ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ರೆನಾಲ್ಟ್ ಸಂಸ್ಥೆಯು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲಿ ಮತ್ತೊಂದು ಹೊಸ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹ್ಯುಂಡೈ ವೆನ್ಯೂ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಪೈಪೋಟಿಯಾಗಿ ವಿನೂತನ ಆವೃತ್ತಿಯೊಂದನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ಹೊಸ ಕಾರುಗಳ ಮಾರಾಟದಲ್ಲಿ ಸಾಕಷ್ಟು ಬದಲಾವಣೆ ತರುತ್ತಿರುವ ರೆನಾಲ್ಟ್ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಇದೇ ತಿಂಗಳು 28ರಂದು ಬಿಡುಗಡೆಯಾಗಲಿರುವ ಟ್ರೈಬರ್ ಎಂಪಿವಿ ಕಾರಿನ ನಂತರ ಕ್ವಿಡ್ ಫೇಸ್‌ಲಿಫ್ಟ್ ಬಿಡುಗಡೆ ಮಾಡಲಿರುವ ರೆನಾಲ್ಟ್ ಸಂಸ್ಥೆಯು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಅಭಿವೃದ್ದಿ ಮೇಲೆ ಗಮನಹರಿಸಲಿದೆ.

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ಸದ್ಯ ರೆನಾಲ್ಟ್ ಸಂಸ್ಥೆಯು ಕ್ವಿಡ್ ಮತ್ತು ಡಸ್ಟರ್ ಕಾರುಗಳನ್ನು ಹೊರತುಪಡಿಸಿ ಇನ್ನುಳಿದ ಕಾರುಗಳ ಮಾರಾಟದಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಕಾರು ಉತ್ಪಾದನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರುವ ಮೂಲಕ ದೇಶಿ ಮತ್ತು ವಿದೇಶಿ ಮಾರುಕಟ್ಟೆಗಳ ಬೇಡಿಕೆ ಅನುಸಾರವಾಗಿ ಹೊಸ ಕಾರು ಉತ್ಪನ್ನಗಳನ್ನು ಸಿದ್ದಪಡಿಸುತ್ತಿದೆ.

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ಟ್ರೈಬರ್ ಆವೃತ್ತಿ ಮೂಲಕ ಎಂಪಿವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದಲ್ಲಿರುವ ರೆನಾಲ್ಟ್ ಸಂಸ್ಥೆಯು ತದನಂತರ ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯ ಕಾರು ಮಾದರಿಯ ಮೂಲಕ ಭಾರತದಲ್ಲಿ ಮತ್ತಷ್ಟು ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ಹೊಸ ಕಾರನ್ನು ಟೆಸ್ಟಿಂಗ್ ಮಾಡಲಾಗುತ್ತಿದ್ದು, ಮಾರುತಿ ಬ್ರೆಝಾ ಮತ್ತು ಹ್ಯುಂಡೈ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ವೆನ್ಯೂ ಕಾರುಗಳಿಗೆ ರೆನಾಲ್ಟ್ ಹೊಸ ಕಾರು ಭರ್ಜರಿಯಾಗಿ ಪೈಪೋಟಿ ನೀಡಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಹೆಚ್‌ಬಿಸಿ ಕಾರು ನಗರ ಪ್ರದೇಶದಲ್ಲಿನ ಪ್ರಯಾಣಕ್ಕಾಗಿ ಸೂಕ್ತ ಆಯ್ಕೆಯಾಗಲಿದೆ.

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ಗ್ರಾಹಕರ ಬೇಡಿಕೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು ಸದ್ಯ ಭಾರೀ ಪ್ರಮಾಣದ ಬೇಡಿಕೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದು, ಇದೇ ಕಾರಣಕ್ಕಾಗಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ವಿಭಾಗದ ಮೇಲೆ ಹೆಚ್ಚಿನ ಗಮನ ಹರಿಸಿರುವ ರೆನಾಲ್ಟ್ ಸಂಸ್ಥೆಯು ಹೆಚ್‌ಬಿಸಿ ಎನ್ನುವ ಕಾನ್ಸೆಪ್ಟ್ ಆವೃತ್ತಿಯನ್ನು ಬಿಡುಗಡೆಗಾಗಿ ಅಂತಿಮ ಹಂತದ ನಿರ್ಧಾರ ಕೈಗೊಂಡಿದೆ.

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇತರೆ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದ್ದು, ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300, ನಿಸ್ಸಾನ್ ಕಿಕ್ಸ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರ ಐದು ಆಸನ ಮಾದರಿಯಲ್ಲಿ ಬಿಡುಗಡೆಯಾಗಲಿದೆ.

MOST READ: ಕಾರು ಖರೀದಿಗೆ ಇದು ಸುವರ್ಣಾವಕಾಶ- ರೂ.4 ಲಕ್ಷದ ತನಕ ಡಿಸ್ಕೌಂಟ್ ಘೋಷಿಸಿದ ಹೋಂಡಾ

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ಬಿಡುಗಡೆಯಾಗುತ್ತಿರುವ ಟ್ರೈಬರ್ ಕಾರಿನಲ್ಲಿ ಬಳಕೆ ಮಾಡಿರುವ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನೇ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಕೂಡಾ ಪಡೆದುಕೊಳ್ಳಲಿದ್ದು, ಆಕರ್ಷಕ ನೋಟ ಮತ್ತು ಬಲಿಷ್ಠ ಬಾಡಿ ಕಿಟ್ ಜೋಡಣೆ ಹೊಂದಿರಲಿದೆ.

MOST READ: ಧೋನಿ ಗ್ಯಾರೇಜ್‌ಗೆ ಎಂಟ್ರಿ ಕೊಟ್ಟ ಹೊಸ ಐಷಾರಾಮಿ ಕಾರಿನ ಸ್ಪೆಷಲ್ ಏನು?

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ಜೊತೆಗೆ ಹೊಸ ಕಾರು ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವಲ್ಲದೇ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಕೂಡಾ ಖರೀದಿಗೆ ಲಭ್ಯವಾಗುವ ಸಾಧ್ಯತೆಗಳಿದ್ದು, ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊಂದುವುದು ಬಹುತೇಕ ಖಚಿತ ಎನ್ನಲಾಗಿದೆ.

MOST READ: ಬೈಕ್ ಖರೀದಿದಾರರೇ ಎಚ್ಚರ- ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಜಾವಾ ಡೀಲರ್ಸ್

ರೆನಾಲ್ಟ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಮಾಹಿತಿ ಬಹಿರಂಗ

ರೆನಾಲ್ಟ್ ಸಂಸ್ಥೆಯು ಇದೇ ತಿಂಗಳು ಟ್ರೈಬರ್ ಬಿಡುಗಡೆ ಮಾಡಲಿದ್ದು, ತದನಂತರ ಫೇಸ್‌ಲಿಫ್ಟ್ ಆವೃತ್ತಿಗಳಾದ ಕ್ವಿಡ್ ಬಿಡುಗಡೆ ಮಾಡಲಿದೆ. ತದನಂತರವಷ್ಟೇ 2020ರ ಮಧ್ಯಂತರದಲ್ಲಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡಲಿದ್ದು, ಬಿಎಸ್-6 ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡುವ ನೀರಿಕ್ಷೆಯಿದೆ.

Article Published On: Sunday, August 18, 2019, 10:30 [IST]
English summary
French car maker Renault is planning to launch all new compact SUV in India by next year.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+