ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ರೆನಾಲ್ಟ್ ಸಂಸ್ಥೆಯು ಕಳೆದ 2 ದಿನಗಳ ಹಿಂದಷ್ಟೇ ಭಾರತದಲ್ಲಿ ಅನಾವರಣಗೊಳಿಸಲಾದ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಎಂಪಿವಿ ಕಾರು ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗೊಳಿಸಲಿದ್ದು, ಹೊಸ ಕಾರು ಭಾರತದಲ್ಲಿ ಅಷ್ಟೇ ಅಲ್ಲದೇ ವಿದೇಶಿ ಮಾರುಕಟ್ಟೆಗಳಿಗೂ ಭಾರತದಿಂದ ರಫ್ತುಗೊಳ್ಳಲಿದೆಯೆಂತೆ.

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ಹೌದು, ರೆನಾಲ್ಟ್ ಸಂಸ್ಥೆಯು ಭಾರತದಿಂದ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಟ್ರೈಬರ್ ಆವೃತ್ತಿಯನ್ನು ರಫ್ತು ಕೈಗೊಳ್ಳಲು ನಿರ್ಧರಿಸಿದ್ದು, ಹೊಸ ಕಾರು ಮಾದರಿಯು ಹಲವು ಹೊಸತನಗಳೊಂದಿಗೆ ವಿದೇಶಿ ಮಾರುಕಟ್ಟೆಯಲ್ಲೂ ಸದ್ದು ಮಾಡುವ ನೀರಿಕ್ಷೆಯಲ್ಲಿದೆ. ವ್ಯಯಕ್ತಿಕ ಕಾರು ಬಳಕೆದಾರರನ್ನು ಗಮನದಲ್ಲಿಟ್ಟು ಅಗ್ಗದ ಬೆಲೆಯಲ್ಲಿ ಉತ್ತಮ ಫೀಚರ್ಸ್ ಸೌಲಭ್ಯವುಳ್ಳ ಹೊಸ ಎಂಪಿವಿ ಅಭಿವೃದ್ಧಿಗೊಳಿಸಲು ಯತ್ನಿಸಿರುವ ರೆನಾಲ್ಟ್ ಸಂಸ್ಛೆಯು ಟ್ರೈಬರ್ ಎನ್ನುವ ಹೊಸ ಕಾರು ಮಾದರಿಯನ್ನು ರಸ್ತೆಗಿಳಿಸಿದೆ.

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ಪ್ರಸ್ತುತ ಮಾರುಕಟ್ಟೆಯಲ್ಲಿ ಕ್ವಿಡ್, ಡಸ್ಟರ್, ಕ್ಯಾಚ್ಚರ್ ಮತ್ತು ಲೊಡ್ಜಿ ಕಾರುಗಳನ್ನು ಮಾರಾಟ ಮಾಡುತ್ತಿರುವ ರೆನಾಲ್ಟ್ ಸಂಸ್ಥೆಯು ಕ್ವಿಡ್ ಮತ್ತು ಡಸ್ಟರ್ ಹೊರತುಪಡಿಸಿ ಇನ್ನುಳಿದ ಕಾರುಗಳ ಮಾರಾಟದಲ್ಲಿ ಅಷ್ಟಾಗಿ ಯಶಸ್ಸು ಸಾಧಿಸಿಲ್ಲ. ಹೀಗಾಗಿ ಕಾರುಗಳ ವಿನ್ಯಾಸವನ್ನು ಬದಲಿಸುತ್ತಿರುವ ರೆನಾಲ್ಟ್ ಸಂಸ್ಥೆಯು ಫೇಸ್‌ಲಿಫ್ಟ್ ಆವೃತ್ತಿಗಳನ್ನು ಅಭಿವೃದ್ದಿಗೊಳಿಸುತ್ತಿದೆ.

