Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೆನಾಲ್ಟ್ ಮೊದಲ ಎಲೆಕ್ಟ್ರಿಕ್ ಕ್ವಿಡ್ ಕಾರು ಹೇಗಿರಲಿದೆ ಗೊತ್ತಾ?
ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತು ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಯಲು ಪರ್ಯಾಯ ಇಂಧನ ಬಳಕೆಯ ವಾಹನಗಳತ್ತ ಮುಖಮಾಡುತ್ತಿದ್ದು, ಭವಿಷ್ಯದ ವಾಹನ ಮಾದರಿಗಳಾದ ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳ ಉತ್ಪಾದನೆಯಲ್ಲಿ ಇದೀಗ ಹೊಸದೊಂದು ಕ್ರಾಂತಿ ಶುರುವಾಗಿದೆ.

2030ರ ಹೊತ್ತಿಗೆ ವಿಶ್ವಾದ್ಯಂತ ಶೇ.100ರಷ್ಟು ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸುವ ಉದ್ದೇಶದೊಂದಿಗೆ ಜಗತ್ತಿನ ಎಲ್ಲಾ ಆಟೋ ಉತ್ಪಾದನಾ ಸಂಸ್ಥೆಗಳು ಬೃಹತ್ ಯೋಜನೆಯೊಂದಿಗೆ ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಚಾಲನೆ ನೀಡಿದ್ದು, ರೆನಾಲ್ಟ್ ಸಂಸ್ಥೆಯು ಸಹ ತನ್ನ ಕನಸಿನ ಕೂಸಾದ ಕೆ-ಜೆಡ್ಇ ಕಾನ್ಸೆಪ್ಟ್ ಅನಾವರಣಗೊಳಿಸಿರುವುದಲ್ಲದೇ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.
ಕ್ವಿಡ್ ವಿನ್ಯಾಸವನ್ನೇ ಆಧಾರಿಸಿರುವ ಹೊಸ ಎಲೆಕ್ಟ್ರಿಕ್ ಕಾರು ಕೆಲವು ಸಣ್ಣಪುಟ್ಟ ಬದಲಾವಣೆ ಹೊರತುಪಡಿಸಿ ಬಹುತೇಕ ಸಾಮಾನ್ಯ ಮಾದರಿಯಲ್ಲೇ ಸಿದ್ದಗೊಂಡಿದ್ದು, ಹೊಸ ಕಾರಿನ ಕೆಲವು ಹಕ್ಕುಸ್ವಾಮ್ಯದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿವೆ.

ಇನ್ನೊಂದು ವಿಶೇಷ ಅಂದ್ರೆ, ಹೊಸ ಕಾರಿನ ಡಿಸೈನ್‌ಗಳನ್ನು ಚೆನ್ನೈನಲ್ಲಿರುವ ರೆನಾಲ್ಟ್ ಕಾರು ಉತ್ಪಾದನಾ ಕೇಂದ್ರದಲ್ಲಿ ಸಿದ್ದಪಡಿಸಲಾಗಿದ್ದು, ಮೊದಲ ಹಂತವಾಗಿ ಹೊಸ ಕಾರು ಚೀನಾದಲ್ಲಿ ಹಾಗೂ ತದನಂತರವಷ್ಟೇ ಭಾರತದಲ್ಲಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿ ಇದೆ.

ಸಾಮಾನ್ಯ ಮಾದರಿಯ ಕ್ವಿಡ್ ಹ್ಯಾಚ್‌ಬ್ಯಾಕ್ ಕಾರಿನ ಹೋಲಿಕೆ ಇರುವ ಕೆ-ಜೆಡ್ಇ ಕಾನ್ಸೆಪ್ಟ್ ಕಾರು ಸ್ಲಿಕ್ ಹೆಡ್‌ಲ್ಯಾಂಪ್ಸ್, ಮರು ವಿನ್ಯಾಸಗೊಳಿಸಲಾದ ಗ್ರೀಲ್, ಸ್ಪೋರ್ಟಿ ಬಂಪರ್ ಮತ್ತು ಕಾರಿನ ಬಹುತೇಕ ಕಡೆ ಇರಿಸಲಾಗಿರುವ ಬ್ಲ್ಯೂ ಅಸೆಸ್ಟ್ಸ್ ಕಾರಿನ ಲುಕ್ ಹೆಚ್ಚಿಸಿದೆ.

