ವಿನೂತನ ಫೀಚರ್ಸ್‌ನೊಂದಿಗೆ ಬಿಡುಗಡೆಗೆ ಸಿದ್ದವಾದ ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್
ಟ್ರೈಬರ್ ಎಂಪಿವಿ ಬಿಡುಗಡೆಯ ಸಿದ್ದತೆಯಲ್ಲಿರುವ ರೆನಾಲ್ಟ್ ಇಂಡಿಯಾ ಸಂಸ್ಥೆಯು ಇದೇ ತಿಂಗಳು 28ರಂದು ದೇಶಿಯ ಮಾರುಕಟ್ಟೆಗೆ ಪರಿಚಯಿಸಲಿದ್ದು, ತದನಂತರ ಬಹುನೀರಿಕ್ಷಿತ ಕ್ವಿಡ್ ಫೇಸ್‌ಲಿಫ್ಟ್ ಆವೃತ್ತಿಯನ್ನು ರಸ್ತೆಗಿಳಿಸುವ ಯೋಜನೆಯಲ್ಲಿದೆ.

ಫ್ರೆಂಚ್ ಆಟೋ ಉತ್ಪಾದನಾ ಸಂಸ್ಥೆ ರೆನಾಲ್ಟ್ ಸದ್ಯ ಭಾರತದಲ್ಲಿ ಭಾರೀ ಜನಪ್ರಿಯತೆ ಅಲ್ಲದ್ದಿದ್ದರೂ ಕಾರು ಮಾರಾಟದಲ್ಲಿ ಒಂದು ಹಂತದ ಯಶಸ್ವಿ ಸಾಧಿಸಿದೆ. ಎಂಟ್ರಿ ಲೆವೆಲ್ ಕಾರು ಮಾದರಿಯಾದ ಕ್ವಿಡ್ ಕಾರು ರೆನಾಲ್ಟ್ ಸಂಸ್ಥೆಗೆ ಅತಿಹೆಚ್ಚು ಜನಪ್ರಿಯತೆಯನ್ನು ತಂದುಕೊಟ್ಟಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸತನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ಕಾರು ಮಾರಾಟದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಹೊಸ ಕಾರುಗಳ ಜೊತೆಗೆ ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯ ಆವೃತ್ತಿಗಳ ಫೇಸ್‌ಲಿಫ್ಟ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಪ್ರಸಕ್ತ ಮಾರುಕಟ್ಟೆಯಲ್ಲಿ ರೆನಾಲ್ಟ್ ಇಂಡಿಯಾ ಸಂಸ್ಥೆಯು ಕ್ವಿಡ್, ಡಸ್ಟರ್, ಕ್ಯಾಪ್ಚರ್ ಮತ್ತು ಲೊಡ್ಜಿ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಕ್ವಿಡ್ ಮತ್ತು ಡಸ್ಟರ್ ಆವೃತ್ತಿಗಳನ್ನು ಹೊರತುಪಡಿಸಿ ಕ್ಯಾಪ್ಚರ್ ಮತ್ತು ಲೊಡ್ಜಿ ಕಾರುಗಳಿಗೆ ಅಷ್ಟಾಗಿ ಬೇಡಿಕೆಯಿಲ್ಲ.

ಹೀಗಾಗಿ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗುತ್ತಿರುವ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದ ಮೇಲೆ ಹೆಚ್ಚಿನ ಗಮನ ಹರಿಸಿರುವ ರೆನಾಲ್ಟ್ ಸಂಸ್ಥೆಯು, ಕಳೆದ ತಿಂಗಳು ಡಸ್ಟರ್ ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಇದೀಗ ಟ್ರೈಬರ್ ಎಂಪಿವಿ ಮತ್ತು ಕ್ವಿಡ್ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಫೇಸ್‌ಲಿಫ್ಟ್ ಆವೃತ್ತಿಗಳ ಮೂಲಕ ಗ್ರಾಹಕರ ಬೇಡಿಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರೆನಾಲ್ಟ್, ಎಂಟ್ರಿ ಲೆವೆಲ್ ಕಾರುಗಳಲ್ಲಿ ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಹೀಗಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಮಹತ್ವದ ಬದಲಾವಣೆ ತಂದಿರುವ ರೆನಾಲ್ಟ್ ಸಂಸ್ಥೆಯು ಈ ಹಿಂದಿನ 0.8-ಲೀಟರ್ ಮತ್ತು 1.0-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಎಂಜಿನ್ ಪರ್ಫಾಮೆನ್ಸ್ ಮತ್ತು ಇಂಧನ ಕಾರ್ಯಕ್ಷಮತೆಯಲ್ಲಿ ಸಾಕಷ್ಟು ಸುಧಾರಣೆ ತಂದಿದೆ.

