Just In
- 40 min ago ಭರ್ಜರಿ ಮೈಲೇಜ್ನ ಹೈಬ್ರಿಡ್ ಮಾರುತಿ ಸ್ವಿಫ್ಟ್: ಇವಿ ಕಾರುಗಳನ್ನೂ ಹಿಂದಿಕ್ಕಲಿದೆ ಎಂದ ಭವಿಷ್ಯವಾಣಿ!
- 1 hr ago ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago BAJAJ CNG ಬೈಕ್ ಚಿತ್ರಗಳು ಸೋರಿಕೆ: ಬೆಲೆ ಕೇಳಿದರೆ ಶಾಕ್ ಆಗುವುದಂತೂ ಪಕ್ಕಾ!
- 2 hrs ago Fujiyama EV: ಅಗ್ಗದ ಬೆಲೆಯಲ್ಲಿ ಹೊಸ ಇವಿ ಸ್ಕೂಟರ್ ಬಿಡುಗಡೆ: ಬೆಲೆ, ವಿಶೇಷತೆಗಳೇನು?
Don't Miss!
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Sports IPL 2024: ಮುಂಬೈ ಇಂಡಿಯನ್ಸ್ಗೆ ಭಾರೀ ಹಿನ್ನಡೆ; ಹಾರ್ಟ್ಬ್ರೇಕ್ ಪೋಸ್ಟ್ ಮಾಡಿದ ಸೂರ್ಯಕುಮಾರ್
- Movies ಬಾಲಿವುಡ್ ಹಾಟ್ ಕಪಲ್ ರೊಮ್ಯಾನ್ಸ್ ನೋಡಿ ಪೂಜಾ ಹೆಗ್ಡೆಗೆ ಅಸೂಯೆ!; ವಿಡಿಯೋ ವೈರಲ್
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಎರ್ಟಿಗಾ ಪ್ರತಿಸ್ಪರ್ಧಿ ರೆನಾಲ್ಟ್ 7 ಸೀಟರ್ ಕಾರು..!
ರೆನಾಲ್ಟ್ ಇಂಡಿಯಾ ಸಂಸ್ಥೆಯು ಮುಂಬರುವ ದಿನಗಳಲ್ಲಿ ತನ್ನ ಹೊಚ್ಚ ಹೊಸ ಮಿನಿ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಆರ್ಬಿಸಿ ಕೋಡ್ ಆಧಾರದ ಮೇಲೆ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ದೇಶದ ವಿವಿಧಡ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.
ಮಧ್ಯಮ ಗಾತ್ರದ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸಿ ಯಶಸ್ವಿಯಾಗಿರುವ ರೆನಾಲ್ಟ್ ಸಂಸ್ಥೆಯು ಲೊಡ್ಜಿ ಎಂಪಿವಿ ಕಾರುಗಳ ಮಾರಾಟದಲ್ಲಿ ತುಸು ಹಿನ್ನೆಡೆ ಅನುಭವಿಸಿದೆ ಅಂದ್ರೆ ತಪ್ಪಾಗುವುದಿಲ್ಲ. ಇದೇ ಕಾರಣಕ್ಕಾಗಿ ಕಾರು ಮಾರಾಟದಲ್ಲಿ ಭಾರೀ ಬದಲಾವಣೆಗೆ ನಿರ್ಧರಿಸಿರುವ ರೆನಾಲ್ಟ್ ಈ ಬಾರಿ ಹೊಸ ಯೋಜನೆಗೆ ಕೈಹಾಕಿದೆ. ಹೊಸ ಕಾರು ಉತ್ಪನ್ನದೊಂದಿಗೆ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿರುವ ರೆನಾಲ್ಟ್ ಸಂಸ್ಥೆಯು ವಿನೂತನ ಶೈಲಿಯ 7 ಸೀಟರ್ ಮಾದರಿಯ ಮಿನಿ ಎಂಪಿವಿ ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.
ರೆನಾಲ್ಟ್ ಇಂಡಿಯಾ ಸಂಸ್ಥೆಯು ಭಾರತದಲ್ಲಿ ತನ್ನ ಹೊಸ ಎಂಪಿವಿ ಕಾರುನ್ನು ಸದ್ಯಕ್ಕೆ ಆರ್ಬಿಸಿ ಎನ್ನುವ ಕೋಡ್ ಆಧಾರ ಮೇಲೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಕೆಲವು ಮಹತ್ವದ ಮಾಹಿತಿಗಳು ಲಭ್ಯವಾಗಿವೆ.
ರೆನಾಲ್ಟ್ ಹೊಸ ಮಿನಿ ಎಂಪಿವಿ ಕಾರು ಕ್ವಿಡ್ ಕಾರಿನ ಉತ್ಪಾದನಾ ಪ್ಲ್ಯಾಟ್ಫಾರ್ಮ್ ಆಧರಿಸಿ ಸಿದ್ದಗೊಂಡಿದ್ದು, ಕ್ವಿಡ್ ಕಾರಿಗಿಂತಲೂ ತುಸು ದೊಡ್ಡದಾಗಿದೆ. ಆದ್ರೆ ಲೊಡ್ಜಿ ಕಾರಿಗಿಂತಲೂ ಗಾತ್ರದಲ್ಲಿ ಚಿಕ್ಕದಾಗಿದ್ದರೂ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುವ ನೀರಿಕ್ಷೆಯಲ್ಲಿದೆ.
