ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್ ಬಿಡುಗಡೆಗೆ ಡೇಟ್ ಫಿಕ್ಸ್
ರೆನಾಲ್ಟ್ ಇಂಡಿಯಾ ತನ್ನ ಬಹುನೀರಿಕ್ಷಿತ ಕ್ವಿಡ್ ಫೇಸ್‌ಲಿಫ್ಟ್ ಆವೃತ್ತಿಯ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿದ್ದು, ಮುಂದಿನ ತಿಂಗಳು ಅಕ್ಟೋಬರ್ 1 ರಂದು ಫೇಸ್‌ಲಿಫ್ಟ್ ಆವೃತ್ತಿಯು ಅಧಿಕೃತವಾಗಿ ಮಾರಾಟಕ್ಕೆ ಲಭ್ಯವಾಗಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಎಂಟ್ರಿ ಲೆವೆಲ್ ಕಾರಿನಲ್ಲಿ ಕ್ವಿಡ್ ಮಾದರಿಯು ರೆನಾಲ್ಟ್ ಸಂಸ್ಥೆಗೆ ಅತಿಹೆಚ್ಚು ಜನಪ್ರಿಯತೆಯನ್ನು ತಂದುಕೊಟ್ಟಿದ್ದು, ಇದೀಗ ಬಿಡುಗಡೆಗೆ ಸಜ್ಜಾಗಿರುವ ಫೇಸ್‌ಲಿಫ್ಟ್ ಆವೃತ್ತಿಯು ಮತ್ತಷ್ಟು ಹೊಸತನದೊಂದಿಗೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕ್ವಿಡ್‌ಗಿಂತಲೂ ಫೇಸ್‌ಲಿಫ್ಟ್ ಆವೃತ್ತಿಯು ಸಾಕಷ್ಟು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಕಳೆದ ಕೆಲ ತಿಂಗಳಿನಿಂದ ಹೊಸ ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರುಗಳ ಜೊತೆಗೆ ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯ ಆವೃತ್ತಿಗಳ ಫೇಸ್‌ಲಿಫ್ಟ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಕ್ವಿಡ್, ಟ್ರೈಬರ್, ಡಸ್ಟರ್, ಕ್ಯಾಪ್ಚರ್ ಮತ್ತು ಲೊಡ್ಜಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಕ್ವಿಡ್ ಮತ್ತು ಡಸ್ಟರ್ ಹಾಗೂ ಕಳೆದ ತಿಂಗಳು ಬಿಡುಗಡೆಯಾದ ಟ್ರೈಬರ್ ಆವೃತ್ತಿಗಳನ್ನು ಹೊರತುಪಡಿಸಿ ಕ್ಯಾಪ್ಚರ್ ಮತ್ತು ಲೊಡ್ಜಿ ಕಾರುಗಳು ಅಷ್ಟಾಗಿ ಬೇಡಿಕೆ ಪಡೆದುಕೊಳ್ಳುತ್ತಿಲ್ಲ.

ಈ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗುತ್ತಿರುವ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದ ಮೇಲೆ ಹೆಚ್ಚಿನ ಗಮನ ಹರಿಸಿರುವ ರೆನಾಲ್ಟ್ ಸಂಸ್ಥೆಯು ಟ್ರೈಬರ್ ಎಂಪಿವಿ ಬಿಡುಗಡೆಯ ನಂತರ ಇದೀಗ ಕ್ವಿಡ್ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಫೇಸ್‌ಲಿಫ್ಟ್ ಆವೃತ್ತಿಗಳ ಮೂಲಕ ಗ್ರಾಹಕರ ಬೇಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರೆನಾಲ್ಟ್, ಎಂಟ್ರಿ ಲೆವೆಲ್ ಕಾರುಗಳಲ್ಲಿ ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಮಹತ್ವದ ಬದಲಾವಣೆ ತಂದಿರುವ ರೆನಾಲ್ಟ್ ಸಂಸ್ಥೆಯು ಈ ಹಿಂದಿನ 0.8-ಲೀಟರ್ ಮತ್ತು 1.0-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಎಂಜಿನ್ ಪರ್ಫಾಮೆನ್ಸ್ ಮತ್ತು ಇಂಧನ ಕಾರ್ಯಕ್ಷಮತೆಯಲ್ಲಿ ಸಾಕಷ್ಟು ಸುಧಾರಣೆ ತಂದಿದೆ.