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ಹೀಗಾಗಿ ರೆನಾಲ್ಟ್ ಫೇಸ್‌ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವು ಸಂಪೂರ್ಣ ಬದಲಾವಣೆಗೊಂಡಿದ್ದು, ಫೇಸ್‌ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಅನಾವರಣಗೊಳಿಸಲಾದ ಟ್ರೈಬರ್ ಎಂಪಿವಿ ಕಾರು ಕೂಡಾ ಅಭಿವೃದ್ಧಿ ಹೊಂದಿದೆ.

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ರೆನಾಲ್ಟ್ ಸಂಸ್ಥೆಯು ಹೊಸ ಕಾರುಗಳ ಅಭಿವೃದ್ಧಿಗಾಗಿ ಸಿಎಂಎಫ್-ಎ ಪ್ಲಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಕ್ವಿಡ್ ಮಾದರಿಯಲ್ಲೇ ಇರುವ ಟ್ರೈಬರ್ ಕಾರಿನಲ್ಲಿ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ. ಇದರಿಂದ ಈ ಹೊಸ ಕಾರು ಕೇವಲ ಕುಟುಂಬದ ಸದಸ್ಯರೊಂದಿಗೆ ಪ್ರಯಾಣಿಸಲು ಮಾತ್ರವೇ ಅನುಕೂಲಕರವಾಗಿದ್ದು, ವಾಣಿಜ್ಯ ಬಳಕೆಯ ಕಾರು ಮಾದರಿಯಾಗಿ ಬಳಕೆ ಮಾಡಲು ಅಷ್ಟಾಗಿ ಅನುಕೂಲಕರವಾಗಿಲ್ಲ.

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ಕಾರಿನ ಉದ್ದಳತೆ

ಹೊಸ ಕಾರಿನ ಮೇಲೆ ತೆರಿಗೆ ತಗ್ಗಿಸಲು ಹೊಸ ಕಾರನ್ನು 4 ಮೀಟರ್‌ಗಿಂತಲೂ ಹೆಚ್ಚು ವಿಸ್ತರಣೆ ಮಾಡಲು ನಿರ್ಧರಿಸಿರುವ ರೆನಾಲ್ಟ್ ಸಂಸ್ಥೆಯು 3,990-ಎಂಎಂ ಉದ್ದ, 1,739-ಎಂಎಂ ಅಗಲ, 1,643-ಎಂಎಂ ಎತ್ತರ, 2,636-ಎಂಎಂ ವೀಲ್ಹ್‌ಬೆಸ್ ಮತ್ತು 182-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ಇನ್ನು ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಿಸಲಾಗಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 7.8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ಎಂಜಿನ್ ಸಾಮರ್ಥ್ಯ

1.0-ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಬಿಡುಗಡೆಯಾದ ನಂತರವಷ್ಟೇ ಗ್ರಾಹಕರ ಬೇಡಿಕೆ ಮೇರೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಿದೆ.

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ಸುರಕ್ಷಾ ಸೌಲಭ್ಯ

ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್, ಕೀ ಲೆಸ್ ಎಂಟ್ರಿ, ಮೊಬೈಲ್ ಫೋನ್ ಚಾರ್ಜರ್ ಸಾಕೆಟ್‌ಗಳನ್ನು ನೀಡಲಾಗಿದೆ.

MOST READ: ಕಾರ್ ರೀಪೆರಿಗೆ 3 ಲಕ್ಷ ಕೇಳಿದ್ದ ಡೀಲರ್ಸ್ ಅಸಲಿಯತ್ತು ಬಯಲಾಗಿದ್ದು ಲೋಕಲ್ ಗ್ಯಾರೇಜ್‌ನಲ್ಲಿ..!

ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರೆನಾಲ್ಟ್ ಟ್ರೈಬರ್

ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)

ರೆನಾಲ್ಟ್ ಸಂಸ್ಥೆಯು ಹೊಸ ಕಾರನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್ ಆರಂಭದಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8 ಲಕ್ಷ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Renault To Export Triber To International Markets. Read in Kannada.
Story first published: Saturday, June 22, 2019, 18:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X