ಈಗಾಗಲೇ ತಮಿಳುನಾಡಿನ ಪ್ರಮುಖ ಕಡೆಗಳಲ್ಲಿ ರೆನಾಲ್ಟ್ ಹೊಸ ಎಂಪಿವಿ ಕಾರು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ರೆನಾಲ್ಟ್ ಸಂಸ್ಥೆಯ ಸಿಎಂಎಫ್ ಎ ಪ್ಲಸ್ ಕಾರು ಉತ್ಪಾದನಾ ಪ್ಯಾರ್ಟ್ಫಾರ್ಮ್ ಅಡಿಯಲ್ಲಿ ಈ ಹೊಸ ಕಾರನ್ನು ಅಭಿವೃದ್ಧಿ ಮಾಡಲಾಗಿದೆಯೆಂತೆ. ಎಂಪಿವಿ ಮಾದರಿಗಳಲ್ಲೇ ಸಣ್ಣ ಗಾತ್ರದ ಕಾರು ಆವೃತ್ತಿಯಾಗಿರುವ ರೆನಾಲ್ಟ್ ಹೊಸ ಕಾರು ಬೆಲೆ ಮತ್ತು ಎಂಜಿನ್ ಗಾತ್ರದಲ್ಲೂ ತುಸು ಬದಲಾವಣೆಯೊಂದಿಗೆ ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದ್ದು, ಲೊಡ್ಜಿ ಕಾರುಗಳ ಮಾರಾಟದಲ್ಲಿ ಆದ ಹಿನ್ನಡೆಯನ್ನು ಈ ಕಾರಿನ ಮೂಲಕ ಗ್ರಾಹಕರ ಬೇಡಿಕೆಯನ್ನು ಕಾಯ್ದುಕೊಳ್ಳಲು ಇದು ನೆರವಾಗಲಿದೆ.
MOST READ: ಆಟೋ ರಿಕ್ಷಾಗಳನ್ನು ಹಿಂದಿಕ್ಕುತ್ತಾ ಬಜಾಜ್ ಕ್ಯೂಟ್.?
ಲಭ್ಯವಾಗಿರುವ ಮಾಹಿತಿಗಳ ಪ್ರಕಾರ, 7 ಸೀಟರ್ ಸೌಲಭ್ಯವನ್ನು ಹೊಂದಿರುವ ರೆನಾಲ್ಟ್ ಹೊಸ ಎಂಪಿವಿ ಕಾರು ಗುಣಮಟ್ಟ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಡ್ಯುಯಲ್ ಟೋನ್ ಡ್ಯಾಶ್ಬೋರ್ಡ್, ಡ್ಯುಯಲ್ ಏರ್ಬ್ಯಾಗ್, ಎಬಿಎಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಲ್ಇಡಿ ಡಿಆರ್ಎಸ್, ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಮತ್ತು ಪುಶ್ ಬಟನ್ ಸ್ಟಾರ್ಟ್ ಸೌಲಭ್ಯಗಳು ಇದರಲ್ಲಿವೆ.
ಎಂಜಿನ್ ಸಾಮರ್ಥ್ಯ
ಹೊಸ ಕಾರುಗಳಲ್ಲಿ 1.2-ಲೀಟರ್ ಪೆಟ್ರೋಲ್ ಅಥವಾ 1.5-ಲೀಟರ್ ಡೀಸೆಲ್ ಎಂಜಿನ್ ಒದಗಿಸುವ ಸಾಧ್ಯತೆಗಳಿದ್ದು, ಇದು ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆ ಕಾಯ್ದುಕೊಳ್ಳವು ನೆರವಾಗಲಿದೆ ಎನ್ನಬಹುದು.
MOST READ: 11 ವರ್ಷಗಳ ಹಿಂದಿನ ಅಪಘಾತ ಪ್ರಕರಣದಲ್ಲಿ ಕೆಎಸ್ಆರ್ಟಿಸಿಗೆ ಸಿಕ್ಕ ಪರಿಹಾರ ಎಷ್ಟು ಗೊತ್ತಾ?
ಕಾರಿನ ಬೆಲೆಗಳು(ಅಂದಾಜು)
ಕಾರಿನ ಗುಣಮಟ್ಟ ಮತ್ತು ಎಂಜಿನ್ ಸಾಮರ್ಥ್ಯವನ್ನು ನೋಡಿದಾಗ ಹೊಸ ಕಾರಿನ ಬೆಲೆಯು ರೂ. 7 ಲಕ್ಷದಿಂದ ರೂ. 9.50 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರುಗಳು 2019ರ ಜುಲೈ ಅಂತ್ಯಕ್ಕೆ ಖರೀದಿಗೆ ಲಭ್ಯವಾಗುವ ಬಗ್ಗೆ ರೆನಾಲ್ಟ್ ಇಂಡಿಯಾ ಸಿಇಒ ಎಂ. ವೆಂಕಟರಾಮ್ ಅವರು ಎಕನಾಮಿಕ್ ಟೈಮ್ಸ್ ಸುದ್ದಿ ಸಂಸ್ಥೆಯ ಸಂದರ್ಶನದಲ್ಲಿ ಕೆಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.