Just In
- 10 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 11 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 11 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 13 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2020ರ ಆಟೋ ಎಕ್ಸ್ಪೋದಲ್ಲಿ ಪ್ರದರ್ಶನಗೊಳ್ಳಲಿದೆ ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್ಯುವಿ
ರೆನಾಲ್ಟ್ ಇಂಡಿಯಾ ಸಂಸ್ಥೆಯು ಕಂಪ್ಯಾಕ್ಟ್ ಎಸ್ಯುವಿ ಮಾದರಿಗಳಲ್ಲಿ ಮತ್ತೊಂದು ಹೊಸ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹ್ಯುಂಡೈ ವೆನ್ಯೂ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪೈಪೋಟಿಯಾಗಿ ವಿನೂತನ ಆವೃತ್ತಿಯೊಂದನ್ನು ಅಭಿವೃದ್ಧಿಗೊಳಿಸಿದೆ.
ದೇಶಿಯ ಮಾರುಕಟ್ಟೆಯಲ್ಲಿನ ಹೊಸ ಕಾರುಗಳ ಮಾರಾಟದಲ್ಲಿ ಸಾಕಷ್ಟು ಬದಲಾವಣೆ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಇದೇ ತಿಂಗಳು 28ರಂದು ಬಿಡುಗಡೆಯಾಗಲಿರುವ ಟ್ರೈಬರ್ ಎಂಪಿವಿ ಕಾರಿನ ನಂತರ ಕ್ವಿಡ್ ಫೇಸ್ಲಿಫ್ಟ್ ಬಿಡುಗಡೆ ಮಾಡಲಿರುವ ರೆನಾಲ್ಟ್ ಸಂಸ್ಥೆಯು ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ಬಿಡುಗಡೆಯ ನೀರಿಕ್ಷೆಯಲ್ಲಿದೆ.
ರೆನಾಲ್ಟ್ ಸಂಸ್ಥೆಯು ಕ್ವಿಡ್ ಮತ್ತು ಡಸ್ಟರ್ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳ ಮಾರಾಟದಲ್ಲಿ ಸತತ ಹಿನ್ನಡೆ ಅನುಭವಿಸುತ್ತಿದ್ದು, ಕಾರು ಉತ್ಪಾದನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರುವ ಮೂಲಕ ದೇಶಿ ಮತ್ತು ವಿದೇಶಿ ಮಾರುಕಟ್ಟೆಗಳ ಬೇಡಿಕೆ ಅನುಸಾರವಾಗಿ ಹೊಸ ಕಾರು ಉತ್ಪನ್ನಗಳನ್ನು ಸಿದ್ದಪಡಿಸುತ್ತಿದೆ.
ಟ್ರೈಬರ್ ಆವೃತ್ತಿಯ ಮೂಲಕ ಎಂಪಿವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದಲ್ಲಿರುವ ರೆನಾಲ್ಟ್ ಸಂಸ್ಥೆಯು ತದನಂತರ ಕಂಪ್ಯಾಕ್ಟ್ ಎಸ್ಯುವಿ ವೈಶಿಷ್ಟ್ಯತೆಯ ಕಾರು ಮಾದರಿಯ ಮೂಲಕ ಭಾರತದಲ್ಲಿ ಮತ್ತಷ್ಟು ಸದ್ದು ಮಾಡುವ ನೀರಿಕ್ಷೆಯಲ್ಲಿದೆ.
ಹೆಚ್ಬಿಸಿ ಕೋಡ್ನೆಮ್ ಆಧಾರದ ಮೇಲೆ ಹೊಸ ಕಾರನ್ನು ಟೆಸ್ಟಿಂಗ್ ಮಾಡಲಾಗುತ್ತಿದ್ದು, ಮಾರುತಿ ಬ್ರೆಝಾ ಮತ್ತು ಹ್ಯುಂಡೈ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ವೆನ್ಯೂ ಕಾರುಗಳಿಗೆ ರೆನಾಲ್ಟ್ ಹೊಸ ಕಾರು ಭರ್ಜರಿಯಾಗಿ ಪೈಪೋಟಿ ನೀಡಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಹೆಚ್ಬಿಸಿ ಕಾರು ನಗರ ಪ್ರದೇಶದಲ್ಲಿನ ಪ್ರಯಾಣಕ್ಕಾಗಿ ಸೂಕ್ತ ಆಯ್ಕೆಯಾಗಲಿದೆ.