ಇದರ ಹೊರತಾಗಿ ಕಾರಿನ ಎಂಜಿನ್ ತಾಂತ್ರಿಕ ಅಂಶಗಳ ಬಗೆಗೆ ಅಷ್ಟಾಗಿ ಮಾಹಿತಿ ಬಿಟ್ಟುಕೊಡದ ರೆನಾಲ್ಟ್ ಸಂಸ್ಥೆಯು ಸ್ವಂತ ಬಳಕೆಯ ಜೊತೆಗೆ ವಾಣಿಜ್ಯ ಬಳಕೆಗೂ ಅನುಕೂಲಕರವಾಗುವಂತೆ ಚಾರ್ಜಿಂಗ್ ಪಾಯಿಂಟ್‌ಗಳ ಸೌಲಭ್ಯ ಒದಗಿಸಲಿದೆ.

ಕಾರಿನ ಮೈಲೇಜ್
ಕೆ-ಜೆಡ್ಇ ಕಾರಿನಲ್ಲಿ ಅಳವಡಿಸಲಾಗಿರುವ ಬ್ಯಾಟರಿ ವೈಶಿಷ್ಟ್ಯತೆಗಳ ಬಗ್ಗೆ ಯಾವುದೇ ನಿಖರ ಮಾಹಿತಿ ಇಲ್ಲವಾದರೂ ಪ್ರತಿ ಚಾರ್ಜ್‌ಗೆ ಬರೋಬ್ಬರಿ 250ಕಿ.ಮಿ ಮೈಲೇಜ್ ರೇಂಜ್ ಹೊಂದಿರುವ ಈ ಎಲೆಕ್ಟ್ರಿಕ್ ಕಾರನ್ನು ನಿಸ್ಸಾನ್ ಜೊತೆಗೂಡಿ ಅಭಿವೃದ್ಧಿ ಮಾಡಲಾಗುತ್ತಿದೆ.

ಭಾರತದಲ್ಲಿ ಬಿಡುಗಡೆ ಯಾವಾಗ?
ಮೇಲೆ ಹೇಳಿದ ಹಾಗೆ ಮೊದಲು ಚೀನಾದಲ್ಲಿ ಬಿಡುಗಡೆಗೊಳಿಸಿದ ನಂತರವಷ್ಟೇ ಭಾರತದಲ್ಲಿ ಬಿಡುಗಡೆ ಮಾಡುವ ಬಗ್ಗೆ ಮಾಹಿತಿ ಹಂಚಿಕೊಳ್ಳಲಿರುವ ರೆನಾಲ್ಟ್ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳಿಗೆ ಬೇಕಿರುವ ಅಗತ್ಯ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಮಾಡುವ ಯೋಜನೆಯಲ್ಲಿದ್ದು, ಕೇಂದ್ರ ಸರ್ಕಾರವು ಸಹ ಇವಿ ಕಾರುಗಳು ಪೂರಕವಾಗುವಂತೆ 2019ರ ಹೊತ್ತಿಗೆ ಪ್ರತಿ 3 ಕಿ.ಮಿ ಗೆ ಒಂದು ಚಾರ್ಜಿಂಗ್ ಸ್ಟೆಷನ್‌ಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ.

ಹೀಗಾಗಿ 2019ರ ಕೊನೆಯ ಹೊತ್ತಿಗೆ ದೇಶದ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುವುದು ಖಚಿತವಾಗಿದ್ದು, ಅತಿ ಹೆಚ್ಚು ಮೈಲೇಜ್ ನೀಡಬಲ್ಲ ಬ್ಯಾಟರಿ ತಯಾರಿಕೆಗಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎದುರು ನೋಡುತ್ತಿವೆ.
Source: ICN