ಡೀಸೆಲ್ ಕಾರುಗಳ ಉತ್ಪಾದನೆಗೆ ಅಧಿಕೃತವಾಗಿ ಗುಡ್ ಬೈ ಹೇಳಿದ ರೆನಾಲ್ಟ್
ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಗೆ ತಗ್ಗಿಸುವ ಉದ್ದೇಶದಿಂದ ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರೆನಾಲ್ಟ್ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು 2020ರಿಂದಲೇ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವ ಸುಳಿವು ನೀಡಿವೆ.

ಹೌದು, ಡೀಸೆಲ್ ಎಂಜಿನ್ ವಾಹನಗಳು ಮಾಲಿನ್ಯ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಜಾರಿಗೆ ಬರಲಿರುವ ಬಿಎಸ್-6 (ಭಾರತ್ ಸ್ಟೇಜ್) ನಿಯಮವು ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಉತ್ಪಾದನೆಗೆ ಬ್ರೇಕ್ ಹಾಕಲಿದೆ. ಹೀಗಾಗಿಯೇ ರೆನಾಲ್ಟ್, ಮಾರುತಿ ಸುಜುಕಿ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಜನಪ್ರಿಯ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಕೈಬಿಟ್ಟು ಪೆಟ್ರೋಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಆವೃತ್ತಿಗಳ ಉತ್ಪಾದನೆಯತ್ತ ಹೆಚ್ಚಿನ ಗಮನಹರಿಸಲು ಮುಂದಾಗಿವೆ.

ಈಗಾಗಲೇ ಮಾರುತಿ ಸುಜುಕಿ ಸಂಸ್ಥೆಯು ಅಧಿಕೃತವಾಗಿಯೇ ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು 2020ರ ಏಪ್ರಿಲ್‌ನಿಂದ ಬಂದ್ ಮಾಡುವುದಾಗಿ ಹೇಳಿಕೊಂಡಿದ್ದು, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದೆ.

ಇದೀಗ ರೆನಾಲ್ಟ್ ಕೂಡಾ ಡೀಸೆಲ್ ಎಂಜಿನ್ ಕಾರುಗಳ ಮಾರಾಟಕ್ಕೆ ಗುಡ್‌ಬೈ ಹೇಳುವ ಮುನ್ಸೂಚನೆ ನೀಡಿದ್ದು, ಕಳೆದ ವಾರವಷ್ಟೇ ಬಿಡುಗಡೆಗೊಂಡ ಟ್ರೈಬರ್ ಎಂಪಿವಿ ಕಾರಿನಲ್ಲೂ ಸಹ ಪೆಟ್ರೋಲ್ ಹೊರತುಪಡಿಸಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈಬಿಟ್ಟಿರುವುದು ಇದೇ ಕಾರಣಕ್ಕೆ.

ಹಾಗೆಯೇ ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಜ್ಜಾಗುತ್ತಿರುವ ನೆಕ್ಸ್ಟ್ ಜನರೇಷನ್ ಡಸ್ಟರ್ ಆವೃತ್ತಿಗಳಲ್ಲೂ ಡೀಸೆಲ್ ಎಂಜಿನ್ ಆಯ್ಕೆಗಳನ್ನು ತಗ್ಗಿಸಿ ಪೆಟ್ರೋಲ್ ಮತ್ತು ಹೈಬ್ರಿಡ್ ಆವೃತ್ತಿಗಳ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಲಿದ್ದು, ತದನಂತರ ನಿಧಾನವಾಗಿ ಡೀಸೆಲ್ ಎಂಜಿನ್‌ಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಿದೆ. ಈ ಬಗ್ಗೆ ಎಕಾನಮಿಕ್ ಟೈಮ್ಸ್ ಜೊತೆ ಮಾತನಾಡಿರುವ ರೆನಾಲ್ಟ್ ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ನಿಲ್ಲಿಸುವ ಯೋಜನೆಯಲ್ಲಿದ್ದೇವೆ ಎಂದಿದ್ದಾರೆ.

