Just In
- 12 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 12 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 14 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 15 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News India Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ, ಹಿಮಪಾತ ಸಾಧ್ಯತೆ: ಭಾರತದ ಈ ಭಾಗದಲ್ಲಿ ತಂಪೆರೆಯಲಿರುವ ವರುಣ
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Movies Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೆನಾಲ್ಟ್ ಟ್ರೈಬರ್ ಎಂಪಿವಿ ಕಾರಿನ ಮೊದಲ ಟೀಸರ್ ಇಲ್ಲಿದೆ ನೋಡಿ..
ರೆನಾಲ್ಟ್ ಇಂಡಿಯಾ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಹೊಸ ಎಸ್ಯುವಿ ಕಾರನ್ನು ಬಿಡುಗಡೆ ಮಾಡಲಿದ್ದು, ಕೆಲವು ಹಿಂದಷ್ಟೆ ತಮ್ಮ ಸಬ್ 4 ಮೀಟರ್ ಎಂಪಿವಿ ಕಾರಿಗೆ ಟ್ರೈಬರ್ ಎಂಬ ಹೆಸರನ್ನು ಇಡಲಾಯಿತು. ರೆನಾಲ್ಟ್ ಸಂಸ್ಥೆಯು ತಮ್ಮ ಟ್ರೈಬರ್ ಎಂಪಿವಿ ಕಾರನ್ನು ಇದೇ ವರ್ಷದ ಜುಲೈ ಮಾಸದಲ್ಲಿ ಬಿಡುಗಡೆ ಮಾಡುವ ಆಲೋಚನೆಯಲಿದ್ದು, ತನ್ನ ಗ್ರಾಹಕರಿಗಾಗಿ ಈ ಕಾರಿನ ಅಧಿಕೃತ ಟೀಸರ್ ಒಂದನ್ನು ಹೊರ ಹಾಕಿದೆ.
ಮಧ್ಯಮ ಗಾತ್ರದ ಹಲವು ಕಾರು ಮಾದರಿಗಳನ್ನು ಬಿಡುಗಡೆಗೊಳಿಸಿ ಯಶಸ್ವಿಯಾಗಿರುವ ರೆನಾಲ್ಟ್ ಸಂಸ್ಥೆಯು ಲೊಡ್ಜಿ ಎಂಪಿವಿ ಕಾರುಗಳ ಮಾರಾಟದಲ್ಲಿ ತುಸು ಹಿನ್ನೆಡೆ ಅನುಭವಿಸಿದೆ ಅಂದ್ರೆ ತಪ್ಪಾಗುವುದಿಲ್ಲ. ಇದೇ ಕಾರಣಕ್ಕಾಗಿ ಕಾರು ಮಾರಾಟದಲ್ಲಿ ಭಾರೀ ಬದಲಾವಣೆಗೆ ನಿರ್ಧರಿಸಿರುವ ರೆನಾಲ್ಟ್ ಈ ಬಾರಿ ಹೊಸ ಯೋಜನೆಗೆ ಕೈಹಾಕಿದೆ. ಹೊಸ ಕಾರು ಉತ್ಪನ್ನದೊಂದಿಗೆ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿರುವ ರೆನಾಲ್ಟ್ ಸಂಸ್ಥೆಯು ವಿನೂತನ ಶೈಲಿಯ 7 ಸೀಟರ್ ಮಾದರಿಯ ಮಿನಿ ಎಂಪಿವಿ ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.
ರೆನಾಲ್ಟ್ ಇಂಡಿಯಾ ಸಂಸ್ಥೆಯು ಭಾರತದಲ್ಲಿ ತನ್ನ ಹೊಸ ಎಂಪಿವಿ ಟ್ರೈಬರ್ ಕಾರನ್ನು ಸದ್ಯಕ್ಕೆ ಆರ್ಬಿಸಿ ಎನ್ನುವ ಕೋಡ್ ನೆಮ್ ಆಧಾರ ಮೇಲೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಕೆಲವು ಮಹತ್ವದ ಮಾಹಿತಿಗಳನ್ನು ಈ ಹಿಂದೆ ಬಹಿರಂಗ ಪಡೆಸಿತ್ತು.
ರೆನಾಲ್ಟ್ ಹೊಸ ಮಿನಿ ಎಂಪಿವಿ ಟ್ರೈಬರ್ ಕಾರು ಕ್ವಿಡ್ ಕಾರಿನ ಉತ್ಪಾದನಾ ಪ್ಲ್ಯಾಟ್ಫಾರ್ಮ್ ಆಧರಿಸಿ ಸಿದ್ದಗೊಂಡಿದ್ದು, ಕ್ವಿಡ್ ಕಾರಿಗಿಂತಲೂ ತುಸು ದೊಡ್ಡದಾಗಿರಲಿದೆ. ಹಾಗೆಯೇ ಲೊಡ್ಜಿ ಕಾರಿಗಿಂತಲೂ ಗಾತ್ರದಲ್ಲಿ ಚಿಕ್ಕದಾಗಿದ್ದರೂ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುವ ನೀರಿಕ್ಷೆಯಲ್ಲಿದೆ.