ಇದಲ್ಲದೆ ಫೇಸ್‌ಲಿಫ್ಟ್ ಕ್ವಿಡ್ ಮಾದರಿಯು ಹೊಸ ನಿಯಮಗಳಿಗೆ ಅನುಸಾರವಾಗಿ ಮತ್ತಷ್ಟು ಹೊಸ ಪ್ರಯಾಣಿಕರ ಸುರಕ್ಷಾ ಕ್ರಮಗಳನ್ನು ಹೊತ್ತುಬರಲಿದ್ದು, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಹೊಸ ಮಾದರಿಯ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಿಸ್ತರಿತ ಇನ್ಪೋಟೈನ್‌ಮೆಂಟ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿರಲಿದೆ.
MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಈ ಮೂಲಕ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಗಳಲ್ಲೇ ವಿಶೇಷ ಎನ್ನಿಸುವ ಮೂಲಕ ಗ್ರಾಹಕರನ್ನು ಸೆಳೆಯಲಿರುವ ಫೇಸ್‌ಲಿಫ್ಟ್ ಕ್ವಿಡ್ ಮಾದರಿಯು ಹೊಸ ಫೀಚರ್ಸ್‌ಗಳಿಂದಾಗಿ ಕಾರಿನ ಬೆಲೆಯು ತುಸು ದುಬಾರಿಯಾಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ.

ಪ್ರಸ್ತುತ ಕ್ವಿಡ್ ಮಾದರಿಗಿಂತಲೂ ಫೇಸ್‌ಲಿಫ್ಟ್ ಕಾರು ರೂ. 20 ಸಾವಿರದಿಂದ ರೂ. 60 ಸಾವಿರ ತನಕ ಹೆಚ್ಚಳವಾಗಬಹುದಾಗಿದ್ದು, ಸುಜುಕಿ ಆಲ್ಟೋ 800, ನಿಸ್ಸಾನ್ ಮೈಕ್ರಾ, ಹ್ಯುಂಡೈ ಸ್ಯಾಂಟ್ರೋ ಮತ್ತು ಇದೇ ತಿಂಗಳು ಕೊನೆಯಲ್ಲಿ ಬಿಡುಗಡೆಯಾಗಲಿರುವ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರುಗಳಿಗೆ ಇದು ತೀವ್ರ ಪೈಟೋಟಿ ನೀಡಲಿದೆ.
MOST READ: ಸಾಮಾನ್ಯ ಪೆಟ್ರೋಲ್ ಕಾರಿಗಿಂತಲೂ ಶೇ.80 ರಷ್ಟು ಅಗ್ಗ ಹ್ಯುಂಡೈ ಕೊನಾ ರನ್ನಿಂಗ್ ಕಾಸ್ಟ್..!

ಆದರೆ ಹೊಸ ಕಾರಿನಲ್ಲಿ ಈ ಹಿಂದಿನಂತೆಯೇ ಬಿಎಸ್-4 ಎಂಜಿನ್ ಮುಂದುವರಿಸಿರುವ ರೆನಾಲ್ಟ್ ಸಂಸ್ಥೆಯು 2020ರ ಏಪ್ರಿಲ್ ನಂತರವೇ ಹೊಸ ಎಂಜಿನ್ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಮಾರುತಿ ಸುಜುಕಿ ಸೇರಿದಂತೆ ಕೆಲವು ಪ್ರಮುಖ ಆಟೋ ಉತ್ಪಾದನಾ ಸಂಸ್ಥೆಗಳು ಈಗಾಗಲೇ ಬಿಎಸ್-6 ಕಾರುಗಳ ಮಾರಾಟಕ್ಕೆ ಚಾಲನೆ ನೀಡಿರುವುದನ್ನು ನಾವಿಲ್ಲಿ ಗಮನಿಸಬೇಕು.


Click it and Unblock the Notifications