವ ಯೋಜನೆಯಲ್ಲಿದ್ದು, ಕೇಂದ್ರ ಸರ್ಕಾರವು ಸಹ ಇವಿ ಕಾರುಗಳು ಪೂರಕವಾಗುವಂತೆ 2019ರ ಡಿಸೆಂಬರ್ ಹೊತ್ತಿಗೆ ಪ್ರತಿ 3 ಕಿ.ಮಿ ಗೆ ಒಂದು ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ.

MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಮೂಲಭೂತ ಸೌಲಭ್ಯ ನೀಡಿದ್ರೆ 2020ಕ್ಕೆ ರೆನಾಲ್ಟ್ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆಗೆ ಸಿದ್ದ..!

ಹೀಗಾಗಿ ಹೊಸ ರೆನಾಲ್ಟ್ ಎಲೆಕ್ಟ್ರಿಕ್ ಕಾರು 2020ರ ಮಧ್ಯಂತರದಲ್ಲಿ ಅಥವಾ ಕೊನೆಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಅತಿ ಹೆಚ್ಚು ಮೈಲೇಜ್ ನೀಡಬಲ್ಲ ಬ್ಯಾಟರಿ ತಯಾರಿಕೆಗಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎದುರು ನೋಡುತ್ತಿವೆ.

Most Read Articles

Kannada
English summary
Renault Plans To Launch Electric Vehicles In India By 2020, If Infrastructure Is In Place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X