ಈಗಾಗಲೇ ತಮಿಳುನಾಡಿನ ಪ್ರಮುಖ ಕಡೆಗಳಲ್ಲಿ ರೆನಾಲ್ಟ್ ಹೊಸ ಎಂಪಿವಿ ಕಾರು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ರೆನಾಲ್ಟ್ ಸಂಸ್ಥೆಯ ಸಿಎಂಎಫ್ ಎ ಪ್ಲಸ್ ಕಾರು ಉತ್ಪಾದನಾ ಪ್ಯಾರ್ಟ್ಫಾರ್ಮ್ ಅಡಿಯಲ್ಲಿ ಈ ಹೊಸ ಕಾರನ್ನು ಅಭಿವೃದ್ಧಿ ಮಾಡಲಾಗಿದೆಯೆಂತೆ. ಹೀಗಾಗಿ ಕಾರಿನ ವಿನ್ಯಾಸವು ಎಂಪಿವಿ ಕಾರು ಖರೀದಿದಾರರ ಗಮನಸೆಳೆಯಲಿದ್ದು, ಮಾರುತಿ ಸುಜುಕಿ ಎರ್ಟಿಗಾ ಮತ್ತು ಮಹೀಂದ್ರಾ ಮರಾಜೋ ಕಾರಿಗೆ ತೀವ್ರ ಪೈಪೋಟಿ ನೀಡಲಿದೆ.
ಜೊತೆಗೆ ಎಂಪಿವಿ ಮಾದರಿಗಳಲ್ಲೇ ಸಣ್ಣ ಗಾತ್ರದ ಕಾರು ಆವೃತ್ತಿಯಾಗಿರುವ ರೆನಾಲ್ಟ್ ಹೊಸ ಕಾರು ಬೆಲೆ ಮತ್ತು ಎಂಜಿನ್ ಗಾತ್ರದಲ್ಲೂ ತುಸು ಬದಲಾವಣೆಯೊಂದಿಗೆ ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದ್ದು, ಲೊಡ್ಜಿ ಕಾರುಗಳ ಮಾರಾಟದಲ್ಲಿ ಆದ ಹಿನ್ನಡೆಯನ್ನು ಈ ಕಾರಿನ ಮೂಲಕ ಗ್ರಾಹಕರ ಬೇಡಿಕೆಯನ್ನು ಕಾಯ್ದುಕೊಳ್ಳಲು ಇದು ನೆರವಾಗಲಿದೆ.
ಲಭ್ಯವಾಗಿರುವ ಮಾಹಿತಿಗಳ ಪ್ರಕಾರ, 7 ಸೀಟರ್ ಸೌಲಭ್ಯವನ್ನು ಹೊಂದಿರುವ ರೆನಾಲ್ಟ್ ಹೊಸ ಎಂಪಿವಿ ಕಾರು ಗುಣಮಟ್ಟದ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಡ್ಯುಯಲ್ ಟೋನ್ ಡ್ಯಾಶ್ಬೋರ್ಡ್, ಡ್ಯುಯಲ್ ಏರ್ಬ್ಯಾಗ್, ಎಬಿಎಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಲ್ಇಡಿ ಡಿಆರ್ಎಸ್, ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಮತ್ತು ಪುಶ್ ಬಟನ್ ಸ್ಟಾರ್ಟ್ ಸೌಲಭ್ಯಗಳು ಇದರಲ್ಲಿವೆ.
ಎಂಜಿನ್ ಸಾಮರ್ಥ್ಯ
ಹೊಸ ಕಾರುಗಳಲ್ಲಿ 1.2-ಲೀಟರ್ ಪೆಟ್ರೋಲ್ ಅಥವಾ 1.5-ಲೀಟರ್ ಡೀಸೆಲ್ ಎಂಜಿನ್ ಒದಗಿಸುವ ಸಾಧ್ಯತೆಗಳಿದ್ದು, ಇದು ಪರ್ಫಾಮೆನ್ಸ್ ಜೊತೆಗೆ ಉತ್ತಮ ಇಂಧನ ದಕ್ಷತೆ ಕಾಯ್ದುಕೊಳ್ಳವು ನೆರವಾಗಲಿದೆ ಎನ್ನಬಹುದು.
ಕಾರಿನ ಬೆಲೆಗಳು(ಅಂದಾಜು)
ಕಾರಿನ ಗುಣಮಟ್ಟ ಮತ್ತು ಎಂಜಿನ್ ಸಾಮರ್ಥ್ಯವನ್ನು ನೋಡಿದಾಗ ಹೊಸ ಕಾರಿನ ಬೆಲೆಯು ರೂ. 7 ಲಕ್ಷದಿಂದ ರೂ. 9.50 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರುಗಳು 2019ರ ಜುಲೈ ಅಂತ್ಯಕ್ಕೆ ಖರೀದಿಗೆ ಲಭ್ಯವಾಗುವ ಬಗ್ಗೆ ರೆನಾಲ್ಟ್ ಇಂಡಿಯಾ ಸಿಇಒ ಎಂ. ವೆಂಕಟರಾಮ್ ಸುಳಿವು ನೀಡಿದ್ದಾರೆ.