ಜೊತೆಗೆ ಫೇಸ್‌ಲಿಫ್ಟ್ ಕ್ವಿಡ್ ಮಾದರಿಯು ಹೊಸ ನಿಯಮಗಳಿಗೆ ಅನುಸಾರವಾಗಿ ಮತ್ತಷ್ಟು ಹೊಸ ಪ್ರಯಾಣಿಕರ ಸುರಕ್ಷಾ ಕ್ರಮಗಳನ್ನು ಹೊತ್ತುಬರಲಿದ್ದು, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್, ಇಬಿಡಿ, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಹೊಂದಿರಲಿದೆ.
MOST READ: ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!

ಇದರಿಂದಾಗಿ ಹೊಸ ಕಾರು ಮಾಲಿನ್ಯ ಉತ್ಪಾದನೆಯಲ್ಲಿ ಗಣನೀಯ ಇಳಿಕೆ ಕಂಡಿದ್ದು, ಮೈಲೇಜ್ ಪ್ರಮಾಣದಲ್ಲೂ ತುಸು ಏರಿಕೆ ಕಂಡುಬರಲಿದೆ ಎನ್ನಲಾಗಿದೆ. ಇದರಿಂದ ಕಾರಿನ ಬೆಲೆಗಳು ತುಸು ದುಬಾರಿಯಾಗಲಿದ್ದು, ಪ್ರಸ್ತುತ ಮಾದರಿಗಿಂತ ರೂ. 20 ಸಾವಿರದಿಂದ ರೂ. 60 ಸಾವಿರ ತನಕ ಹೆಚ್ಚಳವಾಗಬಹುದು ಎನ್ನಲಾಗಿದೆ.
MOST READ: ಬಂಪರ್ ಕ್ರ್ಯಾಶ್ ಗಾರ್ಡ್ ವಿರುದ್ದ ವಿಶೇಷ ಕಾರ್ಯಾಚರಣೆ- ನಿಯಮ ಉಲ್ಲಂಘನೆಗೆ ದಂಡ ಎಷ್ಟು ಗೊತ್ತಾ?

ಬಿಡುಗಡೆಯ ಅವಧಿ
ಮಾಹಿತಿಗಳ ಪ್ರಕಾರ, ಹೊಸ ಫೇಸ್‌ಲಿಫ್ಟ್ ಕ್ವಿಡ್ ಮಾದರಿಯು ಇದೇ ವರ್ಷ ಸೆಪ್ಟೆಂಬರ್ ಕೊನೆಯಲ್ಲಿ ಇಲ್ಲವೇ ಅಕ್ಟೋಬರ್ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ ರೆನಾಲ್ಟ್ ಸಂಸ್ಥೆಯ ಹೊಸ ಬ್ರಾಂಡ್ ಟ್ರೈಬರ್ ಎಂಪಿವಿ ಕಾರು ರಸ್ತೆಗಿಳಿಯಲಿದೆ.
MOST READ: ಬಾಲಿವುಡ್ ಸಿಂಗಂ ಕೈಸೇರಿದ ದೇಶದ ಅತಿ ದುಬಾರಿ ಎಸ್‌ಯುವಿ ಕಾರು..!

ಈ ಮೂಲಕ ಹ್ಯಾಚ್‌ಬ್ಯಾಕ್ ಮಾದರಿಗಳಾದ ಮಾರುತಿ ಸುಜುಕಿ ಆಲ್ಟೋ 800, ನಿಸ್ಸಾನ್ ಮೈಕ್ರಾ, ಹ್ಯುಂಡೈ ಸ್ಯಾಂಟ್ರೋ ಮತ್ತು ಡಸ್ಟನ್ ಕಾರುಗಳಿಗೆ ಇದು ತೀವ್ರ ಪೈಟೋಟಿ ನೀಡಲಿದ್ದು, ತಾಂತ್ರಿಕವಾಗಿ ಮತ್ತಷ್ಟು ಬಲಿಷ್ಠ ಹೊಂದಿರುವುದು ಗ್ರಾಹಕರನ್ನು ಆಕರ್ಷಿಸಲಿದೆ.


Click it and Unblock the Notifications