Just In
- 9 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 12 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 12 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 13 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗಾಗಿ ಡೀಲರ್ಸ್ ಯಾರ್ಡ್ ತಲುಪಿದ ರೆನಾಲ್ಟ್ ಕ್ವಿಡ್ ಫೇಸ್ಲಿಫ್ಟ್
ರೆನಾಲ್ಟ್ ಸಂಸ್ಥೆಯು ಕ್ವಿಡ್ ಫೇಸ್ಲಿಫ್ಟ್ ಆವೃತ್ತಿಯನ್ನು ಮುಂದಿನ ತಿಂಗಳು ಅಕ್ಟೋಬರ್ ಆರಂಭದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಕ್ವಿಡ್ ಕ್ಲಿಂಬರ್ ಫೇಸ್ಲಿಫ್ಟ್ ಆವೃತ್ತಿಯನ್ನು ಡೀಲರ್ಸ್ ಯಾರ್ಡ್ನಲ್ಲಿ ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.
ಎಂಟ್ರಿ ಲೆವೆಲ್ ಕಾರುಗಳಲ್ಲಿ ಕ್ವಿಡ್ ಮಾದರಿಯು ರೆನಾಲ್ಟ್ ಸಂಸ್ಥೆಗೆ ಅತಿಹೆಚ್ಚು ಜನಪ್ರಿಯತೆಯನ್ನು ತಂದುಕೊಟ್ಟಿದ್ದು, ಇದೀಗ ಬಿಡುಗಡೆಗೆ ಸಜ್ಜಾಗಿರುವ ಫೇಸ್ಲಿಫ್ಟ್ ಆವೃತ್ತಿಯು ಮತ್ತಷ್ಟು ಹೊಸತನದೊಂದಿಗೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕ್ವಿಡ್ಗಿಂತಲೂ ಫೇಸ್ಲಿಫ್ಟ್ ಆವೃತ್ತಿಯು ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.
ಹೊಸ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರುಗಳ ಜೊತೆಗೆ ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯ ಆವೃತ್ತಿಗಳ ಫೇಸ್ಲಿಫ್ಟ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.
ಪ್ರಸಕ್ತ ಮಾರುಕಟ್ಟೆಯಲ್ಲಿ ರೆನಾಲ್ಟ್ ಇಂಡಿಯಾ ಸಂಸ್ಥೆಯು ಕ್ವಿಡ್, ಟ್ರೈಬರ್, ಡಸ್ಟರ್, ಕ್ಯಾಪ್ಚರ್ ಮತ್ತು ಲೊಡ್ಜಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಕ್ವಿಡ್ ಮತ್ತು ಡಸ್ಟರ್ ಹಾಗೂ ಕಳೆದ ತಿಂಗಳು ಬಿಡುಗಡೆಯಾಗ ಟ್ರೈಬರ್ ಆವೃತ್ತಿಗಳನ್ನು ಹೊರತುಪಡಿಸಿ ಕ್ಯಾಪ್ಚರ್ ಮತ್ತು ಲೊಡ್ಜಿ ಕಾರುಗಳಿಗೆ ಅಷ್ಟಾಗಿ ಬೇಡಿಕೆಯಿಲ್ಲ.
ಹೀಗಾಗಿ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗುತ್ತಿರುವ ಹ್ಯಾಚ್ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್ಯುವಿ ವಿಭಾಗದ ಮೇಲೆ ಹೆಚ್ಚಿನ ಗಮನ ಹರಿಸಿರುವ ರೆನಾಲ್ಟ್ ಸಂಸ್ಥೆಯು ಟ್ರೈಬರ್ ಎಂಪಿವಿ ಬಿಡುಗಡೆಯ ನಂತರ ಇದೀಗ ಕ್ವಿಡ್ ಫೇಸ್ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಫೇಸ್ಲಿಫ್ಟ್ ಆವೃತ್ತಿಗಳ ಮೂಲಕ ಗ್ರಾಹಕರ ಬೇಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರೆನಾಲ್ಟ್, ಎಂಟ್ರಿ ಲೆವೆಲ್ ಕಾರುಗಳಲ್ಲಿ ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಫೇಸ್ಲಿಫ್ಟ್ ಆವೃತ್ತಿಯಲ್ಲಿ ಮಹತ್ವದ ಬದಲಾವಣೆ ತಂದಿರುವ ರೆನಾಲ್ಟ್ ಸಂಸ್ಥೆಯು ಈ ಹಿಂದಿನ 0.8-ಲೀಟರ್ ಮತ್ತು 1.0-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಎಂಜಿನ್ ಪರ್ಫಾಮೆನ್ಸ್ ಮತ್ತು ಇಂಧನ ಕಾರ್ಯಕ್ಷಮತೆಯಲ್ಲಿ ಸಾಕಷ್ಟು ಸುಧಾರಣೆ ತಂದಿದೆ.
ಜೊತೆಗೆ ಫೇಸ್ಲಿಫ್ಟ್ ಕ್ವಿಡ್ ಮಾದರಿಯು ಹೊಸ ನಿಯಮಗಳಿಗೆ ಅನುಸಾರವಾಗಿ ಮತ್ತಷ್ಟು ಹೊಸ ಪ್ರಯಾಣಿಕರ ಸುರಕ್ಷಾ ಕ್ರಮಗಳನ್ನು ಹೊತ್ತುಬರಲಿದ್ದು, ಡ್ಯುಯಲ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಹೊಸ ಮಾದರಿಯ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವಿಸ್ತರಿತ ಇನ್ಪೋಟೈನ್ಮೆಂಟ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿರಲಿದೆ.
MOST READ: ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!
ಈ ಮೂಲಕ ಎಂಟ್ರಿ ಲೆವಲ್ ಹ್ಯಾಚ್ಬ್ಯಾಕ್ ಮಾದರಿಗಳಲ್ಲೇ ವಿಶೇಷ ಎನ್ನಿಸುವ ಮೂಲಕ ಗ್ರಾಹಕರನ್ನು ಸೆಳೆಯಲಿರುವ ಫೇಸ್ಲಿಫ್ಟ್ ಕ್ವಿಡ್ ಮಾದರಿಯು ಹೊಸ ಫೀಚರ್ಸ್ಗಳಿಂದಾಗಿ ಕಾರಿನ ಬೆಲೆಯು ತುಸು ದುಬಾರಿಯಾಗಲಿದೆ.
MOST READ: ಮೋಟಾರ್ ಸ್ಪೋರ್ಟ್ನಲ್ಲಿ ಅರ್ಜುನ್ ಪ್ರಶಸ್ತಿ ವಿಜೇತನಿಂದಲೇ ಭೀಕರ ಅಪಘಾತ..!
ಪ್ರಸ್ತುತ ಮಾದರಿಗಿಂತಲೂ ಹೊಸ ಕಾರು ರೂ. 20 ಸಾವಿರದಿಂದ ರೂ. 60 ಸಾವಿರ ತನಕ ಹೆಚ್ಚಳವಾಗಬಹುದಾಗಿದ್ದು, ಸುಜುಕಿ ಆಲ್ಟೋ 800, ನಿಸ್ಸಾನ್ ಮೈಕ್ರಾ, ಹ್ಯುಂಡೈ ಸ್ಯಾಂಟ್ರೋ ಮತ್ತು ಡಸ್ಟನ್ ಕಾರುಗಳಿಗೆ ಇದು ತೀವ್ರ ಪೈಟೋಟಿ ನೀಡಲಿದೆ.
Source: Gaadiwaadi