ಗ್ರಾಹಕರ ಬೇಡಿಕೆಯಲ್ಲಿ ಕಂಪ್ಯಾಕ್ಟ್ ಎಸ್ಯುವಿ ಕಾರುಗಳು ಸದ್ಯ ಭಾರೀ ಪ್ರಮಾಣದ ಬೇಡಿಕೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದು, ಇದೇ ಕಾರಣಕ್ಕಾಗಿ ಕಂಪ್ಯಾಕ್ಟ್ ಎಸ್ಯುವಿ ಕಾರುಗಳ ವಿಭಾಗದ ಮೇಲೆ ಹೆಚ್ಚಿನ ಗಮನ ಹರಿಸಿರುವ ರೆನಾಲ್ಟ್ ಸಂಸ್ಥೆಯು ಹೆಚ್ಬಿಸಿ ಎನ್ನುವ ಕಾನ್ಸೆಪ್ಟ್ ಆವೃತ್ತಿಯನ್ನು ಬಿಡುಗಡೆಗಾಗಿ ಅಂತಿಮ ಹಂತದ ನಿರ್ಧಾರ ಕೈಗೊಂಡಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇತರೆ ಕಂಪ್ಯಾಕ್ಟ್ ಎಸ್ಯುವಿ ಕಾರುಗಳಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ.
MOST READ:ಕಿಯಾ ಬಹುನೀರಿಕ್ಷಿತ ಸೆಲ್ಟೊಸ್ ಬಿಡುಗಡೆ- ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಅಧ್ಯಾಯ ಶುರು..!
ಬಿಡುಗಡೆಯಾಗುತ್ತಿರುವ ಟ್ರೈಬರ್ ಕಾರಿನಲ್ಲಿ ಬಳಕೆ ಮಾಡಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ಕೂಡಾ ಪಡೆದುಕೊಳ್ಳಲಿದ್ದು, ಆಕರ್ಷಕ ನೋಟ ಮತ್ತು ಬಲಿಷ್ಠ ಬಾಡಿ ಕಿಟ್ ಜೋಡಣೆ ಹೊಂದಿರಲಿದೆ.
MOST READ:ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!
ಜೊತೆಗೆ ಹೊಸ ಕಾರು ಪೆಟ್ರೋಲ್ ಎಂಜಿನ್ನಲ್ಲಿ ಮಾತ್ರವಲ್ಲದೇ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಕೂಡಾ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದುವುದು ಬಹುತೇಕ ಖಚಿತ ಎನ್ನಲಾಗಿದೆ.
MOST READ:ಬಂಪರ್ ಕ್ರ್ಯಾಶ್ ಗಾರ್ಡ್ ವಿರುದ್ದ ವಿಶೇಷ ಕಾರ್ಯಾಚರಣೆ- ನಿಯಮ ಉಲ್ಲಂಘನೆಗೆ ದಂಡ ಎಷ್ಟು ಗೊತ್ತಾ?
ರೆನಾಲ್ಟ್ ಸಂಸ್ಥೆಯು ಇದೇ ತಿಂಗಳು ಟ್ರೈಬರ್ ಬಿಡುಗಡೆ ಮಾಡಲಿದ್ದು, ಅದಾದ ಬಳಿಕ ಫೇಸ್ಲಿಫ್ಟ್ ಆವೃತ್ತಿಗಳಾದ ಕ್ವಿಡ್ ಬಿಡುಗಡೆ ಮಾಡಲಿದೆ. ಹೀಗಾಗಿ ಹೊಸ ಕಾರು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಎಕ್ಸ್ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಬಿಡುಗಡೆಯಾಗಲಿದ್ದು, ಬಿಎಸ್-6 ನಿಯಮ ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡುವ ನೀರಿಕ್ಷೆಯಿದೆ.
Source: cartoq