2020ರ ಏಪ್ರಿಲ್ 1ರಿಂದ ದೇಶಾದ್ಯಂತ ಬಿಎಸ್-6 ನಿಯಮವು ಜಾರಿಗೆ ಬರುತ್ತಿದ್ದು, ಚಾಲ್ತಿಯಲ್ಲಿರುವ ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟವು ಸಂಪೂರ್ಣವಾಗಿ ಬಂದ್ ಆಗಲಿದೆ. ಹೀಗಾಗಿ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಉನ್ನತಿಕರಣ ಸಾಧ್ಯವಿಲ್ಲದ ಡೀಸೆಲ್ ಎಂಜಿನ್‌ಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ.

ಒಂದು ವೇಳೆ ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತಿಕರಿಸಿದರೂ ಸಹ ಕಾರಿನ ಬೆಲೆಗಳು ಕನಿಷ್ಠ ರೂ. 1.50 ರಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.
MOST READ: ಬಿಎಸ್4 v/s ಬಿಎಸ್6 - ಹೊಸ ನಿಯಮದಿಂದ ವಾಹನಗಳಲ್ಲಿ ಏನೆಲ್ಲಾ ಚೇಂಜ್?

ಇದರಿಂದಾಗಿ ಅಗ್ಗದ ಕಾರು ಉನ್ಪತ್ನಗಳನ್ನು ಮಾರಾಟಮಾಡುವ ಕಾರು ಸಂಸ್ಥೆಗಳಿಗೆ ಇದು ಬಿಸಿತುಪ್ಪವಾಗಿ ಪರಿಣಮಿಸಲಿದ್ದು, ಕಾರುಗಳ ಬೆಲೆಗಳನ್ನು ಒಂದೇ ಬಾರಿಗೆ ರೂ.1.50 ಲಕ್ಷ ರೂ. 2 ಲಕ್ಷ ಹೆಚ್ಚಳ ಮಾಡಿದ್ದಲ್ಲಿ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ.
MOST READ: ಹತ್ತು ಸಾವಿರಕ್ಕೆ ಎಲೆಕ್ಟ್ರಿಕ್ ಬೈಕ್ ತಯಾರಿಸಿದ ಮೆಕಾನಿಕ್

ಇದರಿಂದ ರೆನಾಲ್ಟ್ ಸಂಸ್ಥೆಯು ನಿಸ್ಸಾನ್ ಉತ್ಪಾದನೆಯ ಡೀಸೆಲ್ ಎಂಜಿನ್ ಆಯ್ಕೆ ಕೈಬಿಟ್ಟು ಸದ್ಯ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಟರ್ಬೋ ಪೆಟ್ರೋಲ್ ಮತ್ತು1.6-ಲೀಟರ್ ಇನ್-ಲೈನ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಉನ್ನತಿಕರಿಸಿ ಬಿಡುಗಡೆ ಮಾಡುವ ಯೋಜನೆ ಹೊಂದಲಾಗಿದೆ.

ಇನ್ನು ರೆನಾಲ್ಟ್ ಸಂಸ್ಥೆಯು ತನ್ನ ಎಂಪಿವಿ ಆವೃತ್ತಿಯಾದ ಲೋಡ್ಜಿ ಕಾರನ್ನು ಈಗಾಗಲೇ ಮಾರಾಟದಿಂದ ಸ್ಥಗಿತಗೊಳಿಸಿದ್ದು, ಲೋಡ್ಜಿ ಬದಲಾಗಿ ಎಂಟ್ರಿ ಲೆವಲ್ ಟ್ರೈಬರ್ ಆವೃತ್ತಿಯನ್ನು ಮಾರಾಟ ಮಾಡುತ್ತಿದೆ. ಗ್ರಾಹಕರ ಬೇಡಿಕೆಯೆಂತೆ ಎಂಟ್ರಿ ಲೆವಲ್‌ನಲ್ಲಿ ಟ್ರೈಬರ್ ಎಂಪಿವಿ ಕಾರನ್ನು ಬಿಡುಗಡೆ ಮಾಡಿದೆ.
MOST READ: ಜೆಸಿಬಿ ಯಂತ್ರವು ಹಳದಿ ಬಣ್ಣದಲ್ಲೇ ಏಕಿರುತ್ತೆ?

ಟ್ರೈಬರ್ ಎಂಪಿವಿ ಕಾರು ಸಣ್ಣ ಗಾತ್ರದ 7 ಸೀಟರ್ ಕಾರು ಮಾದರಿಯಾಗಿದ್ದು, 1.0-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿದೆ.


Click it and Unblock the Notifications